ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2021-22 ಸಾಲಿನ ಭಾರತೀಯ ವೈದ್ಯಕೀಯ ಸಂಘ (IMA) ಕುಂದಾಪುರ ಘಟಕದ ಅಧ್ಯಕ್ಷರಾಗಿ ಎಲುಬು ಕೀಲು ಶಸ್ತ್ರ ಚಿಕಿತ್ಸಕ ತಜ್ಞ ಡಾ. ಸಂದೀಪ್ ನಾವಡ ಪಿ. ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಾನಸಿಕ ತಜ್ಞ ಡಾ. ರವೀಂದ್ರ ಮುನೋಳಿ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಮಕ್ಕಳ ತಜ್ಞ ಡಾ. ಗಣೇಶ್ ಪ್ರಸಾದ್ ಕಾಮತ್ ಆಯ್ಕೆಯಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ತನ್ನನ್ನು ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಅದರಲ್ಲಿ ಏನು ಸಾಧನೆ ಮಾಡಬಹುದು ಎನ್ನುವುದಕ್ಕೆ ನರೇಂದ್ರ ಕುಮಾರ್ ಅವರು ಮಾದರಿ, ಶಿಕ್ಷಕ ವೃತ್ತಿ ಜೊತೆಗೆ ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಅದರಲ್ಲಿ ಹೊಸತನದ ಹೆಜ್ಜೆ ಇದ್ದು ಕಾರ್ಯಕ್ರಮದ ಬಹುರೂಪಿ ಪದಕ್ಕೆ ಇವರೇ ನಿದರ್ಶನ ವ್ಯಕ್ತಿ ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವಡ ಅವರು ಹೇಳಿದರು. ಅವರು ನರೇಂದ್ರ ಕುಮಾರ್ ಕೋಟ ಸಾರ್ವಜನಿಕ ಅಭಿನಂದನಾ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಾಹಿತಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ಇವರ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಬಹುರೂಪಿ-2021(ಹೊಸತನದ ಕಂಪನ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರಂತ ಥೀಮ್ ಪಾರ್ಕ್ ಚಟುವಟಿಕೆ ಹಿಂದಿನ ಶಕ್ತಿ -ಸಚಿವ ಕೋಟಕಾರಂತ ಥೀಮ್ ಪಾರ್ಕ್‌ನಲ್ಲಿ ಕಾರಂತರ ನೆನಪು, ಅವರ ಬದುಕಿನ ಚಿತ್ರಣವನ್ನು ಮುಂದಿನ ಜನಾಂಗಕ್ಕೆ ತಲುಪಿಸುವ ಉದ್ದೇಶದಿಂದ ಸ್ಥಾಪನೆಯಾಗಿ ದಿನನಿತ್ಯ ಎಂಬಂತೆ ಚಟುವಟಿಕೆ ನಡೆಯುತ್ತಿರುವುದಕ್ಕೆ ನರೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸೋಮವಾರ ಕೊಡುಗೆಯಾಗಿ ನೀಡಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ. ಹಾಗೂ ಹಿರಿಯ ಸದಸ್ಯ ಎಚ್. ಗಣೇಶ ಕಾಮತ್ ಜಂಟಿಯಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ. ಅಮಿತಾ ಅವರಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ರಾಜೇಶ್ ಎಂ.ಜಿ., ಈ ಮೊದಲಿನಿಂದಲೂ ಪರಿಸರದ, ಸಮಾಜದ ಹಲವು ಬೇಡಿಕೆಗಳಿಗೆ, ಅಗತ್ಯತೆಗಳಿಗೆ ಸ್ಪಂದನೆ ನೀಡಿರುವ ರೋಟರಿ ಸಂಸ್ಥೆ ಇಂದು ಕೂಡ ಆರೋಗ್ಯ ಕೇಂದ್ರದ ಅಗತ್ಯತೆಯನ್ನು ಮನಗಂಡು ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದ್ದೇವೆ. ಮುಂದೆಯೂ ಸ್ಪಂದನೆ ನೀಡುವುದಾಗಿ ಹೇಳಿದರು. ಸಹ ಪ್ರಾಯೋಜಕ ಎಚ್. ಗಣೇಶ ಕಾಮತ್ ಅವರನ್ನು ಗೌರವಿಸಲಾಯಿತು. ವಲಯ ಸೇನಾನಿ ಕೆ.ರಾಮನಾಥ್ ನಾಯಕ್, ಕಾರ್ಯದರ್ಶಿ ನಾರಾಯಣ ನಾಯ್ಕ್, ರೋಟರಿ ಸದಸ್ಯರಾದ ಜನಾರ್ಧನ ಪೂಜಾರಿ, ಆಸ್ಪತ್ರೆ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಎಂಜಿನಿಯರಿಂಗ್ ವಿಭಾಗ)ದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಶ್ರೀನಿಧಿ ಉಡುಪ 835 ನೇ ರ್ಯಾಂಕ್, ತಿಲಕ್ ಚಂದ್ರ ಶಾಸ್ತ್ರಿ 956ನೇ ರ್ಯಾಂ ಕ್,ಶ್ರೀವತ್ಸ ಕಾಮತ್ 1071ನೇ ರ್ಯಾಂ ಕ್, ಸಿಂಚನಾ 1391ನೇ ರ್ಯಾಂಕ್, ಅಚಿಂತ್ಯಾ ಉಪಾಧ್ಯಾಯ 1465ನೇ ರ್ಯಾಂ ಕ್, ಕಶಿಶ್ ಕೆ.ಸಿ.2029ನೇ ರ್ಯಾಂ ಕ್, ಗೌರವ್ 2095ನೇ ರ್ಯಾಂ ಕ್ ಪಡೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಮೂಡುಬಿದಿರೆ: ಮೆಕ್ಯಾನಿಕಲ್ ಮತ್ತು ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಹಾಗೂ ಬೆಂಗಳೂರಿನ ಬಿಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ. ನಡುವೆ ನೂತನ ಒಡಂಬಡಿಕೆಗೆ ಸಹಿ ಹಾಕಲಾಯಿತು. ಪ್ರಸ್ತುತ ಉದ್ಯಮ ಕ್ಷೇತ್ರದಲ್ಲಿನ ನುರಿತ ತಾಂತ್ರಿಕ ಮತ್ತು ವ್ಯವಸ್ಥಾಪಕ ಸಿಬ್ಬಂದಿಗಳ ತೀವ್ರ ಕೊರತೆಯನ್ನು ನೀಗಿಸುವಲ್ಲಿ ಈ ಒಡಂಬಡಿಕೆಯು ಸಹಕಾರಿಯಾಗಿದೆ. ಬಿಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ.ನ ಸಿಇಒ ಸ್ಟಾವ್ರೋಸ್ ಕೆಲ್ಡಿಯಾರೆಸ್, ಸೌತ್ ಈಸ್ಟ್ ಏಷ್ಯಾ ರೀಜನ್ ಸೇಲ್ಸ್ ಹೆಡ್ ಲೋಕೆಶ್ ಎಸ್. ಬೊಮ್ಮಾನಿ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯ ಡಾ. ಪೀಟರ್ ಫೆರ್ನಾಂಡಿಸ್ ಒಡಂಬಡಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಕಂಪ್ಯೂಟರ್ ಯೈಡೆಡ್ ಇಂಜಿನಿಯರಿಂಗ್ ಸಿಸ್ಟಮ್ಸ್ ಕ್ಷೇತ್ರದಲ್ಲಿ ತರಬೇತಿಯನ್ನು ಒದಗಿಸುವ ಪ್ರಮುಖ ಕಂಪೆನಿಗಳಲ್ಲಿ ಒಂದಾದ ಬಿಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ. ನೊಂದಿಗಿನ ಒಡಂಬಡಿಕೆಯು ಔದ್ಯೋಗಿಕ ಕ್ಷೇತ್ರದ ನಿರೀಕ್ಷೆ (ಪ್ರಾಕ್ಟಿಕಲ್) ಹಾಗೂ ಶೈಕ್ಷಣಿಕ ಕೊಡುಗೆಗಳ (ಥಿಯರಿ) ನಡುವಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೈಬ್ರಕಟ್ಟೆ ರೋಟರಿ ಪ್ರಾಯೋಜಕತ್ವದಲ್ಲಿ ಅಂಗ ಸಂಸ್ಥೆ ಸೈಬ್ರಕಟ್ಟೆ ವಿಭಾಗದ ರೋಟರಿ ಸಮುದಾಯ ದಳ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ರೋಟರಿ ಜಿಲ್ಲೆ ೩೧೮೨ ನ ರೋಟರಿ ಸಮುದಾಯ ದಳದ ಉಪಸಭಾಪತಿ ಅವರು ಪದಪ್ರಧಾನ ನೆರವೇರಿಸಿದರು ಕಾರ್ಯದರ್ಶಿಯಾಗಿ ರಾಘವೇಂದ್ರ ಸಿ ಶೆಟ್ಟಿ ಆಯ್ಕೆಯಾದರು ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್ ರೋಟರಿ ವಲಯ ೩ರ ಸಹಾಯಕ ಗವರ್ನರ್ ಕೆ ಪದ್ಮನಾಭ ಕಾಂಚನ್ ವಲಯ ಸೇನಾನಿ ವಿಜಯಕುಮಾರ ಶೆಟ್ಟಿ ಆರ್. ಸಿ.ಸಿ ವಲಯ ಸಂಯೋಜಕ ಶಂಕರ್ ಸುವರ್ಣ ಪಂಚಾಯತ್ ಸದಸ್ಯ ಅಮೃತ್ ಪೂಜಾರಿ ರೋಟರಿ ಸದಸ್ಯರು ಭಾಗಿಯಾಗಿದ್ದರು. ವರದರಾಜ ಶೆಟ್ಟಿ ನಿರೂಪಿಸಿ ಅಣ್ಣಯ್ಯ ಧನ್ಯವಾದ ಸಮರ್ಪಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಜಿಲ್ಲಾ ಶಿಕ್ಷಕ ಮತ್ತು ತರಬೇತಿ ಸಂಸ್ಥೆ ಡಯಟ್‌ನ ಕಚೇರಿಗೆ ನುಗ್ಗಿ ಮೂವರು ಮಹಿಳಾ ಸಿಬ್ಬಂದಿ ಮೇಲೆ ಏಕಾಏಕಿ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರದ ನವೀನ್ ಎಂಬಾತನನ್ನು ಬಂಧಿಸಲಾಗಿದೆ. ಘಟನೆಯ ವಿವರ :ಡಯಟ್ ಸಂಸ್ಥೆಗೆ ಮಧ್ಯಾಹ್ನ 12.45ರ ಸುಮಾರಿಗೆ ಕಾಲೇಜ್‌ನ ಪ್ರಾಧ್ಯಾಪಕಿಯೊಬ್ಬರಿಗೆ ಗಿಫ್ಟ್ ನೀಡುವ ನೆಪದಲ್ಲಿ ಬಂದ ನವೀನ್ ಶಿಕ್ಷಕೇತರ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದ ಕೊಠಡಿಯೊಳಗೆ ನುಗ್ಗಿ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಕೊಠಡಿಯೊಳಗೆ ಇಬ್ಬರು ಮಹಿಳಾ ಸಿಬ್ಬಂದಿ ಎದುರು ಬದುರಾಗಿ ಆಸನದಲ್ಲಿ ಕುಳಿತು ಕರ್ತವ್ಯದಲ್ಲಿದ್ದು, ಒಳಗೆ ಬಂದ ನವೀನ್ ಚೀಲದಲ್ಲಿದ್ದ ತಲವಾರು ಮಾದರಿಯ ಆಯುಧ ತೆಗೆದು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾನೆ. ಆ ಸಂದರ್ಭ ಅಲ್ಲಿದ್ದ ಡಿ ದರ್ಜೆಯ ಮಹಿಳಾ ಸಿಬ್ಬಂದಿ ತಡೆಯಲು ಆಗಮಿಸಿದ್ದು, ಆಕೆಯ ಮೇಲೂ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಮೂವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಮಲಾ ಅವರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಸ್ಕರ್ ಫೆರ್ನಾಂಡಿಸ್ ಅವರು ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದರು. ಪಕ್ಷ ಕಟ್ಟುವ ಸಂಘಟನಾ ಚತುರತೆ ಹಾಗೂ ಸಾಕಷ್ಟು ಯುವ ನಾಯಕರನ್ನು ಹುಟ್ಟುಹಾಕಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅಜಾತಶತ್ರುವಿನಂತೆ ಬದುಕಿದ್ದ ಅವರನ್ನು ಪಕ್ಷಾತೀತವಾಗಿ ಎಲ್ಲರೂ ಮೆಚ್ಚುತ್ತಿದ್ದರು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಸೋಮವಾರ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಕಾಂಗ್ರೆಸ್ ನಾಯಕ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ನಾಯಕರುಗಳಾದ ಮಂಜುನಾಥ್ ಹೆಬ್ಬಾರ್, ಪಿ.ಎಲ್. ಜೋಸ್, ಅಶೋಕ್ ಶೆಟ್ಟಿ, ಎಸ್. ಕುಮಾರ್, ಲಿಂಗಪ್ಪ, ಲೋಕೇಶ್ ಖಾರ್ವಿ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ ಮೊದಲಾದವರು ನುಡಿನಮನ ಸಲ್ಲಿಸಿದರು. ಕಾಂಗ್ರೆಸ್ ಮುಖಂಡರಾದ ವಾಸುದೇವ ಯಡಿಯಾಳ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಸೆ.20: ಇನ್ಸ್‌ಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ದೇಶಕ್ಕೆ 21ನೇ ರ್‍ಯಾಂಕ್ ಹಾಗೂ ಸಿಎ ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ದೇಶಕ್ಕೆ 29ನೇ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿ ವೈಷ್ಣವಿ ಎಂ.ವಿ. ಅವರನ್ನು ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿಎ/ಸಿಎಸ್/ ಸಿಎಂಎ ಹಾಗೂ ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು. ಶಿಕ್ಷ ಪ್ರಭಾ ಅಕಾಡೆಮಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕರಾದ ಪ್ರತಾಪ್‌ಚಂದ್ರ ಶೆಟ್ಟಿ ಹಾಗೂ ಭರತ್ ಶೆಟ್ಟಿ ಮಾತನಾಡಿ, ವೈಷ್ಣವಿ ಸಾಧನೆ ಗ್ರಾಮೀಣ ಪ್ರದೇಶದ ಅನೇಕ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ. ದೇಶದ ಒಟ್ಟಾರೆ ಸಿಎ ಇಂಟರ್‌ಮೀಡಿಯೇಟ್ ಹಾಗೂ ಸಿಎ ಫೌಂಡೇಶನ್ ಫಲಿತಾಂಶಕ್ಕೆ ಹೋಲಿಸಿದರೆ ನಮ್ಮ ಸಂಸ್ಥೆಯ ಸಾಧನೆ ಕೊರೊನಾ ಕಾಲದಲ್ಲೂ ಶ್ರೇಷ್ಠವಾದುದು. ಪ್ರಥಮ ಪ್ರಯತ್ನದಲ್ಲೇ ಸಿಎ ಫೌಂಡೇಶನ್‌ನ 41 ವಿದ್ಯಾರ್ಥಿಗಳು ಹಾಗೂ ಸಿಎ ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ 15 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ ಎಂದರು. 50…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್ ಉಡುಪಿ, ಆಯುಷ್ ಇಲಾಖೆ ಉಡುಪಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಜರಗಿತು. ಕಾಲ್ತೋಡು ಗ್ರಾಮ ಪಂಚಾಯತ್ ಪಿಡಿಒ ಸತೀಶ ತೋಳಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಾಶಂಸನೆಗೈದರು. ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಅವರು ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಹದಿಹರೆಯದ ಹೆಣ್ಣು ಮಕ್ಕಳು, ಗರ್ಭಿಣಿಯರ ಆಹಾರ-ವಿಹಾರದ ಬಗ್ಗೆ, ಕಡಿಮೆ ತೂಕದ ಮಕ್ಕಳ ಆರೋಗ್ಯ ವರ್ಧನೆಯ ಬಗ್ಗೆ, ನಮ್ಮ ಸುತ್ತಮುತ್ತಲಿನ ತರಕಾರಿ, ಹಣ್ಣು ಬೇಳೆಕಾಳುಗಳನ್ನುಉಪಯೋಗಿಸಿ ಉತ್ತಮ ಆರೋಗ್ಯ ಪಡೆಯುವ ಬಗ್ಗೆ ವಿವರಿಸಿದರು. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಡ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಸಹಾಯಕಿ ಪ್ರತಿಮಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮತ್ತಿತರರು ಉಪಸ್ಥಿತರಿದ್ದರು.
