Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.  ಬೈಂದೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊಂಬಾರುವಿನ ಕುಮಾರಪುರ ಪ್ರಕಾಶನ ಬದುಕು ವಿಷಯದ ಕುರಿತಂತೆ ಆಯೋಜಿಸಿದ್ದ ನಾನು ನನ್ನ ಗೀಚು 2020- 21ರ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯಲ್ಲಿ ಬೈಂದೂರಿನ ಗಾಯತ್ರಿ ಲಕ್ಷ್ಮಣ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಧನಾ ಕಲಾ ಸಂಗಮವು ಪ್ರಾರಂಭವಾದಂದಿನಿಂದ ನಿರಂತರವಾಗಿ ನಡೆಸಿಕೊಂಡು ಬಂದಿರುವ ಬಹುಮುಖ್ಯ ಚಟುವಟಿಕೆಯಲ್ಲಿ ಒಂದಾದ ಗಜವರ್ಣ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ. ಇದು ಪ್ರತಿ ವರ್ಷ ಗಣೇಶ ಚೌತಿಯ ಸಂದರ್ಭದಲ್ಲಿ ನಡೆಯುವಂತಹ ಸ್ಪರ್ಧೆಯಾಗಿತ್ತು. ಆದರೆ ಈ ವರ್ಷ ಕೊರೋನಾ ಸಾಂಕ್ರಾಮಿಕದ ಕಾರಣ ಈ ಸ್ಪರ್ಧೆಯನ್ನು ನಡೆಸಲಾಗಲಿಲ್ಲ. ಈಗ ನಾವು ಮಹಾಚೌತಿಯ ಅಂದರೆ ಆನೆಗುಡ್ಡೆ ರಥೋತ್ಸವದ ಸಂದರ್ಭದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದಿನಂತೆ ಈ ಸ್ಪರ್ಧೆ ಗಜವರ್ಣ 2020 ಕುಂದಾಪುರ/ಬೈಂದೂರು ತಾಲೂಕು ಮಟ್ಟದ ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಜನತೆಗೂ. LKG ಯಿಂದ ಹತ್ತನೆ ತರಗತಿಯ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಈ ಸ್ಪರ್ಧೆಯು 5 ವಿಭಾಗಗಳಲ್ಲಿ ನಡೆಯುತ್ತದೆ. ಆದರೆ ಈ ಬಾರಿ ಗಣಪತಿ ಚಿತ್ರ ರಚನೆಯನ್ನು ನಿಮ್ಮ ಮನೆಯಲ್ಲಿ ರಚಿಸಿ ತಲುಪಿಬೇಕು. ನಿಯಮಗಳು : ಸ್ಪರ್ಧಾಳುಗಳು  21cmx14.50cm ಅಳತೆಯ ಡ್ರಾಯಿಂಗ್ ಹಾಳೆಯಲ್ಲಿ ಗಣಪತಿಯ ಚಿತ್ರವನ್ನು ನಿಮ್ಮ ಮನೆಯಲ್ಲೇ ರಚಿಸಬೇಕು. ಚಿತ್ರದ ಹಿಂಬಾಗದಲ್ಲಿ ಸ್ಪರ್ಧಿಯ ಹೆಸರು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಾರ್ವಜನಿಕರಿಗೆ ನಿಗದಿತ ಕಾಲವಧಿಯೊಳಗೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆ ಜಾರಿಗೆ ತರಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು. ಸಕಾಲ ಸಪ್ತಾಹ ಕಾರ್ಯಕ್ರಮವನ್ನು ವೀಡಿಯೋ ಕಾನ್ಪ್ರೆಸ್ಸ್ ಮೂಲಕ ಉದ್ಘಾಟಿಸಿ, ರಾಜ್ಯದ ಎಲ್ಲಾ ಇಲಾಖಾ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದರು. ಜನಸಾಮಾನ್ಯರಿಗೆ ನಿಗದಿತ ಕಾಲಮಿತಿಯೊಳಗೆ ಸರ್ಕಾರದ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದ ಅವರು ಪ್ರಾರಂಭದಲ್ಲಿ ಸಕಾಲ ಯೋಜನೆಯಡಿ 151 ಸೇವೆಗಳನ್ನು ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುತ್ತಿದ್ದು, ಪ್ರಸ್ತುತ 98 ಇಲಾಖೆಗಳಲ್ಲಿ 1025 ಕ್ಕೂ ಹೆಚ್ಚು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸಕಾಲದ ಕಾರ್ಯಕ್ಕೆ ಸ್ವಲ್ಪ ಹಿನ್ನೆಡೆಯಾಗಿದ್ದು, ಮತ್ತೆ ಅದನ್ನು ಚುರುಕುಗೊಳಿಸುವ ಉದ್ದೇಶದಿಂದ ಸಪ್ತಾಹ ಕಾರ್ಯಕ್ರಮವನ್ನು ನವೆಂಬರ್ 30 ರಿಂದ ಡಿಸೆಂಬರ್ 5 ರ ವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರೀಕ ಸರಬರಾಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಕುಂದಾಪುರ, ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಮರವಂತೆ ಇದರ ಆಡಳಿತ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಕುಂದಾಪುರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ, ತಾಲೂಕು ಆರೋಗ್ಯ ಕಾರ್ಯಕ್ರಮದ ವ್ಯವಸ್ಥಾಪಕ ಪ್ರದೀಪ್, ಆರೋಗ್ಯ ಸಹಾಯಕ ಹುಲಿಯಪ್ಪ ಗೌಡ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಿವರಾಜ್ ಸಿ. ನಾವುಂದ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಪ್ರವೀಣ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಂತೋಷ್ ಕಾಯ್ಕಿಣಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಮೂರು ವರ್ಷ ಬೈಂದೂರು ಸಬ್ ಇನ್ಸಪೆಕ್ಟರ್ ಆಗಿದ್ದ ಸಂತೋಷ್ ಕಾಯ್ಕಿಣಿ ಅವರು ಹಲವು ಪ್ರಕರಣಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಬಳಿಕ ಕೋಟ, ಹೊನ್ನಾವರದ ಪೊಲೀಸ್ ಠಾಣೆ, ನಕ್ಸಲ್ ನಿಗ್ರಹ ದಳದ ಶೃಂಗೇರಿ ಕ್ಯಾಂಪ್‌ನಲ್ಲಿ ಸಬ್ ಇನ್ಸಪೆಕ್ಟರ್ ಸೇವೆ ಸಲ್ಲಿಸಿ ಕಳೆದ ಒಂದೂವರೆ ವರ್ಷದ ಹಿಂದೆ ಅಲ್ಲಿಯೇ ಇನ್ಸ್‌ಪೆಕ್ಟರ್ ಆಗಿ ಭಡ್ತಿ ಹೊಂದಿದ್ದರು. ಇತ್ತಿಚಿಗೆ ಸರಕಾರ ಬೈಂದೂರಿಗೆ ವರ್ಗಾವಣೆಯ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಬೈಂದೂರು ಭಾಗದಲ್ಲಿ ಜನರು ಕಾನೂನಿಗೆ ಬೆಲೆ ಕೊಡುತ್ತಾರೆ ಮತ್ತು ಸೌಹಾರ್ದಯುತವಾಗಿ ಬದುಕುತ್ತಿದ್ದಾರೆ. ಈ ಹಿಂದೆಯೂ ಸೇವೆ ಸಲ್ಲಿಸಿರುವುದರಿಂದ ಇಲ್ಲಿನ ಚಿತ್ರಣ ತಿಳಿದಿದೆ. ಬೈಂದೂರು ವೃತ್ತನಿರೀಕ್ಷಕರ ಕಛೇರಿ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು – ಸಂತೋಷ್ ಕಾಯ್ಕಿಣಿ, ವೃತ್ತ ನಿರೀಕ್ಷಕರು, ಬೈಂದೂರು 

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಿಂದ ಅಟೆಂಡರ್ ಸೇವೆಯಿಂದ ನಿವೃತ್ತಿ ಪಡೆದ ದಿನಕರ ಶೆಟ್ಟೆಗಾರ್. ಯು ಮತ್ತು ಸುಬ್ಬಣ್ಣ ಎಸ್. ಇವರಿಗೆ ಶಿಕ್ಷಕೇತರರ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿದ ದಿನಕರ ಶೆಟ್ಟೆಗಾರ್.ಯು ಮಾತನಾಡಿ ಭಂಡಾರ್ಕಾರ್ಸ್ ಕಾಲೇಜು ಕಛೇರಿಯ ಕಾರ್ಯವೈಖರಿ ಬಹಳ ಅನುಭವವನ್ನು ಕಟ್ಟಿಕೊಟ್ಟಿದೆ ಎಂದು ಹೇಳಿದರು. ಸುಬ್ಬಣ್ಣ ಎಸ್ ಮಾತನಾಡಿ ಕಾಲೇಜು ನನ್ನ ಮನೆ ಇದ್ದಂತೆ. ನನಗೆ ನನ್ನ ಮನೆಗೆ ಅನ್ನ ನೀಡಿದ ಸಂಸ್ಥೆಗೆ ಸದಾ ಋಣಿಯಾಗಿದ್ದೇನೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಎನ್ ಪಿ. ನಾರಾಯಣ ಶೆಟ್ಟಿ ಮಾತನಾಡಿ ಸಂಸ್ಥೆಯ ಬೆಳವಣಿಗೆಯಲ್ಲಿ ಹತ್ತು ಹಲವು ಕೊಡುಗೆ ಇರುತ್ತದೆ. ಅಲ್ಲದೆ ಸರಕಾರಿ ನಿಯಮದಂತೆ ಸೇವೆಯಿಂದ ನಿವೃತ್ತಿ ಪಡೆದರು ನಮ್ಮ ಮನಸಿನಾಳದಲಿ ಸದಾ ಇರುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ರೇಖಾ ಬನ್ನಾಡಿ ಮಾತನಾಡಿ ಸಂಸ್ಥೆಯ ಬೆಳವಣಿಗೆಗೆ ಶಿಕ್ಷಕೇತರರು ತುಂಬಾ ಮುಖ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸೋಮವಾರ ಸಂಪನ್ನಗೊಂಡಿತು. ಬೆಳಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ಕೋವಿಡ್ ನಿರ್ಬಂಧದ ಹಿನ್ನೆಲೆಯಲ್ಲಿ ಭಕ್ತರಿಗೆ ಸೀಮಿತ ಸಂಖ್ಯೆಯಲ್ಲಿ ಪ್ರವೇಶಕ್ಕೆ ಅವಕಾಶ ಎಂದು ಹೇಳಲಾಗಿದ್ದರೂ ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ(ಕಬ್ಬು) ಕೊಂಡು ದೇವರಿಗೆ ಪೂಜೆ ಸಲ್ಲಿಸಿದರು. ಧಾರ್ಮಿಕ ವಿಧಿ ವಿಧಾನಗಳನ್ನು ಹೊರತುಪಡಿಸಿ ಬೇರಾವುದೇ  ಜಾತ್ರೆಯ ಸಂಭ್ರಮ ಕಂಡು ಬರಲಿಲ್ಲ.  ಜಾತ್ರೆಯ ಅಂಗಡಿಗಳು, ಆಟಿಕೆ ಸಾಮಾಗ್ರಿಗಳು ಯಾವುದೂ ಇಲ್ಲದಿರುವುದರಿಂದ ಹಬ್ಬ ಎಂದಿನಂತೆ ಕಳೆಗಟ್ಟಲಿಲ್ಲ.  ಯುವಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಗ್ರಾಮ ಪಂಚಾಯಿತಿಯ ಸುವರ್ಣ ಭವನದಲ್ಲಿ ನಡೆದ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಮಕ್ಕಳ ಹಕ್ಕುಗಳ ಗ್ರಾಮಸಭೆ ನಡೆಯಿತು. ಬೈಂದೂರು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಮಾತನಾಡಿ, ಭಾರತದ ಸಂವಿಧಾನವು ದೇಶದ ಏಕತೆ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಮರವಂತೆ, ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಮಾಲೆ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳಿಂದ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು ಮತ್ತು ಫಲಕದ ಮೇಲೆ ಬರೆಸಲಾಯಿತು. ಪೀಠಿಕೆಯ ಪ್ರಧಾನ ಅಂಶಗಳ ಕುರಿತು ಸ್ಪರ್ಧೆ ನಡೆಸಿ ಬಹುಮಾನಿತರ ಹೆಸರು ಪ್ರಕಟಿಸಲಾಯಿತು. ಶಿಕ್ಷಕಿ ಚೈತ್ರಾ ಶೆಟ್ಟಿ ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಪಂಚಾಯಿತಿ ಕಾರ್ಯದರ್ಶಿ ದಿನೇಶ್ ಶೇರೆಗಾರ್ ಅಧ್ಯಕ್ಷತೆ ವಹಿಸಿದ್ದರು. ಕರ ಸಂಗ್ರಾಹಕ ಶೇಖರ್ ಮರವಂತೆ ಸ್ವಾಗತಿಸಿದರು. ಗಣಕಯಂತ್ರ ನಿರ್ವಾಹಕ ಗುರುರಾಜ್ ಬಿಲ್ಲವ ವಂದಿಸಿದರು. ಶಿಕ್ಷಕ…

Read More

ಕುಂಧಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಸಂಘದ ಕಾರ್ಯಕರ್ತರಾದ ಉಮೇಶ ಸುವರ್ಣಾ, ರಾಜು, ಸೀತಾ, ಗೀತಾ, ದೀಪಕ ಶೆಟ್ಟಿ, ರಿತೇಶ ಶೆಟ್ಟಿ, ಸುಧಾಕರ ಪೂಜಾರಿ , ಪ್ರಶಾಂತ ಪೂಜಾರಿ ಬೇಕರಿ, ಮಣಿಕಂಠ ಪೂಜಾರಿ , ಶರತ ಆಚಾರ್ಯ, ಸಂಪತ್ ಶೆಟ್ಟಿ, ಪ್ರಮೋಧ ಅಯ್ಯಂಗಾರ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬೀದರ್ ಜಿಲ್ಲೆಯ ದೇಶಪಾಂಡೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಮಂದಾರ ಕಲಾವಿದರ ವೇದಿಕೆ ಜಂಟಿಯಾಗಿ ನೀಡುವ ಕರ್ನಾಟಕ ಜಾನಪದ ಭೂಷಣ ಪ್ರಶಸ್ತಿಗೆ ಗಂಗೊಳ್ಳಿಯ ಖ್ಯಾತ ಗಾಯಕ ಹಾಗೂ ಉಡುಪಿ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಗಣೇಶ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ಮಾರ್ಚ್‌ನಲ್ಲಿ ಬೀದರ್‌ನಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಜಿ. ದೇಶಪಾಂಡೆ ಪ್ರಕಟಿಸಿದ್ದಾರೆ

Read More