ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ಪ್ರತಿ ಭಾನುವಾರ ಪರಿಸರಕ್ಕಾಗಿ ಸಮರ್ಪಿಸಿಕೊಂಡ ರೀತಿ ಅತ್ಯಂತ ಪ್ರಶಂಸನೀಯ ಎಂದು ಶ್ರೀ ಕೃಷ್ಣಪ್ರಸಾದ್ ಗ್ರೂಪ್ಸ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಭಾನುವಾರ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟತಟ್ಟು ಗ್ರಾಮಪಂಚಾಯತ್, ಸಿಂಧೂರ ಸಂಜೀವಿನಿ ಒಕ್ಕೂಟ ಇವರುಗಳ ಸಹಯೋಗದೊಂದಿಗೆ ಕೋಟತಟ್ಟು ಪಡುಕರೆ ಬೀಚ್ ನಲ್ಲಿ 325ನೇ ವಾರದ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಭಾನುವಾರ ಬಂತ್ತೆಂದರೆ ನಾವುಗಳು ಬಿಡುವು ಮಾಡಿಕೊಳ್ಳವ ವಾರವಾಗಿ ಪರಿಣಮಿಸಿದರೆ ಪಂಚವರ್ಣ ಸಂಘಟನೆ ನಿತ್ಯನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿ ಸಂಘಟನೆಯಾಗಿ ರೂಪುಗೊಂಡಿದೆ ಎಂದರು. ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಉಪಾಧ್ಯಾ ಮಾತನಾಡಿ, ಮುಂದಿನ ತಲೆಮಾರಿಗಾಗಿ ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾಯಕ ನಮ್ಮಿಂದಾಗಲಿ ಪ್ರಕೃತಿ ಮಲಿನಗೊಳಿಸುವ ಕಾರ್ಯ ಇನ್ನಾದರೂ ನಿಲ್ಲಲ್ಲಿ ಎಂದರು. ಈ ಸಂದರ್ಭದಲ್ಲಿ ಸಮುದ್ರತಟದಿಂದ ಸುಮಾರು ಪ್ಲಾಸ್ಟಿಕ್ ತ್ಯಾಜ್ಯ,ಮದ್ಯದ ಬಾಟಲಿ ಸೇರಿದಂತೆ ಅನೇಕ ರೀತಿಯ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಶ್ರೀ ಸಾಯಿ ಸೆಂಟರ್ನ ಮೊದಲ ಮಹಡಿಯಲ್ಲಿ ‘ರೋಷನ್ ಹೋಮಿಯೋಪತಿ’ ನೂತನ ಕ್ಲಿನಿಕ್ ಉದ್ಘಾಟನೆ ಹಾಗೂ ಆಶೀರ್ವಚನ ಸಮಾರಂಭ ಭಾನುವಾರ ಜರುಗಿತು. ಡಾ. ರೋಷನ್ ಪಾಯಸ್ ಅವರ ತಾಯಿ ಐ.ವಿ ಪಾಯಸ್ ಅವರು ನೂತನ ಕ್ಲಿನಿಕ್ನ್ನು ಉದ್ಘಾಟಿಸಿದರು. ಕುಂದಾಪುರದ ಸಮೂಹ ಚರ್ಚುಗಳ ಧರ್ಮಗುರು ಫಾ. ಪೌಲ್ ರೇಗೊ ಅವರು ಆಶೀರ್ವಚನ ನೀಡಿ, “ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಹೋಮಿಯೋಪತಿ ವೈದ್ಯಕೀಯ ಪದ್ಧತಿ ಅತೀ ಶ್ರೇಷ್ಠವಾದುದು. ಹೋಮಿಯೋಪತಿ ನಿಧಾನವಾದರೂ ಅತೀ ಪರಿಣಾಮಕಾರಿ ವೈದ್ಯಕೀಯ ಪದ್ಧತಿಯಾಗಿದ್ದು, ಡಾ. ನೇಹಾ ಪಾಯಸ್ ಮೂಲಕ ಕುಂದಾಪುರದ ಜನತೆಗೆ ಉತ್ತಮ ಸೇವೆ ದೊರೆಯಲಿದೆ. ಡಾ. ರೋಷನ್ ಕುಟುಂಬ ಹೋಮಿಯೋಪತಿ ಮೂಲಕ ಜನರ ಆರೋಗ್ಯ ಸುಧಾರಿಸುವಲ್ಲಿ ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು. ಈ ವೇಳೆ ಕುಂದಾಪುರ ಖ್ಯಾತ ವೈದ್ಯ ಡಾ. ಉತ್ತಮ್ ಕುಮಾರ್ ಶೆಟ್ಟಿ ಮಾತನಾಡಿ, ಹೋಮಿಯೋಪತಿ ವೈದ್ಯಕೀಯ ಪದ್ಧತಿ ಬೆಳೆದು ಬಂದ ದಾರಿ, ಕುಂದಾಪುರದಲ್ಲಿ ಆರಂಭದ ದಿನಗಳ ಅನುಭವಗಳು ಹಾಗೂ ವೈದ್ಯ ಮತ್ತು ರೋಗಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಶಿಸ್ತು, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಗ್ರಾಮೀಣ ಜನರಲ್ಲಿ ಇಂತಹ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರೀಡೋತ್ಸವ ಮಹತ್ವದ ವೇದಿಕೆಯಾಗಿದೆ. ಇಂತಹ ಕ್ರೀಡಾಕೂಟಗಳು ಗ್ರಾಮೀಣ ಜನರ ನಡುವೆ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬಲಪಡಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಸಂಜಯ ನಾಯ್ಕ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತ್ರಾಸಿ ವಲಯ ಇದರ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಜರಗಿದ ತ್ರಾಸಿ ವಲಯದ ಸ್ವಸಹಾಯ ಸಂಘಗಳ ಒಕ್ಕೂಟಗಳ ಕ್ರೀಡೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ ಆಚಾರ್ಯ ತ್ರಾಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಮೂಹಿಕ ಶ್ರೀ ಸತ್ಯನಾರಾಯಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗೆಳೆಯರ ಬಳಗ ಕಾರ್ಕಡ – ಸಾಲಿಗ್ರಾಮ ಇವರ ನೇತೃತ್ವದಲ್ಲಿ ಹಾಗೂ ಕಾರ್ಕಡ ಗ್ರಾಮಸ್ಥರಿಂದ ಸಂಗ್ರಹಿಸಿದ ಎರಡು ಲೋಡು ಒಣಮೇವುನ್ನು ಆರೂರು ಬೆಳ್ಮಾರಿನಲ್ಲಿರುವ ಪುಣ್ಯಕೋಟಿ ಗೋ ಸೇವಾ ಕೇಂದ್ರಕ್ಕೆ ತೆರಳಿ ಗೋ ಪೂಜೆ ನೆರವೇರಿಸಿ ಗೋಗ್ರಾಸ ನೀಡಿ, ಹಸ್ತಾಂತರಿಸಲಾಯಿತು. ಇದೇ ವೇಳೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಗೋಶಾಲೆಗೆ ಒಣ ಮೇವು ನೀಡಲಾಯಿತು. ಕೊಡುಗೆಯನ್ನು ಸ್ವೀಕರಿಸಿ, ಕೃತಜ್ಞತೆ ಸಲ್ಲಿಸಿದ ಗೋಶಾಲೆಯ ನಿರ್ದೇಶಕರಾದ ಶ್ರೀನಿವಾಸ ಇವರು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳರ ಸಮಾಜ ಸೇವೆ ಹಾಗೂ ಗೆಳೆಯರ ಬಳಗದ ಸದಸ್ಯರಿಗೆ ಗೋವಿನ ಮೇಲಿರುವ ಪ್ರೀತಿ – ಭಕ್ತಿ ಅವರ ಈ ಸೇವೆಗೆ ಸಾಕ್ಷಿ. ಹುಲ್ಲು ನೀಡಿದ ಹಾಗೂ ಈ ಬಗ್ಗೆ ಕಾರ್ಯಾಚರಿಸಿದ ಗೆಳೆಯರ ಬಳಗದ ಎಲ್ಲ ಸದಸ್ಯರಿಗೂ ಗೋಮಾತೆ ಅನುಗ್ರಹಿಸಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಉಪಾಧ್ಯಕ್ಷ ಕೆ. ಶಶಿಧರ ಮಯ್ಯ, ಜತೆ ಕಾರ್ಯದರ್ಶಿ ಕೆ. ಜಗದೀಶ ಆಚಾರ್ಯ, ಕೆ. ಶ್ರೀಪತಿ ಆಚಾರ್ಯ, ಕೆ.ಶೇಖರ, ಕೆ. ಉದಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದರೆ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕಾದ ಕುಂದಾಪುರ ಪುರಸಭೆ ಮಾತ್ರ ಗಾಡ ನಿದ್ರೆಗೆ ಜಾರಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುರಸಭೆಗಳಲ್ಲಿ ಚುನಾಯಿತ ಜನಪ್ರತಿನಿದಿನಗಳು ಇಲ್ಲದೆ ಇರುವ ಕಾರಣ ಪುರಸಭಾ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಕುಂದಾಪುರ ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ಸಮಸ್ಯೆಗೆ ಸಿಲುಕಿದ್ದರೂ ಕೂಡ ಇದನ್ನು ಪರಿಹರಿಸಬೇಕಾದ ಪುರಸಭೆ ಅಧಿಕಾರಿಗಳು ಬೇರೆ ಬೇರೆ ಸಬೂಬು ಹೇಳಿ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಬಿಟ್ಟರೆ ಇಲ್ಲಿಯ ತನಕ ಸಮಸ್ಯೆ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಈ ಭಾರಿ ಮಳೆಗಾಲ ಕೈಕೊಟ್ಟ ಕಾರಣ ಹೆಚ್ಚಿನ ಬಾವಿಗಳಲ್ಲಿ ಈಗಾಗಲೇ ನೀರಿನ ಕೊರತೆ ಏರ್ಪಟ್ಟಿದೆ. ಕುಂದಾಪುರ ಪುರಸಭೆಯ ನೀರನ್ನು ನಂಬಿರುವ ಗ್ರಾಮ ಪಂಚಾಯತುಗಳು ಕೂಡ ನೀರಿನ ಸರಬರಾಜು ವ್ಯತ್ಯಯದಿಂದ ಸಮಸ್ಯೆಗೆ ಈಡಾಗಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಟ್ಟೆ ಎನ್.ಎಮ್.ಎ.ಎಮ್ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ. ಕೀರ್ತಿ ಶೆಟ್ಟಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಭಾಗವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿ ಭಾಗದಲ್ಲಿ ಆನಂದ್ ಸಿ ಕುಂದರ್ ಶೈಕ್ಷಣಿಕ ಕ್ರಾಂತಿಯನ್ನು ಪಸರಿಸಿದ್ದಾರೆ ಈ ಮೂಲಕ ಗ್ರಾಮೀಣ ಹಳ್ಳಿ ಭಾಗದ ಮಕ್ಕಳು ವಿದ್ಯಾರ್ಜನೆ ಪಡೆದು ಸುಸಂಸ್ಕೃತರಾದರೆ ಶೈಕ್ಷಣಿಕ ದಾನಿಗಳಾದ ಕುಂದರ್ ರವರು ಸಾರ್ಥಕ್ಯ ಕಂಡಂತೆ ಎಂದು ಪ್ರಸಿದ್ಧ ಮನೋವೈದ್ಯ ಡಾ.ಸಿ ಪ್ರಕಾಶ್ ತೋಳಾರ್ ಅಭಿಪ್ರಾಯಪಟ್ಟರು. ಅವರು ಶನಿವಾರ ಕೋಟದ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಇಲ್ಲಿನ ಪಡುಕರೆ ಶಾಲೆಯ ಹಿಂದಿನ ವಿದ್ಯಾರ್ಥಿ ಶಿರಿಯಾರ ಮನೆತನದ ಸಂದೇಶ್ ಕುಮಾರ್ ಇನ್ಫೋಸಿಸ್ ಮೂಲಕ 15 ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು ಶಿಕ್ಷಣ ಸಂಸ್ಥೆಯಲ್ಲಿ ಶಿಸ್ತು ಸಂಯಮ ಕಾಯ್ದುಕೊಳ್ಳಬೇಕು ಸಮಾಜಕ್ಕೆ ಮಾದರಿ ವ್ಯಕ್ತಿತ್ವವನ್ನು ನೀಡುವ ರೀತಿಯಲ್ಲಿ ಬೆಳೆದುತೊರಬೇಕು ಎಂದು ಕಂಪ್ಯೂಟರ್ ಕೊಡುಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಶಿರಿಯಾರ ಮನೆತವನ್ನು ಸ್ಮರಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಕಂಪ್ಯೂಟರ್ ಅನ್ನು ಸಂದೇಶ್ ಪೂಜಾರಿ ಇವರ ತಂದೆ ಕೃಷ್ಣ ಪೂಜಾರಿ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಿ ಅವರಿಗೆ ಹಸ್ತಾಂತರಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನಲ್ಲಿ ಖೇಲೋ ಕ್ರಿಯೇಟಿವ್ ಜೂನಿಯರ್ಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯು ಶನಿವಾರದಂದು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಸಪ್ತಗಿರಿ ಕ್ಯಾಂಪಸ್ನಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಚಿನ್ನದ ಪದಕ ಗೆದ್ದಿರುವ ನಿಧಿ ಯು. ಆಚಾರ್ ಹಾಗೂ ಕ್ರಿಯೇಟಿವ್ ಕಾಲೇಜಿನ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿ, ಆದರ್ಶ್ ಎಂ. ಕೆ., ಶುಭಲಕ್ಷ್ಮಿ ಅಶ್ವಥ್ ಹಾಗೂ ಆಂಗ್ಲ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಶಿಸ್ತು ಮುಖ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಕ್ರೀಡಾಕೂಟದಲ್ಲಿ ಮಕ್ಕಳ ಕ್ರೀಡಾ ಕೌಶಲ್ಯ, ತಂಡದ ಮನೋಭಾವ ಮತ್ತು ಆತ್ಮವಿಶ್ವಾಸ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ವಿಜೇತ ಮಕ್ಕಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು. ಶಾಲೆಯ ಪ್ರಾಂಶುಪಾಲರಾದ ಅಕ್ಷತಾ ಆರ್. ಶೆಣೈ, ಶಿಕ್ಷಕ ವೃಂದ,…
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ – ಪಿಯುಸಿ ಶಿಕ್ಷಣಕ್ಕೆ ಶೇ.100ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ರಮೇಶ್ ಶೆಟ್ಟಿ ಅವರ ನೇತೃತ್ವದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 6ರಂದು ಕುಂದಾಪುರದ ಯಡಾಡಿ–ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿರುವ ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಸೇರಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಈ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸುಜ್ಞಾನ ಸಂಸ್ಥೆ:ಕಳೆದ ಐದು ವರ್ಷಗಳಿಂದ ಕುಂದಾಪುರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸಿಇಟಿ, ನೀಟ್, ಜೆಇಇ, ಸಿಎ ಮತ್ತು ಸಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಪಡಿಸುತ್ತಿದೆ. ವಿದ್ಯಾರ್ಥಿಗಳನ್ನು ಐಐಟಿ, ವೈದ್ಯಕೀಯ ಕಾಲೇಜುಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ರಿ. ತಗ್ಗರ್ಸೆ ಇದರ ದಶಮ ಸಂಭ್ರಮ ಕಾರ್ಯಕ್ರಮದ ಪೋಸ್ಟರ್ ಅನಾವರಣವು ಆದಿತ್ಯವಾರದಂದು ತಗ್ಗರ್ಸೆ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನೆರವೇರಿಸಲಾಯಿತು. ಪೋಸ್ಟರನ್ನು ಹಿರಿಯ ರಂಗ ಕಲಾವಿದರಾದ ಗಣೇಶ್ ಕಾರಂತ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಸಮಿತಿಯ ಸರ್ವ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.
