Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಮೀಪದ ಸಳ್ಕೋಡು ಸ.ಹಿ.ಪ್ರಾ. ಶಾಲೆಯಲ್ಲಿ ಕುಂದಾಪುರ ಪ್ರಾದೇಶಿಕ ಅವರಣ್ಯ ವಲಯದ ಬೀಜ ಬಿತ್ತನೆ ಅಭಿಯಾನ 2022-23 ನಡೆಯಿತು. ಬೀಜ ಬಿತ್ತೋಣ ಅರಣ್ಯ ಬೆಳೆಸೋಣ ಧ್ಯೆಯ ವಾಕ್ಯದೊಂದಿಗೆ ಬೀಜ ಬಿತ್ತನೆಗೆ ಚಾಲನೆ ನೀಡಿಲಾಯಿತು. ಜೊತೆಗೆ ಸಸಿ ಹಾಗೂ ಸೀಡ್ ಬಾಲ್ ವಿತರಿಸಲಾಯಿತು. ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾದ ಸುರೇಂದ್ರ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ನಾಯ್ಕ್, ಗ್ರಾಮ ಅರಣ್ಯ ಸಮಿತಿ ಉಪಾಧ್ಯಕ್ಷರಾದ ಮಹಾಬಲ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬು ಗೌಡ, ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಪರಿಸರ ಪ್ರೇಮಿ ಸಂದೇಶ್ ಪ್ರಭು ಉಪಸ್ಥಿತರಿದ್ದರು. ಉಪವಲಯ ಅರಣ್ಯಾಧಿಕಾರಿ ಸುನಿಲ್ ಪ್ರಾಸ್ತಾವಿಕ ಮಾತನಾಡಿದರು. ಬಾಬು ಗೌಡ ಅವರು ಸ್ವಾಗತಿಸಿ, ಅರಣ್ಯ ರಕ್ಷಕರಾದ ಬಸವರಾಜ್ ಕಾರ್ಯಕ್ರಮ ನಿರ್ವಹಿಸಿ, ಹರಿಪ್ರಸಾದ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು, ಕೆರಾಡಿ ಮೊದಲಾದ ಗ್ರಾಮೀಣ ಪ್ರದೇಶಗಳಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ತೆರಳುವುದು ದುಸ್ತವಾಗಿದ್ದು, ಗ್ರಾಮೀಣ ಭಾಗಕ್ಕೆ ಸರಕಾರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಕುಂದಾಪುರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಶನಿವಾರ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ವಿದ್ಯಾರ್ಥಿಗಳು ಕುಂದಾಪುರ ಮುಖ್ಯ ರಸ್ತೆಯಲ್ಲಿ ಕಾಲ್ನಡಿಗೆ ಮೆರವಣಿಗೆಯಲ್ಲಿ ಸಾಗಿ ಕುಂದಾಪುರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ಸಲ್ಲಿಸಿದರು. ಸುಮಾರು 2000 ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ತೆರಳಲು ಹೊಲ್ಲೂರಿನಿಂದ ಹೊರಟು ಕುಂದಾಪುರದವರೆಗೂ ಸಹ ಅನೇಕ ವಿದ್ಯಾಸಂಸ್ಥೆಗಳಿಗೆ ತೆರಳುತಿದ್ದು, ವಿದ್ಯಾರ್ಥಿಗಳಿಗೆ ನಿತ್ಯ ತೊಂದರೆಯಾಗುತ್ತಿದೆ ಎಂದರು. ತಾಲೂಕಿನ ಗ್ರಾಮೀಣ ಭಾಗವಾದ ಕೆರಾಡಿ – ಮಾರಣಕಟ್ಟೆ ರಸ್ತೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಮತ್ತು ಕೆರಾಡಿ ಬೆಳ್ಳಾಲ ರಸ್ತೆಯಲ್ಲಿ ನೂರಕ್ಕೂ ಅಧಿಕ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಬರುತ್ತಿದ್ದು, ಬಸ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಹಾಗೂ ಮುಖ್ಯ ಮಂತ್ರಿಯವರಿಗೆ ಪತ್ರ ಬರೆದಿದ್ದು ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿ, 9 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿನ ದ್ವಿಚಕ್ರ ವಾಹನ ಕಳ್ಳತನ ತಡೆಗಟ್ಟುವುದು ಹಾಗೂ ಪತ್ತೆ ಮಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ವಿಶೇಷ ತಂಡವು ಕೋಟ ಸರಹದ್ದಿನ ವಿವಿಧ ಭಾಗದಲ್ಲಿ ವಾಹನ ತಪಾಸಣೆ ಮತ್ತು ದಾಖಲೆ ಪರಿಶೀಲಿಸುತ್ತಿದ್ದ ಸಂದರ್ಭ ಜೂ. 9ರಂದು ವಡ್ಡರ್ಸೆ ಗ್ರಾಮದ ರೈಲ್ವೇ ಬ್ರಿಡ್ಜ್ ಬಳಿ ನಂಬರ್ ಪ್ಲೇಟ್ ಇಲ್ಲದ ವಾಹನವನ್ನು ಸಂಶಯಾಸ್ಪದವಾಗಿ ನಿಲ್ಲಿಸಿದ್ದು, ವಾಹನದ ಬಳಿ ಇದ್ದ ಇಬ್ಬರನ್ನು ದಾಖಲಾತಿಗಳ ಬಗ್ಗೆ ವಿಚಾರಿಸಿದಾಗ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸದಿರುವುದರಿಂದ ತನಿಖೆ ನಡೆಸಿದ್ದು, ಆಗ ಅದು ಕಳ್ಳತನ ಮಾಡಿದ ಬೈಕ್ ಎನ್ನುವುದು ತಿಳಿದುಬಂದಿದೆ. ಪ್ರಕರಣದ ಆರೋಪಿಗಳಾದ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಅತ್ತಿಗುಡ್ಡೆ ನಿವಾಸಿ ಸೋಮಶೇಖರ (21) ಹಾಗೂ ಬಾಗಲಕೋಟೆ ಜಿಲ್ಲೆ ಹುನಗುಂಡ ತಾಲೂಕು ಹೊಸಮನೆ ನಿವಾಸಿ ಶಂಕರ ಗೌಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇದನ್ನು ಜಾರಿಗೊಳಿಸಲು ಮಾರ್ಷಲ್ ಮತ್ತು ಪೊಲೀಸರು ಸಹಾಯ ಪಡೆಯುವುದು. ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಥಿಯೇಟರ್, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿ ಕಾರ್ಖಾನೆ ಎಲ್ಲಾ ಕಡೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಬೇಕು. ಮಾಸ್ಕ್ ಹಾಕಿಕೊಂಡು ಬರದಿದ್ದರೆ ಪ್ರವೇಶ ನಿಷೇಧ. ಆಯಾಯ ಸಂಸ್ಥೆಯ ಆಡಳಿತ ಸಂಸ್ಥೆ ಮತ್ತು ಮಾಲೀಕರು ಜವಾಬ್ದಾರಿ ತೆಗೆದುಕೊಳ್ಳಬೇಕು. ಬಸ್, ರೈಲು, ಸ್ವಂತ ವಾಹನಗಳಲ್ಲಿ ಓಡಾಡಬೇಕಾದ್ರೆ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಐಎಲ್‍ಐ, ಸಾರಿ ಮತ್ತು ಇತರ ಅರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ರಿಸಲ್ಟ್ ಬರುವವರೆಗೂ ಮನೆಯಲ್ಲಿ ಪ್ರತ್ಯೇಕವಾಗಿ ಇರಬೇಕು. ಅರ್ಹ ಫಲಾನುಭವಿಗಳು ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಪಡೆಯಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಕೆಲದಿನಗಳಿಂದ 300ಕ್ಕೂ ಅಧಿಕ ಕೇಸ್‍ಗಳು ದಾಖಲಾಗುತ್ತಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂತನ ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಶಾಂತವೀರ್ ಶಿವಪ್ಪ ಅವರನ್ನು ಕುಂದಾಪುರ ವಕೀಲರ ಸಂಘದ ವತಿಯಿಂದ ಸ್ವಾಗತಿಸಿಕೊಳ್ಳಲಾಯಿತು. ಕುಂದಾಪುರ ಬಾರ್ ಅಸೋಸಿಯೇಷನ್ ಶುಕ್ರವಾರ ವಕೀಲರ ಸಭಾ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ಸ್ವಾಗತಿಸಿಕೊಂಡರು. ಈ ಸಂದರ್ಭ ಕುಂದಾಪುರದ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್, ಉಡುಪಿಯ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ, ಕುಂದಾಪುರದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜು ಎನ್, ಗೌರವಾನ್ವಿತ ಸಿವಿಲ್ & ಜೆ. ಎಮ್.ಎಫ್. ಸಿ. ನ್ಯಾಯಾಧೀಶರಾದ ರೋಹಿಣಿ ಡಿ, ಹಾಗೂ ಗೌರವಾನ್ವಿತ 2ನೇ ಹೆಚ್ಚುವರಿ ಸಿವಿಲ್ & ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ವಿದ್ಯಾ ಎ.ಎಸ್. ಉಪಸ್ಥಿತರಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್ ವಂದಿಸಿದರು. ವಕೀಲರಾದ ರಾಘವೇಂದ್ರ ಚರಣ್ ನಾವಡ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕೊಡೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರ ಸಹಕಾರದೊಂದಿಗೆ ಒದಗಿಸಲಾದ ವಾಹನ ಸೌಲಭ್ಯವನ್ನು ಉದ್ಘಾಟಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು. ಈ ಸಂಧರ್ಭದಲ್ಲಿ ಹಿರಿಯರಾದ ವಾಸುದೇವ್ ಕಾರಂತ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆನಂದ ಪೂಜಾರಿ ಕೊಡೇರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುರೇಶ ಖಾರ್ವಿ, ಮುಖ್ಯೋಪಧ್ಯಾಯರಾದ ಶ್ಯಾಮಲಾ ರಾವ್, ಎಸ್.ಡಿ,ಎಂ.ಸಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ10: ಸೈಬರಕಟ್ಟೆ ಮಹಾತ್ಮಾ ಗಾಂಧಿ ಪ್ರೌಢಶಾಲೆಯ 2022-23ನೇ ಸಾಲಿನ ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಗುರುವಾರ ಜರಗಿತು. ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ಪುರುಷೋತ್ತಮ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ದೀಪದಂತೆ ಬೆಳಗಿ ಎಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಕೆ. ಪ್ರಸಾದ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ರವೀಂದ್ರನಾಥ್ ಶೆಟ್ಟಿ ಶುಭಹಾರೈಸಿದರು. ವಿದ್ಯಾರ್ಥಿ ಸಂಸತ್ ನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಬೋಧಿಸಿದರು. ದಾನಿಗಳಾದ ರವಿಶಂಕರ್ ಭಟ್ ಶಿರಿಯಾರ ನೀಡಿದ ನೋಟ್ ಪುಸ್ತಕಗಳನ್ನು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೂ ವಿತರಿಸಲಾಯಿತು. ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಸ್ವಾಗತಿಸಿ ಶಿಕ್ಷಕ ಶಿರಿಯಾರ ಗಣೇಶ್ ನಾಯಕ್ ವಂದಿಸಿದರು. ಸಹ ಶಿಕ್ಷಕಿ ಯಶೋದಾ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.09: ಕುಂದಾಪುರ ಕಡೆಯಿಂದ ಭಟ್ಕಳಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂಪರ ಸಂಘಟನೆಗಳು ನೀಡಿದ ಮಾಹಿತಿ ಆದರಿಸಿ ಬೆನ್ನತ್ತಿದ ಬೈಂದೂರು ಪೊಲೀಸರು ಒತ್ತಿನಣೆ ಬಳಿ ತಡೆಹಿಡಿದು, ಎರಡು ಕ್ವಿಂಟಲಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಕರ್ಕುಂಜೆಯ ಮಹಮ್ಮದ್ ಅಲ್ತಾಫ್ (37) ಹಾಗೂ ಕಾರಿನಲ್ಲಿದ್ದ ಮೂವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನೊಂದಣಿ ಹೊಂದಿರುವ ಚೆವರ್ಲೆಟ್ ಬಾಡಿಗೆ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡಲಾಗಿದ್ದು, ಇದೇ ಕಾರಿನಲ್ಲಿ ಮುಸ್ಲಿಂ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು. ಕಾರಿನ ಡಿಕ್ಕಿಯಲ್ಲಿ ಎರಡು ಕ್ವಿಂಟಲಿಗೂ ಅಧಿಕ ಪ್ರಮಾಣದ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಯಾರಿಗೂ ಸಂಶಯ ಬರಬಾರದು ಎಂಬ ಕಾರಣಕ್ಕೆ ಮೂವರು ಮುಸ್ಲಿಂ ಮಹಿಳೆಯರನ್ನು ಇದೇ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು ಎನ್ನಲಾಗುತ್ತಿದ್ದು, ಅವರನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಅವರನ್ನು ಮಹಿಳಾ ನಿಲಯಕ್ಕೆ ಕಳುಹಿಸಲಾಗಿದ್ದು, ಬೆಳಿಗ್ಗೆ ವಿಚಾರಣೆಯ ನಡೆಸಿ, ನ್ಯಾಯಾಲಕ್ಕೆ ಹಾಜರುಪಡಿಸಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಿನದಿಂದ ಪ್ರಕೃತಿ ಕಲುಷಿತವಾಗುತ್ತಿದೆ. ಪ್ಲಾಸ್ಟಿಕ್ ಅತಿಯಾದ ಪ್ಲಾಸ್ಟಿಕ್ ಬಳಕೆಯು ಇದಕ್ಕೆ ಪ್ರಮುಖ ಕಾರಣವಾಗಿದೆ. ಪರಿಸರ ದಿನಾಚರಣೆ ಹೆಸರಿನಲ್ಲಿ ಗಿಡಗಳನ್ನು ನೆಡುವುದಷ್ಟೇ ಅಲ್ಲದೇ ಅವುಗಳನ್ನು ಪೋಷಿಸುವ ಕಾರ್ಯವನ್ನು, ಪ್ಲಾಸ್ಟಿಕ್ ಹಾಗೂ ಪರಿಸರಕ್ಕೆ ಹಾನಿಯಾಗುವ ವಸ್ತುಗಳನ್ನು ಮಿತವಾಗಿ ಬಳಸುವ ಕಾರ್ಯವನ್ನು ಮಾಡಬೇಕಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ಅರಣ್ಯ ಇಲಾಖೆ ಕೊಲ್ಲೂರು ಹಾಗೂ ಸಿದ್ಧಾಪುರ ವನ್ಯಜೀವಿ ವಲಯ ಹಾಗೂ ಪರಿಸರ ಅಭಿವೃದ್ಧಿ ಸಮಿತಿ ಜಂಟಿ ಆಶ್ರಯದೊಂದಿಗೆ ಮಂಗಳವಾರ ಕೊಲ್ಲೂರು ಸೌಪರ್ಣಿಕ ಸಸ್ಯಕ್ಷೇತ್ರದಲ್ಲಿ ಹಮ್ಮಿಕೊಂಡ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕೊಲ್ಲೂರು ಗ್ರಾಪಂ ಅಧ್ಯಕ್ಷರಾದ ಶಿವರಾಮ ಕೃಷ್ಣ ಭಟ್ಟ ಗಿಡ ನೆಡುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪ್ರಕಾಶ್ ಪೂಜಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವನ್ಯಜೀವಿ ಉಪ ವಿಭಾಗ ಸಿದ್ದಾಪುರ, ರಮೇಶ್ ಗಾಣಿಗ, ಉದ್ಯಮಿಗಳು, ಕೊಲ್ಲೂರು, ರಾಜು ನಾಯ್ಕ, ವಲಯ ಅರಣ್ಯಾಧಿಕಾರಿ, ಕೊಲ್ಲೂರು ವನ್ಯಜೀವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.09: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಯಲದ ಎ.ಡಿ.ಐ.ಪಿ ಯೋಜನೆಯಡಿ ಬೆಂಗಳೂರು ಅಲಿಮ್ಕೋ ಎ.ಸಿ.ಸಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ವ್ಯಾಪ್ತಿಯ ವಿಕಲಚೇತನರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆಯನ್ನು ವಿತರಿಸಲು ಜೂನ್ 13 ರಿಂದ 23 ರ ವರೆಗೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಜೂ. 13 ರಂದು ಕಾಪುವಿನ ಜೆ.ಸಿ ಭವನ, ಜೂ. 14 ರಂದು ಅಜ್ಜರಕಾಡು ಜಿಲ್ಲಾ ಆಸ್ಪತ್ರೆ, ಜೂ. 15 ರಂದು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ, ಜೂ. 16 ರಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರ, ಜೂ. 17 ರಂದು ಕುಂದಾಪುರದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ಜೂ. 18 ರಂದು ವಂಡ್ಸೆ ಸಮುದಾಯ ಆರೋಗ್ಯ ಕೇಂದ್ರ, ಜೂ. 20 ರಂದು…

Read More