ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಸಿಟಿ ವತಿಯಿಂದ ಬಂಧನ್ ಜೆಸಿಐ ಸಪ್ತಾಹ 2021 ಇದರ ಮೂರನೇ ದಿನದ ಅಂಗವಾಗಿ ಕಿಟ್ ವಿತರಣೆ ಮತ್ತು ಸ್ಕಾಲರ್ಶಿಪ್ ನೋಟ್ ಬುಕ್ ವಿತರಣೆ, ಹಾಗೂ ಸ್ಪೋರ್ಟ್ಸ್ ಕಾರ್ಯಕ್ರಮ ಇಲ್ಲಿನ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಜೆಸಿಐ ವಲಯಾಧಿಕಾರಿ ಮಣಿಕಂಠ ದೇವಾಡಿಗ ಕಾರ್ಯಕ್ರಮ ಉದ್ಘಾಟಿಸಿದರು, ಜೇಸಿಐ ಬೈಂದೂರು ಸಿಟಿ ಘಟಕದ ಅಧ್ಯಕ್ಷರಾದ ಶ್ರೀಧರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷೆ ಪ್ರಿಯದರ್ಶಿನಿ ಕಮಲೇಶ ಪ್ರಸ್ತಾವಿಕ ನುಡಿಗಳನ್ನಾಡಿದರು. ಜೇಸಿರೇಟ್ ಅಧ್ಯಕ್ಷೆ ಅನಿತಾ ಆರ್ ಕೆ ಶುಭ ಹಾರೈಸಿದರು. ಈ ಸಂದರ್ಭ ಬೈಂದೂರು ಸಿಟಿ ಘಟಕದ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು. ಜೆಸಿ ಸವಿತಾ ಗಾಣಿಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ವಿಶೇಷ ಶಿಕ್ಷಕ ಶಿಕ್ಷಕೇತರ ಸಂಘದ ಅಧ್ಯಕ್ಷರಾಗಿ ಹೆಚ್ ರವೀಂದ್ರ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಅವರು ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಿಶೇಷ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಳೆದ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಪಧಾದಿಕಾರಿಗಳಾಗಿ ಬೈಂದೂರು ತಾಲೂಕಿನ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 2011 ರಲ್ಲಿ ರಾಜ್ಯ ಸರ್ಕಾರ ಅವರ ಸೇವೆಯನ್ನು ಗುರುತಿಸಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ ಹಾಗೂ 2020ರಲ್ಲಿ ರಾಜ್ಯಮಟ್ಟದ ಡಾ. ಶಾಂತಾ ರಾಧಾಕ್ರಷ್ಣ ಧತ್ತಿ ಪ್ರಶಸ್ತಿ ಸಂದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.14: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ನಿಯಂತ್ರಿಸಲು ಶೀಘ್ರದಲ್ಲಿ ಕೋವಿಡ್ ಪೀಡಿತರನ್ನು ಪತ್ತೆ ಹಚ್ಚಿ, ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು ಅಗತ್ಯವಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಫೀವರ್ ಸರ್ವೇ ಕಾರ್ಯಕ್ರಮ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೋವಿಡ್ ನಿಯಂತ್ರಣ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಪ್ಟಂಬರ್ 20 ರಿಂದ 22ರ ವರೆಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕ ಮನೆ ಮನೆಗೆ ಭೇಟಿ ನೀಡಿ, ಜ್ವರ ಇರುವವರ ಮಕ್ಕಳು, ವೃದ್ದರು ಮತ್ತು ಎಲ್ಲಾ ಸಾರ್ವಜನಿಕರ ಕುರಿತು ಮಾಹಿತಿ ಸಂಗ್ರಹಿಸಿ. ಜ್ವರ ಇದ್ದವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಸೋಂಕು ಕಂಡು ಬಂದವರನ್ನು ಆರೋಗ್ಯವಂತರಿಂದ ಪ್ರತ್ಯೇಕಿಸುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಸಾದ್ಯವಿದೆ. ಸಾರ್ವಜನಿಕರು ಸರ್ವೆ ಸಮಯದಲ್ಲಿ ತಮ್ಮ ಆರೋಗ್ಯ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸುವರ್ಣ ಇಂಡಸ್ಟ್ರೀಸ್ ಯಡ್ತಾಡಿ ಹಾಗೂ ಶ್ರೀವಿನಾಯಕ ಯುವಕ ಮಂಡಲ(ರಿ) ಸಾಬ್ರಕಟ್ಟೆ-ಯಡ್ತಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆ ಇದರ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಕೊಡುಗೆ ರೂಪದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪುಸ್ತಕವನ್ನು ಸ್ವೀಕರಿಸಿ ಮಾತಾನಾಡಿದ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ನಾಯ್ಕ್ ರವರು ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪುಸ್ತಕವನ್ನು ಕೊಡುಗೆ ನೀಡಿರುವುದು ಶ್ಲಾಘನೀಯ, ಕನ್ನಡ ಶಾಲೆಗಳ ಅಭಿವೃದ್ಧಿ ಇಂತಹ ಸಂಸ್ಥೆಗಳ ಸಹಕಾರದಿಂದ ಸಾಧ್ಯ, ನಿಮ್ಮ ಸಂಸ್ಥೆಯಿಂದ ಇನ್ನಷ್ಟೂ ಸಮಾಜಮುಖಿ ಕಾರ್ಯ ನಡೆದು ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಸುವರ್ಣ ಇಂಡಸ್ಟ್ರೀಸ್‌ನ ಮಾಲಕರಾದ ಶ್ರೀ ಜಯಕರ್ ಸುವರ್ಣ, ಯುವಕ ಮಂಡಲದ ಪೂರ್ವಾಧ್ಯಕ್ಷ ಶ್ರೀ ಶಿವರಾಮ ಪೂಜಾರಿ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ.ಎ/ಸಿ.ಎಸ್ ಕೋರ್ಸ್ಗಳ ಕುರಿತ ಮಾಹಿತಿ ಕಾರ್ಯಾಗಾರ ಇತ್ತಿಚಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಿ.ಎ.ನಾಗೇಂದ್ರ ಭಕ್ತ ಹೆಬ್ರಿ ಹಾಗೂ ಸಿ.ಎಸ್.ಸಂತೋಷ ಪ್ರಭು ಉಡುಪಿ ಅವರು ಕೋರ್ಸ್ ಕುರಿತು ಮಾಹಿತಿ ನೀಡಿದರು. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಹರ್ಷ ಶೆಟ್ಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಂಗ್ರೆಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಗಾರಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಜುಲೈ.18ರಂದು ಆಸ್ಕರ್ ಫೆರ್ನಾಂಡಿಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಂದರ್ಭ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದರಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕರಾಗಿದ್ದ, ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದರು. ಆಸ್ಕರ್ ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಉಡುಪಿ ಜಿಲ್ಲೆಯಲ್ಲಿ ರಾಜಕೀಯ ಜೀವನ ಆರಂಭಿಸಿದ ಅವರು ಹಂತಹಂತವಾಗಿ ಉನ್ನತ ಸ್ಥಾನಕ್ಕೇರಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಭಾರಿಗೆ ಸಂಸತ್ ಪ್ರವೇಶ್ ಮಾಡಿದ್ದ ಅವರು ನಾಲ್ಕು ಭಾರಿ ಸಂಸದರಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ಮೃತರು ಪತ್ನಿ ಬ್ಲೋಸಂ ಫೆರ್ನಾಂಡಿಸ್, ಪುತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದ ಆಶ್ರಯದಲ್ಲಿ ಒಂದು ವಾರಗಳ ಕಾಲ ನೆಡೆಯುವ ಜೇಸಿ ಸಪ್ತಾಹವನ್ನು ಉಪ್ಪುಂದ ಮೀನು ಮಾರುಕಟ್ಟೆಯ ಆವರಣದಲ್ಲಿ ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮಿ ಖಾರ್ವಿ ಮಾಸ್ಕ್ ವಿತರಿಸುವುದರ ಮೂಲಕ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷರಾದ ಜೇಸಿ ಪುರುಷೋತ್ತಮದಾಸ್ ಉಪ್ಪುಂದದ ವಿವಿದೆಡೆ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಸುಮಾರು 500ಕ್ಕೂ ಹೆಚ್ಚು ಮಾಸ್ಕ್ ಮೊದಲ ದಿನದಂದು ವಿತರಿಸಲಾಯಿತು. ಕಾರ್ಯಕ್ರಮದ ಅತಿಥಿಯಾಗಿ ಯು ಪ್ರಕಾಶ್ ಭಟ್, ವಲಯಾಧಿಕಾರಿ ಸುಬ್ರಮಣ್ಯ ಜಿ., ಸದಸ್ಯರಾದ ವಿಜಯ ಶೆಟ್ಟಿ ರಮೇಶ್ ಜೋಗಿ, ಜಯರಾಜ್ ಖಾರ್ವಿ, ಶ್ರೀಲತಾ ಉಪಸ್ಥಿತರಿದ್ದರು. ಜಗದೀಶ್ ದೇವಾಡಿಗ ಜೇಸಿವಾಣಿ ವಾಚಿಸಿದರು ಜೇಸಿ ಮಂಜುನಾಥ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಆನಗಳ್ಳಿ ಗ್ರಾಮದ ಕಳಂಜೆ ರಾಮಕೃಷ್ಣ ಭಟ್ ಅವರ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕವನ್ನು ಯಕ್ಷಗಾನ ವಿಮಶ೯ಕರಾದ ದಿನೇಶ್ ಉಪ್ಪೂರು ಅನಾವರಗೊಳಿಸಿದರು. ಕಾಯ೯ಕ್ರಮ ಅಧ್ಯಕ್ಷತೆಯನ್ನು ಆನಗಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಾರೇನ್ಸ್ ಡಿ ಸೋಜ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶಿವ೯ ಎಮ್.ಎಸ್.ಆರ್.ಎಸ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಮುರುಗೇಶ್.ಟಿ ಭಾರತ ಸ್ವಾತಂತ್ರ್ಯಕ್ಕೆ ಕಳಂಜೆ ರಾಮಕೃಷ್ಣ ಭಟ್ ಅವರ ಸೇವೆ ಮತ್ತು ಕೊಡುಗೆಯ ಬಗ್ಗೆ ವಿಸ್ತರಿಸಿದರು. ಈ ಸಂದರ್ಭ ಮುಖ್ಯ ಅತಿಥಿಯಾಗಿ ಕುಂದಾಪುರದ ಉಪ ತಹಶೀಲ್ದಾರಾದ ರಾಮಚಂದ್ರ ಹೆಬ್ಬಾರ್, ಶಿವ೯ ಎಮ್.ಎಸ್.ಆರ್.ಎಸ್. ಕಾಲೇಜಿನ ಗಣೇಶ್, ಆನಗಳ್ಳಿ ಗೆಳೆಯರ ಬಳಗ ಅಧ್ಯಕ್ಷರಾದ ರವಿ ಉಪಸ್ಥಿತರಿದ್ದರು. ಜನ ಸೇವಾ ಟ್ರಸ್ಟ್ (ರಿ) ಮೂಡುಗಿಳಿಯಾರು, ಎನ್.ಎಸ್.ಎಸ್ ಘಟಕ ಎಮ್.ಎಸ್.ಆರ್.ಎಸ್ ಕಾಲೇಜು ಶಿವ೯, ಗೆಳೆಯರ ಬಳಗ ಆನಗಳ್ಳಿ, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಹಕಾರ ನೀಡಿದರು. ಕಾಯ೯ಕ್ರಮ ದಲ್ಲಿ ‘ಸ್ವರಾಜ್ಯ 75’ ಕಾಯ೯ಕ್ರಮದ ಸಂಚಾಲಕರಾದ ಪ್ರದೀಪ ಕುಮಾರ್ ಬಸ್ರೂರು ನಿರೂಪಿಸಿದರು. ವಸಂತ ಗಿಳಿಯಾರು ಪ್ರಾಸ್ತಾವಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯು ಬೈಂದೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಮತ್ತು ವಿಧಾನ ಪರಿಷತ್ ಸಭಾ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯ ಚಟುವಟಿಕೆಯ ಬಗ್ಗೆ ಶ್ಲಾಘನೀಯ ಮಾತುಗಳನ್ನಾಡಿದರು. ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ ಪೂಜಾರಿ ಮುಕ್ಕೋಡು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಅಶೋಕ ಮೂರ್ತಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಸಂಘಟನಾತ್ಮಕ ವಿಷಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಜಿಲ್ಲಾ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಅರುಣ್ ಬಾಣ, ಜಿಲ್ಲಾ ಒಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಮನೋಜ್ ಕರ್ಕೇರ, ಜಿಲ್ಲಾ ಉಪಾಧ್ಯಕ್ಷರಾದ ಆನಂದ ಖಾರ್ವಿ, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜೆಡ್ಡು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಸಾಧಾರಣ ಸಾಧನೆಗೈದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾದ ಬಾಲ ಪ್ರತಿಭೆ ಕುಂದಾಪುರದ ಕೋಡಿಯ ಆರ್ಯನ್ ಎನ್. ಶೇರುಗಾರ್ ಅವರನ್ನು ಬೈಂದೂರಿನ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಬೆಂಗಳೂರಿನ ಶಾಸಕರ ಭವನದಲ್ಲಿ ಸನ್ಮಾನಿಸಿದರು. ಚಿಕ್ಕವಯಸ್ಸಿನಲ್ಲಿಯೇ ಉತ್ತಮ ಸಾಧನೆಗೈದ ಬಾಲಕ ಮುಂದೆಯೂ ದೇಶಕ್ಕೆ ಕೀರ್ತಿ ತರುವಂತಹ ಸಾಧನೆ ಮಾಡಲಿ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹಾರೈಸಿದರು. ಈ ಸಂದರ್ಭ ಬಾಲಕನ ಪೋಷಕರಾದ ಅಂಜಲಿ ಹಾಗೂ ನಾಗೆಂದ್ರ ಕೋಟೆ ಉಪಸ್ಥಿತರಿದ್ದರು. ಇದನ್ನೂ ಓದಿ:► ಕುಂದಾಪುರ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮೂರು ವರ್ಷದ ಪೋರ ಆರ್ಯನ್ – https://kundapraa.com/?p=52163 .
