Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಟೆಂಪೊ, ರಿಕ್ಷಾ, ಟ್ಯಾಕ್ಸಿ ಮಾಲಕರ ಮತ್ತು ಚಾಲಕರ ವಿವಿದೋದ್ದೇಶ ಸಹಕಾರಿ ಸಂಘ ಬೈಂದೂರು ಇದರ ವಾರ್ಷಿಕ ಮಹಾಸಭೆ ಶನಿವಾರ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಮಾತನಾಡಿ, ಸಂಘದ ಬೆಳವಣಿಗೆ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಮತ್ತು ಸಕಾಲದಲ್ಲಿ ಸಾಲ ಮರುಪಾವತಿಸುವ ಬಗ್ಗೆ ಹೇಳಿದರು. ಈ ಸಂದರ್ಭ ನಿರ್ದೇಶಕರಾದ ಮಹಾಬಲ ದೇವಾಡಿಗ, ಪ್ರವೀಣ್ ಕುಮಾರ್, ಮೂಡೂರ ಪೂಜಾರಿ ಯಡ್ತರೆ, ಮಧುಕರ್ ಶೇಟ್, ಮೂಡೂರ ಪೂಜಾರಿ ನೀರ್ಗದ್ದೆ, ಟಿ. ವಿಜಯ, ಮಲ್ಲಿಕಾ ಎ. ಪೂಜಾರಿ, ಗಂಗಾವತಿ ಉಪಸ್ಥಿತರಿದ್ದರು ಕಾರ್ಯದರ್ಶಿ ಸುರೇಶ ಹುದಾರ್ ಲೆಕ್ಕ ಪತ್ರ ಮಂಡನೆ ಮಾಡಿದರು ನಿರ್ದೇಶಕ ಸಂದೀಪ್ ಸ್ವಾಗತಿಸಿದರು. ಉಪದ್ಯಕ್ಷರಾದ ವೆಂಕಟೇಶ್ ಪೂಜಾರಿ ವಂದಿಸಿದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಡಿ. 22 ಮತ್ತು ಡಿ. 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಜಿಲ್ಲೆಯ ಈ ಕೆಳಕಂಡ ತಾಲೂಕಿನ ಚುನಾವಣೆ ನಡೆಯಲಿರುವ ಗ್ರಾಮಪಂಚಾಯತ್‌ನ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಡಿಯಲ್ಲಿ ಚುನಾವಣೆ ನಡೆಯುವ ದಿನಗಳಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ. ಡಿ. 22 ರ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಬೈಂದೂರು ತಾಲೂಕು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಪ್ಪುಂದ ಗ್ರಾಮದ ವಾರದ ಸಂತೆ, ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದ್ದೂರಿನಲ್ಲಿ ನಡೆಯುವ ಸಂತೆ, ಉಪ್ಪೂರು ಗ್ರಾಮ ಪಂಚಾಯತ್‌ನ ಕೊಳಲಗಿರಿ ಪ್ರದೇಶದಲ್ಲಿ ನಡೆಯುವ ಸಂತೆಯನ್ನು ನಿಷೇಧಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 200 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ 70. 09 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ 10 ಡಿವಿಡೆಂಡ್ ನೀಡಲು ಉದ್ದೇಶಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 32.73 ಕೋಟಿ ಠೇವಣಿ ಹೊಂದಿತ್ತು. ಸದಸ್ಯರಿಗೆ ರೂ 30.51 ಕೋಟಿ ಸಾಲ ನೀಡಿದೆ. ಅದರಲ್ಲಿ ಕೃಷಿ ಸಾಲದ ಮೊತ್ತ ರೂ 6.1 ಕೋಟಿ. ಸಂಘ ನಡೆಸಿದ ವ್ಯಾಪಾರದಿಂದ ರೂ 10.3 ಲಕ್ಷ ಲಾಭ ದೊರಕಿದೆ. ಸಂಘವು 205 ಸ್ವಸಹಾಯ ಸಂಘಗಳನ್ನು ರಚಿಸಿದ್ದು, ಅವು ರೂ 50.11 ಲಕ್ಷ ಠೇವಣಿ ಸಂಗ್ರಹಿಸಿವೆ ಎಂದರು. ನಾವುಂದದಲ್ಲಿರುವ ಸಂಘದ ಪ್ರಧಾನ ಕಚೇರಿ, ಹೇರೂರು, ಬಡಾಕೆರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ.50 ರಷ್ಟು ಸಹಾಯಧನದೊಂದಿಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆಯನ್ನು ಮುಂದುವರಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000 ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ ಖರೀದಿಸಲು ಶೇ. 50 ರಷ್ಟು ಸಹಾಯಧನ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ರಜತಾದ್ರಿ, ಮಣಿಪಾಲ, ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲಿಗೆ ಸರಪಳಿ ಕಟ್ಟಿಕೊಂಡು ಪದ್ಮಾಸನ ಭಂಗಿಯಲ್ಲಿ ಸಮುದ್ರದಲ್ಲಿ ಯಶಸ್ವಿಯಾಗಿ ಒಂದು ಕಿ.ಮೀ. ಈಜಿರುವ ಗುಜ್ಜಾಡಿ ಗ್ರಾಮದ ಕಂಚುಗೋಡಿನ ಶಿಕ್ಷಕ ನಾಗರಾಜ ಖಾರ್ವಿ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದಿದ್ದಾರೆ. ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ಶುಕ್ರವಾರ ಬೆಳಿಗ್ಗೆ 25 ನಿಮಿಷ 16 ಸೆಕೆಂಡ್ 63 ಫ್ರಾಕ್ಷನ್‌ನಲ್ಲಿ ಒಂದು ಕಿ.ಮೀ ಈಜುವ ಮೂಲಕ ಅವರು ಗುರಿ ತಲುಪಿದರು. ಬೆಳಿಗ್ಗೆ8.55ಕ್ಕೆ ತಣ್ಣೀರುಬಾವಿಯ ದಡದಿಂದ ಈಜು ಆರಂಭಿಸಿದ ನಾಗರಾಜ ಖಾರ್ವಿ, 9.20ಕ್ಕೆ ಮರಳಿ ದಡಸೇರಿದರು. ಸಾಧನೆಗಾಗಿ ತಣ್ಣೀರುಬಾವಿ ಬೀಚ್ ಅನ್ನು ಆಯ್ದುಕೊಂಡ ನಾಗರಾಜ ಖಾರ್ವಿ ಸಮುದ್ರದಲ್ಲಿ ಬೆಳಗಿನ ಗಾಳಿ ಉತ್ತರದ ಕಡೆಗಿದ್ದರೂ, ತಮ್ಮ ಸಂಪೂರ್ಣ ಶಕ್ತಿ ಬಳಸಿ ದಕ್ಷಿಣದ ಕಡೆಗೆ ನೆಟ್ಟಿದ್ದ ಧ್ವಜವನ್ನು ತಲುಪಿ ಗುರಿ ಮುಟ್ಟಿದರು ಎಂದು ತರಬೇತುದಾರ ಬಿ.ಕೃಷ್ಣ ನಾಯ್ಕ್ ಹೇಳಿದರು. ‘ಧರ್ಮಸ್ಥಳದ ಶಾಂತಿವನದಲ್ಲಿ ಯೋಗ ಕಲಿತು, ಪದ್ಮಾಸನ ಹಾಕಿ ನೀರಿನಲ್ಲಿ ಈಜುತ್ತಾ ಅಭ್ಯಾಸ ಮಾಡಿದೆ. ಸತತ ಅಭ್ಯಾಸ ಮಾಡಿ, ನೀರಿನ ಮೇಲೆ ತೇಲಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಮೀನುಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಾಧನಾ ಸಮುದಾಯ ಭವನದಲ್ಲಿ ಜರುಗಿತು. ಮರವಂತೆ ಮೀನುಗಾರರ ಸಹಕಾರಿ ಸಂಘವು ಕಳೆದ ವರ್ಷ ರೂ4.23 ಕೋಟಿ ವ್ಯವಹಾರ ನಡೆಸಿ, ರೂ 3.3 ಲಕ್ಷ ನಿವ್ವಳ ಲಾಭ ಗಳಿಸಿದೆ. ಸಂಘದ ಕಟ್ಟಡ ನವೀಕರಣಗೊಳ್ಳಬೇಕಾದ ಕಾರಣ ಸದಸ್ಯರಿಗೆ ಡಿವಿಡೆಂಡ್ ನೀಡದಿರಲು ನಿರ್ಧರಿಸಲಾಯಿತು. ಸಂಘದ ಅಧ್ಯಕ್ಷ ಪ್ರವೀಣ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರತ್ನಾಕರ ಖಾರ್ವಿ, ನಿರ್ದೇಶಕರಾದ ನಾಗರಾಜ್ ಪಟ್ಗಾರ್, ಸುರೇಶ್ ಖಾರ್ವಿ, ಲೋಕೇಶ್ ಖಾರ್ವಿ, ಜನಾರ್ದನ ಕೆ ಎಂ, ಮಹಾದೇವ ಖಾರ್ವಿ, ನಾಗರಾಜ ಖಾರ್ವಿ, ಲೀಲಾವತಿ, ರಾಜೇಶ್ವರಿ, ಸಿಬ್ಬಂದಿ ಹಾಗೂ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಖಾರ್ವಿ ಇದ್ದರು. ಗಂಗಾಧರ ಖಾರ್ವಿ ಸ್ವಾಗತಿಸಿದರು. ಕಾರ್ಯದರ್ಶಿ ಚೈತ್ರಾ ವರದಿ, ಆಯವ್ಯಯ ಮಂಡಿಸಿದರು. ಅದೃಷ್ಟಶಾಲಿ ಸದಸ್ಯರಾಗಿ ಆಯ್ಕೆಯಾದ ನಾಗರತ್ನಾ, ಚಂದ್ರ ಖಾರ್ವಿ ಮತ್ತು ಪ್ರಮೋದ್ ಖಾರ್ವಿ ಅವರಿಗೆ ಬಹುಮಾನ ವಿತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಅಖಿಲ ಭಾರತ ಮೀನುಗಾರರ ಮತ್ತು ಮೀನು ಕಾಮಿ೯ಕರ ಫೆಡರೇಷನ್ ನವದೆಹಲಿ ಸಂಯೋಜಿಸಲ್ಪಟ್ಟ ಬೈಂದೂರು ವಲಯ ಮೀನುಗಾರರ ಮತ್ತು ಮೀನು ಕಾಮಿ೯ಕರ ಸಂಘ ಉಪ್ಪುಂದ ಘಟಕ (ಸಿಐಟಿಯು) ನೇತೃತ್ವದಲ್ಲಿ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಮೀನುಗಾರರು ಪ್ರತಿಭಟನೆ ಜರಗಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ಕೋಣಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮೀನುಗಾರರ ಪಂಜರ ಕೃಷಿ ಮೀನು ಲಕ್ಷಾಂತರ ಸಂಖ್ಯೆಯಲ್ಲಿ ಮೃತಪಟ್ಟ ಘಟನೆ ಬಗ್ಗೆ ವಿವಿಧ ಕ್ಷೇತ್ರಗಳ ವಿಷಯ ಪರಿಣತರಿಂದ ಕಾರಣ ಹುಡುಕಿ ಮೀನುಗಾರರಿಗೆ ನಷ್ಟ ಪರಿಹಾರವನ್ನು ಸರಕಾರ ಈ ಕೂಡಲೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಮೀನುಗಾರರ ಸಂಘದ ಜಿಲ್ಲಾಧ್ಯಕ್ಷ ಕೆ. ಶಂಕರ, ಮುಖಂಡರಾದ ರಾಮ ಖಾವಿ೯, ವಿಠಲ ಖಾವಿ೯,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17,641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್–19 ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಕೋವಿಡ್ ಲಸಿಕೆ ಸರಬರಾಜು ನಿರೀಕ್ಷೆಯಿದ್ದು, ಲಸಿಕೆಯನ್ನು ಪ್ರಾಥಮಿಕವಾಗಿ ಕೊರೊನಾ ವಿರುದ್ದ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನೀಡಲಾಗುವುದು ಎಂದರು. ಗುರುತಿಸಲಾಗಿರುವ ಪ್ರತಿಯೊಬ್ಬರಿಗೂ 2 ಡೋಸ್ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಲಸಿಕೆ ಸಂಗ್ರಹ ಕೊಠಡಿ ಸಿದ್ಧಪಡಿಸಲಾಗಿದ್ದು, ಲಸಿಕೆ ಸಾಗಾಟಕ್ಕೆ 1,324 ವಾಹನಗಳನ್ನು ಗುರುತಿಸಲಾಗಿದೆ. 100 ಮಂದಿಗೆ ಒಂದು ಸ್ಥಳದಲ್ಲಿ ಲಸಿಕೆ ಹಾಕಲಾಗುವುದು. 342 ಸರ್ಕಾರಿ ಹಾಗೂ 18 ಖಾಸಗಿ ಸ್ಥಳಗಳನ್ನು ಗುರುತಿಸಲಾಗಿದ್ದು, ಪ್ರತಿ ಲಸಿಕಾ ಕೇಂದ್ರದಲ್ಲಿ 5 ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಲಸಿಕೆ ಪಡೆಯುಲು ಬರವವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಸರ್ಕಾರ ಹಲವು ಬಾರಿ ರೈತರೊಂದಿಗೆ ಸಭೆ ನಡೆಸಿರುವುದಲ್ಲದೇ ಮಾತುಕತೆಗೆ ಸಿದ್ದವಿರುವುದಾಗಿ ತಿಳಿಸಿದೆ. ನೂತನ ಕಾಯ್ದೆಯಲ್ಲಿ ಲೋಪದೋಷಗಳಿದ್ದರೆ ತಿದ್ದುಪಡಿ ಮಾಡುವುದಾಗಿಯೂ ಹೇಳಿದೆ. ಆದರೆ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವು ರಾಜಕೀಯ ಹೋರಾಟವಾಗಿ ಮಾರ್ಪಟ್ಟಿರುವುದರಿಂದ ಅದು ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ರೈತರೇ ಹೋರಾಟ ಮಾಡುತ್ತಿದ್ದರೆ ಸಮಸ್ಯೆ ಎಂದೋ ಬಗೆಹರಿಯುತ್ತಿತ್ತು. ಆದರೆ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ವಿದ್ರೋಹಿ ಶಕ್ತಿಗಳು ಅನಗತ್ಯವಾಗಿ ಹೋರಾಟ ಮುಂದುವರಿಯುವಂತೆ ಮಾಡಿದ್ದಾರೆ. ರೈತಪರ ಹೋರಾಟದಲ್ಲಿ ಭಯೋತ್ಪಾಕರ ಬಿಡುಗಡೆಯ ಕೂಗು ಕೇಳುತ್ತಿರುವುದು ಹೋರಾಟದ ಹಾದಿಗೆ ಹಿಡಿದ ಕನ್ನಡಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಅವರು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಕೃಷಿ ಮಸೂದೆ 2020ರ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ರೈತರ ಹೋರಾಟದ ದಿಕ್ಕುತಪ್ಪಿಸುತ್ತಿದೆ. ಕೇಂದ್ರದಲ್ಲಿ ಅಂದು ಕೃಷಿ ಮಂತ್ರಿಯಾಗಿದ್ದ ಶರತ್ ಪವಾರ್ ಎಪಿಎಂಸಿ ರದ್ದು ಮಾಡುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೇ, ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ರಾಹುಲ್ ಗಾಂಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 2021-22ನೇ ಸಾಲಿನ ರಾಜ್ಯದ ಎಲ್ಲಾ ಕ್ರೀಡಾ ವಸತಿ ಶಾಲೆ/ವಸತಿ ನಿಲಯಗಳಿಗೆ ಅರ್ಹ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆಯನ್ನು ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು. 8 ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಸೇರ್ಪಡೆಗೆ ಡಿ. 30 ಮತ್ತು 31 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ. ಹಿರಿಯರ ವಿಭಾಗದ ಕ್ರೀಡಾ ವಸತಿ ನಿಲಯ ಪ್ರವೇಶಕ್ಕೆ ಅಭ್ಯರ್ಥಿಗಳನ್ನು ನೇರವಾಗಿ ವಿಭಾಗ ಮಟ್ಟದಲ್ಲಿ ಆಯ್ಕೆ ಮಾಡುವುದರಿಂದ ಅಭ್ಯರ್ಥಿಗಳು ನಿಗದಿಪಡಿಸಿದ ನಮೂನೆಯಲ್ಲಿ ವೈದ್ಯಕೀಯ ಪ್ರಮಾಣಪತ್ರ ಹಾಗೂ ಧೃಢೀಕರಿಸಿದ ಜನನ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಜನವರಿ 15 ರ ಒಳಗೆ ಸಹಾಯಕ ನಿರ್ದೆಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬಹುದು. ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ, ಜನವರಿ 27 ರಂದು ಕಿರಿಯರ ವಿಭಾಗ ಮಟ್ಟದ ಹಾಗೂ ಜನವರಿ 28…

Read More