ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿ ಪುಣೆ ಮತ್ತು ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈಸ್ಸ್ ಸಹಯೋಗದಲ್ಲಿ ”ಸಂಘಟಿತವಾಗಿ ಪ್ರಕೃತಿ ಚಿಕಿತ್ಸೆಯ ಮೂಲಕ ಚೈತನ್ಯವನ್ನು ವರ್ಧಿಸುವುದು” ಎಂಬ ವಿಷಯವನ್ನು ಆದರಿಸಿ ಮೂರನೇ ನ್ಯಾಷನಲ್ ನ್ಯಾಚುರೋಪಥಿ ದಿನವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿಯ ಬೀಚ್ ಹೀಲಿಂಗ್ ಹೋಮ್ ಸಮಗ್ರ ಸ್ವಾಸ್ಥ್ಯ ಕೇಂದ್ರದ ನಿರ್ದೇಶಕ ಡಾ. ಮಹಮ್ಮದ್ ರಫೀಕ್ ಮಾತನಾಡಿ, ಪ್ರಕೃತಿ ಚಿಕಿತ್ಸೆಗೆ ನಮ್ಮ ದೇಶ ದೊಡ್ಡ ಕೊಡುಗೆ ನೀಡಿರುವುದು ಹೆಮ್ಮೆಯ ವಿಷಯ. ಆದರೆ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕ್ಯಾನ್ಸರ್ ಕಾಯಿಲೆಗಳಲ್ಲಿ ನಮ್ಮ ದೇಶವೇ ದಾಪುಗಾಲು ಇಡುತ್ತಿರುವುದು ಬೇಸರದ ಸಂಗತಿ ಎಂದರು. ಹುರುಪು ಜೀವನಶಕ್ತಿ ಹಣಕೊಟ್ಟು ,ಮಾತ್ರೆ ತಿಂದು ಬರಲು ಸಾಧ್ಯವಿಲ್ಲ, ಅವು ಕೇವಲ ನಮ್ಮ ಜೀವನ ಶೈಲಿಯಿಂದ ಮಾತ್ರ ಕಾಪಡಿಕೊಳ್ಳಲು ಸಾಧ್ಯ. ನಾವು ಯಾವಾಗ ಸಂತೋಷವಾಗಿರುತ್ತೇವೆಯೋ ಆಗ ನಮ್ಮ ಚೈತನ್ಯ ಉತ್ಸಾಹ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಯೋಗ ಧ್ಯಾನ ಮಾಡುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಜಿ.ವಿ ಅಶೋಕ ಸಂಪಾದಿಸಿದ ದಿ. ಜಿ. ವಾಸುದೇವ ಹೇರ್ಳೆ ಆತ್ಮಕಥನ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಲೋಕಾರ್ಪಣೆಗೊಳಿಸಿದರು. ಕೃತಿ ಆನಾವರಣಗೊಳಿಸಿ ಮಾತನಾಡಿದ ನೀಲಾವರ ಸುರೇಂದ್ರ ಅಡಿಗ, ಆತ್ಮಕಥನಗಳು ನಮ್ಮ ಬದುಕಿಗೆ ದಾರಿದೀಪವಾಗಿದ್ದು ನಮ್ಮನ್ನು ಅವಲೋಕನ ಮಾಡಿಕೊಳ್ಳಲು ಒಂದು ಅವಕಾಶ, ಇದರಿಂದ ಬದುಕಿನ ಪಾಠಗಳ ಬಗ್ಗೆ ಅಥವಾ ಬದುಕಿನ ಬಗ್ಗೆ ಇರುವ ಹೆಜ್ಜೆಗುರುತನ್ನು , ಸಾಧಕನು ಸಾಧಿಸಿದ ಸಾಧನೆ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಆರಂಭಿಕ ಮಾತುಗಳನ್ನಾಡಿದ ಸಂಪಾದಕ ಜಿ.ವಿ ಹೇರ್ಳೆರವರು ತಂದೆಯವರ ಕುರಿತು ಮಾಡಿದ ಪುಸ್ತಕದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಬ್ರಹ್ಮಾವರ ತಾಲೂಕು ಕ.ಸಾ.ಪ ಅಧ್ಯಕ್ಷರಾದ ನಾರಾಯಣ ಮಡಿ, ಕಾರ್ಕಳ ಕ.ಸಾ.ಪ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಹೆಬ್ರಿ ತಾಲೂಕು ಕ.ಸಾ.ಪ ಅಧ್ಯಕ್ಷರಾದ ಆನಂದ್ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಜಿ. ಅಶೋಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣಕಾಮತ್‌ರ ಹೆಸರಿನಲ್ಲಿ ನೀಡುವ 2020-21 ರ ಸಾಲಿನ ಪ್ರಶಸ್ತಿಯನ್ನು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ, ಉಪ್ಪಿನಕುದ್ರು ಇದರ ಅರ್ಥಧಾರಿ ನಾರಾಯಣ ಬಿಲ್ಲವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಲಾಗಿದೆ 2021 ಜನವರಿಯಲ್ಲಿ ನಡೆಯುವ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಭಾಗವಹಿಸುವ ವಿಶೇಷ ಗಣ್ಯರಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು ವಿಭಾಗದಿಂದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸ್‍ಪಾಸು, ವಿಕಲಚೇತನರ ರಿಯಾಯಿತಿ ಬಸ್ಸ್‍ಪಾಸು, ಅಂಧರ ಉಚಿತ ಬಸ್ಸ್ ಪಾಸ್ ಸ್ವಾತಂತ್ರ್ಯ ಹೋರಾಟಗಾರರ ಉಚಿತ, ಬಸ್ಸ್ ಪಾಸ್ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಮತ್ತು ಅಪಘಾತ ಪರಿಹಾರ ನಿಧಿಗಳನ್ನು ಪಡೆಯಲುಸೇವಾಸಿಂಧು ಪೋರ್ಟಲ್‍ನಲ್ಲಿ ದಾಖಲೆಗಳನ್ನು ಅಪ್‍ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಪ್‍ಲೋಡ್ ಮಾಡಿದ ಅರ್ಜಿ ಪ್ರತಿ ಹಾಗೂ ಪಾಸಿನ ಶುಲ್ಕವನ್ನು ವಿದ್ಯಾರ್ಥಿಗಳು ಶಾಲಾಕಾಲೇಜು ಮುಖಾಂತರ ಕರಾರಸಾ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್ ನಲ್ಲಿ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ಸೂಕ್ತ ದಾಖಲೆಗಳನ್ನು ಹಾಗೂ ಪಾಸ್ ಶುಲ್ಕವನ್ನು ನಿಗಮದ ಪಾಸ್ ಕೌಂಟರ್ ನಲ್ಲಿ ನೀಡಿ ಬಸ್ ಪಾಸುಗಳನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ಕರಾರಸಾಂ ವಿಭಾಗದ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಗೂರಿನ ಹೆದ್ದಾರಿಯಲ್ಲಿ ನಿರ್ಮಿಸಿರುವ ಕೆಳಾಮನೆ ಅಬ್ಬಕ್ಕ ಶೀನಪ್ಪ ಶೆಟ್ಟಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ ಇತ್ತಿಚೆಗೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಬಿ. ರಾಜಾರಾಮ ಭಟ್, ರೋಟರಿ ಸದಸ್ಯರು ಸಮಾಜಸೇವೆಯಲ್ಲಿ ಸಂತಸ ತಾಳುತ್ತಾರೆ. ಕುಂದಾಪುರ ಮಿಡ್‌ಟೌನ್ ರೋಟರಿ ಕ್ಲಬ್ ಅಧ್ಯಕ್ಷ ನಳಿನ್‌ಕುಮಾರ ಶೆಟ್ಟಿ ಸಾರ್ವಜನಿಕರ ಉಪಯೋಗಕ್ಕಾಗಿ ನಾಗೂರಿನಲ್ಲಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣ ಅದಕ್ಕೆ ಸಾಕ್ಷಿ, ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಲದಲ್ಲಿ ಹಿಂದಿದ್ದ ತಂಗುದಾಣಗಳನ್ನು ಗುತ್ತಿಗೆದಾರರು ಕೆಡವಿದರು. ಆದರೆ ಅಷ್ಟೇ ಸಂಖ್ಯೆಯ ತಂಗುದಾಣಗಳನ್ನು ಅವರು ನಿರ್ಮಿಸಲಿಲ್ಲ. ಇದರಿಂದ ಹಲವು ಕಡೆ ಬಸ್ ಪ್ರಯಾಣಿಕರು ಬಸ್‌ಗಾಗಿ ಕಾಯಲು ಬಿಸಿಲು, ಮಳೆಯಲ್ಲಿ ನಿಲ್ಲುವಂತಾಗಿದೆ. ನಳಿನ್‌ಕುಮಾರ ಶೆಟ್ಟಿ ಅವರನ್ನು ಇತರ ದಾನಿಗಳೂ ಅನುಸರಿಸಿದರೆ ಹೆದ್ದಾರಿಯಲ್ಲಿ ಆಗಿರುವ ತಂಗುದಾಣಗಳ ಕೊರತೆ ನೀಗಬಹುದು ಎಂದು ಹೇಳಿದರು. ನಳಿನ್‌ಕುಮಾರ ಶೆಟ್ಟಿ ಅವರ ಕುಸುಮ ಫೌಂಡೇಶನ್ ದತ್ತು ಸ್ವೀಕರಿಸಿ, ಅಭಿವೃದ್ಧಿ ಪಡಿಸಿರುವ ನಾಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಭಟ್, ನಳಿನ್‌ಕುಮಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದ ಸಮೀಪದಲ್ಲಿರುವ ಎನ್. ಅರ್ಸ್. ನಂದಿನಿ ಹೋಟೆಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೋಟೆಲ್ ಸಿಬ್ಬಂದಿಗಳು ಗ್ರಾಹಕರನ್ನು ಹೊರಕ್ಕೆ ಕಳುಹಿಸಿದ್ದರು. ಅಗ್ನಿಶಾಮಕದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರ ನಿವಾಸದಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣಾ ಪೂರ್ವ ತಯಾರಿ ಸಭೆಗೆ ಬಹುತೇಕ ಬೈಂದೂರು ತಾ.ಪಂ ಸದಸ್ಯರು ಗೈರಾಗಿರುವುದು ಬಿಜೆಪಿ ಪಕ್ಷದಲ್ಲಿ ಹೊಗೆಯಾಡುತ್ತಿದ್ದ ಭಿನ್ನಮತಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ. ಶಾಸಕರ ನೆಂಪು ನಿವಾಸದಲ್ಲಿ ನಡೆದ ಚುನಾವಣಾ ಪೂರ್ವ ತಯಾರಿ ಸಭೆಗೆ ಬೈಂದೂರು ತಾ.ಪಂ ಅಧ್ಯಕ್ಷ ಮಹೇಂದ್ರ ಪೂಜಾರಿ ಸೇರಿದಂತೆ ಒಟ್ಟು ಒಂಭತ್ತು ಬಿಜೆಪಿ ಬೆಂಬಲಿತ ತಾ.ಪಂ ಸದಸ್ಯರ ಪೈಕಿ ಕೇವಲ ಈರ್ವರು ಮಹಿಳಾ ತಾ.ಪಂ ಸದಸ್ಯರು ಭಾಗವಹಿಸಿದ್ದು, ಉಳಿದ ಏಳು ಮಂದಿ ತಾ.ಪಂ ಸದಸ್ಯರು ಗೈರಾಗಿದ್ದಾರೆ. ಬೈಂದೂರು ಬಿಜೆಪಿಯ ಪ್ರಭಾವಿ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬು ಹೆಗ್ಡೆಯವರ ಗೈರು ಕೂಡ ಪಕ್ಷದೊಳಗೆ ನಾಯಕರ ಮಧ್ಯೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಬಹಿರಂಗಗೊಂಡಂತಾಗಿದೆ. ಪಕ್ಷದ ಎಲ್ಲಾ ಸಭೆಗಳನ್ನು ಶಾಸಕರ ಮನೆಯಲ್ಲಿ ನಡೆಸುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿಯವರ ನಡೆಗೆ ಈ ಹಿಂದೆಯೂ ಸಾಕಷ್ಟು ಪ್ರತಿರೋಧಗಳು ವ್ಯಕ್ತವಾಗಿದ್ದವು. ಆದರೂ ಕೂಡ ಶಾಸಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದರೆ: ಆಳ್ವಾಸ್ ನ್ಯಾಚರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು, ಹಾಗು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆ ಪುಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ – 2020 ಆಚರಿಸಲಾಯಿತು. ಕಾರ್ಯಾಕ್ರಮದ ಅಂಗವಾಗಿ ಕೋವಿಡ್-19 ಸಂದರ್ಭದಲ್ಲಿ ಜನತೆ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಜನಾಂದೋಲನ ಜಾಗೃತಿ ಕಾಲ್ನಡಿಗೆ ಜಾಥ, ಮೂಡುಬಿದಿರೆಯ ನವಮಿ ವೃತ್ತದಿಂದ ನಗರ ಪೋಲಿಸ್ ಠಾಣೆಯವರೆಗೆ ಹಮ್ಮಿಕೊಳ್ಳಲಾಯಿತು. ನಗರ ಠಾಣೆಯ ಪೋಲಿಸ್ ನೀರಿಕ್ಷಕರಾದ ದಿನೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ದತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಂದ ಮನುಷ್ಯ ದೂರವಿರಬಹುದು . ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಮಾನಸಿಕ ಒತ್ತಡಕ್ಕೆ ತುತ್ತಾಗುತ್ತಿದ್ದಾರೆ ಇಂತಹ ಒತ್ತಡದಿಂದ ಹೊರಬರಲು ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಸಹಕಾರಿಯಾಗಲಿದೆ ಎಂದರು. ಕೋವಿಡ್ ಸಂಧರ್ಭದಲ್ಲಿ ಆಳವಡಿಸಬೇಕಾದ ಸ್ವಚ್ಚತೆ ಹಾಗೂ ಮಾಸ್ಕ್ ಧರಿಸುವ ಬಗೆಯನ್ನು ತಿಳಿಸಲಾಯಿತು. ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಿನಾದ ಸಂಸ್ಥೆಯ ವತಿಯಿಂದ ಗುಜ್ಜಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಬಳಿಯ ಗೋಮಂದಿರದಲ್ಲಿ ಗೋಪೂಜೆ ಕಾರ್ಯಕ್ರಮ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ನಿನಾದ ಸಂಸ್ಥೆಯ ಅಧ್ಯಕ್ಷ ಎಂ. ಮುಕುಂದ ಪೈ, ಎನ್.ಗಜಾನನ ನಾಯಕ್, ಜಿ.ರೋಹಿದಾಸ ನಾಯಕ್, ಕೆ.ಕೃಷ್ಣ ಭಟ್, ರಾಮನಾಥ ಚಿತ್ತಾಲ್, ಗಣಪತಿ ನಾಯಕ್, ಜಿ.ಗಂಗಾಧರ ಪೈ, ನಿನಾದ ಸಂಸ್ಥೆಯ ಸದಸ್ಯರು, ಪದಾಧಿಕಾರಿಳು, ಗೋಮಂದಿರ ವಿಶೇಷ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಶಂಕರನಾರಾಯಣದ ಜೇಸಿರೆಟ್ ವಿಭಾಗ ಹಾಗೂ ಕರ್ನಾಟಕ ಬ್ಯಾಂಕ್ ಕುಳ್ಳುoಜೆ ಶಾಖೆ ಶಂಕರನಾರಾಯಣ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ‘ನಮ್ಮ ಮನೆಯ ಮುದ್ದು ಕಂದ’ ಭಾವಚಿತ್ರ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸಮೃದ್ಧಿ ಯುವಕ ಮಂಡಲದ ವಠಾರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಜೇಸಿರೆಟ್ ಮತ್ತು ಮಹಿಳಾ ಜೇಸಿಸ್ ವಿಭಾಗ ಜೇಸಿಐ ವಲಯ 15ರ ವಲಯ ನಿರ್ದೇಶಕ ಜೆ ಎಫ್ ಎಸ್ ಜ್ಯೋತಿ ರಮಾನಾಥ್ ಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಜೇಸಿರೆಟ್ ವಿಭಾಗ ಕೈಗೊಂಡ ಉತ್ತಮ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು. ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಅಧಿಕಾರಿ ಮಂಜುನಾಥ್ ಕಾಮತ್ ಹಾಲಾಡಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಜೇಸಿರೆಟ್ ವಿಭಾಗ ಅತ್ಯುತ್ತಮ ಕಾರ್ಯಕ್ರಮ ಕೈಗೊಂಡಿದ್ದು ಇಂತಹ ಕಾರ್ಯಕ್ರಮ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ನಡೆಯಲಿ ಎಂದರು ಹಾಗು ಇಂತಹ ಕಾರ್ಯಕ್ರಮಕ್ಕೆ ಸಹಕಾರದ ಭರವಸೆಯನ್ನು ನೀಡಿದರು. ಜೇಸಿರೆಟ್ ಅಧ್ಯಕ್ಷೆ ಪಲ್ಲವಿ ಪ್ರವೀಣ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು…
