ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರಲ್ಲಿ ಅಭಿವೃಧ್ದಿ ಚಟುವಟಿಕೆಗಳನ್ನು ಕೈಗೊಳ್ಳಲು ಹೆಚ್ಚಿನ ರಿಯಾಯಿತಿಗಳು ದೊರೆಯಲಿದ್ದು, ಈ ಕುರಿತು ತಯಾರಿಸಿದ ಕರಡು ಯೋಜನೆಯ ಕುರಿತಂತೆ ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರ ಪ್ರಕಾರ ತಯಾರಿಸಿದ, ಕರಡು ಕರಾವಳಿ ವಲಯ ನಿರ್ವಹಣಾ ಯೋಜನೆಯ ಸಾರ್ವಜನಿಕ ಅಹವಾಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಡು ಯೋಜನೆಯಲ್ಲಿ, ಉಬ್ಬರವಿಳಿತದ ಪ್ರಭಾವಕ್ಕೆ ಒಳಗಾದ ಜಲನಿಕಾಯಗಳ ಭರತರೇಖೆಯಿಂದ 100ಮೀ ವರೆಗೆ ಇದ್ದ ಸಿಆರ್ಝಡ್ ಪ್ರದೇಶವನ್ನು 50ಮೀ. ಗೆ ಕಡಿಮೆಗೊಳಿಸಿದೆ, ಕುದ್ರು ದ್ವೀಪಗಳಿಗೆ ಇದ್ದ 100ಮೀ ವರೆಗೆ ಇದ್ದ ಸಿಆರ್ಝಡ್ ಪ್ರದೇಶವನ್ನು 20ಮೀ ಗೆ ಕಡಿಮೆಗೊಳಿಸಿದೆ. ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಅಥವಾ ಸ್ಥಳೀಯ ನಗರಾಭಿವೃಧ್ದಿ ಯೋಜನಾ ಪ್ರಾಧಿಕಾರಕ್ಕೆ ಸೇರಿಸಿ ಘೋಷಣೆಯಾದ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ರಿಂದ 2ಕ್ಕೆ ಬದಲಾಯಿಸಲಾಗಿದೆ, 2011 ರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭತ್ತ ಕಟಾವು ಯಂತ್ರದ ದಲ್ಲಾಲಿಗಳು ಕಟಾವಿಗೆ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ಖಂಬದಕೋಣೆ ರೈ.ಸೇ.ಸ. ಸಂಘದ ಸದಸ್ಯರು ಪ್ರತಿ ವರ್ಷವು ದೂರು ನೀಡುತ್ತಿದ್ದು, ಈ ವರ್ಷದ ಭತ್ತ ಕಟಾವು ಯಂತ್ರದ ಬಾಡಿಗೆ ಬೆಲೆ ನಿಗದಿಪಡಿಸುವ ಸಂದರ್ಭದಲ್ಲಿ ಖಂಬದಕೋಣೆ ರೈ.ಸೇ.ಸ ಸಂಘದ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸುವಂತೆ ಖಂಬದಕೋಣೆ ರೈತರ ಸೇವಾ ಸಹಾಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ರೈತಕೂಟದ ನಿಯೋಗ ಉಡುಪಿ ಜಿಲ್ಲಾಧಿಕಾರಿ ಹಾಗೂ ಕೃಷಿ ನಿರ್ದೇಶಕರಲ್ಲಿ ಮನವಿ ಮಾಡಿದೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 9 ಗ್ರಾಮಗಳ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು ಸುಮಾರು 32 ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಒಳಗೊಂಡಿದೆ ಈ 9 ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 4800 ಎಕರೆಗೂ ಮಿಕ್ಕಿ ಕೃಷಿ ಭೂಮಿಯಲ್ಲಿ ಭತ್ತ, ನೆಲಗಡಲೆ, ಉದ್ದು ಇತ್ಯಾದಿ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ಸಂಘದಲ್ಲಿ ನಿರಂತರವಾಗಿ ಒಂದು ವರ್ಷದಿಂದ ಹಾಗೂ ಕಳೆದ ರೈತಕೂಟದ ಮಾಸಿಕ ಸಭೆಯಲ್ಲಿ ಭತ್ತ ಕಠಾವು ಯಂತ್ರದ ಬಾಡಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ – 66 ಅಪಘಾತಗಳ ಆಗರವಾಗಿ ಪರಿಣಮಿಸುತ್ತಿದೆ. ನಿರಂತರವಾಗಿ ಈ ಭಾಗದಲ್ಲಿ ಸಂಭವಿಸುತ್ತಿರುವ ಅಪಘಾತದಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಗಂಭೀರವಾಗಿ ಗಾಯಗೊಂಡಿದ್ದಾರೆ ಅಲ್ಲದೇ ಹಲವಾರು ಜಾನುವಾರುಗಳು ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಆಗ್ರಹಿಸಿದ್ದಾರೆ. ಶಿರೂರಿನಿಂದ ಆರಂಭಿಸಿ ತಲ್ಲೂರು ತನಕವೂ ರಾ.ಹೆ-66 ಅವ್ಯವಸ್ಥೆ ಎದ್ದು ಕಾಣುತ್ತಿದೆ. ತರಾತುರಿಯಲ್ಲಿ ಕಾಮಗಾರಿ ಮುಗಿಸಿ ಟೋಲ್ ಸಂಗ್ರಹಿಸುತ್ತಿರುವ ಗುತ್ತಿಗೆ ಕಂಪೆನಿಗೆ ಹೆದ್ದಾರಿ ಕಾಮಗಾರಿಯಲ್ಲಿನ ಲೋಪ ಕಾಣದಿರುವುದು ದುರಂತವೇ ಸರಿ. ಶಿರೂರಿನಿಂದ ಬೈಂದೂರಿಗೆ ತೆರಳುವ ಹೆದ್ದಾರಿಯ ಒತ್ತಿನಣೆ ತಿರುವಿನಲ್ಲಿ ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿದ್ದು, ಹಲವು ಪ್ರಾಣಹಾನಿಯೂ ಆಗಿದೆ. ಕಳೆದೊಂದು ವಾರದಲ್ಲಿಯೇ ಒತ್ತಿನಣೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಎರಡು ಅಫಘಾತಗಳು ಸಂಭವಿಸಿದೆ. ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ವಾಹನ ಅಪಘಾತ ಸಂಭವಿಸುತ್ತಿದ್ದು, ಇನ್ನಾದರೂ ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಬೈಂದೂರು, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬೀಸ್ ಮಾಹಿತಿ ಶಿಬಿರ ಹಮ್ಮಿಕೊಳ್ಳಲಾಯಿತು. ಬೈಂದೂರು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ರೇಬೀಸ್ ಮಾರಕ ರೋಗದ ಕುರಿತು ಮನೋಜ್ಞವಾಗಿ ಮಾಹಿತಿ ನೀಡಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನಾವಳಿಗಳಲ್ಲಿ ಪಾಲ್ಗೊಂಡರು. ಈ ಸಂದರ್ಭ ಮಾಹಿತಿ ಶಿಬಿರದಲ್ಲಿ ಮ್ಯಾಕೋಡ್ ಕೆ. ಎಮ್. ಎಪ್ ಡೈರಿ ಕಾರ್ಯದರ್ಶಿ ಕುಶಾಲ ಗಾಣಿಗ, ಹಿರಿಯ ಪಶು ಪರೀಕ್ಷಾಧಿಕಾರಿ ಪ್ರಶಾಂತ್ ಕುಲಕರ್ಣಿ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಆರ್.ಕೆ ಬಿಲ್ಲವ ಹಾಗೂ ಶಾಲಾಭಿವೃದ್ದಿ ಸಮಿತಿ ಸದಸ್ಯ ರಾಜೀವ ಶೆಟ್ಟಿ, ಮುಖ್ಯ ಶಿಕ್ಷಕ ರವೀದಾಸ್ ಶೆಟ್ಟಿ, ಶಿಕ್ಷಕ ರಾಜಾರಾಮ ಭಟ್ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ರೋಸಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಕಾರಂತ ಟ್ರಸ್ಟ್(ರಿ)ಉಡುಪಿ ಇವರ ಸಹಯೋಗದಲ್ಲಿ ನಡೆಯುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ 17ನೇ ವರ್ಷದ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಶೀರ್ಷಿಕೆ ನಿರೂಪಿತ-2021(ಎಣೆಯಿಲ್ಲದ ಚಕಿತ) ಅನಾವರಣವನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಅವರು ಅನಾವರಣಗೊಳಿಸಿದರು. ಕಾರಂತ ಹುಟ್ಟೂರ ಪ್ರಶಸ್ತಿ 2021ನೆ ಸಾಲಿನಲ್ಲಿ 140ಕ್ಕೂ ಮಿಕ್ಕಿ ತೂಗುಸೇತುವೆ ನಿರ್ಮಿಸಿ ಸಾಧನೆ ಮಾಡಿದ ಗಿರೀಶ್ ಭಾರಧ್ವಜ್ ಅವರಿಗೆ ಅಕ್ಟೋಬರ್ 10 ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನೀಡಲಾಗುವುದು ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಮಾತನಾಡಿ ಕಾರಂತೋತ್ಸವ ಅಕ್ಟೋಬರ್ 1ರಿಂದ 10 ತನಕ ನಡೆಯಲಿದ್ದು ವೆಬಿನಾರ್, ಸಂಗೀತ ಲಹರಿ, ಕಾರಂತ ಚಿಂತನ, ಯಕ್ಷಗುಂಜನ, ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮ ಆನ್ಲೈನ್ ನಡೆಯಲಿದ್ದು ಕಾರಂತ ಥೀಮ್ ಪಾರ್ಕ್ ಫೇಸ್ ಬುಕ್ ಹಾಗೂ ಯುಟ್ಯೂಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಅಭಿಯಾನ ಮತ್ತು ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಎಚ್.ಗಣೇಶ ಕಾಮತ್ ಶುಭಾಶಂಸನೆಗೈದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಮತ್ತು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಪೌಷ್ಟಿಕ ಆಹಾರದ ಮಾಹಿತಿ, ಪ್ರಾತ್ಯಕ್ಷಿಕೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಬೈಂದೂರು: ರೈತ ವಿರೋಧಿ ಕಾನೂನು, ಬೆಲೆ ಏರಿಕೆ, ತೈಲ ಬೆಲೆ ಏರಿಕೆಯಿಂದ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಿಐಟಿಯು ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಕೆ. ಶಂಕರ್ ಹೇಳಿದರು. ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ರೈತರ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಸಿಐಟಿಯು ಹಮ್ಮಿಕೊಂಡ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು. ಸಿಐಟಿಯು ತಾಲೂಕು ಮುಖಂಡ ಎಚ್. ನರಸಿಂಹ, ಹಿರಿಯ ಮುಖಂಡರಾದ ಯು. ದಾಸ ಭಂಡಾರಿ, ಮಹಾಬಲ ವಡೇರಹೋಬಳಿ, ಡಿವೈಎಫ್ಐ ಮುಖಂಡ ರಾಜೇಶ್ ವಡೇರಹೋಬಳಿ, ಬೀಮಘರ್ಜನೆ ಸಂಘಟನೆಯ ಮಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬೈಂದೂರು: ಕೇಂದ್ರ ಸರಕಾರದ ನೂತನ ಕೃಷಿ ವಿಧೇಯಕಗಳ ವಿರುದ್ದ ನಾನಾ ಸಂಘಟನೆಗಳ ನೇತೃತ್ವದಲ್ಲಿ ರೈತರು ಸೋಮವಾರ ಭಾರತ ಬಂದ್ಗೆ ಕರೆ ನೀಡಿದ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ನಾನಾ ಸಂಘಟನೆಗಳ ವತಿಯಿಂದ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ ಹಾಗೂ ಪ್ರಗತಿಪರ ಕೃಷಿಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಡೀ ಜಗತ್ತೇ ಮೆಚ್ಚುವಂತಹ ನಾಯಕ, ನಮ್ಮ ದೇಶ ಕಂಡ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಬೈಂದೂರು ಕ್ಷೇತ್ರದಾದ್ಯಂತ ವಿವಿಧ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ಅರಾಟೆಯ ಪುಣ್ಯಕ್ಷೇತ್ರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸುವ ಮೂಲಕ ಒಂದು ಉತ್ತಮ ಪುಣ್ಯದ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಿದ್ದಾರೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಅಂಗವಾಗಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಭಾಗವಾಗಿ ಹೊಸಾಡು ಗ್ರಾಮದ ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಠಾರದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ರಮೇಶ ಆಚಾರ್ಯ ಅರಾಟೆ, ಹಿರಿಯರಾದ ಎಂ.ಎಂ. ಸುವರ್ಣ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹರೀಶ್ ಮೇಸ್ತ ಗುಜ್ಜಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳ ಕಲಿಕಾ ಹಂತದಲ್ಲಿ ಶಿಕ್ಷಕರ ಪಾತ್ರ ಮೌಲ್ಯಯುತವಾದದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ, ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ಓದಿ ಜಾಣರಾಗಲು, ಯಾವುದೇ ವಿಷಯದ ಜ್ಞಾನವನ್ನು ಧಾರೆಯೆರೆಯಲು ಗುರುಗಳು ತಮ್ಮ ಸರ್ವಸ್ವವನ್ನು ಮೀಸಲಿಡುತ್ತಾರೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಹೀಗಾಗಿ ವಿದ್ಯಾರ್ಥಿಗಳು ಕಲಿಸಿದ ಗುರುಗಳನ್ನು ಮರೆಯಬಾರದು ಎಂದರು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್., ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಗ್ರೇಶಲ್ ಸ್ವಾಗತಿಸಿ, ವಿದ್ಯಾರ್ಥಿ ಪ್ರಜ್ವಲ್ ವಂದಿಸಿದರು. ವಿದ್ಯಾರ್ಥಿನಿ ಪ್ರಿಯಾಂಕಾ ಪೂಜಾರ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉದ್ಯೋಗದೊಂದಿಗೆ ಮನೆಯ ಕೆಲಸದಲ್ಲಿಯೂ ತೊಡಗಿಸಿಕೊಂಡ ಮಹಿಳೆ ಒತ್ತಡದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟೀಕೆಗಳಿಗೆ ಗಮನ ಕೊಡದೇ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಹಿಂಜರಿಕೆ ಕಾಣದೇ, ತಾಳ್ಮೆ, ಸಹನೆಯಿಂದ ಮುನ್ನುಗ್ಗುವಂತ ಮನೋಭಾವನೆ ಬೆಳೆಸಿಕೊಳ್ಳಬೇಕು. ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸ್ವಾವಲಂಬನೆಯತ್ತಾ ಮಹಿಳೆಯರು ದಿಟ್ಟ ಹೆಜ್ಜೆಯನ್ನಿಡಬೇಕು, ಮಹಿಳೆಯರಿಗೂ ಜ್ಞಾನ ಪೀಠ ಪ್ರಶಸ್ತಿ ದೊರಕಬೇಕು ಎಂದು ಶಿಕ್ಷಕಿ ಹಾಗೂ ಸಾಹಿತಿ ಸುಮಿತ್ರ ಐತಾಳ್ ಹೇಳಿದರು. ಅವರು ಕೋಟ ಡಾ.ಕಾರಂತ ಥೀಂ ಪಾರ್ಕ್ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್,(ರಿ) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನದ (ರಿ)ಕೋಟ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ, ಮಣೂರು ಅಶ್ವಿನಿ ಮಧ್ಯಸ್ಥ ಸ್ಮಾರಕ ಸಾಧನಾ ಶ್ರೀ ಮಹಿಳಾ ಪುರಸ್ಕಾರ ಪ್ರದಾನ ಸಮಾರಂಭ ಭಾವಗಾನ-2021(ಸಾಧನೆಯ ತಿಲ್ಲಾನ) ಕಾರ್ಯಕ್ರಮದ ಸಮ್ಮೇಳನಾಧ್ಯಕ್ಷೆ ನೆಲೆಯಲ್ಲಿ ಮಾತನಾಡಿದರು. ಹೆಣ್ಣಿನ ನೋವು ಸಾಹಿತ್ಯದಲ್ಲಿ ಅನಾವರಣಚಲನಶೀಲತೆ ಜೀವಂತಿಕೆ ಗುಣ, ನಿಸರ್ಗದ ಹೊಂದಾಣಿಕೆಯಂತೆ ಕಾಲ ಉರುಳುತ್ತದೆ. ಅದಕ್ಕೆ ತಡೆಯಂಬುದಿಲ್ಲ ಅಂತಹ ಪ್ರಭಾವ…
