ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಜಾನಪದ ಪರಿಷತ್ ಬೆಂಗಳೂರು,ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಮತ್ತು ವರಸಿದ್ದಿವಿನಾಯಕ ಪದವಿಪೂರ್ವ ಮತ್ತು ಪದವಿ ಕಾಲೇಜು ಇದರ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಗಣೇಶ್ ಗಂಗೊಳ್ಳಿ ಮಾತನಾಡಿ ಜಾನಪದ ಆಚರಣೆ ಮತ್ತು ಸಂಸ್ಕೃತಿ ಜಾನಪದ ಕಲೆ ಮತ್ತು ಕಲಾವಿದರ ಗ್ರಾಮೀಣ ಭಾರತದ ತಾಯಿಬೇರು ಗಳಿದ್ದಂತೆ, ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜಾನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂದು ಹೇಳಿದರು. ವರಸಿದ್ದಿವಿನಾಯಕ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆರಾಡಿ ಗ್ರಾಮದ ಜಾನಪದ ಪ್ರತಿಭೆ ತಿಮ್ಮ ನಾಯ್ಕ ಹಾಗೂ ಪದವಿಯ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾವ್ಯ ಕುಲಾಲ್ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಸಚಿನ್ ಜನಪದ ಗೀತೆ ಹಾಡಿದರು. ಕುಂದಾಪುರ ತಾಲೂಕು ಕನ್ನಡ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗಂಡು ಮತ್ತು ಹೆಣ್ಣು ಅನುಪಾತದಲ್ಲಿ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಸಲಹಾ ಸಮಿತಿ ಸಭೆಯ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ (ಪಿ.ಸಿ & ಪಿ.ಎನ್.ಡಿ.ಟಿ) ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಲಿಂಗಾನುಪಾತದಲ್ಲಿ ಆಗುವ ವ್ಯತ್ಯಾಸದಿಂದ ದುಷ್ಪರಿಣಾಮವನ್ನು ತಡೆಗಟ್ಟಲು ಹೆಣ್ಣು ಭ್ರೂಣ ಹತ್ಯೆಗಳು ಆಗದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು. ಜಿಲ್ಲೆಯಲ್ಲಿ ಪ್ರಸುತ್ತ 1,000 ಪುರುಷರಿಗೆ 956 ಮಹಿಳೆಯರಿದ್ದಾರೆ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ ಎಂದರು. ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸರಕಾರ ನಿಯಮಾನುಸಾರ ನಿಗಧಿಪಡಿಸಿರುವ ನಮೂನೆಗಳ ದಾಖಲೆಗಳ…
ಕುಂದಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೆನರಾ ಬ್ಯಾಂಕ್ನ ಸಂಸ್ಥಾಪಕ ಅಮ್ಮೆಂಬಳ ಸುಬ್ಬ ರಾವ್ ಪೈ ಅವರ ಜನ್ಮ ದಿನಾಚರಣೆ ಅಂಗವಾಗಿ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗಂಗೊಳ್ಳಿಯ ಉದ್ಯಮಿ ದುರ್ಗರಾಜ್ ಪೂಜಾರಿ ಮಾತನಾಡಿ, ಬ್ಯಾಂಕುಗಳು ಕೇವಲ ಹಣಕಾಸಿನ ಹೃದಯ ಮಾತ್ರವಲ್ಲದೇ, ಮಾನವೀಯ ಹೃದಯದಿಂದಲೂ ಕಾರ್ಯನಿರ್ವಹಿಸಿ, ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಶ್ರಮಿಸಬೇಕೆಂದು ಹೇಳುತ್ತಿದ್ದ ಕೆನರಾ ಬ್ಯಾಂಕಿನ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಬಡವರಿಗಾಗಿ ಬ್ಯಾಂಕ್ ತೆರೆದ ಕರ್ಮಯೋಗಿ ಎಂದು ಹೇಳಿದರು. ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ, ಗಂಗೊಳ್ಳಿಯ ಉದ್ಯಮಿ ಎಂ.ಜಿ.ಅಜಿತ್ ನಾಯಕ್, ಬಿ.ರಾಘವೇಂದ್ರ ಪೈ ಬ್ಯಾಂಕಿನ ಆಫೀಸರ್ ಅಶ್ವಿನ್ ಕುಮಾರ್, ರೇಶ್ಮಾ, ಡಿ.ಶಶಿಕಾಂತ್, ಜಿ.ಗಂಗಾಧರ ಪೈ, ಜಾರ್ಜ್ ಫೆರ್ನಾಂಡಿಸ್, ರಾಜೇಂದ್ರ ಬಿ.ಟಿ., ಶಾಂತಿ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಆಸರೆಯಲ್ಲಿ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ಉಳ್ಳೂರು ಮೂಕಾಂಬಿಕಾ ಐತಾಳ್ (ಮೂಕಜ್ಜಿ) ಕುರಿತಾದ ಆಂಗ್ಲಭಾಷಾ ಕೃತಿ ‘The Song Bird Of Ullor Mookambika Aithal’ ಕೃತಿಯನ್ನು ಗೀತಾನಂದ ಫೌಂಡೇಶ್ನ ಪ್ರವರ್ತಕ ಆನಂದ್ ಸಿ ಕುಂದರ್ ಅನಾವರಣಗೊಳಿಸಿದರು. ಕೃತಿ ಅನಾವರಣ ಮಾಡಿ ಮಾತನಾಡಿದ ಆನಂದ್ ಸಿ ಕುಂದರ್, ಆಂಗ್ಲ ಭಾಷೆಯಲ್ಲಿ ಮೂಕಜ್ಜಿಯ ಬಗ್ಗೆ ಕೃತಿ ಮೂಡಿ ಬಂದಿರುವುದರಿಂದ ನಮ್ಮ ಪರಿಸರದಲ್ಲಿ ಮಾತ್ರವಲ್ಲದೇ ದೇಶ -ವಿದೇಶಗಳಲ್ಲಿಯೂ ಕೂಡಾ ಮೂಕಜ್ಜಿಯ ಬದುಕು – ಸಾಹಿತ್ಯ ಅನಾವರಣಗೊಳಲು ಸಾಧ್ಯ ಎಂದರು. ಸಾಹಿತಿ ಡಾ. ಪಾರ್ವತಿ ಜಿ. ಐತಾಳ್ ಮಾತನಾಡಿ, ಕುಂದಾಪುರ ಮೂಕಜ್ಜಿ ಖ್ಯಾತಿಯ ಉಳ್ಳೂರು ಮೂಕಾಂಬಿಕಾ ಐತಾಳ್ ಅವರ ಬದುಕು ನಮಗೆಲ್ಲ ಪ್ರೇರಣೆ, ಅವರು ಬಾಲ ವಿಧವೆಯಾಗಿದ್ದರೂ ಜೊತೆಗೆ ಬಡತನ ಕಾಡುತ್ತಿದ್ದರೂ ಬದುಕಿನೂದಕ್ಕೂ ಅನುಭವಿಸಿದ ಕಷ್ಟ, – ನೋವುಗಳ ಮಧ್ಯ ಅವರ ಸಾಧನೆ, ಅನಕ್ಷರಸ್ಥೆ ಆಗಿದ್ದರೂ ಮೂಕಜ್ಜಿಯ ಕವನ ರಚನೆ ನಮ್ಮೊಳಗಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ‘ಸಹಕಾರಿ ಸಂಸ್ಥೆಗೆ ಸೇರಿದವರು ಸಂಸ್ಥೆಯ ಬೆಳವಣಿಗೆ ಮತ್ತು ಸಾಧನೆ ಕುರಿತು ವಿಮರ್ಶೆ ನಡೆಸಬೇಕು. ಅದು ಮುಂದೆ ಸಾಗಬೇಕಾದ ದಾರಿಯ ಕುರಿತು ಚಿಂತನ– ಮಂಥನ ನಡೆಸಬೇಕು’ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕಿರಿಮಂಜೇಶ್ವರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ನಾಗೂರು ಒಡೆಯರಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ಗುರುವಾರ ನಡೆದ 67 ನೆ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ’ಯುವಜನ, ಮಹಿಳಾ ಮತ್ತು ಅಬಲ ವರ್ಗದವರಿಗಾಗಿ ಸಹಕಾರ ಸಂಸ್ಥೆಗಳು ದಿನ’ ಆಚರಣೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಕಷ್ಟು ಸಹಕಾರಿ ಸಂಸ್ಥೆಗಳಿವೆ. ಆದರೆ, ಅವುಗಳ ಹುಟ್ಟು, ಬೆಳವಣಿಗೆ, ಸಾಧನೆಗಳ ಕುರಿತು ದಾಖಲೆಗಳು ಅಲಭ್ಯವಾಗಿವೆ. ಆದ್ದರಿಂದ ಯಶಸ್ವಿ ಸಹಕಾರಿ ಸಂಸ್ಥೆಗಳ ಸಾಕ್ಷ್ಯಚಿತ್ರ ನಿರ್ಮಾಣ ಮಾಡಬೇಕು ಎಂದರು. ವಿಶಿಷ್ಟ ಸಾಧನೆಗಳ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕಿರಿಮಂಜೇಶ್ವರ ಮಹಿಳಾ ಸಹಕಾರಿಯನ್ನು ಅಭಿನಂದಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಅನ್ನಪೂರ್ಣ ಉಡುಪ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವ (ಕೊಡಿ ಹಬ್ಬ)ವನ್ನು ನ.30 ರಂದು ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಸೂರ್ಯನಾರಾಯಣ ಭಟ್ ಕೋಟಿಲಿಂಗೇಶ್ವರ ದೇವಾಲಯದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ತಿಳಿಸಿದರು. ಸರ್ಕಾರದ ಕೋವಿಡ್ ನಿಯಮಾವಳಿಗಳಿಗೆ ಅನುಗುಣವಾಗಿ ಪಾರಂಪರಿಕ ಧಾರ್ಮಿಕ ಆಚರಣೆಯೊಂದಿಗೆ ಸರಳ ರೀತಿಯಲ್ಲಿ ಆಚರಿಸಲು ದೇವಳದಲ್ಲಿ ನಡೆದ ಧಾರ್ಮಿಕ ಪರಿಷತ್ ಪ್ರತಿನಿಧಿಗಳ ನೇತೃತ್ವದ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಯಿತು ಎಂದರು. ಈ ಬಾರಿ ಕೊರೊನಾದಿಂದ ಧಾರ್ಮಿಕ ಕಾರ್ಯಕ್ರಮಗಳು ಸರಳವಾಗಿ ಆಚರಿಸುವ ಅನಿರ್ವಾಯತೆ ಒದಗಿದೆ. ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಉತ್ಸವ ಕೊಡಿ ಹಬ್ಬವನ್ನು ಕೂಡ ಧಾರ್ಮಿಕ ಪದ್ಧತಿ ಹಾಗೂ ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ನಡೆಸಿಲು ತೀರ್ಮಾನಿಸಲಾಗಿದೆ ಎಂದರು. ಸರ್ಕಾರ ಕೊರೊನಾ ಕಾರಣದಿಂದಾಗಿ ಜಾರಿಗೆ ತಂದಿರುವ ನಿಯಮಾವಳಿಗಳ ಅಡಿಯಲ್ಲಿಯೇ ಹಬ್ಬವನ್ನು ಆಚರಿಸುವ ತೀರ್ಮಾನ ಮಾಡಲಾಗಿದೆ. ದೇಗುಲದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಂತ್ರಿ ಪ್ರಸನ್ನಕುಮಾರ್ ಐತಾಳ್ ಹೇಳಿದರು. ನ.23 ರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅವರ 15 ದಿನಗಳ ರಜೆ ಹಿನ್ನೆಲೆ ಅವರ ಸ್ಥಾನಕ್ಕೆ ಓ.ಓ.ಡಿಯಾಗಿ ಕುಂದಾಪುರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರನ್ನು ನಿಯೋಜಿಸಲಾಗಿದೆ. ಮಂಗಳೂರು ಸಿಟಿ ಡಿಸಿಪಿ ಅರುಣಾಂಗ್ಷು ಗಿರಿ ಅವರ ಕೋರಿಕೆಯಂತೆ ನ.18 ರಿಂದ ಡಿ.2 ರ ತನಕ ವೈಯಕ್ತಿಕ ಕಾರಣದ ಮೇರೆಗೆ 15 ದಿನಗಳ ಗಳಿಕೆ ರಜೆ ನೀಡಿದ್ದು ಆ ಸ್ಥಾನಕ್ಕೆ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ಅವರನ್ನು ನಿಯೋಜಿಸಲಾಗಿದೆ. ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿಯವರು ಅಲ್ಲಿನ ಕರ್ತವ್ಯದ ಜೊತೆ ತಾತ್ಕಾಲಿಕ ನೆಲೆಯಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹರ್ಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಆಕ್ರಮವಾಗಿ ಬೇಟೆಗೆ ಮುಂದಾಗಿದ್ದ ತಂಡದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು, ಅಧಿಕಾರಿಗಳನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಡೆದಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್ ನೇತೃತ್ವದ ತಂಡ ಬುಧವಾರ ತಡರಾತ್ರಿ 2 ಗಂಟೆಗೆ ಗಸ್ತು ತಿರುಗುತ್ತಿದ್ದ ವೇಳೆ, ಹರ್ಕೂರು ಮೀಸಲು ಅರಣ್ಯದಲ್ಲಿ ಬೊಲೆರೊ ವಾಹನ ಅನುಮಾನಾಸ್ಪದ ರೀತಿಯಲ್ಲಿ ಸಂಚರಿಸುತ್ತಿತ್ತು. ಈ ವೇಳೆ ವಿಚಾರಣೆಗೆ ಮುಂದಾಗಿದ್ದ ಅಧಿಕಾರಿಗಳನ್ನು ಕಂಡು ಪರಾರಿಯಾಗಲು ಯತ್ನಿಸಿದರು. ಈ ವೇಳೆ ಅಧಿಕಾರಿಗಳು ಬೆನ್ನಟ್ಟಿದ ಪರಿಣಾಮ ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನ ಹಾಗೂ ಬೇಟೆಗೆ ಬಳಸಿದ್ದ ಕಬ್ಬಿಣದ ರಾಡ್, ಟಾರ್ಪಲ್ ಹಾಗೂ ಮೊಬೈಲ್ ಪೋನ್ ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಉಪ ವಲಯ ಅರಣ್ಯಾಧಿಕಾರಿ ದಿಲೀಪ್, ಅರಣ್ಯ ರಕ್ಷಕರಾದ ಮಂಜುನಾಥ ನಾಯ್ಕ್, ಬಂಗಾರಪ್ಪ, ಜೀಪು ಚಾಲಕ ಅಶೋಶ್ ಕಾರ್ಯಾಚರಣೆಯಲ್ಲಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅಲ್ಪೈನ್ ಅಸೋಸಿಯೇಟ್ಸ್ ಇದರ ವತಿಯಿಂದ ಗಂಗೊಳ್ಳಿ ಪೊಲೀಸ್ ಠಾಣೆಗೆ ಎರಡು ಬ್ಯಾರಿಕೇಡ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ನಾಯಕವಾಡಿ – ಗುಜ್ಜಾಡಿಯಲ್ಲಿರುವ ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಚೆಕ್ಪೋಸ್ಟ್ ಬಳಿ ನಡೆದ ಸರಳ ಸಮಾರಂಭದಲ್ಲಿ ಅಲ್ಪೈನ್ ಅಸೋಸಿಯೇಟ್ಸ್ನ ಮಾಲೀಕ ಜಹೀರ್ ಅಹಮ್ಮದ್ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್. ಅವರಿಗೆ ಬ್ಯಾರಿಕೇಡ್ಗಳನ್ನು ಹಸ್ತಾಂತರಿಸಿದರು. ಗಂಗೊಳ್ಳಿ ಜಮಾತುಲ್ ಮುಸ್ಲಿಮಿನ್ ಅಧ್ಯಕ್ಷ ಪಿ.ಎಂ.ಹಸೈನಾರ್, ಉಪಾಧ್ಯಕ್ಷ ಇಬ್ರಾಹಿಂ ಗಂಗೊಳ್ಳಿ, ಕಾರ್ಯದರ್ಶಿ ರೆಹಾನ್ ಅಹಮ್ಮದ್, ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ದೀಪಾವಳಿ ಆಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ದೀಪಾವಳಿ ಹಬ್ಬಕ್ಕೆ ಮಹತ್ವದ ಸ್ಥಾನವಿದೆ. ಪ್ರದೇಶವಾರು ಅನನ್ಯತೆಯನ್ನು ಹೊಂದಿರುವ, ಕೃಷಿ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಹಬ್ಬ ದೀಪಾವಳಿ. ಜಾಗತೀಕರಣಕ್ಕೆ ತೆರೆದುಕೊಂಡ ಬಂಡವಾಳಶಾಹಿ ಮನಸ್ಸಿನ ಇಂದಿನ ಜಗತ್ತಿನಲ್ಲಿ ಹಬ್ಬಗಳು ತಮ್ಮ ನೈಜತೆಯನ್ನು ಕಳೆದುಕೊಳ್ಳುತ್ತಿರುವುದು ವಿಷಾಧನೀಯ. ವಿದ್ಯಾರ್ಥಿಗಳು ಸಾಂಸ್ಕೃತಿಕ ಅನನ್ಯತೆಯನ್ನು ಹೊಂದಿರುವ ಹಬ್ಬಗಳನ್ನು ಸಂಭ್ರಮಿಸಬೇಕು ಎಂದು ಹೇಳಿದರು. ವಿಭಾಗದ ಮುಖ್ಯಸ್ಥ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಛೇರಿ ಸಿಬ್ಬಂದಿ ಸುಧೀಂದ್ರ ಕೆ. ಎಸ್. ದೀಪಾವಳಿ ಹಬ್ಬದ ಬಲೀಂದ್ರನನ್ನು ಕರೆಯುವ ಸೊಲ್ಲುಗಳನ್ನು ಹೇಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಪ್ರವೀಣಾ ಮಹಾಬಲ ಪೂಜಾರಿ ವಂದಿಸಿದರು.
