ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪ್ರಸ್ತುತ ಅಳವಡಿಸಲಾದ ಮಳೆ ಮಾಪಕಗಳು ಹಾಳಾಗಿರುವುದು ಹಾಗೂ ಸಮರ್ಪಕವಾದ ನಿರ್ವಹಣೆ ಕೊರತೆ ಇರುವ ವಿಚಾರ ಇದರಿಂದ ಸರಿಯಾದ ಮಳೆ ಅಂಕಿ ಅಂಶ ದಾಖಲಾಗದೇ ಬೆಳೆ ವಿಮೆ ಸಹಿತ ರೈತರಿಗೆ ಪರಿಹಾರ ಪಡೆಯುವಲ್ಲಿ ಅನಾನುಕೂಲವಾಗುವ ಸಾಧ್ಯತೆ ಇರುವುದರಿಂದ ಪ್ರತಿ ಕೇಂದ್ರದ ಕಾರ್ಯಕ್ಷಮತೆ ಹೆಚ್ಚಿಸಲು ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯ ಮಂತ್ರಿಗಳೂ ಹಾಗೂ ಕಂದಾಯ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಪ್ರತಿ ಟೆಲಿ ಮೆಟ್ರಿಕ್ ಮಳೆ ಮಾಪಕಗಳ ನಿರ್ವಹಣೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿತ್ಯ ಸಮರ್ಪಕ ಕಾರ್ಯನಿರ್ವಹಣೆ, ಮೇಲ್ವಿಚಾರಣೆ ಮತ್ತು ನಿಗಾವಹಿಸುವ ಜವಾಬ್ದಾರಿ ಹೊಂದಿರುತ್ತಾರೆ ಮತ್ತು ಯಾವುದೇ ಟೆಲಿಮೆಟ್ರಿಕ್ ಮಳೆ ಮಾಪಕಗಳು ಕಾರ್ಯನಿರ್ವಹಿಸದಿದ್ದರೆ ತಕ್ಷಣವೇ ತಹಶೀಲ್ದಾರ್ ಮೂಲಕ ಅಪರ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಬೇಕು. ಅಪರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ I ಮತ್ತು IIರ ಆಶ್ರಯದಲ್ಲಿ ಸದ್ಭಾವನಾ ದಿವಸ್‌ವನ್ನು ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ದೇಶದ ಏಕತೆ, ಸಾಮರಸ್ಯ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕರು ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಕೋಮು ಸಾಮರಸ್ಯವನ್ನು ಕಾಪಾಡುವ ಸಂಕಲ್ಪದೊAದಿಗೆ ಸದ್ಭಾವನ ದಿವಸದ ಭಾಗವಾಗಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸ್ವಯಂಸೇವಕ ಪ್ರತಿನಿಧಿ ಪ್ರತೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಏಕತೆ, ಸಹಬಾಳ್ವೆ ಮತ್ತು ಸದ್ಭಾವನೆಯ ಮಹತ್ವವನ್ನು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಎಚ್.ಡಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಮೂರು ವರ್ಷ ಅವಧಿಗೆ ಫೆಲೋಶಿಪ್ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ತಮ್ಮ ಆಡಳಿತದ ಅವಧಿಯಲ್ಲಿ ಸಮಸಮಾಜ ನಿರ್ಮಾಣದ ರೂವಾರಿಯಾಗಿ, ಹಿಂದುಳಿದ ವರ್ಗದವರ ಹಾಗೂ ದೀನ ದಲಿತರ ಏಳಿಗೆಗೆ ಧ್ವನಿಯಾಗಿ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಅವರುಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಗುರುವಾರ ನಗರದ ಮಿಷನ್ ಕಂಪೌಂಡ್‌ನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. 12 ನೇ ಶತಮಾನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಕರಡು ಅಧಿಸೂಚನೆ ಹೊರಡಿಸಿರುವುದು ಸರಕಾರದ ಗಮನದಲ್ಲಿರುವ ಹಾಗೂ ಕರಡು ಅಧಿಸೂಚನೆಯ ಬಗ್ಗೆ ಸ್ಥಳೀಯ ಗ್ರಾಮ ನಿವಾಸಿಗಳು ಮತ್ತೊಮ್ಮೆ ಅತಂಕಿತರಾಗಿರುವುದರಿಂದ ಜನರ ಜೀವನೋಪಾಯ ಮತ್ತು ಅಭಿವೃದ್ಧಿ ವಿಚಾರಗಳ ಸ್ಪಷ್ಟನೆ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ರಾಜ್ಯ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ರಾಮಲಿಂಗರೆಡ್ಡಿ ಅವರು ಭಾರತ ಸರಕಾರವು ದಿನಾಂಕ 27.07.2026ರಂದು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ 7ನೇ ಕರಡು ಅನುಸೂಚನೆಯನ್ನು ಹೊರಡಿಸಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿರುತ್ತದೆ ಹಾಗೂ ಪ್ರಸ್ತುತ ಕಸ್ತೂರಿ ರಂಗನ್ ವರದಿ ಅಧರಿಸಿ ಕೇಂದ್ರ ಸರ್ಕಾರವು 27ನೇ ಜುಲೈ 2026ರಂದು ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಸರ್ಕಾರದ ಹಂತದಲ್ಲಿರುತ್ತದೆ ಎಂದು ಉತ್ತರಿಸಿದ್ದಾರೆ.. ಹಿಂದಿನ 6…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ, ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಸ್ನೇಹಕೂಟ ಮಣೂರು ಇವುಗಳ ಸಹಯೋಗದೊಂದಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಂಯೋಜನೆಯೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕರನ್ನು ಗುರುತಿಸುವ ’ರೈತರೆಡೆಗೆ ನಮ್ಮ ನಡೆ’ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. 56ನೇ ಸರಣಿ ಕಾರ್ಯಕ್ರಮದ ಅಂಗವಾಗಿ, ಸಾಧಕ ಕೃಷಿಕರ ಮನೆಯಂಗಳಕ್ಕೇ ತೆರಳಿ ’ಕೃಷಿ ಪರಿಕರ’ವನ್ನು ನೀಡಿ ಗೌರವಿಸುವ ಕಾರ್ಯಕ್ರಮವು ಆ.26ರ ಬುಧವಾರ ಸಂಜೆ 4.45ಕ್ಕೆ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹೈನುಗಾರರಿಗೆ ಸರಕಾರದ ಪ್ರೋತ್ಸಾಹಧನ ಬೇಡ ಬದಲಾಗಿ ಉದ್ಯೋಗ ಖಾತ್ರಿಯೋಜನೆಯಂತೆ ಕನಿಷ್ಟ ದಿನಗೂಲಿ ನೀಡಿ ಎಂದು ಕೋಟ ಹಾಲು ಉತ್ಪಾದಕರ ವಾರ್ಷಿಕ ಸಭೆಯಲ್ಲಿ ಹೈನುಗಾರರೊಬ್ಬರು ಆಗ್ರಹಿಸಿದರು. ಬುಧವಾರ ಕೋಟ ಹಾಲು ಉತ್ಪಾದಕರ ವಠಾರದಲ್ಲಿ ಕೋಟ ಸಹಕಾರ ಹಾಲು ಉತ್ಪಾದಕರ ವಾರ್ಷಿಕ ಸಭೆಯಲ್ಲಿ ಈ ವಿಚಾರದ ಬಗ್ಗೆ ಹೈನುಗಾರರಿಂದ ವಿಸ್ತ್ರತ ಚರ್ಚೆ ನಡೆಯಿತು. ಈ ಬಗ್ಗೆ ಮಾತನಾಡಿದ ಕೆ.ಎಂ.ಎಫ್ ವಿಸ್ತೀರ್ಣಾಧಿಕಾರಿ ಉಮೇಶ್ ಕುಂದರ್ ಯೋಜನೆಗಳನ್ನು ಸರಕಾರ ನಿಗದಿಪಡುಸುವುದು ಹಾಲಿನ ಗುಣಮಟ್ಟ ನೋಡಿ ಸಕರಾರದ ಸಹಾಧನ ನೀಡಲಾಗುತ್ತದೆ ಯೋಜನೆ ಬದಲಿಸುವ ಹಕ್ಕು ಸರಕಾರದ್ದಾಗಿದೆ ಎಂದರಲ್ಲದೆ ರಾಜ್ಯದ ಹಾಲು ಉದ್ಯಮ ನಂ 1 ಸ್ಥಾನದಲ್ಲಿದೆ,ವಿವಿಧ ಹೊಸ ತಂತ್ರಜ್ಞಾನ ಬಳಕೆಯಲ್ಲಿ ಮುಂಚೂಣಿಯಲ್ಲಿದೆ ಹಾಲು ಉತ್ಪಾದನೆಯಲ್ಲಿ ಕೆ.ಎಂ ಎಫ್ ಹೊಸ ಭಾಷ್ಯ ಬರೆದಿದೆ ಎಂದರಲ್ಲದೆ ಹಾಲಿನ ಗುಣಮಟ್ಟದ ವಿಚಾರದಲ್ಲಿ ಒಕ್ಕೂಟ ನಿರ್ಲಕ್ಷ್ಯೀಯ ದೋರಣೆ ಅನುಸರಿಸಿಲ್ಲ ಆದ್ದರಿಂದ ರಾಷ್ಟ್ರದಲ್ಲೆ ನಂದಿನಿ ಹಾಲಿಗೆ ಬಾರಿ ಬೇಡಿಕೆಯೂ ಇದೆ,ಹೈನುಗಾರರು ಹಾಲಿನ ಗುಣಮಟ್ಟದಲ್ಲಿ ಲೋಪ ಎಸೆಗಬೇಡಿ, ಸಾಮಾನ್ಯವಾಗಿ ಸಾಕಾಣಿಕೆ ವ್ಯತ್ಯಾಸದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅನನ್ಯ ಪ್ರೀತಿ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ – ಗಮ್ಮತ್ತ್” ಕಾರ್ಯಕ್ರಮವನ್ನು ಅಗಸ್ಟ್ 23ರ ಭಾನುವಾರ ಬೆಳಿಗ್ಗೆ ಗಂಟೆ 09ರಿಂದ ಬೈಂದೂರು ಯಡ್ತರೆಯ ಜೆ.ಎನ್.ಆರ್ ಕಲಾಮಂದಿರ ಹಾಗೂ ಪಕ್ಕದ ನೆಲ್ಯಾಡಿ ಬೈಲ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಹೇಳಿದರು. ಅವರು ಬೈಂದೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ಎರಡು ವರ್ಷದಿಂದ ಅದ್ದೂರಿ ಕಾರ್ಯಕ್ರಮ ಆಯೋಜಿಸುತ್ತಾ ಬರಲಾಗುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೂರನೇ ವರ್ಷದ ಕಾರ್ಯಕ್ರಮದಲ್ಲಿ ಅದ್ದೂರಿ ಕಂಬಳ, ವಿವಿಧ ಪ್ರಾತ್ಯಕ್ಷಿಕೆ, ವಸ್ತು ಪ್ರದರ್ಶನ, ಹರಟೆ, ನ್ಯೆಗಿಕೊಪ್ಪರಿಗೆ ವಿವಿಧ್ಯಮಯ ಕಾರ್ಯಕ್ರಮಗಳ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ತಿರುಪತಿಗೆ ಸಾಸ್ತಾನ ದಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪಾದಯಾತ್ರೆ ಸತತ 16ನೇ ವರ್ಷಕ್ಕೆ ಕಾಲಿಟ್ಟಿದೆ. ಶ್ರೀ ವೆಂಕಟೇಶ್ವರ ಸ್ವೀಟ್ಸ್‌ನ ಮಾಲೀಕರಾದ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಆಗಸ್ಟ್ 18ರಂದು ನಾಗರಪಂಚಮಿಯ ಮರುದಿನ ಪಾದಯಾತ್ರೆ ಆರಂಭಗೊಂಡಿದ್ದು, ಸುಮಾರು 18 ದಿನಗಳ ಕಾಲ ಪಾದಯಾತ್ರೆ ಮುಂದುವರಿಯಲಿದೆ. 200ಕ್ಕೂ ಅಧಿಕ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು, ಭಕ್ತಿ ಮತ್ತು ಶ್ರದ್ಧೆಯಿಂದ ತಿರುಪತಿ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಪಾದಯಾತ್ರೆಯ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ನಾಮಸ್ಮರಣೆ, ಭಜನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತರು ಸಾಗಲಿದ್ದಾರೆ. ಪ್ರತಿ ವರ್ಷವೂ ಭಕ್ತರನ್ನು ಒಗ್ಗೂಡಿಸಿ ಯಶಸ್ವಿಯಾಗಿ ಪಾದಯಾತ್ರೆ ನಡೆಸಲಾಗುತ್ತಿದ್ದು, ಈ ಬಾರಿಯೂ 200ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿರುವುದು ವಿಶೇಷವಾಗಿದೆ. ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಭಕ್ತರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ವೇಳೆ ಜೋರಾದ ಗಾಳಿಗೆ ದೋಣಿ ತೇಲಾಡಿ, ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮರವಂತೆ ಬಂದರಿನ ಸಮೀಪ ನಡೆದಿದೆ. ಮರವಂತೆ ಗ್ರಾಮದ ನಾಗರಾಜ ಖಾರ್ವಿ (40) ಮೃತಪಟ್ಟ ದುರ್ದೈವಿ. ಅವರು ಎಂದಿನಂತೆ ಬೆಳಿಗ್ಗೆ 04:30ಕ್ಕೆ ಮನೆಯಿಂದ ಹೊರಟು ಮರವಂತೆ ಬಂದರು ತಲುಪಿದ್ದರು. ಬೆಳಿಗ್ಗೆ0 5:00 ಗಂಟೆಗೆ ಆನಂದ ಖಾರ್ವಿ ಅವರಿಗೆ ಸೇರಿದ ದೋಣಿಯಲ್ಲಿ ಇತರ ಕೆಲಸಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು. ಮರವಂತೆ ಗ್ರಾಮದ ನಾಗರಾಜ ಖಾರ್ವಿ ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ಬೆಳಿಗ್ಗೆ 4:30ಕ್ಕೆ ಮನೆಯಿಂದ ಹೊರಟು ಮರವಂತೆ ಬಂದರು ತಲುಪಿದ್ದರು. ಬೆಳಿಗ್ಗೆ 5:00 ಗಂಟೆಗೆ ಆನಂದ ಖಾರ್ವಿ ಅವರಿಗೆ ಸೇರಿದ ದೋಣಿಯಲ್ಲಿ ಇತರ ಕೆಲಸಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು. ಬಂದರಿನಿಂದ ಸುಮಾರು 200 ಮೀಟರ್ ದೂರದ ಅರಬ್ಬಿ ಸಮುದ್ರದಲ್ಲಿ ದೋಣಿ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಜೋರಾಗಿ ಗಾಳಿ ಬೀಸಿದೆ. ಈ ವೇಳೆ ದೋಣಿ ನೀರಿನಲ್ಲಿ ನಿಯಂತ್ರಣ ತಪ್ಪಿ ತೇಲಾಡಿದ ಪರಿಣಾಮ, ದೋಣಿಯಲ್ಲಿದ್ದ ನಾಗರಾಜ ಖಾರ್ವಿ…
