Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಯುವ ರೆಡ್ ಕ್ರಾಸ್ ಘಟಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಇದರ ಅಧ್ಯಕ್ಷರಾದ ಡಾ. ಜಯಕರ ಶೆಟ್ಟಿ ಅವರು ಮಾತಾನಾಡಿ, ಪ್ರಥಮ ಚಿಕಿತ್ಸೆ ತರಬೇತಿಯು ಕೇವಲ ಆರೋಗ್ಯ ಚಿಕಿತ್ಸೆಗೆ ಸಂಬಂಧಿಸಿದ ವಿಷಯವಲ್ಲ್ಲ ಬದಲಾಗಿ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಜೀವನ ಕೌಶಲ್ಯವಾಗಿದೆ. ತುರ್ತು ಸಂದರ್ಭದಲ್ಲಿ ವ್ಯಕ್ತಿಗೆ ಸಮಯೋಜಿತವಾಗಿ ನೀಡುವ ಪ್ರಥಮ ಚಿಕಿತ್ಸೆ ವ್ಯಕ್ತಿಯ ಸ್ಥಿತಿಯನ್ನು ಹದಗೆಡದಂತೆ ನೋಡಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ತರಬೇತಿಯಲ್ಲಿ ಪಾಲ್ಗೊಂಡು ತುರ್ತು ಸಂದರ್ಭಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ ಎಂದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಶಾನಿ ಮೆಡಿಕಲ್ ಸೆಂಟರ್ ಕುಂದಾಪುರ ಇದರ ವೈದ್ಯಾಧಿಕಾರಿ ಡಾ. ಸೋನಿ ಡಿ’ಕೋಸ್ತಾ ವಿದ್ಯಾರ್ಥಿಗಳಿಗೆ ಗಾಯಗೊಂಡ ವ್ಯಕ್ತಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ, ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜ್ ಕುಂದಾಪುರ ಇವರ ಆಸರೆಯಲ್ಲಿ ಜಿಲ್ಲಾಮಟ್ಟದ ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ 8 ವಿದ್ಯಾರ್ಥಿಗಳು ಅತ್ಯುತ್ತಮ ಸಾಹಸವನ್ನು ಪ್ರದರ್ಶಿಸಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಚಿನ್ನದ ಪದಕ, 10 ವಿದ್ಯಾರ್ಥಿಗಳು ಬೆಳ್ಳಿಯ ಪದಕ, 8 ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 5ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು. ಚಿನ್ನದ ಪದಕ ಸಾಧಕರು:ವಿದ್ಯಾರ್ಥಿಗಳಾದ ನವೀಶ್ (87kg),ಕಮಲೇಶ್ (82kg), ಸಾನ್ವಿತ್ ಖಾರ್ವಿ( 74kg)ನಯನ (72kg)ಪ್ರತೀಕ್ಷಾ (72kg)ಮಂಥನ್(70kg),ಕೃತಿಕಾ (62kg)ಅನನ್ಯ (57kg)ಇವರು ಚಿನ್ನದ ಪದಕ ಪಡೆಯುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಬೆಳ್ಳಿಯ ಪದಕ ಪಡೆದ ಸಾಧಕರು:ಪ್ರಜ್ವಲ್, ಶೋಭಿತ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂಭಾಶಿ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಜನ್ಮದಿನಾಚರಣೆ ಹಾಗೂ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಪಯಣದ ಪ್ರಯುಕ್ತ ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು, “ನರೇಂದ್ರ ಮೋದಿಜೀ ಅವರ ಹುಟ್ಟುಹಬ್ಬದ ಸಂಭ್ರಮ ಹಾಗೂ 25 ವರ್ಷಗಳ ರಾಜಕೀಯ ಪಯಣವು ತ್ಯಾಗ, ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿತವಾದ ಪಯಣ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಆರಂಭಿಸಿ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕನಾಗಿ ಬೆಳೆದಿರುವ ಅವರ ಬದುಕು ನಮಗೆಲ್ಲರಿಗೂ ಪ್ರೇರಣೆ. ಅವರಿಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಆನೆಗುಡ್ಡೆ ವಿನಾಯಕನಲ್ಲಿ ಪ್ರಾರ್ಥಿಸಿದ್ದೇವೆ” ಎಂದರು. ಈ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಮಂಡಲ ಉಪಾಧ್ಯಕ್ಷೆ ರೂಪಾ ಬಾಬು ಪೈ, ಕುಂಭಾಶಿ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಶೆಣೈ, ಪ್ರಮುಖರಾದ ರಾಜೇಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಸುಪ್ರೀಂ ಟೈಲ್ಸ್ ನ ಆಡಳಿತ ನಿರ್ದೇಶಕರಾದ ಕೆ. ಜಯಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಹಾಗೆಯೇ ಕಾರ್ಯಕ್ರಮದ ಆಯೋಜನೆ ಕುರಿತು ಮೆಚ್ಚುಗೆ ಮಾತುಗಳನ್ನಾಡಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಶುಭಕೋರಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಸಂಯೋಜಕರಾದ ಹರೀಶ್ ಬಿ. ಹಾಗೂ ಅವಿತಾ ಕೊರೆಯಾ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಂತಿಮ ಬಿ.ಬಿ.ಎ ರಾಕೇಶ್ ಹಾಗೂ ರಾಜೇಶ್ವರಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೆ.12ರಂದು ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ 10ನೇ ತರಗತಿಯ ವಿದ್ಯಾರ್ಥಿ ಸಮಿತ್ ಶೆಟ್ಟಿ ಅವರು 110 ಕೆ.ಜಿ. ವಿಭಾಗದ 17ರ ವಯೋಮಾನದ ಬಾಲಕರ ಕುಸ್ತಿ ಪಂದ್ಯಾಟದಲ್ಲಿ  ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ತಮ್ಮ ಶಕ್ತಿ, ಕೌಶಲ್ಯ ಹಾಗೂ ಆತ್ಮವಿಶ್ವಾಸದ ಅದ್ಭುತ ಪ್ರದರ್ಶನದ ಮೂಲಕ ಎದುರಾಳಿಗಳನ್ನು ಮಣಿಸಿದ ಸಮಿತ್ ಶೆಟ್ಟಿ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಅಲಂಕರಿಸುವುದರೊಂದಿಗೆ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಮಿತ್ ಶೆಟ್ಟಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಿಂದಿ ಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರ ಜೊತೆಗೆ, ರಾಷ್ಟ್ರಾಭಿಮಾನ, ರಾಷ್ಟ್ರೀಯ ಏಕತೆ ಮತ್ತು ದೇಶಪ್ರೇಮದ ಭಾವನೆಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ಅವರು ವಹಿಸಿದ್ದರು. ಉಪ ಪ್ರಾಂಶುಪಾಲರು ಸಿಸ್ಟರ್ ಕಾರ್ಮೆಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಹಿಂದಿ ದಿವಸದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಹಿಂದಿ ಭಾಷಾ ಚಟುವಟಿಕೆಗಳು, ಭಾಷಣ, ಕವನ ವಾಚನ, ದೇಶಭಕ್ತಿಗೀತೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಶೇಷವಾಗಿ ದೇಶದ ಏಕತೆ, ವೈವಿಧ್ಯತೆಯಲ್ಲಿ ಏಕತೆ ಮತ್ತು ದೇಶದ ಮೇಲಿನ ಪ್ರೀತಿಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ವಿತರಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ವಕ್ವಾಡಿ ಗ್ರಾಮದ ತೆಂಕಬೆಟ್ಟು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆ ಸವಿತಾ (36) ಎಂದು ಗುರುತಿಸಲಾಗಿದೆ. ಅವರು ಸುಮಾರು 10 ವರ್ಷಗಳಿಂದ ಬೆನ್ನುನೋವು ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಸೆ. 15ರ ರಾತ್ರಿ 12 ಗಂಟೆಗೆ ಮನೆಯಲ್ಲಿ ಮಲಗಿದ್ದ ಅವರು, ಬೆಳಗ್ಗೆ ಮನೆಯಲ್ಲಿ ಕಾಣಿಸಿರಲಿಲ್ಲ ಕುಟುಂಬಸ್ಥರು ಹುಡುಕಾಡಿದಾಗ ಮನೆಯ ಮಹಡಿಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಾಯಿ ಮತ್ತು ಮೂಗಿನಿಂದ ನೊರೆ ಮಿಶ್ರಿತ ದ್ರವ ಹೊರಬರುತ್ತಿದ್ದು ಪಕ್ಕದಲ್ಲಿ ವಿಷದ ಬಾಟಲಿ ಪತ್ತೆಯಾಗಿತ್ತು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲಭಾಗ್ಯ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್, ಸ್ವಾವಲಂಬಿ ಸಾರಥಿ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ಸಾಲ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ www.kaushalkar.com ನಲ್ಲಿ ಆನ್‌ಲೈನ್ ಮೂಲಕ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in ಅಥವಾ ನಿಗಮದ ಕೇಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ  ಪದವಿ ಪೂರ್ವ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಿತಿನ್ ಕುಸ್ತಿ ಅಖಾಡದಲ್ಲಿ ಅಮೋಘ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾನೆ.    ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕುಸ್ತಿ ಪಟು ಆಗಿರುವ ಕೃಷ್ಣ ವಿದ್ಯಾರ್ಥಿಗೆ ತರಬೇತಿ ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಸಾಧನೆಯನ್ನು ಪ್ರಶಂಸಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್‌, ಉಡುಪಿಯ ಹಾಜಿ ಅಬ್ದುಲ್ಲ ಸಾಹೇಬ್‌ ಮೆಮೋರಿಯಲ್‌ ಚಾರಿಟೇಬಲ್‌ ಟ್ರಸ್ಟ್‌, ಸಂದೀಪ್‌ ಶೆಟ್ಟಿ ಸಾರಥ್ಯದ ಏಸ್‌ ಕ್ರೀಟ್‌ ಅಡೆಷನ್ಸ್‌ ಹಾಗೂ ‘ಉಸಿರು ಕೋಟ’ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ  ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗ:ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣಿಹರ ಶಿಕ್ಷಕ ಯಶವಂತ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗ್ಗೇರಿ ಸಬಿತ. ಕೆ., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಿರಿಯ ಪ್ರಾಥಮಿಕ ಶಾಲೆ ಕಾಮಜಲು ಸುಧಾ ಸಂದೇಶ್‌, ದ. ಕ. ಜಿ. ಪಂ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ನಾಡು ಶ್ರೀದೇವಿ ಸತ್ಯನಾರಾಯಣ ಮುಲ್ಕಿ, ​ಬಿಎಂ ಆಂಗ್ಲ ಮಾಧ್ಯಮ ಶಾಲೆ ಪರ್ಕಳ ವಿನಯ ನಾಗರಾಜ ಬಾಯರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ವಿಜಯ ಆರ್‌, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಕಾರ್ಕಡ…

Read More