Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯುತ್ ಲೋಡ್ ಶೆಡ್ಡಿಂಗ್ ಆಗುತ್ತಿರುವ ಬಗ್ಗೆ ಮೆಸ್ಕಾಂ ಉಪಕೇಂದ್ರದಲ್ಲಿ ತಲೆದೂರಿದ ತಾಂತ್ರಿಕ ಸಮಸ್ಯೆಯನ್ನು ತಿಳಿಯಪಡಿಸುವ ಕೆಲಸ ಮಾಡಬೇಕು. ಜನರಿಗೆ ತೊಂದರೆಯಾಗದಂತೆ ನಿರ್ದಿಷ್ಟ ಸಮಯದ ಮಿತಿಯಲ್ಲಿ ಅಧಿಕಾರಿಗಳೂ ಪರಿಹಾರ ಕಂಡಕೊಳ್ಳಲು ಮುಂದಾಗಬೇಕು. ಸರಕಾರದ ಬಗ್ಗೆ ಇದರಿಂದ ತಪ್ಪು ಅಭಿಪ್ರಾಯ ಬರುವಂತೆ ಮಾಡಬೇಡಿ. ಜೊತೆಗೆ ಜನಪ್ರತಿನಿಧಿಗಳು ವಾಸ್ತವ ಅರಿಯದೇ ಹೇಳಿಕೆ ನೀಡುವುದು ಸರಿಯಲ್ಲ ಎಂದರು. ಈ ಬಗ್ಗೆ ಸಭೆಯಲ್ಲಿದ್ದ ಬೈಂದೂರು ಮೆಸ್ಕಾಂ ಉಪಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹರೀಶ್ ಅವರು ಸ್ಪಷ್ಟನೆ ನೀಡಿ, ಬೈಂದೂರು ಹಾಗೂ ಕೊಲ್ಲೂರು ಮೆಸ್ಕಾಂ ಉಪಕೇಂದ್ರಗಳಿಗೆ ವಿದ್ಯುತ್‌ ಸರಬರಾಜು ಮಾಡುವ ನಾವುಂದದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಷನ್‌ನಲ್ಲಿನ 20ಎಂವಿಎ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮಾಜದಲ್ಲಿ ಜಾಗೃತಿ ಮೂಡಿಸುವುದರರ ಜೊತೆಯಲ್ಲಿ ಸಮಾಜವು ಒಗ್ಗಟ್ಟಿನಿಂದ ಸಂಘಟಿತವಾಗಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶ್ರೀ ಮೂಕಾಂಬಿಕಾ ಡಿವೂಟೀಸ್ ಟ್ರಸ್ಟ್ (ಕೇರಳ) ತಮ್ಮತನವನ್ನು ಹಾಗೂ ಸನಾತನ ಧರ್ಮ ರಕ್ಷಣೆಯ ಮೂಲಕ ಸ್ವಾಭಿಮಾನಿಯಾಗಿ ಬೆಳೆಯಬೇಕೆನ್ನುವ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ನ್ಯಾಯವಾದಿ ಪ್ರಶಾಂತ್ ಹೇಳಿದರು. ಅವರು ಕೊಲ್ಲೂರು ದೇವಳದ ಸ್ವರ್ಣಮುಖಿ ವೇದಿಕೆಯಲ್ಲಿ ಶ್ರೀ ಮೂಕಾಂಬಿಕಾ ಡಿವೂಟೀಸ್ ಟ್ರಸ್ಟ್ ವತಿಯಿಂದ ನಾಲ್ಕು ದಿನಗಳ ಕಾಲ ಆಯೋಜಿಸಿದ ಮೂರನೇ ವರ್ಷದ ಶ್ರೀ ಶಂಕರ ಜಯಂತ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇರಳದ ನಾಲ್ವರು ಮೂಕಾಂಬಿಕಾ ಭಕ್ತರು ಸೇರಿ 2022ರಲ್ಲಿ ಆರಂಭಿಸಿದ ಈ ಸಂಸ್ಥೆಯಲ್ಲಿ ಪ್ರಸ್ತುತ 400ಕ್ಕೂ ಅಧಿಕ ಭಕ್ತಾದಿಗಳು ಸೇರ್ಪಡೆಗೊಂಡಿದ್ದಾರೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕವಾಗಿ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದೆ. ಪ್ರತೀ ವರ್ಷ ವಿದ್ಯಾನಿಧಿ ಯೋಜನೆ ಮೂಲಕ ಐದು ಮಕ್ಕಳನ್ನು ದತ್ತು ಪಡೆದು ಅವರಿಗೆ ಶಿಕ್ಷಣ ನೀಡುವುದು, ಸದಸ್ಯರ ಸಮರ್ಪಣಾಭಾವದಿಂದ ಬಡಕುಟುಂಬಗಳಿಗೆ ವಸತಿ, ವಸ್ತ್ರ ಹಾಗೂ ದಿನಸಿಗಳನ್ನು ವಿತರಿಸುವುದು ಇತ್ಯಾದಿ ಸಾಮಾಜಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿಯನ್ನು ಕಾಣುವುದಕ್ಕೆ ಸಾಧ್ಯ, ಈ ಹಿನ್ನಲೆಯಲ್ಲಿ ಕಾಲೇಜು ನಿಮಗೆ ಒದಗಿಸುವ ಈ ವೇದಿಕೆಯನ್ನು ಸೂಕ್ಷ್ಮವಾಗಿ ಬಳಸಿಕೊಳ್ಳಬೇಕು ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಶಿವಪ್ರಸಾದ್ ಶೆಟ್ಟಿಗಾರ್‌ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ವಡ್ಡರ್ಸೆಯ ಸರಕಾರಿ ಪ್ರೌಢ ಶಾಲಾ ಶಿಕ್ಷಕರಾದ ಆನಂದ ಶೆಟ್ಟಿ ಹಾಗೂ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲರಾದ ಗೀತಾ, ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕ ಸುಧೀರ್ ಕುಮಾರ್ ಅತಿಥಿಗಳನ್ನು ಪರಿಚಯಿಸಿ, ಆಂಗ್ಲ ಭಾಷಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾ.ಪಂ. ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಆಶ್ರಯದಲ್ಲಿ ಮೇ. 04 ರಂದು ಬೆಳಗ್ಗೆ 9 ರಿಂದ  ಕೋಟದ ಕಾರಂತ ಥೀಮ್ ಪಾರ್ಕಿನಲ್ಲಿ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ – ಕಾಂಬ 2025 ಜರಗಲಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ವಹಿಸಲಿದ್ದಾರೆ. ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ವಹಿಸಲಿದ್ದಾರೆ. ಡಾ. ವಿಜಯ ಬಲ್ಲಾಳ್ ಮೊದಲಾದವರು ಉಪಸ್ಥಿತರಿರುವರು. ಸಮ್ಮೇಳನದ ಪ್ರಯುಕ್ತ ಬೆಳಗ್ಗೆ 11.30ರಿಂದ ಕವಿಗೋಷ್ಠಿ, ಕುಂದಕನ್ನಡದ ಹರಟೆ, ಅಧ್ಯಕ್ಷರೊಂದಿಗೆ ಮಾತುಕತೆ, ಕೆ.ಸಿ.ಕುಂದರ್ ದತ್ತಿನಿಧಿ ಪ್ರದಾನ ನಡೆಯಲಿದೆ. ಕುಂದಾಪ್ರ ಕನ್ನಡಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ ಪಂಜು ಗಂಗೊಳ್ಳಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.98.27 ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ  ಸುಶ್ಮಿತಾ ಎಸ್. ಗಾಣಿಗ (624), ಮನಾಲಿ (619), ವೈಷ್ಣವಿ (611), ಅಭಿಜ್ಞಾ ಖಾರ್ವಿ (610), ಧನ್ಯ ಮೇಸ್ತ (610), ಸೃಜನಾ (603), ವಿಕ್ರಮ್ ವಿ. ದೇವಾಡಿಗ (600), ಪ್ರಾರ್ಥನಾ ಪೈ (596), ಶ್ರೀಯಾ ಖಾರ್ವಿ (595), ಅಶ್ವಿತಾ ಎಸ್.ಮೊಗವೀರ (588), ಸಹನಾ ಆರ್.ಮೇಸ್ತ (580), ಬಿ. ಅಪೂರ್ವ ನಾಯಕ್ (580) ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 58 ವಿದ್ಯಾರ್ಥಿಗಳ ಪೈಕಿ 57 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 30 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 624 ಅಂಕಗಳನ್ನು ಪಡೆದಿರುವ ಸುಶ್ಮಿತಾ ಎಸ್. ಗಾಣಿಗ ಶಾಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ 2ನೇ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್.ಡಬ್ಲೂಯ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 9,000 ಗೌರವಧನದ ನೆಲೆಯಲ್ಲಿ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್.ಡಬ್ಲೂಯ) ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿ.ಆರ್.ಡಬ್ಲೂಯ ನೇಮಕಾತಿಗಾಗಿ ಬಾಕಿ ಇರುವ ಗ್ರಾಮ ಪಂಚಾಯತ್‌ಗಳ ವಿವರ: ಉಡುಪಿ ತಾಲೂಕಿನ ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ 38 ಕಳತ್ತೂರು ಹಾಗೂ ಹೆಗ್ಗುಂಜೆ, ಹೆಬ್ರಿ ತಾಲೂಕಿನ ಹೆಬ್ರಿ, ಶಿವಪುರ ಹಾಗೂ ಬೆಳ್ವೆ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ಕೆರಾಡಿ ಮತ್ತು ಕಾರ್ಕಳ ತಾಲೂಕಿನ ಕಲ್ಯಾ. ಯು.ಆರ್.ಡಬ್ಲೂಯ ನೇಮಕಾತಿಗಾಗಿ ಖಾಲಿ ಇರುವ ಸ್ಥಳೀಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಪ್ರೌಢಶಾಲೆ ಶೇ.95.83 ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ನಿಸರ್ಗ 597 ಅಂಕಗಳನ್ನು ಪಡೆದು ಶಾಲೆಗೆ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಮನೀಷಾ (588), ಸನ್ವಿತಾ (580) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 9 ಮಂದಿ ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆಯ 81 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಮಾನ್ಯ (622), ಕ್ಷೀರಜಾ (621), ಹರೀಶ್ ಬಡಿಗೇರ್ (621), ಪವನ್ ಶರಣಬಸಪ್ಪ ಮೇಗೂರ್ (621), ರಿಯಾ ವಿದ್ಯಾಧರ ಕಮಟೆ (621), ಪ್ರಜ್ಞಾ ಶೀತಲ್ ಪಾಟೀಲ್ (620), ಸಮೀಕ್ಷಾ ಸಂದೀಪ್ ಸಮಾಜನ್ನವರ್ (620), ಸಿಂಧೂ ಶೀತಲ್ ಚೌಗಲೆ (620), ಸುಪ್ರೀತಾ ಲಕ್ಷ್ಮಣ ನಾಯ್ಕ್ (620), ಆದಿತ್ಯ (620), ಚಿನ್ಮಯ್ (620) ಅಂಕಗಳನ್ನು ಪಡೆಯುವುದರ ಮೂಲಕ ವಿಶಿಷ್ಠ ಸಾಧನೆ ಮಾಡಿದ್ದಾರೆ. 91 ವಿದ್ಯಾರ್ಥಿಗಳು ಶೇ.95ಕ್ಕೂ ಅಧಿಕ, 161 ವಿದ್ಯಾರ್ಥಿಗಳು ಶೇ. 90ಕ್ಕೂ ಅಧಿಕ, 211 ವಿದ್ಯಾರ್ಥಿಗಳು ಶೇ.85ಕ್ಕೂ ಅಧಿಕ ಅಂಕ ಪಡೆದಿದ್ದಾರೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2024-25ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 229 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೆರ್ಗಡೆ ಹೊಂದಿ ಶೇಕಡಾ100 ಫಲಿತಾಂಶ ದಾಖಲಿಸಿರುತ್ತಾರೆ. ಹರಿಪ್ರಸಾದ್ ಎಮ್.ಎಸ್., ಸಾಯಿ ಕೀರ್ತನಾ 622 ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಗಳಿಸಿರುತ್ತಾರೆ. ಆಕಾಂಕ್ಷ ಎಸ್. ಪೈ, ಅಮೂಲ್ಯ ಶೇಟ್, ಶರ್ವಾಣಿ ಉಳವಿ, ಶ್ರೇಯಾ 621 ಅಂಕಗಳಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಹಾಗೂ ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಗಳಿಸಿರುತ್ತಾರೆ ಮತ್ತು ಆಸ್ತಿಕ್ ಕೆ., ಮಂಜುಶ್ರೀ ಕೆ.ಪಿ., ನೇಹಾ ಆರ್., ಸಮೃದ್ಧಿ ನಾಯಕ್ ಕ್ರಮವಾಗಿ 620 ಅಂಕಗಳಿಸಿ ತೃತೀಯ ಸ್ಥಾನ ಮತ್ತು ರಾಜ್ಯ ಮಟ್ಟದಲ್ಲಿ ಆರನೇ ಸ್ಥಾನ ಗಳಿಸಿರುತ್ತಾರೆ. 229 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 59 ವಿದ್ಯಾರ್ಥಿಗಳು 600 ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 115 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ , 66 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿದ್ಯಾರ್ಥಿ ಜೀವನದಲ್ಲಿ ಸಂಸ್ಕಾರಯುತ ಸ್ನೇಹಮಯಿ ವಾತಾವರಣ ರೂಪಿಸಿಕೊಳ್ಳಬೇಕು ಈ ಮೂಲಕ ದ್ವೇಷ ಅಸೂಯೆ ಇದರಿಂದ ಮುಕ್ತರಾಗಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ಕೋಟ ಪಡುಕರೆ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಆರೋಹ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಕಲೆಯ ಮೂಲಕ ಹೊರಹೊಮ್ಮಿಸಬೇಕು, ಸಮಾಜದ ಸ್ವಾಸ್ಥ ಸದಾ ಕಾಪಾಡಬೇಕು,ಇದು ವಿದ್ಯಾರ್ಥಿಗಳ ಧ್ಯೇಯವಾಗಬೇಕು ಎಂದರಲ್ಲದೆ ಕಾಲೇಜು ದಿನಗಳಲ್ಲಿ ಕಲಾಸಕ್ತಿ ಉನ್ನತ ಮಟ್ಟಕ್ಕೆ ಏರಬೇಕು, ಮುಂದಿನ ಜೀವನದ ಬಗ್ಗೆ ಯೋಚಿಸಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ಕಾಲೇಜು ನಡೆದು ಬಂದ ಆರಂಭಿಕ ದಿನಗಳನ್ನು ಮೆಲುಕು ಹಾಕಿದರು. ಸಭೆಯ ಅಧ್ಯಕ್ಷತೆಯನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಇದೇ ವೇಳೆ ತೀಪುಗಾರರಾಗಿ ನಮಿತಾ, ಗಣೇಶ್ ರಾವ್, ನಿಖಿಲ್ ಶೆಟ್ಟಿ ಅವರುಗಳಿಗೆ ತೀರ್ಪಿನ ಪ್ರತಿ ಹಸ್ತಾಂತರಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಗೀತಾನಂದ…

Read More