ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಣದೊಂದಿಗೆ ಸಂಸ್ಕಾರ ದೊರೆತಾದ ಯಾವುದೇ ಮುಗು ಸಮಾಜದಲ್ಲಿ ಸತ್ಪ್ರಜೆಯಾಗಿ ಬೆಳೆಯಲು ಸಾಧ್ಯವಿದೆ. ಮಕ್ಕಳಿಗೆ ವಿದ್ಯಾಬ್ಯಾಸ ಕೊಡಿಸುವ ಜೊತೆಗೆ ಸಂಸ್ಕಾರದ ಪಾಠವನ್ನು ಅಗತ್ಯವಾಗಿ ಕಲಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದೆ ಎಂದು ಉದ್ಯಮಿ ಸದಾನಂದ ಪ್ರಭು ಹೇಳಿದರು. ಅವರು ಸೋಮವಾರ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಿ ಬಳಿಕ ಮಾತನಾಡಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ನೆರವು ನೀಡಲಾಗುತ್ತಿದೆ. ಪ್ರಾಥಮಿಕ ಶಿಕ್ಷಣದಿಂದ ಪದವಿಯ ತನಕದ ವಿದ್ಯಾರ್ಥಿಗಳಿಗೆ ಈ ಗ್ರಾಮೀಣ ಪ್ರದೇಶದಲ್ಲಿ ಪ್ರತಿವರ್ಷ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದರು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕಳೆದ ಎರಡೂವರೆ ದಶಕದೀಂದ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಲಿಕೆಗೆ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ. ಕುಟೀರದ ಮೂಲಕ ಹಲವು ಸಾಮಾಜಿಕ, ಧಾರ್ಮಿಕ ಕಾರ್ಯಗಳನ್ನು ಮಾಡಲಾಗಿತ್ತು. ದಾನಿಗಳ ನೆರವಿನಿಂದ ಸೇವಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು ನಡೆಸುವುದು ನಿಜಕ್ಕೂ ಒಂದು ಸವಾಲಿನ ಸಂಗತಿ ಎಂದು ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಮುಖಿ ಚಿಂತನೆಯ ಸದುದ್ದೇಶದಿಂದ ಬೇಸಿಗೆ ಶಿಬಿರವನ್ನು ಈ ಸಂಸ್ಥೆಯು ಆಯೋಜಿಸಿರುವುದು ಇತರರಿಗೆ ಮಾದರಿ. ಜೀವನದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನೆಡೆದಾಗ ನಮ್ಮ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಮಕ್ಕಳು ಈ ಶಿಬಿರದಲ್ಲಿ ಕಲಿಸುವ ಎಲ್ಲಾ ಚಟುವಟಿಕೆಗಳನ್ನು ,ವಿಚಾರಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಂಡು ಸವಾಲುಗಳನ್ನು ಎದುರಿಸುವ ಗುಣವನ್ನು ಕಲಿಯಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅನವಶ್ಯಕ ಕೇಸು ದಾಖಲಿಸಿ ಕಿರಿಕುಳ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಎದುರು ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿ ಮುದ್ದುಗುಡ್ಡೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಸರಕಾರಿ ಜಾಗವನ್ನು ಒತ್ತುವರಿ ಮಾಡಿರುವವರ ಪರ ನಿಂತು ದಲಿತ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ ನ್ಯಾಯಕ್ಕಾಗಿ ಹೋರಾಟ ನಡೆಸಿದ ತನ್ನ ಮೇಲೆ ಪೊಲೀಸರು, ವಕೀಲರು, ಗ್ರಾಪಂ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದರು. ಪ್ರತಿಭಟನೆ ಸ್ಥಳಕ್ಕೆ ಡಿವೈಎಸ್ಪಿ ಎಚ್. ಡಿ. ಕುಲಕರ್ಣಿ, ತಹಸೀ ಲ್ದಾರ್ ಪ್ರದೀಪ ಕುರುಡೇಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ. ಬಿ. ಆರ್ ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ಜಯಂತಿ ಹಾಗೂ ಸಂಘದ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಇಲ್ಲಿನ ಶಾರದ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಸಚಿವೆ ಮೋಟಮ್ಮ ಅವರು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಆರ್ಥಿಕವಾಗಿ ಶೈಕ್ಷಣಿಕವಾಗಿ ಸಬಲರಾಗಬೇಕು ಎಂದರು ಹಾಗೂ ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಯ ಉಸಿರಿದ್ದಂತೆ ಸಂವಿಧಾನವನ್ನು ಬದಲಾಯಿಸಲು ಮುಂದಾದಲ್ಲಿ ದಲಿತ ಸಮುದಾಯದ ಜೇನುಗೂಡಿಗೆ ಕೈ ಇತ್ತಂತೆ ಎನ್ನುವ ಎಚ್ಚರಿಕೆ ಮಾತುಗಳನ್ನು ಸಹ ಈ ಸಂದರ್ಭದಲ್ಲಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಾಗರತ್ನ ಭಾಸ್ಕರ್ ವಹಿಸಿದ್ದರು. ಸಭೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸುಲೋಚನಾ ಹಾಗೂ ಸಾಮಾಜಿಕ ಕಲಾಕ್ಷೇತ್ರದಲ್ಲಿ ಗುರುತಿಸಿಕೊಂಡ ಬೆಂಕಿ ಚಿರಂತ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬ್ಯಾಗ ವಿತರಣೆ ಮತ್ತು ಎಸ್. ಎಸ್.ಎಲ್.ಸಿ , ಪಿಯುಸಿ, ಡಿಗ್ರಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಿಸ್ವಾರ್ಥ ಸೇವಾ ಟ್ರಸ್ಟ್ ಹೆಸರಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದೆ, ಸಮಾಜದ ಬಡ ಹಾಗೂ ಅನಾರೋಗ್ಯ ಪೀಡಿತರ ನೆರವಿಗೆ ಧಾವಿಸುವ ಜೊತೆಗೆ ಯಾವುದೇ ಪ್ರಚಾರದ ಗೀಳು ಇಲ್ಲದೆ ಪ್ರತಿ ತಿಂಗಳು ಸಹಾಯದ ನೆರವು ನೀಡುತ್ತಿದ್ದಾರೆ ಇದೊಂದು ಶ್ರೇಷ್ಠವಾದ ಮಹತ್ಕಾರ್ಯವಾಗಿದೆ ಎಂದು ಪತ್ರಕರ್ತ ರವೀಂದ್ರ ಕೋಟ ಪ್ರಶಂಸನೀಯ ಮಾತುಗನ್ನಾಡಿದರು. ಅವರು ಕೋಟದ ನಿಸ್ವಾರ್ಥ ಸೇವಾ ಟ್ರಸ್ಟ್ ತಿಂಗಳ ಸರಣಿ ಸಹಾಯಹಸ್ತ ಯೋಜನೆಯಡಿ ಕೋಟದಲ್ಲಿ ವಾಸ್ತವ್ಯವಿರುವ ಬಡ ಕುಟುಂಬದ ವಿಜಯಲಕ್ಷ್ಮೀ ಶಾಸ್ತ್ರಿ ಅವರಿಗೆ ದಿನಸಿ ಪರಿಕರ ಹಸ್ತಾಂತರಿಸಿ ಮಾತನಾಡಿದರು. ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಕಾರ್ಯ ಭಗವಂತನಿಗೆ ಅತಿ ಹತ್ತಿರವಾದ ಕಾರ್ಯವಾಗಿದೆ ಈ ದಿಸೆಯಲ್ಲಿ ನಿಸ್ವಾರ್ಥ ಸೇವಾ ಟ್ರಸ್ಟ್ ನಂತೆ ಒಂದಿಷ್ಟು ಒಂದಿಷ್ಟು ಸಂಘಟನೆಗಳು ಕಾರ್ಯಾಚರಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕಿ ಸವಿತಾ ವೆಂಕಟೇಶ ಉಡುಪ, ನಿಸ್ವಾರ್ಥ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕೋಟ, ಕಾರ್ಯದರ್ಶಿ ಪ್ರದೀಪ್ ಪೂಜಾರಿ ಕೋಟ, ಟ್ರಸ್ಟ್ ಪ್ರಮುಖರಾದ ಗೋಪಿನಾಥ್ ಕಿಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು. ರಾಜ್ಯದ ಪ್ರತಿಷ್ಠಿತ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯು ಎ. 26 ಶನಿವಾರದಂದು ನಡೆಯಲಿದೆ. ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ಸಹಕಾರ ಭಾರತೀಯ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರಾತಿನಿಧ್ಯ ಕೊಟ್ಟು ಈ ಬಾರಿ ಹೊಸ ಉತ್ಸಾಹಿ ಹೈನುಗಾರರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದ್ದು. ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಕುಂದಾಪುರ ತಾಲೂಕಿನಿಂದ ಕಾಡೂರ ಸುರೇಶ್ ಶೆಟ್ಟಿ, ಬೈಂದೂರು ತಾಲೂಕಿನಿಂದ ಸುಬ್ಬಣ್ಣಶೆಟ್ಟಿ, ಟಿ.ವಿ ಪ್ರಾಣೇಶ್ ಯಡಿಯಾಳ್, ಕಾರ್ಕಳ ತಾಲೂಕಿನಿಂದ ಕೆ. ಮೋಹನ್ ದಾಸ್ ಅಡ್ಯಾಂತಾಯ, ಹೆಬ್ರಿ ತಾಲೂಕಿನಿಂದ ಭೋಜ ಪೂಜಾರಿ, ಕಾಪುಯಿಂದ ಅಶೋಕ್ ರಾವ್, ಉಡುಪಿಯಿಂದ ಹೆರ್ಗ ದಿನಕರ್ ಶೆಟ್ಟಿ ಮತ್ತುಉಡುಪಿ ಜಿಲ್ಲೆಯ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದಲ್ಲಿ ನಡೆದ ಅಖಿಲ ಭಾರತ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ಗ್ರಾಮದ ನಾಗಶ್ರೀ 76 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮೇ ತಿಂಗಳಲ್ಲಿ ನಡೆಯುವ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಗೆ ಕರ್ನಾಟಕದ ಮಹಿಳಾ ವಿಭಾಗದಿಂದ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶದ ಅವರು ಕಠಿಣ ಪರಿಶ್ರಮದಿಂದ ವೇಯ್ಟ್ ಲಿಫ್ಟಿಂಗ್ ಹಾಗೂ ಪವರ್ ಲಿಫ್ಟಿಂಗ್ ಸಾಧನೆ ಮಾಡಿ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇವಾಲಯ ಮತ್ತು ಶಾಲೆ ಊರಿನ ಎರಡು ಕಳಶವಿದ್ದಂತೆ. ಮುಖ್ಯವಾಗಿ ಶಾಲೆಗಳು ನಶಿಸಿಹೋದರೆ ಮುಂದಿನ ಪೀಳಿಗೆಗೆ ಸಮಸ್ಯೆಯಾಗಬಹುದು. ಈ ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸುಮಾರು 90 ವರ್ಷ ಇತಿಹಾಸವುಳ್ಳ ಈ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ದಾನಿಗಳಿಂದ ಸಂಗ್ರಹಿಸಿದ ಕೆಲವು ಸವಲತ್ತುಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಕಾಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 90ರ ಸಂಭ್ರಮ ಹಾಗೂ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉದ್ಯಮಿ ಹೆಚ್. ಜಯಶೀಲ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿ, ತಮ್ಮ ಸಂಸ್ಥೆಯಿಂದ ಕೊಡುಗೆಯಾಗಿ ನೀಡಿದ ಶಾಲಾ ವಾಹನವನ್ನು ಎಸ್‌ಡಿಎಂಸಿಗೆ ಹಸ್ತಾಂತರಿಸಿದರು. ಈ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷ ಬಟ್ನಾಡಿ ಅಣ್ಣಪ್ಪ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಾಪಂ ಮಾಜಿ ಸದಸ್ಯ ಎಚ್. ವಿಜಯ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾದ್ದದ್ದು. ವಿದ್ಯುನ್ಮಾನ ಮಾಧ್ಯಮಗಳಿಂದಾಗಿ ಯಕ್ಷಗಾನ ಜನರಿಂದ ದೂರವಾಗುತ್ತಿದೆ ಎಂದು ಕೆಲವರು ಆಡಿಕೊಳ್ಳುತ್ತಾರೆ. ಆದರೆ ಹಿಮ್ಮೇಳ ಮತ್ತು ಅರ್ಥದಾರಿಗಳು ಮಾತ್ರ ಸಾಕಾಗುವ ಅತ್ಯಂತ ಸರಳ ರಂಗಭೂಮಿಯಾದ ತಾಳಮದ್ದಲೆಗೂ ದೊಡ್ಡ ಶ್ರೋತೃವರ್ಗ ಇರುವುದು ಜೀವಂತ ಕಲೆ ನಶಿಸದು ಎಂಬ ಭರವಸೆ ನೀಡುತ್ತದೆ ಎಂದು ನಿವೃತ್ತ ಯೋಧ ಬೈಂದೂರು ಚಂದ್ರಶೇಖರ ನಾವಡ ಹೇಳಿದರು. ಅವರು ಲಾವಣ್ಯ ಬೈಂದೂರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ, ತಾಳಮದ್ದಳೆ, ಹೋವಿನಕೋಲು ಮುಂತಾದವುಗಳು ನಮ್ಮ ಪರಂಪರೆಯ ಭಾಗವಾಗಿದ್ದು ಮಹಾ ಕಾವ್ಯಗಳನ್ನು ಜನರಿಗೆ ತಲುಪಿಸುವ ಉತ್ತಮ ಮಾಧ್ಯಮವಾಗಿದೆ. ಹಿಂದಿನ ಪರಂಪರೆಯ ಪ್ರದರ್ಶನಗಳಿಗೆ ಹೋಲಿಸಿದಾಗ ಈಗನವು ಅಂತ:ಸತ್ವ ಕಲೆದುಕೊಂಡಿವೆ ಎಂಬ ಟೀಕೆ ಇದೆ. ಆದರೆ ಕಾಲದ ಆಘಾತಗಳನ್ನು ತಡೆದು ನಿಲ್ಲುವ ಶಕ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ್ರ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಆದರೆ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡದೆ ಇರುವುದು ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುತ್ತಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಅತ್ಯಂತ ಕಡಿಮೆ ಯುವ ಸಂಪನ್ಮೂಲ ಇರುವ ದೇಶದ ಜೊತೆಗೂ ನಮಗೂ ಹೊರಡಲು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈಜುಕೊಳ ಆವರಣದಲ್ಲಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಖೇಲೋ ಇಂಡಿಯಾಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಈಜುಗಾರರಿಗೆ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗುವಂತ ವ್ಯವಸ್ಥೆ ಕಲ್ಪಿಸಬೇಕು ಎಂದರು. ದಕ್ಷಿಣ ಕನ್ನಡ ಈಜುಗಾರರ ಸಂಘದ…
