ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು,ಸೆ.04: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಕಂದಾಯ ಇಲಾಖೆಯಿಂದ ಮರು ಸರ್ವೇ ನಡೆಸಿ ಅನಧಿಕೃತವಾಗಿ ಹಾಕಲಾಗಿದ್ದ ಶೆಡ್’ಗಳನ್ನು ತೆರವುಗೊಳಿಸಲಾಗಿದೆ. ಬೈಂದೂರು ಪ್ರಥಮ ದರ್ಜೆ ಕಾಲೇಜಿಗೆ ಸೇರಿದ 12 ಎಕರೆ ಜಾಗದಲ್ಲಿ ಅಕ್ರಮ ಒತ್ತುವರಿಗೆ ಪ್ರಯತ್ನಿಸಿರುವುದು ಕಂಡುಬಂದಿದೆ. ಏಕಾಏಕಿ 10ಕ್ಕೂ ಹೆಚ್ಚು ಗುಡಿಸಲು ನಿರ್ಮಿಸಿರುವುದು ಹಾಗೂ ಗಿಡಗಳನ್ನು ಕಡಿದು ಅಲ್ಲಲ್ಲಿ ಗಡಿ ಗುರುತು ಮಾಡಿರುವುದು ಕಾಲೇಜು ಆಡಳಿತದ ಗಮನಕ್ಕೆ ಬಂದಿತ್ತು. ತಕ್ಷಣ ಬೈಂದೂರು ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಬಳಿಕ ಸರ್ವೆಯನ್ನು ನಡೆಸಲಾಗಿತ್ತು. ಕಾಲೇಜಿಗೆ ಸಂಬಂಧಪಟ್ಟ ಜಾಗಕ್ಕೆ ಮತ್ತೆ ಗಡಿ ಗುರುತು ನಿಗದಿಪಡಿಸಿ ಅಕ್ರಮ ಗುಡಿಸಲನ್ನು ಸರ್ವೇ ಅಧಿಕಾರಿಗಳು ಕಿತ್ತುಹಾಕಿದ್ದಾರೆ. ಕಾಲೇಜು ಜಾಗಕ್ಕೆ ಅಕ್ರಮ ಪ್ರವೇಶಿಸಿ ವಾಸ್ತವ್ಯ ಹೂಡಿ ಹಕ್ಕುಪತ್ರ ಪಡೆಯಲು ಹೊರಟಿರುವ ಹುನ್ನಾರದ ಹಿಂದೆ ಪ್ರಭಾವಿಗಳ ಕೈವಾಡವಿದೆ ಎನ್ನುವ ಶಂಕೆಯಿದೆ. ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು ವಿದ್ಯಾನಗರದ ಸರ್ವೆ ನಂಬರ್ 336ರಲ್ಲಿ ದಾಖಲೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬೈಂದೂರು ತಾಲೂಕಿನ ಪ್ರೌಢಶಾಲಾ ವಿಭಾಗದಲ್ಲಿ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಶಿಕ್ಷಕ ರವೀಂದ್ರ ಪಿ. ಬೈಂದೂರು ಆಯ್ಕೆಯಾಗಿದ್ದಾರೆ. ಹಿಂದಿ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಅವರು ಈತನಕ ವಿದ್ಯಾರ್ಥಿಗಳ ಸುಲಭ ಕಲಿಕೆಗಾಗಿ ಐದು ವ್ಯಾಕರಣ ಸಂಬಂಧಿ ಪುಸ್ತಕಗಳನ್ನು ಬರೆದು ಪ್ರಕಟಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವ ಅವರು ಈವರೆಗೆ ಭಕ್ತಿಗೀತೆ, ಭಾವಗೀತೆ, ಪರಿಸರ ಸಂಬಂಧಿತ ಗೀತೆಗಳನ್ನು ರಚಿಸಿ ಧ್ವನಿ ಸುರುಳಿಗಳನ್ನು ಬಿಡುಗಡೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಕುಂದಾಪುರ ಪುರಸಭೆಯ ಸದಸ್ಯ ಮೋಹನ್ ದಾಸ್ ಶೆಣೈ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಸತೀಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕುಂದಾಪುರ ವಲಯದ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ. ಕುಂದಾಪುರ ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಚಂದ್ರ ಶೆ,ಟ್ಟಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ದತ್ತಾತ್ರೇಯ ನಾಯಕ್, ಕಾಲೇಜಿನ ಉಪನ್ಯಾಸಕರಾದ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು, ಸಂಸ್ಥೆಯ ಉಪ ಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಕಾಶ್ಚಂದ್ರ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯ ಕುಮಾರ್ ಎಂ.ಪಿ ಅವರು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೈಂದೂರು ಮಯ್ಯಾಡಿಯವರಾದ ಉದಯ ಕುಮಾರ್ ಅವರು ನ್ಯೂ ಇಂಗ್ಲಿಷ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗಣಿತ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಆರಂಭಿಸಿ ನಂತರ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದರು. 2009ರಲ್ಲಿ ಸರಕಾರಿ ಸೇವೆಗೆ ಸೇರಿ ಸರಕಾರಿ ಪದವಿ ಪೂರ್ವ ಕಾಲೇಜು ಮುಂಡುಗೋಡುವಿನಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಬೈಂದೂರು ಸ.ಪ.ಪೂ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಎಮ್.ಪಿ.ನಾಗಪ್ಪ ಶೇರುಗಾರ್ ಹಾಗೂ ಕಮಲ ಇವರ ಪುತ್ರರಾದ ಉದಯ ಕುಮಾರ್ ಅವರು ಪ್ರಾಥಮಿಕ ಶಿಕ್ಷಣ ವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿ.ಪ್ರಾ ಶಾಲೆ ಮಯ್ಯಾಡಿಯಲ್ಲಿ ಪೂರೈಸಿ, ಫ್ರೌಡ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಹಾಗೂ ಸರಕಾರಿ…
ಉದ್ಯಮಿ ಯು. ಬಿ ಶೆಟ್ಟಿ ಅವರೊಂದಿಗೆ ಕುಂದಾಪ್ರ ಡಾಟ್ ಕಾಂ ಮಾತುಕತೆ ► ಸಮಾಜದ ಕೆಲಸ ಮಾಡಲು ಜನಪ್ರತಿನಿಧಿಯೇ ಆಗಬೇಕೆಂದಿಲ್ಲ ► ಶ್ರದ್ಧೆ, ನಿಷ್ಠೆಯಿಂದ ಯಾವುದೇ ಕೆಲಸ ಮಾಡಿದರೂ ಗೆಲುವಿದೆ. ► ಹಸಿದವರಿಗೆ ಸಹಾಯ ಮಾಡಿದರೆ ಸುಖ ನಿದ್ರೆ ► ನಾವೆಲ್ಲೇ ಇದ್ದರೂ ಹುಟ್ಟೂರೇ ಸ್ವರ್ಗ ► ಶಿಸ್ತು ಹಾಗೂ ಸಮಯಪ್ರಜ್ಞೆ ಬದುಕಿನಲ್ಲಿ ಎತ್ತರಕ್ಕೇರಲು ಸಹಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂರಾರು ದೈವ ದೇವರುಗಳಿಗೆ ಮೂರ್ತರೂಪ ನೀಡಿದ ಹಿರಿಯ ಶಿಲ್ಪಿ ಉಪ್ಪುಂದದ ರತ್ನಾಕರ ಎಸ್. ಗುಡಿಗಾರ್ ಅವರು ಅವರಿಗೆ 2021ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಉಪ್ಪುಂದ ನ್ಯೂ ಜನತಾ ಕಾಲೋನಿ ನಿವಾಸಿಯಾಗಿರುವ ರತ್ನಾಕರ ಗುಡಿಗಾರ್ ಅವರು ಕಳೆದ 60 ವರ್ಷಗಳಿಂದ ವಂಶಪಾರಂಪರ್ಯವಾಗಿ ಬಂದ ಮರದಿಂದ ದೇವರ ಮೂರ್ತಿ ಕೆತ್ತನೆ ಕಾಯಕವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ತಮ್ಮ 84 ವರ್ಷದ ವಯಸ್ಸಿನಲ್ಲಿಯೂ ಸೇವಾ ಕಾರ್ಯವನ್ನು ಮುಂದುವರಿಸಿರುವ ಗುಡಿಗಾರರು, ವರ್ಷಕ್ಕೆ 150ಕ್ಕೂ ಹೆಚ್ಚು ದೇವರ ಮೂರ್ತಿ ಕೆತ್ತನೆ ಮಾಡುತ್ತಿದ್ದಾರೆ. ದೆಹಲಿ, ಭೂಪಾಲ್, ಚೆನೈ ಹಾಗೂ ರಾಜ್ಯದ ವಿವಿಧೆಡೆ ಇವರ ಕೆತ್ತನೆಯ ಮೂರ್ತಿಗಳು ಪೂಜಿಸಲ್ಪಡುತ್ತಿದೆ. ಉಡುಪಿ ಜಿಲ್ಲೆಯ ನೂರಾರು ದೈವಸ್ಥಾನಗಳ ದೇವರ ಮೂರ್ತಿಯನ್ನು ಕೆತ್ತನೆ ಮಾಡಿ ಪ್ರಸಿದ್ಧಿ ಪಡೆದಿದ್ದಾರೆ. ಒಂದು ಅಡಿಯಿಂದ 28 ಅಡಿಯ ತನಕದ ಮೂರ್ತಿಯನ್ನು ಅವರು ಕೆತ್ತನೆ ಮಾಡಿದ್ದಾರೆ. ರತ್ನಾಕರ ಗುಡಿಗಾರ ಸೇವೆಯನ್ನು ಗುರುತಿಸಿ ಸಾಂಪ್ರದಾಯಿಕ ಶಿಲ್ಪ ವಿಭಾಗದಲ್ಲಿ ಗೌವರ ಪ್ರಶಸ್ತಿಗೆ ಆಯ್ಕೆಮಾಡಲಾಗಿದ್ದು, ಪ್ರಶಸ್ತಿಯು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖ್ಯಾತ ಉದ್ಯಮಿ, ಸಂಘಟಕ, ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ (70 ವ) ತೀವ್ರ ಹೃದಯಾಘಾತದಿಂದ ಪುಣೆಯಲ್ಲಿ ಅಸುನೀಗಿದ್ದಾರೆ. ಕಳೆದ 2 ದಿನಗಳ ಹಿಂದೆ ಹೃದಯ ಸಂಬಂಧಿ ನೋವು ಕಾಣಿಸಿಕೊಂಡಿದ್ದು, ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಿಮಾಲಯ ಬೆವರಿಚನ್ ಗೋವಾದ ಆಡಳಿತ ನಿರ್ದೇಶಕರಾಗಿದ್ದ ಅವರು ಬಿ.ಕೆ ಬಿನ್ಜಿಲ್ ಹಾಗೂ ಅಕ್ಷಯ್ ಆರ್ಗ್ಯಾನಿಕ್ ಪ್ರೈ. ಲಿ ಸಂಸ್ಥೆಯನ್ನು ಆರಂಭಿಸಿ ನೂರಾರು ಜನರಿಗೆ ಉದ್ಯೋಗದಾತರಾಗಿದ್ದರು. ಪುಣೆಯನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು ಅಲ್ಲಿಯೇ ನೆಲೆಸಿದ್ದರು. ಪುಣೆ ಬಂಟರ ಸಂಘದ ಅಧ್ಯಕ್ಷರಾಗಿ, ಪುಣೆಯ ಬೋಟ್ ಕ್ಲಬ್ಬಿನ ಅಧ್ಯಕ್ಷರಾಗಿ, ಪುಣೆ ನಗರದ ಕಾಂಗ್ರೆಸ್ ಕಾರ್ಯರ್ಕಾರಿ ಸಮಿತಿ ಸದಸ್ಯರಾಗಿ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಇತ್ತಿಚಿಗೆ ಮೊಳಹಳ್ಳಿಯಲ್ಲಿ ಹುಟ್ಟೂರ ಸನ್ಮಾನ ಜರುಗಿತ್ತು. ಮೃತರು ಪತ್ನಿ ಶಶಿ, ಪುತ್ರರಾದ ಅಕ್ಷಯ, ಆದರ್ಶ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಡ್ತರೆ ಸಸಿಹಿತ್ಲು ಮನೆ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಮುತ್ತಯ್ಯ ಪೂಜಾರಿ (70) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಪಾರ ದೈವಭಕ್ತರಾಗಿದ್ದ ಮುತ್ತಯ್ಯ ಪೂಜಾರಿ ಅವರು, ಯಡ್ತರೆ ಬಿಲ್ಲವ ಸಂಘದ ಸ್ಥಾಪಕಾಧ್ಯಕ್ಷರಾಗಿ, ಯಡ್ತರೆ ತೆಂಗು ಬಾಳೆ ಸೊಸೈಟಿಯ ಮಾಜಿ ಅಧ್ಯಕ್ಷರಾಗಿ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಕಾಂಗ್ರೆಸ್ ಮುಖಂಡ ಸುಬ್ರಹ್ಮಣ್ಯ ಪೂಜಾರಿ ಸೇರಿದಂತೆ ನಾಲ್ವರು ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯಡಮೊಗ್ಗೆಯ ಬಿಜೆಪಿ ಕಾರ್ಯಕರ್ತ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಲ್ಲೋರ್ವರಾದ ಬಿಜೆಪಿ ಮುಖಂಡ ಬಾಲಚಂದ್ರ ಭಟ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಬಾಲಚಂದ್ರ ಭಟ್ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಪೊಲೀಸರು ಚಾರ್ಜ್ ಶೀಟ್ ಹಾಕಿದ್ದರು. ಉಚ್ಛ ನ್ಯಾಯಾಲಯದಲ್ಲಿಯೂ ಅವರಿಗೆ ಜಾಮೀನು ದೊರಕಿರಲಿಲ್ಲ. ಹದಿನಾಲ್ಕು ತಿಂಗಳ ಬಳಿಕ ಸುಪ್ರೀಂ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರಾಣೇಶ್ ಯಡಿಯಾಳ್ ಹಾಗೂ ಇತರರಿಗೆ ಇನ್ನೂ ಜೈಲಿನಲ್ಲಿದ್ದಾರೆ. ಆರೋಪಿ ಬಾಲಚಂದ್ರ ಭಟ್ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ವಕೀಲ ದೇವದತ್ತ್ ಕಾಮತ್ ವಾದಿಸಿದ್ದರು. ಇದನ್ನೂ ಓದಿ:► ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ತನಿಕೆ ಸಿಬಿಐಗೆ ವಹಿಸಲಿ: ಡಿ.ಕೆ ಶಿವಕುಮಾರ್ – https://kundapraa.com/?p=49788 .► ಯಡಮೊಗೆ ಕೊಲೆ ಪ್ರಕರಣ: ಒಟ್ಟು 6 ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ – https://kundapraa.com/?p=49133 .► ಯಡಮೊಗೆಯ ಉದಯ ಗಾಣಿಗರ ಕುಟುಂಬಕ್ಕೆ ಬೈಂದೂರು ಮಂಡಲ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಕುಂದಾಪುರ ಪುರಸಭಾ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಕುಂದಾಪುರ ಒಳಚರಂಡಿಯ ಅವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿ ನಿರ್ಲಕ್ಷ್ಯ, ಬೀದಿ ನಾಯಿ ಕಾಟ ತಪ್ಪಿಸಲು ಸಂತಾನ ಹರಣ ಚಿಕಿತ್ಸೆ ಹಾಗೂ ಪುರಸಭೆ ಸುವರ್ಣ ಮಹೋತ್ಸವ ಆಚರಿಸುವ ಬಗ್ಗೆ ಪ್ರಮುಖ ಚರ್ಚೆಯಾದವು. ಪುರಸಭೆಯ ಹಿರಿಯ ಸದಸ್ಯ ಮೋಹನದಾಸ ಶೆಣೈ ಮಾತನಾಡಿ ಸಮಗ್ರ ಒಳಚರಂಡಿ ಯೋಜನೆ, ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಗಾಗಿ ಅಗೆಯಲಾದ ರಸ್ತೆಗಳು ಪ್ರಸ್ತುತ ಯಾವ ಸ್ಥಿತಿಗೆ ತಲುಪಿವೆ ಎಂಬುದನ್ನು ಖಾತ್ರಿ ಪಡಿಸಲು ಪುರಸಭೆ ಅಧಿಕಾರಿಗಳು ಕಛೇರಿ ಬಿಟ್ಟು ಒಮ್ಮೆ ನಗರ ಸುತ್ತಾಡಿ ಬನ್ನಿ. ಜನರು ಅನುಭವಿಸುತ್ತಿರುವ ಗೋಳು ಏನೆಂದು ಆಗ ಅರ್ಥವಾಗುತ್ತದೆ. ಪ್ರತಿಯೊಂದು ರಸ್ತೆಗಳು ಹದಗೆಟ್ಟಿವೆ. ವಿಪರೀತ ಮಳೆಯ ಕಾರಣಕ್ಕೆ ಹದಗೆಟ್ಟಿವೆ ಎಂಬುದರಲ್ಲಿ ಅರ್ಥವಿಲ್ಲ. ಮಳೆಗೆ ಮೊದಲೆ ಕೆಟ್ಟು ಹೋಗಿತ್ತು. ಈಗ ಮತ್ತಷ್ಟು ಹದಗೆಟ್ಟು ಹೋಗಿದೆ ಎಂದು ಹೇಳಿದರು. ಪುರಸಭೆ ಅಧ್ಯಕ್ಷೆ ವೀಣಾ ಬಿ. ಮೆಂಡನ್ ಪ್ರತಿಕ್ರಿಯಿಸಿ ಈಗಾಗಲೇ ವಾರ್ಡ್ ಸದಸ್ಯರ ಕೋರಿಗೆ…
