ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಗೋಸ್ಟ 19 ರಿಂದ 23 ರ ತನಕ ಥೈಲ್ಯಾಂಡಿನಲ್ಲಿ ನಡೆಯುವ ಕರಾಟೆ ಡೂ ಚಾಂಪಿಯನ್ ಶಿಪ್’ಗೆ ಭಂರ್ಡಾಕಾರ್ಸ ಕಾಲೇಜಿನ ಕರಾಟೆ ಪಟುಗಳಾದ ಚೇತನ ಗಾಣಿಗ, ಪವನ ಪೂಜಾರಿ, ಭರತ ದೇವಾಡಿಗ, ಅಜಯ ದೇವಾಡಿಗ ಅವರಿಗೆ ಉಡುಪಿಯ ವೆಂಟನ ಫೌಂಡೇಶನ್ ವತಿಯಿಂದ ಸಹಾಯಧನ ನೀಡುವ ಕಾರ್ಯಕ್ರಮ ನಡೆಯಿತು. ವೆಂಟನ ಫೌಂಡೇಶನ್ ವತಿಯಿಂದ ಸದಸ್ಯ ಷಣ್ಮುಖರಾಜ ನಾಲ್ಕು ಕ್ರೀಡಾಪಟುಗಳಿಗೆ ತಲಾ ಐವತ್ತೂ ಸಾವಿರ ರೂಪಾಯಿಯ ಚೆಕ್ ಹಸ್ತಾಂತರಿಸಿದರು. ಬಳಿಕ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೆಂಟನ ಫೌಂಡೇಶನ್ ಸಹಾಯಹಸ್ತ ವತಿಯಿಂದ ನೀಡಲಾಗಿದೆ. ಈ ಭಾಗದಿಂದ ಅಂತರಾಷ್ಠೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗುವುದು ಹೆಮ್ಮೆಯ ವಿಷಯ. ಇದರ ಹಿಂದೆ ಅವರ ಹಲವಾರು ವರ್ಷದ ಪರಿಶ್ರಮವಿದೆ. ಇವರ ಭಾಗವಹಿಸುವಿಕೆ ಇತರರಿಗೂ ಪ್ರೇರೆಪಣೆಯಾಗಲಿ ಎಂದರು. ಕಾಲೇಜಿನ ಹಳೆ ವಿದ್ಯಾರ್ಥಿ ಕೆ.ಪಿ. ಭಟ್, ವಿಶ್ವಸ್ಥ ಮಂಡಳಿಯ ಸದಸ್ಯರಾದ ಪ್ರಕಾಶ ಸೋನ್ಸ್, ದೇವದಾಸ ಕಾಮತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ, ವೇದಿಕೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ06: ಜುಲೈ 20ರಂದು ಮೃತಪಟ್ಟಿದ್ದ ಉಪ್ಪುಂದ ಖಾಸಗಿ ಶಾಲೆಯೊಂದರ ಎರಡನೇ ತರಗತಿ ವಿದ್ಯಾರ್ಥಿನಿ ಸಮನ್ವಿಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಕೆಯ ಸಾವಿನ ನೈಜ ಕಾರಣ ಬಯಲಾಗಿದೆ. ಹೃದಯಾಘಾತದಿಂದ ಬಾಲಕಿ ಮೃತಪಟ್ಟಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಿಜೂರು ಗ್ರಾಮದ ಗಂಟಿಹೊಳೆ ಕೊಚ್ಲುಗದ್ದೆ ನಿವಾಸಿ ಸುಪ್ರಿತಾ ಪೂಜಾರಿ ಎಂಬವರ ಪುತ್ರಿ ಸಮನ್ವಿ, ಜು.20ರಂದು ಮನೆಯಿಂದ ತಾಯಿಯೊಂದಿಗೆ ಶಾಲಾ ಬಸ್ ಏರಲು ತೆರಳುತ್ತಿದ್ದ ಸಂದರ್ಭ ಕುಸಿದು ಬಿದ್ದಿದ್ದಳು. ತಕ್ಷಣ ಬೈಂದೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ತಿಳಿಸಿದ್ದರು. ಚಾಕಲೇಟ್ ಕವರ್ ಸಹಿತ ತಿಂದು ಗಂಟಲ್ಲಿ ಸಿಕ್ಕಿಕೊಂಡು ಉಸಿರಾಟದ ಸಮಸ್ಯೆಯಿಂದ ಸಮನ್ವಿ ಮೃತಪಟ್ಟಿದ್ದಾಳೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿತ್ತು. ಈ ಬಗ್ಗೆ ಕುಂದಾಪ್ರ ಡಾಟ್ ಕಾಂ ನಿಖರವಾದ ವರದಿ ಪ್ರಕಟಿಸಿ, ಮರಣೋತ್ತರ ಪರಿಕ್ಷೇಯ ವರದಿ ಬಳಿಕವಷ್ಟೇ ಸತ್ಯ ತಿಳಿಯಲಿದೆ ಎಂದು ತಿಳಿಸಿತ್ತು. ವೈದಕೀಯ ವರದಿ ನಂತರ ಸಮನ್ವಿ ಸಾವಿಗೆ ನಿಜವಾದ ಕಾರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪರೀಕ್ಷಾ ಫಲಿತಾಂಶ ಅಂಕಪಟ್ಟಿ, ಮೌಲ್ಯಮಾಪನ ಸೇರಿದಂತೆ ವಿವಿಧ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಕುಂದಾಪುರ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಭಂಡಾರ್ಕಾರ್ಸ್ ಕಾಲೇ ಜು ಎಬಿವಿಪಿ ಮುಖಂಡ ವಿತೇಶ್ ಶೆಟ್ಟಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಪದವಿ ಶಿಕ್ಷಣದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ದೊರೆಯದೇ ಕ್ಯಾಂಪಸ್ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಉದ್ಯೋಗ ವಂಚಿತರಾಗುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ನಾಲ್ಕೈದು ದಿನಗಳಲ್ಲಿ ಅಂಕಪಟ್ಟಿ ಒದಗಿಸಿಕೊಡದಿದ್ದರೆ ಮಂಗಳೂರು ವಿವಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಪ್ರತಿಷ್ಠಿತ ಕಂಪನಿಗಳು ನಡೆಸಿದ ಕ್ಯಾಂಪಸ್ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಕಪಟ್ಟಿಸಲ್ಲಿಸಲಾಗದೆ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಆಗಸ್ಟ್ ೩ ರಂದು ಪ್ರಕಟವಾದ ತೃತೀಯ ಹಾಗೂ ಪಂಚಮ ಸೆಮಿಸ್ಟರ್ ಫಲಿತಾಂಶದಲ್ಲಿ ಸಾಕಷ್ಟು ಲೋಪದೋಷಗಳಿದೆ. ಪ್ರಥಮ ಸೆಮಿಸ್ಟರ್ ಮೌಲ್ಯಮಾಪನ ಆಮೆಗತಿಯಲ್ಲಿ ಸಾಗುತ್ತಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂಘ ಸಂಸ್ಥೆಗಳ ಸಹಭಾಗಿತ್ವದಿಂದ ಸ್ಥಳೀಯ ಸಂಸ್ಥೆಗಳು ಜನಸಾಮಾನ್ಯರಿಗೆ ಹೆಚ್ಚಿನ ಮೂಲ ಅವಶ್ಯಕತೆಯನ್ನು ಒದಗಿಸಲು ಸಾಧ್ಯವಾಗುತ್ತದೆ. ದೀರ್ಘ ಕಾಲದಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿಪಡಿಸಲು ಮುಕ್ತಿಧಾಮ ಟ್ರಸ್ಟ್ ರಿ. ಪಟ್ಟಣ ಪಂಚಾಯತ್ ಜತೆ ಕೈ ಜೋಡಿಸಿ ಶ್ರಮಿಸಿದ ಕಾರ್ಯ ಶ್ಲಾಘನೀಯ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ ಕುಮಾರ್ ಹೇಳಿದರು. ಅವರು ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಪಟ್ಟಣ ಪಂಚಾಯತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಿಂದ ತಲಾ ಒಂದೊಂದು ಸಿಲಿಕಾನ್ ಚೇಂಬರ್ ಅಳವಡಿಸಿ ನವೀಕರಿಸಿದ ರುದ್ರಭೂಮಿಯ ಲೋಕಾರ್ಪಣೆ ಮತ್ತು ನಿರ್ವಹಣೆಯ ಹೊಣೆ ಹೊತ್ತಿರುವ ಮುಕ್ತಿಧಾಮ ಟ್ರಸ್ಟಿಗೆ ಕೀ ಹಸ್ತಾಂತರಣ ಸಮಾರಂಭದಲ್ಲಿ ಮಾತನಾಡಿದರು. ಬೈಂದೂರು ಬಾಜಪ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ರುದ್ರಭೂಮಿ ಜನರ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಒದಗಿಸಲಾಗುವುದು. ಈಗಾಗಲೇ ಬೈಂದೂರಿನಲ್ಲಿ ಬಸ್ ತಂಗುದಾಣ, ಇ ಶೌಚಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಮುಕ್ತಿಧಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2021-22 ಸಾಲಿನ ವಾರ್ಷಿಕ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಎಂ. ವಿನಾಯಕ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಕ್ಷ್ಮೀ ನಾರಾಯಣ, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತ, ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಇದೇ ಸಂದರ್ಭ ವೇ.ಮೂ. ಚೆನ್ನಕೇಶವ ಗಾಯತ್ರಿಭಟ್ಟ ಆನಗಳ್ಳಿ ಅವರ ನೇತೃತ್ವದಲ್ಲಿ ಲಕ್ಷ್ಮೀ ಹೃದಯ ಹೋಮ ನೆರವೇರಿತು. ಬಳಿಕ ಸಾರ್ವಜನಿಕರಿಗೆ ಮಹಾ ಅನ್ನಸಂತರ್ಪಣೆ ಜರುಗಿತು. ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಶಂಕರ ಮೊಗವೀರ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ, ಅಣ್ಣಪ್ಪ ಪೂಜಾರಿ (ಪಾತ್ರಿ) ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.05: ಪ್ರಾಕೃತಿಕ ವಿಕೋಪದಿಂದಾಗಿ ಮೀನುಗಾರರರು ಸಾಕಷ್ಟು ನಷ್ಟ ಅನುಭವಿಸಿದ್ದರೂ ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಮೀನುಗಾರರ ಸಂಕಷ್ಟ ತಿಳಿಯುವ ಕೆಲಸ ಮಾಡಿಲ್ಲ. ಸರಕಾರ, ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರತಿಭಾರಿಯೂ ಮೀನುಗಾರರನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ನಮ್ಮ ಬದುಕಿಗೆ ಅಷ್ಟೂ ಕೂಡ ಕಿಮ್ಮತ್ತಿಲ್ಲವೇ ಎಂದು ಮೀನುಗಾರ ಮುಖಂಡ ಎಸ್. ಮದನಕುಮಾರ್ ಉಪ್ಪುಂದ ಪ್ರಶ್ನಿಸಿದ್ದಾರೆ. ಅಗಸ್ಟ್ 2ರಂದು ಶಿರೂರು ಭಾಗದಲ್ಲಿ ನಡೆದ ಜಲಸ್ಪೋಟದಂತಹ ಪ್ರಾಕೃತಿಕ ವಿಕೋಪದಿಂದಾಗಿ ಮೀನುಗಾರರು ಸಾಕಷ್ಟು ನಷ್ಟ ಅನುಭವಿದ ಸಂದರ್ಭ ಅವರಿಗೆ ಸ್ಪಂದಿಸದೇ ಮೀನುಗಾರ ಸಮುದಾಯವನ್ನು ಕಡೆಗಣಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸರಕಾರದ ನಡೆಯನ್ನು ಖಂಡಿಸಿ ಉಪ್ಪುಂದ ಭಾಗದ ಮೀನುಗಾರರು ಶುಕ್ರವಾರ ಬೈಂದೂರು ತಾಲೂಕು ಕಛೇರಿ ಮುಂಭಾಗದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಡಲ ಮಕ್ಕಳನ್ನು ರೋಡಿಗೆ ಬರಲು ಬಿಡಬೇಡಿ. ನಾವು ರೋಡಿಗಿಳಿದಾಗ ಏನೇನು ಆಗಿದೆ ಎಂದು ಚರಿತ್ರೆಯನ್ನು ತಿರುಗಿ ನೋಡಿ. ನಮ್ಮ ಹಕ್ಕು ಹಾಗೂ ಬೇಡಿಕೆಗಳಿಗಾಗಿ ಪದೇ ರೋಡಿಗೆ ಬಂದು ನಿಲ್ಲುವ ಸನ್ನಿವೇಶ ಸೃಷ್ಠಿಯಾಗೋದು ಬೇಡ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನನ-ಮರಣ ನೋಂದಣಿ ಪ್ರಕರಣಗಳನ್ನು ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವ ರಾಜ್ಯ ಸರಕಾರದ ಅಧಿಸೂಚನೆಯ ವಿರುದ್ಧ ಗುರುವಾರ ಕುಂದಾಪುರ ಬಾರ್ ಅಸೋಸಿಯೇಷನ್ ಎದುರು ವಕೀಲರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ಮಾತನಾಡಿ, ಜನನ-ಮರಣ ನೋಂದಣಿ ಪ್ರಕರಣಗಳನ್ನು ಎಸಿ ಕೋರ್ಟಿಗೆ ವರ್ಗಾವಣೆ ಮಾಡಿದರೆ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆಯಾಗುತ್ತದೆ ಮತ್ತು ಈ ಪ್ರಕ್ರಿಯೆಯೇ ಕಾನೂನು ಬಾಹಿರವಾಗಿದೆ. ಎಸಿ ಕೋರ್ಟಿನಲ್ಲಿ ಈಗಾಗಲೇ ಇರುವ ಪ್ರಕರಣಗಳು ಮತ್ತಷ್ಟು ವಿಳಂಬವಾಗಲಿದೆ. ಸರಕಾರ ಈ ಬಗ್ಗೆ ಗಮನಹರಿಸಿ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ಹಿರಿಯ ಕಿರಿಯ ಮಹಿಳಾ ವಕೀಲರು ಪಾಲ್ಗೊಂಡಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಬೀನಾ ಜೊಸೆಫ್, ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಮತ್ತು ಜತೆ ಕಾರ್ಯದರ್ಶಿ ರಿತೇಶ್ ಬಿ. ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ತಂಡವನ್ನು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡದ ನಾಯಕಿ ಅಂಶು ಖಾರ್ವಿ ಉತ್ತಮ ಆಟಗಾರ್ತಿ ಹಾಗೂ ಸಿಂಚನಾ ಖಾರ್ವಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ತರಬೇತಿ ನೀಡಿದರು. ಸಹಶಿಕ್ಷಕಿ ಸರಿತಾ ಕೆ. ಎಸ್. ತಂಡದ ವ್ಯವಸ್ಥಾಪಕರಾಗಿ ಭಾಗವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮತಿ ಎಂ. ಹಾಗೂ ಶಿಕ್ಷಕ ವೃಂದ ಹಾಗೂ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಪೋಷಕರು ವಿಜೇತ ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಮೃದ್ಧ ಯುವಶಕ್ತಿಯನ್ನು ಹೊಂದಿರುವ ನಮ್ಮ ದೇಶದಲ್ಲಿ ಯುವ ಜನರು ಮಾದಕ ವಸ್ತುಗಳಿಗೆ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಸುಮಾರು 18-24 ವರ್ಷದೊಳಗಿನ ಯುವಕರು ಮದ್ಯಪಾನ ಸೇರಿದಂತೆ ಗಾಂಜಾ, ಅಪೀಮು ಮುಂತಾದ ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಜೀವನವನ್ನೇ ಬಲಿ ಕೊಡುತ್ತಿದ್ದಾರೆ. ಕ್ಯಾನ್ಸರ್ ಮತ್ತಿತರ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಇಡೀ ಕುಟುಂಬ ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಆದ್ದರಿಂದ ಯುವ ಜನತೆ ದಾರಿ ತಪ್ಪದಂತೆ, ದುಶ್ಚಟಗಳಿಗೆ ಬಲಿಯಾಗದಂತೆ ಸನ್ಮಾರ್ಗದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಬೇಕಾಗಿದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ…
