ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.2: ಭಾರಿ ಮಳೆಯ ಹಿನ್ನೆಲೆಯಲ್ಲಿ ಇಂದು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ:► ಭಾರಿ ಮಳೆಗೆ ತತ್ತರಿಸಿದ ಶಿರೂರು ಗ್ರಾಮ. ಬೈಂದೂರು ತಾಲೂಕಿನ ಹಲವೆಡೆ ಜಲಾವೃತ – https://kundapraa.com/?p=61097 .
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.2: ಸೋಮವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಪ್ರದೇಶಗಳು ಜಲಾವೃತವಾಗಿದೆ. ಶಿರೂರು ಗ್ರಾಮದ ಕೆಳಪೇಟೆ, ಕರಾವಳಿ ಭಾಗದಲ್ಲಿ ಸಂಪೂರ್ಣ ನೀರು ತುಂಬಿಕೊಂಡಿದ್ದು, ಕೆಲವು ಮನೆಗಳಿಗೆ ನೀರು ನುಗ್ಗಿದೆ. ಕೆಳಪೇಟೆಯ ಹೊಳೆ ತುಂಬಿ ಹರಿಯುತ್ತಿದ್ದು ಹತ್ತಿರದ ಮನೆಗಳಿಗೂ ನೀರು ನುಗ್ಗಿದೆ. ತೇಲಿ ಹೋದ ದೋಣಿ, ಜಾನುವಾರು:ಅನಿರೀಕ್ಷಿತ ನೆರೆಯಿಂದಾಗಿ ಜಾನುವಾರುಗಳು ನೀರಿನಲ್ಲಿ ತೇಲಿಹೋದ ಘಟನೆಯೂ ನಡೆದಿದೆ. ಕರಾವಳಿ ಭಾಗದಲ್ಲಿ ನಿಲ್ಲಿಸಲಾಗಿದ್ದ ದೋಣಿಗಳು ಸಮುದ್ರಪಾಲಾಗಿರುವ ಘಟನೆಯೂ ನಡೆದಿದೆ. ಮನೆಯ ಸಮೀಪ ನಿಲ್ಲಿಸಿದ್ದ ಕಾರೊಂದು ನೆರೆಯಿಂದಾಗಿ ಮುಳುಗಿಹೋಗಿದೆ. ರಕ್ಷಣಾ ಕಾರ್ಯಚರಣೆ:ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಿರೂರಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಸ್ಥಳೀಯರು ನೆರವಾಗುತ್ತಿದ್ದಾರೆ. ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದಾರೆ. ಬೈಂದೂರು ಕೊಲ್ಲೂರು ರಸ್ತೆ ಸಂಚಾರ ಅಸ್ತವ್ಯಸ್ಥ:ನಿರಂತರ ಮಳೆಯಿಂದಾಗಿ ಬೈಂದೂರು ಕೊಲ್ಲೂರು ರಸ್ತೆಯ ಮಯ್ಯಾಡಿ-ತಗ್ಗರ್ಸೆ ಭಾಗದ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದ್ದು, ರಸ್ತೆಯ ಮೆಲೆಯೇ ರಭಸವಾಗಿ ನೀರು ಹರಿಯುತ್ತಿದೆ. ದೊಡ್ಡ ವಾಹನ ಹೊರತುಪಡಿಸಿ ಕಾರು, ರಿಕ್ಷಾ, ಬೈಕ್‌ಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ಮುಂದಿನ 5 ದಿನಗಳ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಗಸ್ಟ್ 2ರಿಂದ ಅಗಸ್ಟ್ 6ರ ತನಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಸಂದರ್ಭ ಮೀನುಗಾರರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ರಾಜ್ಯಸಭೆಯ ನೂತನ ಸದಸ್ಯರಾದ ಧರ್ಮಸ್ಥಳದ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕುಂದಾಪುರ, ಬೈಂದೂರು ವಲಯದ ವತಿಯಿಂದ ಗೌರವಿಸಲಾಯಿತು. ಛಾಯಾಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಡೆಯವರು ಆಧುನಿಕ ತಂತ್ರಜ್ಞಾನದಿಂದ ಛಾಯಾಗ್ರಾಹಕರು ಸವಾಲಿಗೊಳಗಾಗಿದ್ದು ಆ ಸವಾಲನ್ನು ಮೀರಿ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಎಲ್ಲಾ ಛಾಯಾಗ್ರಾಹಕರಿಗೂ ಭಗವಂತನ ಅನುಗ್ರಹ ಸದಾಕಾಲವೂ ಇರಲಿ ಎಂದರು. ಈ ಸಂದರ್ಭ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾದ ಆನಂದ ಬಂಟ್ವಾಳ್, ಕುಂದಾಪುರ-ಬೈಂದೂರು ವಲಯ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ, ಸಲಹಾ ಸಮಿತಿ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ, ಪ್ರಧಾನ ಕಾರ್ಯದರ್ಶಿ ಸುರೇಶ್ ಜಮದಗ್ನಿ, ಅಮೃತ್ ಬೀಜಾಡಿ, ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂಭಾಸಿ ಕೊರವಡಿ ಸಮೀಪ ನಡೆದಿದೆ. ಮಣೂರು ಪಡುಕೆರೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಅನನ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸೋಮವಾರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಕ್ಕು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ತೆಕ್ಕಟ್ಟೆ ಫ್ರೆಂಡ್ಸ್ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿಯೇ ವಿದ್ಯಾರ್ಥಿನಿ ಅಸುನೀಗಿದ್ದಳು ಎಂದು ಎನ್ನಲಾಗಿದೆ. ವಿದ್ಯಾರ್ಥಿನಿಯ ತಂದೆ-ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದು, ಕೊರವಡಿಯಲ್ಲಿ ಅಜ್ಜಿ ಹಾಗೂ ಚಿಕ್ಕಮ್ಮನ ಜೊತೆ ವಿದ್ಯಾರ್ಥಿನಿ ವಾಸವಾಗಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಂದಾಪುರ ಪೊಲೀಸ್ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗ್ರಾಮೀಣ ಭಾಷೆಗಳ ಬಗ್ಗೆ ಯಾರಿಗೂ ಕೀಳರಿಮೆ ಇರಬಾರದು ಅದರ ಶ್ರೇಷ್ಠತೆ ಅಳಯಲು ಸಾಧ್ಯವಿಲ್ಲ ಎಂದು ಗ್ರಾಮ್ಯ ಭಾಷೆಯ ಸೋಗಡುಗಾರ ಎಂ ಜಯರಾಮ ಶೆಟ್ಟಿ ಹೇಳಿದ್ದಾರೆ ಪಂಚವರ್ಣ ಯುವಕ ಮಂಡಲ ಕೋಟ, ಪಂಚವರ್ಣ ಮಹಿಳಾ ಮಂಡಲ ಕೋಟ ಆಶ್ರಯದಲ್ಲಿ ಹಂದಟ್ಟು- ದಾನಗುಂದು ಗೆಳೆಯರ ಬಳಗ ಸಭಾಭವನದಲ್ಲಿ ಆಸಾಡಿ ವಡ್ರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಕುಂದಗನ್ನಡಕ್ಕೆ ವಿಶ್ವಮಾನ್ಯತೆ ಎಲ್ಲೆಡೆ ದೊರಕುತ್ತಿದೆ ಅದೊಂದು ಬದುಕಿನ ಚಹರೆಯಾಗಿದೆ ಎಂದರಲ್ಲದೆ ಇದರ ಮಹತ್ವವನ್ನು ನಮ್ಮ ಹಿರಿಯರು ಮುಂದಿನ ಪೀಳಿಗೆಗೆ ಧಾರೆ ಎರೆಯಬೇಕು, ಅದೇ ರೀತಿಯಲ್ಲಿ ಆಷಾಢ ಮಾಸಕ್ಕೆ ವಿಶೇಷತೆ ಇದೆ, ಈ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳು ಆರೋಗ್ಯಕ್ಕೆ ಪೂರಕವಾಗಿದ್ದವು ಹಾಗೂ ಆಚರಣೆಯ ಹಿಂದೆ ನಂಬಿಕೆ ಇದೆ ಎಂದರು. ಆಧುನಿಕತೆಯ ಹೊಡೆತಕ್ಕೆ ಸಿಲುಕಿ ಕುಂದಗನ್ನಡ ಶಬ್ದ ಮರೆಯಾಗದಿರಲಿ ಎಂದರು ಹಾಗೂ ಕುಂದಾಪ್ರ ಕನ್ನಡ ದಿನಾಚರಣೆ ನಮ್ಮಆಚಾರ- ವಿಚಾರ ಬೆಳೆಸುವಲ್ಲಿ ಸಹಾಯಕವಾಗಿದ್ದು, ಇದು ನಿತ್ಯ ನಿರಂತರವಾಗಿ ನಡೆಯಲಿ ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಬಯೋಟೆಕ್ನಾಲಜಿ ವಿಭಾಗ ಹಾಗೂ ಮಂಗಳೂರಿನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಆಶ್ರಯದಲ್ಲಿ ಆಹಾರ ಮತ್ತು ಫಾರ್ಮಾಸ್ಯುಟಿಕಲ್ ಜೈವಿಕ ತಂತ್ರಜ್ಞಾನದ ಕುರಿತ ಅಂತರರಾಷ್ಟ್ರೀಯ ಮಟ್ಟದ ಕಾನ್ಫರೆನ್ಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಯನಾಡ್‌ನ ಡಾ. ಮೂಪೆನ್ಸ್ ಮೆಡಿಕಲ್ ಕಾಲೇಜಿನ ಫಾರ್ಮಾಕಾಲಜಿ ವಿಭಾಗದ ಸಹಪ್ರಾಧ್ಯಪಕ ಡಾ. ರವಿ ಮುಂಡುಗಾರು, ಸಮಸ್ಯೆಗಳನ್ನು ಮೂಲದಿಂದ ಅರಿತು ಅದಕ್ಕೆ ಪರಿಹಾರವನ್ನು ಹುಡುಕಬೇಕು. ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಡ್ರಗ್‌ಗಳ ಬಳಕೆಯನ್ನು ಅರಿತುಕೊಂಡು, ಔ?ಧೀಯ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಸಾಧಿಸಬೇಕೆಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯಪ್ರವೃತ್ತರಗಬೇಕು. ತಂತ್ರಜ್ಞಾನ ಹಳೆಯದಾಗಬಹುದು ಆದರೆ ದೃಢ ಸಂಕಲ್ಪದಿಂಧ ಛಲ ಬಿಡದೆ ಕೆಲಸ ಮಾಡಿದರೆ ನಮ್ಮ ಗುರಿಯನ್ನು ತಲುಪಬಹುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಳ್ವಾಸ್ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಪತ್ನಿ ನಾಗರತ್ನ ಶೆಟ್ಟಿ (80) ಭಾನುವಾರ ಸಂಜೆ ಬಸ್ರೂರಿನ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧಾರ್ಮಿಕ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಬಸ್ರೂರು ಹಾಗೂ ಕೊಲ್ಲೂರಿನ ಕೂಡುರಿನ ಪರಿಸರದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಮೃತರಿಗೆ ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರಿದ್ದಾರೆ ಅಂತ್ಯಕ್ರಿಯೆ:ಸೋಮವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಕೂಡುರು ಮನೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಬಸ್ರೂರಿನ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಜೂನ್ ತಿಂಗಳಿನಲ್ಲಿ ನಡೆದ ಕರ್ನಾಟಕ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ರಾಜ್ಯದ ಟಾಪ್ 9 ರ್ಯಾಂಕ್ ಗಳಲ್ಲಿ 2ನೇ ರ್ಯಾಂಕನ್ನು ಇಲ್ಲಿನ ವಿದ್ಯಾರ್ಥಿ ಮನೋಜ್ ಪಡೆದಿದ್ದು, ಬಿಎಸ್ಸಿ ಅಗ್ರಿಯಲ್ಲಿ 5ನೇ ರ್ಯಾಂಕ್, ಬಿಎನ್ವೈಎಸ್ಲ್ಲಿ 8ನೇ ರ್ಯಾಂಕ್, ಪಶು ವೈದ್ಯಕೀಯದಲ್ಲಿ 12ನೇ ರ್ಯಾಂಕ್, ಬಿ.ಫಾರ್ಮ್ ಹಾಗೂ ಡಿ.ಫಾರ್ಮಾದಲ್ಲಿ 22ನೇ ರ್ಯಾಂಕ್, ಇಂಜಿನಿಯರಿಂಗ್ನಲ್ಲಿ 77ನೇ ರ್ಯಾಂಕ್ ಗಳಿಸಿದ್ದಾರೆ. ಮೊದಲ 50 ರ್ಯಾಂಕ್ 11 ರ್ಯಾಂಕ್, ಮೊದಲ 100 ರಲ್ಲಿ 17 ರ್ಯಾಂಕ್ ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ 1966 ವಿದ್ಯರ್ಥಿಗಳಲ್ಲಿ 55 ವಿದ್ಯಾರ್ಥಿಗಳ 180ರಲ್ಲಿ 150ಕ್ಕಿಂತ ಅಧಿಕ ಅಂಕಗಳನ್ನು ಪಿಸಿಬಿ ಹಾಗೂ ಪಿಸಿಎಂ ವಿಷಯಗಳಲ್ಲಿ ಪಡೆದಿದ್ದಾರೆ. 1228 ವಿದ್ಯಾರ್ಥಿಗಳು 180ರಲ್ಲಿ 100ಕ್ಕೂ ಅಧಿಕ ಅಂಕ ಪಿಸಿಬಿ ವಿಷಯದಲ್ಲಿ ಹಾಗೂ 571 ವಿದ್ಯಾರ್ಥಿ ಪಿಸಿಎಂ ವಿಷಯದಲ್ಲಿ ಪಡೆದಿದ್ದಾರೆ. 1248 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯ ಯಾವುದಾದರೂ ಒಂದು ವಿಷಯದಲ್ಲಿ 50…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕುಂದಾಪುರ ಚಿತ್ತೂರಿನ ಗುರುರಾಜ ಪೂಜಾರಿ ಕಂಚಿನ ಪದಕ ಗೆಲ್ಲುವ ಮೂಲಕ ಕ್ರೀಡಾಕ್ಷೇತ್ರದಲ್ಲಿ ರಾಷ್ಟ್ರದ ಕೀರ್ತಿ ಪತಾಕೆ ಹಾರಿಸಿದ್ದಾರೆ. 2018ರಲ್ಲಿ ಗೋಲ್ಡ್ ಕೋಸ್ಟ್’ನಲ್ಲಿ ನಡೆದ 21ನೇ ಕಾಮನ್ ವೆಲ್ತ್ ಗೇಮ್ಸ್ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಭಾರತದ ಪದಕಗಳ ಭೇಟೆ ಆರಂಭ ದೊರಕಿಸಿಕೊಟ್ಟಿದ್ದರು. ಚಿತ್ತೂರು ಗ್ರಾಮದ ಜಡ್ಡು ಮಹಾಬಲ ಪೂಜಾರಿ ಹಾಗು ಪದ್ದು ದಂಪತಿಗಳ ಆರು ಮಕ್ಕಳಲ್ಲಿ ಐದನೇಯವರಾದ ಗುರುರಾಜಗೆ ಓದಿನಷ್ಟೇ ಕ್ರೀಡೆಯಲ್ಲಿಯೂ ಆಸಕ್ತಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಕಲಿಯುತ್ತಿದ್ದ ಸಂದರ್ಭದಲ್ಲಿ ರ್ವೆಸ್ಲಿಂಗ್’ನಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದ ಗುರುರಾಜ್ಗೆ ಸುಕೇಶ್ ಶೆಟ್ಟಿ ಅವರು ತರಬೇತಿ ನೀಡಿದ್ದರು. ಮುಂದೆ ಪದವಿ ವ್ಯಾಸಂಗಕ್ಕಾಗಿ ಉಜಿರೆಯ ಎಸ್.ಡಿ.ಎಂ ಕಾಲೇಜು ಸೇರಿದ ಬಳಿಕ ಗುರುರಾಜ್ ಬದುಕಿಗೊಂದು ತಿರುವು ದೊರೆತಿತ್ತು. ಈ ಅವಧಿಯಲ್ಲಿ ಎಂ. ರಾಜೇಂದ್ರ ಪ್ರಸಾದ್ ವೇಯ್ಡ್ ಲಿಫ್ಟಿಂಗ್…
