Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ| ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ್ ದಿವಸ್ ಬೈಂದೂರು ಮಂಡಲ ಬಿಜೆಪಿ ಕಛೇರಿಯಲ್ಲಿ ಗುರುವಾರ ಶ್ಯಾಮ ಪ್ರಸಾದ್ ಮುಖರ್ಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು. ಶಾಸಕರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಅವರು ಪುಷ್ಪಾರ್ಚನೆ ಮಾಡಿದರು. ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷರಾದ ದತ್ತಾತ್ರಿ, ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಆನಂದ್ ಖಾರ್ವಿ, ಮಂಡಲ ಪ್ರಧಾನ ಕಾರ್ಯದರ್ಶಿಯವರಾದ ಪ್ರಿಯದರ್ಶಿನಿ ದೇವಾಡಿಗ ಹಾಗೂ ಪ್ರಕಾಶ್ ಪೂಜಾರಿ ಜೆಡ್ಡು, ಜನಪ್ರತಿನಿಧಿಗಳು, ಪ್ರಮುಖರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.23: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಂದಾಪುರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ಮತ್ತವರ ತಂಡ ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ. ಜೂ. 22 ರಂದು ಡಿವೈಎಸ್ಪಿ ಶ್ರೀಕಾಂತ್ ಕೆ. ಅವರು ಗಸ್ತಿನಲ್ಲಿರುವಾಗ ಶಿರೂರು ಕಡೆಯಿಂದ ಒಂದು ಟಾಟಾ ಕಂಪೆನಿಯ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿರುವುದಾಗಿ ಬಂದ ಮಾಹಿತಿಯಂತೆ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ತೆರಳಿ ಸಿಬ್ಬಂದಿಗಳೊಂದಿಗೆ ಹಾಗೂ ಬೈಂದೂರು ಆಹಾರ ನಿರೀಕ್ಷಕರು, ಗ್ರಾಮ ಲೆಕ್ಕಿಗರೊಂದಿಗೆ ಕಾದುಕೊಂಡಿರುವಾಗ ಶಿರೂರು ಕಡೆಯಿಂದ ಒಂದು ಟಾಟಾ ಕಂಪೆನಿಯ ಲಾರಿ ಬರುವುದನ್ನು ನೋಡಿ ಸಿಬ್ಬಂದಿಗಳ ಸಹಾಯದಿಂದ ಲಾರಿಯನ್ನು ನಿಲ್ಲಿಸಿದ್ದಾರೆ. ಈ ವೇಳೆ ಲಾರಿಯಲ್ಲಿ ಚಾಲಕ ಬೆಂಗಳೂರು ದಕ್ಷಿಣ ಹೊನ್ನಗಟ್ಟಿ ನಿವಾಸಿ ಸುನೀಲ್ ಹೆಚ್.ಆರ್ (22) ಮತ್ತು ಇನ್ನೋರ್ವ ವ್ಯಕ್ತಿ ಭಟ್ಕಳ ನಿವಾಸಿ ಮಹಮ್ಮದ್ ಸಮೀರ (25)…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನ ಅಮೂಲ್ಯ. ಪೌಢ ಶಾಲೆಯ ನಂತರವಂತೂ ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಭವಿಷ್ಯಕ್ಕಾಗಿ ಉಪಯೋಗಿಸಿಕೊಳ್ಳಬೇಕು. ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು. ತನ್ನತನವನ್ನು ರೂಪಿಸಿಕೊಳ್ಳಬೇಕು. ಜ್ಞಾನ, ಕೌಶಲ್ಯ, ಆರೋಗ್ಯ, ಶಿಸ್ತು ನಾಲ್ಕು ವಿಷಯಗಳು ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮುಖ್ಯ. ಒಂದು ಗುರಿಯನ್ನು, ಉದ್ದೇಶವನ್ನು ಇಟ್ಟುಕೊಳ್ಳಬೇಕು.ಮೊಬೈಲನ್ನು ತಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ ಬೆಳೆಸಿಕೊಳ್ಳಬೇಕು ಎಂದು ಜಾನಪದ ಸಂಶೋಧಕ, ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಹೇಳಿದರು. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ, ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‌ನವರು ಏರ್ಪಡಿಸಿದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಹಾಯಧನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು. ಎಸ್. ಎಸ್. ಎಲ್. ಸಿ.ಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ 250ಕ್ಕೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಹಾಯಧನವನ್ನು ಈ ಸಮಾರಂಭದಲ್ಲಿ ವಿತರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಹಿತಿ ಪತ್ತೇದಾರಿ ಕಾದಂಬರಿಗಾರ್ತಿ ಸೌಮ್ಯ ಪುತ್ರನ್, “ವಿದ್ಯಾರ್ಥಿಗಳು ಜೀವನದ ಸವಾಲುಗಳನ್ನು ಎದುರಿಸುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಜನರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ. 25 ಕೋಟಿಗಳಿಗೆ ತಯಾರಿಸಿ ಕೇಂದ್ರ ಹೈನುಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಮೀನುಗಾರಿಕೆ ಸಚಿವರಾದ ಶ್ರೀ ಪರಷೋತ್ತಮ್ ರೂಪಲಾ ರವರಿಗೆ ಸಲ್ಲಿಸಿದ್ದು ಇದನ್ನು ಮಾನ್ಯ ಸಚಿವರು ಮುಕ್ತ ಕಂಠದಿಂದ ಪ್ರಶಂಸಿಸಿ ಇದಕ್ಕೆ ಅನುದಾನ ಒದಗಿಸುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮಾನ್ಯ ಸಂಸದರು ತಿಳಿಸಿದರು. ಭಾರತ ಗೋಪ್ರಧಾನ ದೇಶ, ಬಡರೈತರು ಅದರಲ್ಲಿಯೂ ತಾಂಡಾದ ಲಂಬಾಣಿ ಜನಾಂಗದವರು ಗೋಮಾತೆಯ ಮೇಲೇ ಭಕ್ತಿ ಮತ್ತು ಜೀವನದ ಆಸರೆ ಹೊಂದಿದ್ದಾರೆ. ಅನುತ್ಪಾದಕ ಗೋವುಗಳನ್ನು ಸಾಕುವ ರೈತರು ಅನುಭವಿಸುವ ನಷ್ಟ ಅಪಾರ. ಈ ಹಸುಗಳನ್ನು ರೈತರು ಹಾಲು ಕೊಡದಿದ್ದರೂ ಸಾಕಲೇಬೇಕು. ಗೋಹತ್ಯಾ ನಿಷೇಧ ಕಾನೂನು ಪ್ರಸಕ್ತ ಜಾರಿಯಲ್ಲಿದೆ. ಅನುತ್ಪಾದಕ ಗೋವುಗಳು ರೈತರಿಗೆ ಹೊರೆಯಾಗಬಾರದು, ಈ ಯೋಜನೆಯಲ್ಲಿ ಅನುತ್ಪಾದಕ ರಾಸುಗಳನ್ನು ವಿವಿಧ ಹಳ್ಳಿಗಳಲ್ಲಿ ಪತ್ತೆ ಹಚ್ಚಿ, ಈ ಅನುತ್ಪಾದಕತೆಯ ಕಾರಣವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸತತ ಪ್ರಯತ್ನ ಮತ್ತು ಉತ್ತಮ ಗುಣಮಟ್ಟದ ತರಬೇತಿಯಿಂದ ನಿಮ್ಮ ಸಾಧನೆಗೆ ಸಹಕಾರಿಯಾಗುತ್ತದೆ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಬಿ. ಪಿ. ವರದರಾಯ್ ಪೈ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಮತ್ತು ಉತ್ತರಪ್ರದೇಶದ ನೋಯ್ಡಾ ಇಲ್ಲಿನ ಎಕ್ಸ್ಟ್ರಾ ಮಾರ್ಕ್ಸ್ ಸಂಸ್ಥೆಯ ಸಹಯೋಗದಲ್ಲಿ ಸಿ.ಇ.ಟಿ, ಐಐಟಿ-ಜೆಇಇ, ನೀಟ್ ಮತ್ತು ಎಂ.ಇ.ಟಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಸಮಯ ಪ್ರಜ್ಞೆ, ಏಕಾಗ್ರತೆ, ಸತತ ಓದು ಗುಣಮಟ್ಟದ ತರಬೇತಿ ತುಂಬಾ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಎಕ್ಸ್ಟ್ರಾ ಮಾರ್ಕ್ಸ್ ಸಂಸ್ಥೆಯು ಉತ್ತಮ ತರಬೇತಿಯ ಉಪಯೋಗವನ್ನು ಪಡೆದುಕೊಂಡು ಒಳ್ಳೆಯ ಶಿಕ್ಷಣ ಪಡೆಯಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರಕ್ಕೆ ಹಾಕುವ ಬಂಡವಾಳದಿಂದ ಕುಟುಂಬ ಮತ್ತು ಸಮಾಜಕ್ಕೆ ಒಳ್ಳೆಯದಾಗುತ್ತದೆ. ಎಂದು ಹೇಳಿದರು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಡಿಯಲ್ಲಿ ಬರುವ ಕಾಲೇಜುಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 48 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ, ವಾಣಿಜ್ಯ ವಿಭಾಗದ ತೇಜಸ್ವಿ 585 ಅಂಕ, ವೈಷ್ಣವಿ 585 ಅಂಕ, ವೈಷ್ಣವಿ 585 ಅಂಕ, ಶಿವರಾಜ್ 579 ಅಂಕ, ಅಮೂಲ್ಯ 578 ಅಂಕ, ಅನುಶ್ರೀ 575 ಅಂಕ, ಸ್ವಾತಿ 571 ಅಂಕ, ಸಹನಾ ಶೆಟ್ಟಿ 563 ಅಂಕ, ಶ್ರೀನಿಧಿ 561 ಅಂಕ, ಸ್ಪೂರ್ತಿ 560 ಅಂಕ, ಧನಷಾ 558 ಅಂಕ, ಪ್ರಿತೇಶ್ 558 ಅಂಕ, ಪಲ್ಲವಿ 555 ಅಂಕ, ಸೌಜನ್ಯ 553 ಅಂಕ, ರೋಹಿತ್ 545 ಅಂಕ, ಸಂಶೋಧ್ 541 ಅಂಕ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 67 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 27 ವಿದ್ಯಾರ್ಥಿಗಳು ವಿಶಿಷ್ಟ…

Read More

ಕೈತೋಟವನ್ನು ನಿರ್ಮಿಸುವುದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಮನೆ ಮುಂದೆ ಹಸಿರಾಗಿದ್ದರೆ ಎಷ್ಟು ಚೆಂದ. ಮನಸ್ಸಿಗೂ ಒಂದು ರೀತಿ ಹಿತವೆನಿಸುತ್ತದೆ. ಅಷ್ಟೇ ಅಲ್ಲ ವಾತಾವರಣ ಕೂಡ ತಂಪಾಗಿರುತ್ತದೆ. ಇವತ್ತಿನ ಜಂಜಾಟದ ಜೀವನದಲ್ಲಿ ನೀವು ಬೆಳೆಸಿದ ಕೈತೋಟಕ್ಕೆ ಒಮ್ಮೆ ಭೇಟಿ ನೀಡಿದರೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ನಿಮಗೂ ಹೀಗೆ ಕೈತೋಟ ಮಾಡುವುದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅನ್ನಿಸುತ್ತಿದೆಯೇ? ಹಾಗಾದರೆ ನಾವಿಲ್ಲಿ ಕೆಲವೊಂದು ಗಾರ್ಡನಿಂಗ್ ಸಲಹೆಗಳನ್ನು ನೀಡಿದ್ದೇವೆ. ಖಂಡಿತವಾಗಿಯೂ ನಿಮಗೆ ಉಪಯೋಗವಾಗಬಲ್ಲದು! ನಿಮ್ಮ ಯುಎಸ್ಡಿಎ ಗಡಸುತನ ವಲಯವನ್ನು ತಿಳಿಯಿರಿ. (ನೆಲದ ಗಡಸುತನವನ್ನು ಅಳೆಯುವ ನಕ್ಷೆ) ಇದನ್ನು ಮಾರ್ಗದರ್ಶಿಯಾಗಿ ಬಳಸಿ, ಈ ಮೂಲಕ ನಿಮ್ಮ ನೆಲದ ಗಡಸುತನವನ್ನು ಅರಿತು, ನೀವು ಮರಗಳು, ಪೊದೆಗಳು ಸ್ಥಳದಲ್ಲಿ ಬೆಳೆಯುವ ಸಾಧ್ಯತೆ ಇಲ್ಲದಿದ್ದಲ್ಲಿ ಅವುಗಳನ್ನು ನೆಡಬೇಡಿ. ಆದರೆ ನಿಮ್ಮ ಪ್ರದೇಶದಲ್ಲಿ ತರಕಾರಿಗಳು ಮತ್ತು ಹಣ್ಣುಗಳನ್ನು ಯಾವಾಗ ನೆಡಬೇಕು ಎಂಬುದರ ಕುರಿತು ಕೂಡ ಈ ನಕ್ಷೆಯ ಮೂಲಕ ನಿಮಗೆ ತಿಳಿಯುತ್ತದೆ. ಗಿಡಗಳನ್ನು ಕತ್ತರಿಸುವುದು ಯಾವಾಗ?ಹೂವುಗಳು ಮಸುಕಾದ ತಕ್ಷಣ ಅಂದರೆ, ವಸಂತ-ಹೂಬಿಡುವ ಪೊದೆಸಸ್ಯಗಳಾದ ನೀಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಸಾಹಿತ್ಯಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಮಾದರಿಯಾಗಿದ್ದು, ಕಾರಂತರ ಚಿಂತನೆಗಳನ್ನು ಅವರ ಬದುಕಿನ ಚಿತ್ರಣವನ್ನು ಮುಂದಿನ ಪೀಳಿಗೆಗೆ ರವಾನಿಸುವ ಕಾರ್ಯ ಶ್ಲಾಘನೀಯ, ಕೋವಿಡ್ ಸಂದರ್ಭದಲ್ಲಿಯೂ ಆನ್ ಲೈನ್ ಮೂಲಕ ಕಾರ್ಯಕ್ರಮ ನಡೆಸಿ ಸಂಸ್ಥೆಗಳ ಕ್ರಿಯಾಶೀಲತೆಗೆ ಹೊಸ ಭಾಷ್ಯ ಬರೆದಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಹೇಳಿದರು. ಅವರು ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ನಡೆದ ತಿಂಗಳ ಕಾರ್ಯಕ್ರಮ ಯಕ್ಷಗಾನ ತಾಳಮದ್ದಳೆ ವಾಲಿ ಮೋಕ್ಷ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡುತ್ತಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಭಾಗವತರಾದ ಉದಯ ಹೊಸಾಳ, ಯಕ್ಷಗಾನ ಸಂಘಟಕ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ ಪ್ರಸ್ತಾಪಿಸಿ, ಟ್ರಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಬೈಲ್ ವಾಟ್ಸಪ್ ಸ್ಟೇಟಸ್‌ಗೆ ಕಾಮೆಂಟ್ ಹಾಕಿದ್ದಕ್ಕೆ ಆರೋಪಿಗಳು ವ್ಯಕ್ತಿಯನ್ನು ಸಿದ್ದಾಪುರಕ್ಕೆ ಕರೆಯಿಸಿ, ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಆಜ್ರಿ ಗ್ರಾಮದ ತೆಂಕಬೈಲು ರಾಘವೇಂದ್ರ ಕುಲಾಲ (27) ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಆರೋಪಿ ಮೃತ್ಯುಂಜಯ ಮೂರು ದಿನದ ಹಿಂದೆ ತನ್ನ ಮೊಬೈಲ್‌ನಲ್ಲಿ ವಾಟ್ಸ್ ಆ್ಯಪ್ ಸ್ಟೇಟಸ್ ಒಂದನ್ನು ಹಾಕಿಕೊಂಡಿದ್ದರು. ಸ್ಟೇಟಸ್‌ಗೆ ರಾಘವೇಂದ್ರ ಕುಲಾಲ ಕಾಮೆಂಟ್ ಹಾಕಿದ್ದರು. ಈ ವಿಷಯಕ್ಕೆ ಆರೋಪಿಗಳಾದ ಕಮಲಾಕರ ಹಾಗೂ ವಿಕಾಸ್ ಜೂ. 19ರಂದು ಮೊಬೈಲ್ ಮೂಲಕ ಬೆದರಿಕೆ ಹಾಕಿದ್ದರು. ಅನಂತರ ಪ್ರದೀಪ ಮತ್ತು ಅರುಣ್ ಶೆಟ್ಟಿ, ರಾಘವೆಂದ್ರ ಅವರಿಗೆ ಮೊಬೈಲ್ ಕರೆ ಮಾಡಿ ಸಿದ್ದಾಪುರಕ್ಕೆ ಬರುವಂತೆ ಹೇಳಿದ್ದರು. ಆರೋಪಿಗಳು ರಾಘವೇಂದ್ರ ಕುಲಾಲ ಅವರನ್ನು ಪೇಟೆಯಿಂದ ಸರಕಾರಿ ಪ್ರೌಢಶಾಲೆಯ ಮೈದಾನಕ್ಕೆ ಕರೆಯಿಸಿಕೊಂಡು, ಮತ್ತೊಂದಷ್ಟು ಜನರನ್ನು ಸೇರಿಸಿ ಗಂಭೀರವಾಗಿ ಹಲ್ಲೆ ಮಾಡಿದ್ದರು. ಮರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಮಲಶಿಲೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಉಪ್ಪುಂದದ ಶ್ರೀಧರ ಮಡಿವಾಳ (38) ಬಂಧಿತ ಆರೋಪಿಯಾಗಿದ್ದಾನೆ. ಜೂನ್ 18 ರಂದು ರಾತ್ರಿ ಕೆಳಮದುರೆ ಮನೆ ರಾಘವೇಂದ್ರ ಯಡಿಯಾಳ ಎಂಬವರ ಮನೆಯ ಕೋಣೆಯ ಕಪಾಟಿನಲ್ಲಿ ಇರಿಸಿದ್ದ ಸುಮಾರು 1,30,000 ಲಕ್ಷ ಬೆಲೆ ಬಾಳುವ 28 ಗ್ರಾಂ ತೂಕದ 2 ಚಿನ್ನದ ಬಳೆ ಸುಮಾರು 1,50,000 ಲಕ್ಷ ಬೆಲೆ ಬಾಳುವ ಮಲ್ಲಿಗೆ ಮಿಟ್ಟಿಯ 30 ಗ್ರಾಂನ ಒಂದು ಚಿನ್ನದ ಸರ, ಸುಮಾರು 20,000 ಬೆಲೆ ಬಾಳುವ ಮೂರು ಹರಳಿನ 4 ಗ್ರಾಂ ಚಿನ್ನದ ಉಂಗುರ, 5 ಸಾವಿರ ನಗದು ಹಣ ಕಳವು ಮಾಡಿದ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ. ಕಳವು ಮಾಡಿದ 2 ಚಿನ್ನದ ಬಳೆಗಳು, 1 ಮಲ್ಲಿಗೆ ಮಿಟ್ಟಿಯ ಚಿನ್ನದ ಸರ, ಹಾಗೂ ಒಂದು ಚಿನ್ನದ ಉಂಗುರ…

Read More