ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು ಗ್ರಾಮದ ಸರ್ವೆ ನಂ.207 ರಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ನೇತೃತ್ವದಲ್ಲಿ 2 ಎಕ್ರೆ ಖಾಲಿ ನಿವೇಶನವನ್ನು 2012ರಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಖರೀದಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಸಾಕಷ್ಟು ಬಾರೀ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಂದಿನ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಂದದಾಗ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಮಂಗಳವಾರ ದಿಢೀರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಸ್ಥಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿಯವರು ಮಾದ್ಯಮದವರೊಂದಿಗೆ ಮಾತನಾಡಿ, ಯಾವುದೇ ನಗರ ಇರಬಹುದು. ಪಟ್ಟಣ ಇರಬಹುದು. ಅಥವಾ ಗ್ರಾಮ ಪ್ರದೇಶಗಳು ಇರಬಹುದು. ಅಲ್ಲಿ ಸ್ವಚ್ಛತೆ ಇರಬೇಕೆಂದರೆ ಅಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಅತ್ಯಗತ್ಯ. ಪಟ್ಟಣ ಪಂಚಾಯತ್‌ನವರು ಜನ ವಸತಿ ಪ್ರದೇಶದಲ್ಲಿ ಜಾಗ ಖರೀದಿ ಮಾಡಿದ್ದಾರೆ. ಇಲ್ಲಿ ಸ್ಥಳೀಯವಾಗಿ ಸಮಸ್ಯೆ ಇದೆಯೆಂದು ಗೊತ್ತಾಗಿದೆ. ಇದಕ್ಕಾಗಿ ಸ್ಥಳ ವೀಕ್ಷಣೆಗೆ ಬಂದಿದ್ದೇನೆ. ಮುಂದಿನ ದಿನಗಲ್ಲಿ ಯಾವ ರೀತಿಯಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಬಿ.ಎಡ್ ಪದವಿಯ ಅಂತಿಮ ಪರೀಕ್ಷೆಯಲ್ಲಿ ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿವ್ಯಶ್ರೀ ಕೆ. ಶೇ.85.75 ಅಂಕಗಳೊಂದಿಗೆ ೮ನೇ ರ‍್ಯಾಂಕ್‌ಗಳಿಸಿದ್ದಾರೆ. ಇವರಿಗೆ ಕಾಲೇಜು ಬೋದಕವರ್ಗ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಶ್ವೇತಾ ಐ.ಎಸ್.ಬಿ.ಆರ್ ಕಾಲೇಜಿನ ಜೆಮ್ಸ್ ಮತ್ತು ಶ್ರೀಮತಿ ರಸಿಲಾ ಕೊಠಾರಿ ಪುರಸ್ಕಾರವನ್ನು ಸಹ ಪಡೆದುಕೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್ ಇನ್ಫೋಸಿಸ್ ಬ್ರಾಂಚನಲ್ಲಿ ಉದ್ಯೋಗಿಯಾಗಿರುವ ಇವರು ಕೊಡಪಾಡಿ ಹೊಸ್ಮನೆಯ ಮಹಾಬಲ ಪೂಜಾರಿ ಮತ್ತು ಸುಶೀಲ ಪೂಜಾರಿಯವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇವಳಗಳು ಉನ್ನತಿಯಾಗಬೇಕಾದರೆ ಕಾಲಕ್ಕನುಗುಣವಾಗಿ ಬ್ರಹ್ಮಕಲಶದಂತಹ ಕಾರ್ಯಗಳು ನಡೆಯುತ್ತಿರಬೇಕು ಆಗ ಮಾತ್ರ ದೇವಳ ಪಾವಿತ್ರತೆ ಹೊಂದಿ ಭಕ್ತರ ಇಷ್ಠಾರ್ಥ ಪ್ರಾಪ್ತಿಯಾಗುತ್ತದೆ ಎಂದು ಗರಿಕೆಮಠ ವೇ.ಮೂ ರಾಮಪ್ರಸಾದ ಅಡಿಗ ಹೇಳಿದರು. ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಮಣೂರು ಫ್ರೆಂಡ್ಸ್ ಮಣೂರು ಹಮ್ಮಿಕೊಂಡ ಸಾಂಸ್ಕೃತಿಕ ಸಭಾಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿ ದೇವಳಗಳ ಕಲೆ ಏರಿಸುವ ಪ್ರಕ್ರೀಯೆಯಿಂದ ದೇವರು ಸದಾಕಾಲ ಸಂತುಷ್ಟನಾಗಿ ನೆಲೆಯೂರುತ್ತಾನೆ ಇಲ್ಲವಾದಲ್ಲಿ ನಾವುಗಳು ಕಾಣುವಂತೆ ದೇವಳಗಳ ಪ್ರಸಿದ್ಧಿ ಕುಂಠಿತಗೊಳ್ಳುತ್ತದೆ. ಕಾಲ ಬಂದಾಗ ಅಂತಹ ದೇವಳಗಳು ತನ್ನ ಧಾರ್ಮಿಕ ಕಾರ್ಯಗಳ ಮೂಲಕ ಶಕ್ತಿಯನ್ನು ವೃದ್ಧಿಸಿಕೊಳ್ಳುತ್ತದೆ ಇದಕ್ಕೆ ಮಣೂರು ಶ್ರೀ ಮಹಾಲಿಂಗೇಶ್ವರ ಹಾಗೂ ಹೇರಂಬ ಗಣಪತಿಯೇ ಸಾಕ್ಷಿ ಎಂದು ದೇವಳದ ಆಡಳಿತ ಕಾರ್ಯವೈಕರಿಯನ್ನು ಪ್ರಶಂಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಹಿರಿಯ ಕೃಷಿಕ ಸುಧಾಕರ ಶೆಟ್ಟಿ ಕಾಸನಗುಂದು,ನಿವೃತ್ತ ಮುಖ್ಯ ಶಿಕ್ಷಕ ಉದಯ್ ಮಯ್ಯ,ನಿವೃತ್ತ ಯೋಧ ರವಿಚಂದ್ರ ಶೆಟ್ಟಿ ತೆಕ್ಕಟ್ಟೆ ಇವರುಗಳನ್ನು ಸನ್ಮಾನಿಸಲಾಯಿತು. ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ ವಿತರಿಸಲಾಯಿತು. ಅಧ್ಯಕ್ಷತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಕಡಲ ತೀರದ ಬೇರೆ ಬೇರೆ ಕಡೆ ಹ್ಯಾಚರ್ ಮೂಲಕ ರಕ್ಷಿಸಲಾದ ಮೊಟ್ಟಿಗಳು ಮರಿಯೊಡೆದು ಕಡಲ ಸೇರುತ್ತಿದ್ದು, ಸೋಮವಾರ ರಾತ್ರಿ ೭ನೇ ಹ್ಯಾಚರಲ್ಲಿದ್ದ 98 ಕಡಲಾಮೆ ಮರಿಗಳು ಕಡಲು ಸೇರಿಸಲಾಯಿತು. ಕಡಲಮೆ ಮರಿಗಳ ಕಡಲು ಸೇರಿಸುವ ಪ್ರಕ್ರಿಯೆ ರಾತ್ರಿಯಿಂದ ಬೆಳಗಿನ ಜಾವದ ತನಕ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು, ಎಫ್‌ಎಸ್‌ಲ್ ಇಂಡಿಯಾ, ಸ್ಥಳೀಯ ಮೀನುಗಾರರ ಹಾಗೂ ಪರಿಸರದ ನಾಗರಿಕರು ಆಮೆ ಮಿರಿ ಕಡಲಿಗೆ ಸೇರಿಸುವ ಪ್ರಕ್ರಿಯೆಯಲ್ಲಿ ಕೈಜೋಡಿಸಿದರು. ಎಸ್‌ಎಫ್‌ಎಲ್ ಇಂಡಿಯಾದ ದಿನೇಶ್ ಸಾರಂಗ, ವೆಂಕಟೇಶ್, ರಾಜೇಶ್ ಸೋನ್ಸ್, ನಾಗರಾಜ ಶೆಟ್ಟಿ, ಅರಣ್ಯ ಇಲಾಖೆ ರಂಜಿತ್ ಕುಮಾರ್ ಮತ್ತು ರಾಜೇಶ್ ಕುಮಾರ್, ರಾಘವೇಂದ್ರ, ಭರತ್ ಖಾರ್ವಿ, ಆಮೆ ಮೊಟ್ಟೆ ಪತ್ತೆಮಾಡಿದ್ದ ಬಾಬು ಮೊಗವೀರ, ಕೃಷ್ಣ ಖಾರ್ವಿ, ಗೋವಿಂದ ಸಾರಂಗ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತಕ್ಷಣದಲ್ಲಿ ಸ್ಪಂದಿಸಿ, ಪರಿಹಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ, ಎಲ್ಲಾ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಅಲಿಸಿ, ಅವುಗಳಿಗೆ ಸಂಬಂಧಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಒದಗಿಸಲಾಗುತ್ತಿದ್ದು, ಸಾರ್ವಜನಿಕರೂ ಹಲವು ವರ್ಷಗಳಿಂದ ಬಾಕಿ ಇರುವ ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದು ಸೂಕ್ತ ಪರಿಹಾರ ಪಡೆಯುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಮಚ್ಚಟ್ಟು ಗ್ರಾಮದಲ್ಲಿ ಈ ಹಿಂದೆ ಎರಡು ಸರ್ಕಾರಿ ಬಸ್ಗಳನ್ನು ಓಡಿಸುತ್ತಿದ್ದು, ಹಲವು ದಿನಗಳಿಂದ ಈ ಸೇವೆ ಬಂದ್ ಆಗಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿಮೂಡುಬಿದಿರೆ: ಬೆಂಗಳೂರಿನ ಜೈನ್ ಯೂನಿವರ್ಸಿಟಿ ಆಶ್ರಯದಲ್ಲಿ ಏ. 24 ರಿಂದ ಮೇ 3ರವರೆಗೆ ನಡೆಯಲಿರುವ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 71 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ. ಈ ಬಾರಿಯ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರೀಡಾಕೂಟಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಸಾಧನೆ ಮೆರೆದ ಕ್ರೀಡಾಪಟುಗಳು ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಅಥ್ಲೆಟಿಕ್ಸ್ ನಲ್ಲಿ ಒಟ್ಟು 41 ವಿದ್ಯಾರ್ಥಿಗಳು, ಮಹಿಳಾ ಕಬಡ್ಡಿಯಲ್ಲಿ 9 ವಿದ್ಯಾರ್ಥಿಗಳು, ಪುರುಷರ ವಾಲಿಬಾಲ್‍ನಲ್ಲಿ 7 ವಿದ್ಯಾರ್ಥಿಗಳು, ಮಹಿಳೆಯರ ಹಾಕಿಯಲ್ಲಿ 3, ಮಹಿಳೆಯರ ವೈಟ್ ಲಿಫ್ಟಿಂಗ್ ನಲ್ಲಿ 3 ಮಂದಿ, ಮಹಿಳೆಯರ ಕುಸ್ತಿಯಲ್ಲಿ 2 ಹಾಗೂ 6 ಮಂದಿ ಮಲ್ಲಕಂಬ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವ ವಿದ್ಯಾಲಯವನ್ನು ಪ್ರತಿನಿಧಿಸಲಿದ್ದು, ಇವರೆಲ್ಲರೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಮೊದಲನೇ ಆವೃತ್ತಿಯ ಖೇಲೋ ಇಂಡಿಯಾದಲ್ಲಿ ಆಳ್ವಾಸ್ ಸಾಧನೆ:ಕಳೆದ ಬಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಳದಲ್ಲಿ ಜರುಗಿದವು. ಲೋಕಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗ, ಅನ್ನಸಂತರ್ಪಣೆ, ರಾತ್ರಿ ಸುವರ್ಣಪಾಲಿಕೆ, ರಜತ ರಥ, ರಂಗಪೂಜಾ ಧಾರ್ಮಿಕ ಕಾರ‍್ಯಕ್ರಮಗಳು ನಡೆದವು. ಸಾಂಸ್ಕೃತಿಕ ಕಾರ‍್ಯಕ್ರಮದ ಅಂಗವಾಗಿ ಸಾಲಿಗ್ರಾಮ ಮಕ್ಕಳ ಮೇಳದವರಿಂದ ವೀರ ವೃಷಸೇನ ಯಕ್ಷಗಾನ ಪ್ರದರ್ಶನಗೊಂಡಿತ್ತು. ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ದೇವಳದ ಸಿಬ್ಬಂದಿ ಮತ್ತು ಅರ್ಚಕ ವರ್ಗದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ: ರೈಲ್ವೆ ಇಲಾಖೆಗೆ ನಿರಂತರ ಮನವಿಗಳ ಫಲವಾಗಿ ಶಿವಮೊಗ್ಗ-ಬೆಂಗಳೂರು ಮದ್ರಾಸ್ ಎಕ್ಸಪ್ರೆಸ್ ಹಾಗೂ ಶಿವಮೊಗ್ಗ-ರೇಣಿಗುಂಟ(ತಿರುಪತಿ) ರೈಲುಗಳನ್ನು ಒಗ್ಗೂಡಿಸಿ ಶಿವಮೊಗ್ಗದಿಂದ ತಿರುಪತಿ ಹಾಗೂ ಮದ್ರಾಸ್ಗೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲಿನ ಸಮಯ ಹಾಗೂ ಮಾರ್ಗವನ್ನು ಬದಲಿಸಿ ಶಿವಮೊಗ್ಗ – ರೇಣಿಗುಂಟ ಮದ್ರಾಸ್, ಎಕ್ಸಪ್ರೆಸ್ ರೈಲು ಸೇವೆಗೆ ಇಂದು ಚಾಲನೆ ನೀಡಲಾಗುತ್ತಿರುವುದು ಸಂತಸ ತಂದಿದೆ, ಶಿವಮೊಗ್ಗ-ಶಿಕಾರಿಪುರ ರಾಣಿಬೆನ್ನೂರು ರೈಲು ಮಾರ್ಗವು ಸುಮಾರು 956 ಕೋಟಿ ಅಂದಾಜು ವೆಚ್ಚದಲ್ಲಿ 102 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ಕಿ.ಮೀ. ಉದ್ದದ ರೈಲು ನಿರ್ಮಾಣ ಯೋಜನೆಯನ್ನು 2018-19ನೇ ಕೇಂದ್ರ ಮುಂಗಡ ಪತ್ರದಲ್ಲಿ ಮಂಜೂರು ಮಾಡಲಾಗಿದೆ ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಲ್ಲಿ ಮೊದಲ ನೂತನ ರೈಲ್ವೆ ಯೋಜನೆಯಾಗಿದೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ತಿಳಿಸಿದರು. ಶಿವಮೊಗ್ಗ ಟೌನ್ ರೈಲ್ವೇ ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಈ ಹಿಂದೆ ಬೆಂಗಳೂರು ಮಾರ್ಗವಾಗಿ ಮದ್ರಾಸ್ ಗೆ ತೆರಳುತ್ತಿದ್ದ ಶಿವಮೊಗ್ಗ-ಮದ್ರಾಸ್ ಎಕ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ದ ದೇವಾಲಯಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ವಾರ್ಷಿಕ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಉಚಿತ ಭೋಜನ ಪ್ರಸಾದದ ವ್ಯವಸ್ಥೆಯಿದ್ದು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಪ್ರಮಾಣ ಪತ್ರ ದೊರೆತಿದೆ. ಭಾರತದ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಈ ಪ್ರಮಾಣ ಪತ್ರ ನೀಡಲಾಗಿದ್ದು, ಇಲ್ಲಿ ಭಕ್ತಾದಿಗಳಿಗೆ ತಯಾರಿಸುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಲು ಆಹಾರ ತಯಾರಿಕಾ ಕಟ್ಟಡ ಮತ್ತು ಅಲ್ಲಿರುವ ಸೌಲಭ್ಯಗಳು, ಆಹಾರ ತಯಾರಿಸುವ ವಿಧಾನ, ಸ್ವಚ್ಛತೆ, ಆಹಾರ ತಯಾರಿಕಾ ಸಿಬ್ಬಂದಿಗಳಿಗೆ ನೀಡಿರುವ ತರಬೇತಿ ಈ ಅಂಶಗಳ ಆಧಾರದಲ್ಲಿ ಆಡಿಟ್ ಮಾಡಲಾಗಿದ್ದು, ದೇವಾಲಯದಲ್ಲಿ ಈ ಎಲ್ಲಾ ಅಂಶಗಳಿಗೆ ಪ್ರಾದಾನ್ಯತೆ ನೀಡಿ ಆಹಾರ ತಯಾರಿಸುತ್ತಿರುವುದರಿಂದ ಈ ಪ್ರಮಾಣ ಪತ್ರ ನೀಡಲಾಗಿದೆ. ಇಲ್ಲಿನ ದೇವಾಲಯದ ಆಹಾರ ತಯಾರಿಕಾ ಕೊಠಡಿಯು ಅತ್ಯಂತ ಸುಸಜ್ಜಿತವಾಗಿದ್ದು, ಕಟ್ಟಡವು ಮಳೆ ನೀರಿನಿಂದ ಸೋರುವಿಕೆ ಇಲ್ಲದೇ, ಉತ್ತಮ ಗುಣಮಟ್ಟದ…
