Author: ನ್ಯೂಸ್ ಬ್ಯೂರೋ

ಸುರಭಿ ಬೈಂದೂರು – ರಾಜ್ಯ ಮಟ್ಟದ ನಾಟಕೋತ್ಸವ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅರವತ್ನಾಲ್ಕು ವಿದ್ಯೆಗಳಲ್ಲಿ ನಾಟಕವೂ ಒಂದು. ಅದು ನಮ್ಮ ಬದುಕಿನ ಪಾತ್ರಗಳನ್ನೇ ರಂಗದ ಮೇಲೆ ತಂದು ವಿಮರ್ಷಿಸುವ, ಒರೆಗೆ ಹಚ್ಚುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಿಭಾಯಿಸಬಲ್ಲದು ಎಂದು ನಡೂರು ರತ್ನಶೀಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ, ಹಾಸ್ಯ ಕಲಾವಿದ ಮನು ಹಂದಾಡಿ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವ ’ರಂಗಸುರಭಿ – 2022’ನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ ಮೊಬೈಲ್‌ನಲ್ಲಿಯೇ ಮುಳುಗಿ ಹೋಗಿರುವ ಜನರು ಸಾಂಸ್ಕೃತಿಕ ಚಟುವಟಿಕೆಗಳಿಂದ ವಿಮುಖರಾಗುತ್ತಿದ್ದಾರೆ. ಅವರನ್ನು ಮತ್ತೆ ನೈಜತೆಯತ್ತ ಸೆಳೆಯಲು ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಅನಿವಾರ್ಯವಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಮಗು ಮುಂದೆ ಉತ್ತಮ ಕಾರ್ಯಗಳಲ್ಲಿಯೇ ಮುಂದುವರಿಯುತ್ತದೆ. ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಕಾರ್ಯವಾದಾಗ ಮುಂದಿನ ಪೀಳಿಗೆಗೆ ಉತ್ತಮವಾದುದನ್ನು ಕೊಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವ ಶುಕ್ರವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವಕ್ಕೆ ವಿವಿಧೆಡೆಗಳಿಂದ ತೆರಳಿದ್ದ ಸಾವಿರಾರು ಭಕ್ತರು ಸಾಕ್ಷಿಯಾದರು. ದೇವಳದಲ್ಲಿ ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥೋತ್ಸವ ನಡೆಸಲಾಯಿತು. ಬೀದಿ ಗಣಪತಿ ದೇವಸ್ಥಾನದವರೆಗೆ ರಥವನ್ನು ಎಳೆದು ರಥೋತ್ಸವ ನಡೆಸಲಾಯಿತು. ತೇರಿನ ಈ ವೈಭವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸಂಜೆಯ ಬಳಿಕ ಬ್ರಹ್ಮರಥವನ್ನು ಶಂಕರಾಶ್ರಮದವರೆಗೆ ಕೊಂಡೊಯ್ಯಲಾಗುತ್ತದೆ. ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡೆದವು. ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್. ಪಿ. ಬಿ. ಮಹೇಶ್, ಎಇಒ ಗೋವಿಂದ ನಾಯಕ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ. ಅತುಲ್ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಬೆಳ್ವೆ ಗಣೇಶ ಕಿಣಿ, ಕೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.25: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೇನಿಂಗ್ ಅಂಡ್ ಚೆಕ್ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏ.1 ರಿಂದ 16 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ವೇಳಾಪಟ್ಟಿ:ಏಪ್ರಿಲ್ 1 ರಂದು ಕೆರಾಡಿ ಗ್ರಾಮ ಪಂಚಾಯತ್ನಲ್ಲಿ ಹಳ್ಳಿಹೊಳೆ, ಕೆರಾಡಿ ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಚಿತ್ತೂರು ಗ್ರಾಮ ಪಂಚಾಯತ್ನಲ್ಲಿ ವಂಡ್ಸೆ, ಚಿತ್ತೂರು, ಆಲೂರು, ಇಡೂರು, ಕುಂಜ್ಙಾಡಿ ಹಾಗೂ ಸುತ್ತಮುತ್ತಲಿನವರಿಗೆ, ಏ.3 ರಂದು ತಲ್ಲೂರು ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ತಲ್ಲೂರು ಹಾಗೂ ಸುತ್ತಮುತ್ತಲಿನವರಿಗೆ ಮತ್ತು ಕುಂದಾಪುರ ವಡೇರಹೋಬಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಭವನದಲ್ಲಿ ಕುಂದಾಪುರ, ಹಂಗಳೂರು, ಕೋಡಿ, ಕೋಟೇಶ್ವರ, ಕೋಣಿ ಹಾಗೂ ಸುತ್ತಮುತ್ತಲಿನವರಿಗೆ,ಏ.4 ರಂದು ಬೆಳ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಭವನದಲ್ಲಿ ಬೆಳ್ವೆ, ಅಲ್ಬಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ಪೂರ್ವಜರು ನಮಗಾಗಿ ಕಟ್ಟಿದ ಇತಂಹ ಕೆರೆಗಳ ಸಂರಕ್ಷಣೆ ನಮ್ಮಿಂದಲೇ ಆಗಬೇಕು. ಇತಂಹ ಆನೇಕ ಕೆರೆಗಳಲ್ಲಿ ನೀರು ಸಂಗ್ರಹದ ಸಾಮರ್ಥ್ಯ ಕಳೆದುಕೊಂಡು ವಿನಾಶದ ಅಂಚಿಗೆ ಕೆರೆಗಳು ತಲುಪುತ್ತಿದೆ. ಈಗಾಲಾದರೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನದಲ್ಲಿ ನೀರಿಗಾಗಿ ನಾನಾ ರೀತಿಯ ಹೋರಾಟಗಳನ್ನು ನಾವುಗಳು ಎದುರಿಸ ಬೇಕಾಗುತ್ತದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂದಾಪುರ, ಕನ್ನುಕೆರೆ ಕೆರೆಯ ಅಭಿವೃದ್ಧಿ ಮಂಡಳಿ ಕನ್ನುಕೆರೆ ಸಂಯುಕ್ತ ಆಶ್ರಯದಲ್ಲಿ ತೆಕ್ಕಟ್ಟೆ ಗ್ರಾ.ಪಂ., ಕನ್ನುಕೆರೆ ಫ್ರೆಂಡ್ಸ್ ಕನ್ನುಕೆರೆ, ರೋಟರಿ ಕ್ಲಬ್ ತೆಕ್ಕಟ್ಟೆ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕನ್ನುಕೆರೆ ಇವರ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮಕೆರೆ ಅಭಿವೃದ್ಧಿ ಯೋಜನೆ ಅಡಿ ಕನ್ನುಕೆರೆ ಕೆರೆಯ ಪುನಶ್ಚೇತನ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಸಮಾಜ ಸೇವಕ ಮಲ್ಯಾಡಿ ಶಿವರಾಮ್ ಶೆಟ್ಟಿ, ಧ.ಗ್ರಾ ಯೋಜನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮ ಪಂಚಾಯತ್‌ನ 2021-22ನೇ ಸಾಲಿನ ದ್ವೀತಿಯ ಹಂತದ ಗ್ರಾಮಸಭೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಸಭಾಭವನದಲ್ಲಿ ಜರುಗಿತು. ಮೀನುಗಾರಿಕಾ ಸಹಾಯಕ ನಿರ್ದೇಶಕಿ ಸುಮಲತ ಗ್ರಾಮಸಭೆಯ ನೋಡೆಲ್ ಅಧಿಕಾರಿಯಾಗಿ ಗ್ರಾಮಸಭೆ ನಡೆಸಿದರು. ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂರ್ಣಿಮಾ, ಕಂದಾಯ ಇಲಾಖೆ ವಿಎ ಆನಂದ, ಗೋಪಾಡಿ ಮೆಸ್ಕಾಂ ಇಲಾಖೆ ಮಂಜುನಾಥ್, ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ ಶೆಟ್ಟಿ, ಶಿಕ್ಷಣ ಇಲಾಖೆಯ ಹೊಸ ಬಡಾಕೆರೆ ಶಾಲಾ ಮುಖ್ಯೋಪಾಧ್ಯಾಯ ಪದ್ಮಾವತಿ ಕೆ, ಕೋಟೇಶ್ವರ ಕೆಪಿಎಸ್ ಮುಖ್ಯ ಶಿಕ್ಷಕ ಯೋಗಿ ನಾಯ್ಕ್ ಇಲಾಖಾವರೂ ಮಾಹಿತಿ ನೀಡಿದರು. ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಗೊಲ್ಲ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ಸದಸ್ಯರಾದ ಜಯಲಕ್ಷ್ಮೀ, ಲೋಲಾಕ್ಷಿ ಎನ್ ಕೋತ್ವಾಲ್, ಲೋಕೇಶ್, ಚಂದ್ರಮೋಹನ್, ಪುಟ್ಟಿ, ನೇತ್ರಾವತಿ, ರಾಜಶೇಖರ ಶೆಟ್ಟಿ, ವಿಶಾಲಾಕ್ಷಿ ಶೆಟ್ಟಿಗಾರ್, ಸುರೇಶ್ ದೇವಾಡಿಗ, ರೊಯ್ಸಿನ್ ಡಿ ಮೆಲ್ಲೋ, ಲತಾ ಶೇಖರ ಮೊಗವೀರ, ಶೋಭಾ ಶೆಟ್ಟಿ, ರಾಘವೇಂದ್ರ ಪೂಜಾರಿ, ನಾಗರಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಮೂಡುವಾರಣಾಸಿ ಚೇರ್ಕಾಡಿಯಲ್ಲಿ ಪ್ರೇರಣ ಸಾಂಸ್ಕೃತಿಕ ಕಲಾ ಟ್ರಸ್ಟ್ ವಾರ್ಷಿಕೋತ್ಸವ, ಪ್ರೇರಣ ಪ್ರಶಸ್ತಿ ಸೋಮವಾರ ಜರುಗಿತು. ಬ್ರಹ್ಮಾವರ ತಾಲೂಕು ತಹಶಿಲ್ದಾರ್ ರಾಜಶೇಖರ ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮಲ್ಲಿ ಸಮೂಹ ನಾಯಕತ್ವದ ಕೊರತೆ ಇದೆ. ಅದು ಸಂಘ ಸಂಸ್ಥೆಯಾಗಿರಬಹುದು ಅಥವಾ ವ್ಯಕ್ತಿಯಲ್ಲಿ ಕೂಡಾ ಇರಬಹುದು ಸಾಮೂಹಿಕ ನಾಯಕತ್ವಕ್ಕೆ ಗ್ರಾಮೀಣ ಭಾಗದ ಇಂತಹ ಕಲಾ ಸಂಘಟನೆಯಿಂದ ಆರಂಭಗೊಂಡು ಊರಿಗೆ ದೇಶಕ್ಕೆ ಮಾದರಿಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ವಾಸ್ತು ಮತ್ತು ಜಲ ತಜ್ಞ ಡಾ ಅನಂತ ನಾಯ್ಕ್ ಮತ್ತು ಬ್ರಹ್ಮಾವರದಿಂದ ಕಾಲು ನಡಿಗೆಯಿಂದ ಜಮ್ಮು ಕಾಶ್ಮಿರಕ್ಕೆ ಹೋಗಿ ಇಲ್ಲಿನ ಜನಪದ ಕಲೆ ಹುಲಿ ಕುಣಿತವನ್ನು ನೀಡಿದ ಹರ್ಷೆಂದ್ರ ಆಚಾರ್ಯ ರನ್ನು ಪ್ರೇರಣ ಪ್ರಶಸ್ತಿ ೨೦೨೧ ನೀಡಿ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಅರುಣ್ ಕುಮಾರ್ ನಾಯ್ಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಚೇರ್ಕಾಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ, ಸದಸ್ಯರಾದ ಕಮಲಾಕ್ಷ ಹೆಬ್ಬಾರ, ಮಧುರ ನಾಯ್ಕ್, ಗೋಪಿ ಕೆ ನಾಯ್ಕ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರಾಗಿಣಿ ಅವರು ನೇಮಕಗೊಂಡಿದ್ದಾರೆ. ರಾಗಿಣಿ ಅವರು ಜೀವಶಾಸ್ತ್ರ ವಿಭಾಗದಲ್ಲಿ 17 ವರ್ಷಗಳ ಅನುಭವವನ್ನು ಹೊಂದಿದ್ದು, ಸಿಇಟಿ/ನೀಟ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಕುಂದಾಪುರ ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಅವರ ಸಮ್ಮುಖದಲ್ಲಿ ಪ್ರಭಾರ ಪ್ರಾಂಶುಪಾಲರಾದ ಮಮತಾ ರೈ ಇವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ವೃಂದದವರು ಶುಭ ಹಾರೈಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಏಳನೇ ವಾರ್ಷಿಕೋತ್ಸವ ಹಾಗೂ ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್‌ರವರ ಜನ್ಮ ಶತಮಾನೋತ್ಸವ ಸಮಾರೋಪ ಸಮಾರಂಭ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವಿಜೃಂಭಣೆಯಿಂದ ಜರುಗಿತು. ಕುಂದಾಪುರದ ಮಹಿಳಾ ತಂಡದವರು ವಿಷ್ಣು ಸಹಸ್ರನಾಮ ಪಠಿಸಿದರು. ಇದೇ ಸಂದರ್ಭದಲ್ಲಿ ಸುಜೀರ್ ಲಕ್ಷ್ಮೀನಾರಾಯಣ ನಾಯಕ್, ಉಪಾಧ್ಯಕ್ಷರು, ಟಾಟಾ ಮೋಟರ್ ಫೈನಾನ್ಸ್, ಮುಂಬಯಿ ಇವರು ಅಕಾಡೆಮಿಗೆ ದೇಣಿಗೆಯಾಗಿ ನೀಡಿದ ಸೋಲಾರ್ ಲೈಟ್ ನ್ನು ರಘುನಾಥ್ ನಾಯಕ್, ಮಾಜಿ ಡೆಪ್ಯೂಟಿ ಚೀಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಕೊಂಕಣ್ ರೈಲ್ವೆ ಇವರು ಉದ್ಘಾಟಿಸಿರು. ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಕಲಾವಿದರ ಪ್ರಾರ್ಥನೆಯೊಂದಿಗೆ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರುರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಪ್ರಾರಂಭವಾಯಿತು. ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್‌ರು ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೊ. ವರದೇಶ್ ಹಿರೇಗಂಗೆ, ಮುಖ್ಯಸ್ಥರು, ಗಾಂಧಿಯನ್ ಸೆಂಟರ್ ಫಾರ್ ಫಿಲೋಸೊಫಿಕಲ್ ಆಟ್ಸ್ ಆಂಡ್ ಸೈನ್ಸ್, ಮಾಹೆ, ಮಣಿಪಾಲ್ ಇವರು ದೀಪ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.23: ಆಟಿಸಂ ಎಂಬುವುದು ಒಂದು ಖಾಯಿಲೆಯಲ್ಲ ಇದೊಂದು ಸ್ವಭಾವ. ಇಂತಹ ಹಠ ಸ್ವಭಾವದ ಮಕ್ಕಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಪ್ರಸ್ತುತ ಸಮಾಜದಲ್ಲಿ ಬಹಳ ಅನಿವಾರ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಟ್ಟ್ ವೈ. ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಆಟಿಸಂ ಸೊಸೈಟಿ ಆಫ್ ಉಡುಪಿ ಇದರ ಸಂಯುಕ್ತ ಆಶ್ರಯದೊಂದಿಗೆ ಅಂಗನವಾಡಿ ವೇಲ್ವಿಚಾರಕರಿಗೆ ಮತ್ತು ಆಶಾ ಕಾರ್ಯಕರ್ತ ಮೇಲ್ವಿಚಾರಕರಿಗೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ನಡೆದ ಸ್ವಲೀನತೆ ಜಾಗೃತಿ ಕಾರ್ಯಗಾರ ಸಿಂಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ 58 ಮಕ್ಕಳಿಗೆ ಆಟಿಸಂ ಇರುವ ಪಟ್ಟಿ ಸಿಕ್ಕಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಸರ್ವೆ ಮಾಡುವ ಮೂಲಕ ಮುಂದೆ ಆ ಮಕ್ಕಳಿಗೆ ಯಾವ ರೀತಿಯಲ್ಲಿ ಚಿಕಿತ್ಸೆ ನೀಡಬಹುದು ಎಂಬ ಯೋಜನೆ ಕೈಗೊಳ್ಳಬಹುದು , ಆಟಿಸಂ ಎಂಬುವುದು ಮಕ್ಕಳ ಮೇಲೆ ಪರಿಣಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.23: ಭಾರತದ ಚಲನಚಿತ್ರ ಉದ್ಯಮದಲ್ಲಿ ವಿಫುಲ ಉದ್ಯೋಗವಕಾಶಗಳಿದ್ದು, ಪ್ರತಿ ವರ್ಷ 10000 ದಿಂದ 20000 ದ ವರೆಗೆ ಚಲನಚಿತ್ರ ಕ್ಷೇತ್ರದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಅವಶ್ಯಕತೆಯಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಅಶೋಕ್ ಕಶ್ಯಪ್ ಹೇಳಿದರು. ಅವರು ಇಂದು ಮಣಿಪಾಲದ ಎಮ್.ಐ.ಸಿ ಆಡಿಟೋರಿಯಂನಲ್ಲಿ, ಕರ್ನಾಟಕ ಚಲಚಿತ್ರ ಅಕಾಡೆಮಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್ ಇವರ ಸಹಯೋಗದಲ್ಲಿ ನಡೆದ 5 ದಿನಗಳ ಚಲನಚಿತ್ರ ನಿರ್ಮಾಣ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಹಿಂದೆ ಚಲನಚಿತ್ರ ಉದ್ಯಮದಲ್ಲಿ ಪರಿಣಿತರನ್ನು ತಯಾರುಮಾಡಲು ಹಲವು ವರ್ಷಗಳೇ ಬೇಕಿದ್ದವು ಆದರೆ ಇಂದು ತಾಂತ್ರಿಕತೆ ಮತ್ತು ಈ ಕ್ಷೇತ್ರದಲ್ಲಿ ಅನುಭವ ಹೊಂದಿದ ಪರಿಣಿತರಿಂದ ತರಬೇತಿಗಳು ದೊರೆಯುತ್ತಿರುವುದರಿಂದ ಉತ್ತಮ ಪರಿಣಿತರು ಸೃಷ್ಟಿಯಾಗುತ್ತಿದ್ದಾರೆ ಅಲ್ಲದೆ ಹಲವು ಕಾಲೇಜುಗಳು ಮತ್ತು ವಿಶ್ವ ವಿದ್ಯಾಲಯಗಳು ಇದನ್ನು ಒಂದು ಕೋರ್ಸ್ ಆಗಿ ಭೋಧಿಸುತ್ತಿವೆ ಎಂದರು. ಚಲನಚಿತ್ರ ನಿರ್ಮಾಣದಲ್ಲಿ ಅನಿಮೇಶನ್,…

Read More