Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿ, ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕು ಕಚೇರಿಗಳು ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿಗೆ ಸಂಬಧಿಸಿದ ಕಡತಗಳನ್ನು ಇ-ಕಚೇರಿ ಮೂಲಕವೇ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು 2 ತಿಂಗಳ ಒಳಗೆ ಸಂಪೂರ್ಣ ಇ-ಕಚೇರಿ ಮೂಲಕ ಕಡತಗಳನ್ನು ನಿರ್ವಹಣೆ ಮಾಡಬೇಕು. ಈ ಕುರಿತಂತೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಮತ್ತಿತರ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ನ.29: ರಾಜ್ಯದಲ್ಲಿ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಸರ್ಕಾರ ಹೇಳುವ ತನಕ ಜನತೆ ಗೊಂದಲಕ್ಕೊಳಗಾಗಬಾರದು. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 12 ದೇಶಗಳಲ್ಲಿ ಓಮ್ರಿಕಾನ್ ವೈರಸ್ ಪತ್ತೆಯಾಗಿದ್ದು, 12 ದೇಶಗಳಿಂದ ಬಂದವರ ಮೇಲೆ ನಿಗಾ ವಹಿಸಲಾಗಿದೆ. ಆಫ್ರಿಕನ್ ದೇಶಗಳಲ್ಲಿ ರಾಜ್ಯಕ್ಕೆ ಬಂದವರ ಮೇಲೆ ನಿಗಾವಹಿಸಲಾಗಿದೆ. ಓಮ್ರಿಕಾನ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಆದರೆ, ಇದು ಅಷ್ಟೊಂದು ಗಂಭೀರವಾಗಿಲ್ಲ ಎಂದಿದ್ದಾರೆ. ಲಾಕ್ಡೌನ್ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿತ್ತು. ಲಾಕ್ಡೌನ್ ಬಗ್ಗೆ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದ ಬಳಿಕ ಜನರು ನಂಬಬೇಕು. ನಾಳೆ ಬೆಳಗ್ಗೆ 10 ಗಂಟೆಗೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ತಾಂತ್ರಿಕಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ವಲಯ 1ರ ಸಾಂಸ್ಕೃತಿಕ ಕಾರ್ಯಕ್ರಮ ‘ಕುಂದ ಕಲಾ ವೈಭವ’ ಅಂಗವಾಗಿ ಕುಂದಾಪುರ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಸ್ಪರ್ಧೆಯಲ್ಲಿ ಬೈಂದೂರು ರೋಟರಿ ಒಟ್ಟು 7 ಪ್ರಶಸ್ತಿ (3 ಪ್ರಥಮ ಹಾಗೂ 4 ದ್ವಿತೀಯ) ಗಳಿಸುವ ಮೂಲಕ ಸಮಗ್ರ ವಲಯ ಚಾಂಪಿಯನ್‌ಶಿಫ್‌ಗೆ ಅರ್ಹ ತಂಡವಾಗಿ ಮೂಡಿಬಂದಿದೆ. ಈ ಪ್ರಶಸ್ತಿಯನ್ನು ರೋಟರಿ ಅಧ್ಯಕ್ಷ ಡಾ. ಪ್ರವೀಣ್ ಶೆಟ್ಟಿ ಇವರಿಗೆ ಜಿಲ್ಲಾ ರೆಡ್‌ಕ್ರಾಸ್‌ನ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಹಸ್ತಾಂತರಿಸಿದರು. ವಲಯ ಸಹಾಯಕ ಗವರ್ನರ್ ಜೆ. ಪಿ. ಶೆಟ್ಟಿ, ವಲಯ ಸೇನಾನಿ ಡಾ. ರಾಜಾರಾಮ ಶೆಟ್ಟಿ ಹಾಗೂ ಎಲ್ಲಾ ರೋಟರಿ ಪದಾಧಿಕಾರಿಗಳು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಲ್ಲವ ಅಸೋಸಿಯೇಷನ್ ರಿ. ಬೆಂಗಳೂರು ಹಾಗೂ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬೈಂದೂರು ಇವರ ಸಹಯೋಗದೊಂದಿಗೆ ಬಿಲ್ಲವ ವಧುವರರ ಮುಖಾಮುಖಿ ಕಾರ್ಯಕ್ರಮ ನಂದನವನ ದೇವಕಿ ಬಿ. ಆರ್. ಆಡಿಟೋರಿಯಂ (ಪರಿಚಯ) ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಇವರು ನಡೆಸಿಕೊಂಡು ಬರುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ಈ ವಧುವರಾನ್ವೇಷಣೆ ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿದ್ದು, ತಾಲ್ಲೂಕಿನ ಸಮಾಜದ ಎಲ್ಲಾ ವಧು ವರ ಆಕಾಂಕ್ಷಿಗಳು ಇದರ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು. ಬೈಂದೂರು ತಾಲ್ಲೂಕು ಬಿಲ್ಲವ ಸಂಘಕ್ಕೆ ಸಮುದಾಯ ಭವನದ ಅಗತ್ಯವಿದ್ದು, ಇದರ ನಿರ್ಮಾಣದಲ್ಲಿ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು. ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅದ್ಯಕ್ಷ ಎಂ. ವೇದಕುಮಾರ ಮಾತನಾಡಿ , ಸಮಾಜದ ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದ ಅವರು ರಾಜಕೀಯವಾಗಿ ನಾವು ನಮ್ಮ ಸಮಾಜದ ನಾಯಕರನ್ನು ಆಯ್ಕೆ ಮಾಡುವಲ್ಲಿ ಪಕ್ಷಭೇದ ಮರೆತು ಹೋರಾಡಬೇಕಾಗಿದೆ ಎಂದು ಕರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಉದ್ಯೋಗ ನಿಮಿತ್ತ ನಾವಿಂದು ಬೇರೆ ಬೇರೆ ಭಾಷೆಗಳ ಆಸರೆ ಪಡೆದರೂ, ತುಳು ಭಾಷೆ ಎಂದೂ ನಮ್ಮ ಹೃದಯದ ಭಾಷೆಯಾಗಿರುತ್ತದೆ ಎಂದು ಕನ್ನಡ ಬಿಗ್‌ಬಾಸ್ ಸೀಸನ್ 8ರ ರನ್ನರ್ ಅಪ್ ಅರವಿಂದ ಕೆಪಿ ನುಡಿದರು. ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ತುಳು ಸಂಘ ಎಐಇಟಿ ಅಡಿಟೋರಿಯಂನಲ್ಲಿ ಆಯೋಜಿಸಿದ್ದ ತುಲಿಪು 2021 ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತುಳು ಭಾಷೆ ನಮ್ಮ ನಡುವೆ ಸದಾ ಜೀವಂತವಿರುತ್ತದೆ. ನಮ್ಮ ಆಚರಣೆಗಳಾದ ಕೋಲ, ಕಂಬಳ, ನೇಮ, ಆಟ ಪ್ರತಿ ಕ್ಷಣ ಈ ಸಂಸ್ಕೃತಿಯ ವಿಶೇಷತೆಯನ್ನು ಸಾರುತ್ತವೆ. ಪ್ರತಿಯೊಬ್ಬರಿಗೂ ಅವರ ಭಾಷೆಯ ಬಗ್ಗೆ ಗೌರವವಿರಬೇಕು. ನಮ್ಮ ಭಾಷೆಯ ಮಹತ್ವ ನಾವು ನಮ್ಮ ಊರನ್ನು ಬಿಟ್ಟು ಬೇರೆ ಪ್ರದೇಶದಲ್ಲಿ ನಲೆಸಲು ಆರಂಭಿಸಿದಾಗ ಮಹತ್ವ ತಿಳಿಯುತ್ತದೆ ಎಂದರು. ಜೀವನದಲ್ಲಿ ಸದಾ ಧನಾತ್ಮಕ ಚಿಂತನೆಯನ್ನು ಹೊಂದಿದರೆ ಯಶಸ್ಸನ್ನು ಪಡೆಯಲು ಸಾಧ್ಯ. ನಾವೆಂದು ಭೂತ ಕಾಲದಲ್ಲಿ ಬಂಧಿಯಾಗದೆ, ನಮ್ಮ ಭವಿಷ್ಯದ ಪ್ರವರ್ತಕರಾಗುವರೆಡೆಗೆ ಶ್ರಮಿಸಬೇಕು ಎಂದರು. ತುಳು ಭಾಷೆ ಸಂಸ್ಕೃತಿ, ಆಚರಣೆ…

Read More

ಕುಂದಾಪ್ರ ಡಾಟ್ ಕಾಂಸುದ್ದಿ.ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳೋತ್ಸವವು ಭಾನುವಾರ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯಿತು. ಹಲವಾರು ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸಿದವು. ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಯಿತು. ಕಂಬಳ ಗದ್ದೆಯನ್ನು ಖುರ್ಜು ನಿಲ್ಲಿಸಿ, ತೋರಣಗಳಿಂದ ಅಲಂಕರಿಸಲಾಗಿತ್ತು. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸಿದ ಬಳಿಕ ಕಂಬಳಕ್ಕೆ ಅಧಿಕೃತ ಚಾಲನೆ ದೊರೆಯಿತು. ವಿಶೇಷ ವೇಷಭೂಷಣ, ವಾದ್ಯ ಮುಂತಾದವುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಕೋಣಗಳ ಪೈಕಿ ಕೆಲವನ್ನು ಕಂಬಳ ಗದ್ದೆಯಲ್ಲಿ ಹರಕೆಯ ಸಲುವಾಗಿ ಓಡಿಸಿದರೇ, ಉಳಿದ ಕೋಣಗಳು ಹಗ್ಗ ಹಾಗೂ ಹಲಗೆ ವಿಭಾಗದ ಸ್ವರ್ಧೆಯಲ್ಲಿ ಪಾಲ್ಗೊಂಡವು. ಕಂಠದಮನೆ ಕುಟುಂಬದ ಟಿ. ನಾರಾಯಣ ಹೆಗ್ಡೆಯವರ ನೇತೃತ್ವದಲ್ಲಿ ಸಾಂಪ್ರದಾಯಿಕ ಕಂಬಳ ಮುನ್ನಡೆಯುತ್ತಿದ್ದು ಊರಿನ ಜನ ಹಬ್ಬದಂತೆ ಸಂಭ್ರಮಿಸಿದರು. ವಿಶಾಲ ಗದ್ದೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 44ನೇ ವಾರ್ಷಿಕ ಮಹಾಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 44 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.750 ಕೋಟಿ ವ್ಯವಹಾರ ನಡೆಸಿ, ರೂ 4.47 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ. ಸತತ 17 ವರ್ಷಗಳಿಂದ ‘ಎ’ ವರ್ಗದ ಆಡಿಟ್ ವರ್ಗೀಕರಣದಲ್ಲಿದೆ ಎಂದು ಹೇಳಿದರು. ಸಂಘವು ವರ್ಷದಲ್ಲಿ ರೂ. 163.90 ಕೋಟಿ ಠೇವಣಿ ಸಂಗ್ರಹಿಸಿ, ರೂ. 146.13 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 75.60 ಕೋಟಿ ಹೂಡಿಕೆ ಮಾಡಿದೆ. ಸಂಘದ ಸದಸ್ಯರಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಡ್ತರೆಯಲ್ಲಿ ಸುಮಾರು 5.11 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಸ್ಥಳಕ್ಕೆ ಶನಿವಾರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಳಸದ, ಈ ಸ್ಥಳಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡಿದ್ದು, ಇದನ್ನು ಪೂರ್ಣಗೊಳಿಸಲು ಇನ್ನೂ ಸುಮಾರು 60-70ಲಕ್ಷ ರೂ. ಅನುದಾನ ಹೆಚ್ಚುವರಿಯಾಗಿ ಬೇಕಾಗಬಹುದು. ಮೊದಲು ಈ ಸ್ಥಳ ಉಪ್ಪುನೀರು ತುಂಬಿರುತ್ತಿದ್ದ ಪ್ರದೇಶವಾಗಿತ್ತು. ಅದನ್ನು ಈ ಮಟ್ಟಕ್ಕೆ ತರುವಲ್ಲಿ ಕಟ್ಟಡ ಕಾಮಗಾರಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಕಟ್ಟಡ ಕಾಮಗಾರಿ ಒಂದು ಹಂತಕ್ಕೆ ಬರಲಿದೆ. ಇಲಾಖೆಯಿಂದ ಅಥವಾ ಸರ್ಕಾರದಿಂದಾದರೂ ಅನುದಾನ ಪಡೆದು ಕಟ್ಟಡ ಪೂರ್ಣಗೊಳಿಸಲಾಗುವುದು. ಈಗ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಜತೆಗೆ ವಿಧಾನಸಭಾ ಅಧಿವೇಶವೂ ಆರಂಭಗೊಳ್ಳುತ್ತಿದ್ದು ಇದು ಮುಗಿದ ನಂತರ ಆದಷ್ಟು ಬೇಗ ಈ ನಿಲ್ದಾಣವನ್ನು ಲೋಕಾರ್ಪಣೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ಧಾಪುರ ಸರಕಾರಿ ಪ್ರೌಢಶಾಲೆಯಲ್ಲಿ ಎಚ್ಚರ ಗ್ರಾಹಕ ಶಿಕ್ಷಣ ಕ್ಲಬ್‌ನ ಉದ್ಘಾಟನೆಯನ್ನು ನ್ಯಾಯವಾದಿ ಮತ್ತು ಗ್ರಾಹಕ ಹಕ್ಕುಗಳ ಹೋರಾಟಗಾರ ಗುರುರಾಜ್ ರಾವ್ ನೆರವೇರಿಸಿದರು. ಕ್ಲಬ್‌ನ ಪದಾಧಿಕಾರಿಗಳಿಗೆ ಜಸ್ಟೀಸ್ ನಾಗಮೋಹನ ದಾಸ್ ಬರೆದಿರುವ ಸಂವಿಧಾನ ಓದು ಕೃತಿಯನ್ನು ವಿತರಿಸಿದರು. ಆನಂತರ ಮಾತನಾಡಿದ ಅವರು ಗ್ರಾಹಕರು ತಮ್ಮ ಹಕ್ಕುಗಳ ಉಲ್ಲಂಘನೆಯಾದಾಗ ಮತ್ತು ಅನ್ಯಾಯವಾಗಿದೆ ಎಂದು ಅನಿಸಿದಾಗ ಕಾನೂನಿನ ಸಹಾಯ ಪಡೆಯಬಹುದು. ಆದರೆ, ಕಾನೂನಿನ ಸಹಾಯ ಪಡೆಯಲೂ ಸೂಕ್ತ ಶಿಕ್ಷಣದ ಅಗತ್ಯವಿದೆ. ನಾವು ಎಚ್ಚರವಿರುವ ಗ್ರಾಹಕರಾಗಿದ್ದಾಗ ಮಾತ್ರ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಬಹುದು. ಎಂದರು. ಈ ಸಂದರ್ಭ ಎಚ್ಚರ ಗ್ರಾಹಕ ಶಿಕ್ಷಣ ಕ್ಲಬ್‌ನ ಪ್ರಾಮಾಣಿಕ ಅಂಗಡಿಯನ್ನು ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ವೈಷ್ಣವಿ ಸಾಮಗ್ರಿಗಳನ್ನು ಖರೀದಿಸುವ ಮೂಲಕ ಚಾಲನೆ ನೀಡಿದರು. ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಶಿವಗಂಗಾರವರು ಗುಣಮಟ್ಟದ ಚಿನ್ಹೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯಶಿಕ್ಷಕರಾದ ಚಂದ್ರ ಕುಲಾಲ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಶಿಕ್ಷಕರಾದ ಉದಯ ಗಾಂವಕಾರ ಕ್ಲಬ್ಬಿನ ಧ್ಯೇಯೋದ್ಧೇಶಗಳನ್ನು ತಿಳಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾನವ ಹಕ್ಕುಗಳ ಕೋಶ ಇದರ ಆಶ್ರಯದಲ್ಲಿ ಸಂವಿಧಾನ ದಿನ’ವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತನಾಡಿ, ನಮ್ಮ ದೇಶದ ಸಂವಿಧಾನ ವಿಶಿಷ್ಟ ಮತ್ತು ಶ್ರೇಷ್ಟ ಸಂವಿಧಾನವಾಗಿದೆ. ಸಂವಿಧಾನ ಕೇವಲ ನಮಗೆ ಅಧಿನಿಯಮಗಳನ್ನು ಹೇಳುವುದಕ್ಕೆ ಮಾತ್ರ ಸೀಮಿತವಾಗದೇ ನಮ್ಮ ಬದುಕು ಆಗಿದೆ. ಇದರಲ್ಲಿ ಎಷ್ಟೋ ವಿಷಯಗಳನ್ನು ತಿಳಿದಷ್ಟು ಎಷ್ಟೋ ಅಂತಃಸತ್ವವುಳ್ಳ ವಿಚಾರಗಳು ಅದರಲ್ಲಿ ಅಡಗಿದೆ. ನಮ್ಮ ಸಂವಿಧಾನವನ್ನು ಕೆಲವರು ಬೇಲೂರಿನ ಶಿಲ್ಪಕಲೆಗೆಳಿಗೆ ಮತ್ತೆ ಕೆಲವರು ಕಾವ್ಯಗಳಿಗೆ ಹೋಲಿಸಿದ್ದಾರೆ. ವಿವಿಧತೆಯಲ್ಲಿ ಏಕತೆ ಇರುವಂತಹ ಭಾರತದ ಸಂವಿಧಾನ ಪ್ರಪಂಚದ ಅತಿದೊಡ್ಡ ಸಂವಿಧಾನವಾಗಿದೆ. ಗಾತ್ರದಷ್ಟೇ ವಿಷಯಗಳನ್ನು ಒಳಗೊಂಡಿದೆ. ನಮ್ಮ ಇಡಿ ದೇಶವನ್ನು ಇದು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರಲ್ಲದೇ ಸಂವಿಧಾನ ರಚನೆಯಲ್ಲಿ ಪಾಲ್ಗೊಂಡವರ ಕುರಿತು ಅವರು ಸ್ತೂಲವಾಗಿ ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾನವ ಹಕ್ಕುಗಳ ಕೋಶದ ಸಂಯೋಜಕರಾದ…

Read More