Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಣ ಸುದ್ದಿ.ಉಡುಪಿ: ಜನವರಿ 1 2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಪ್ರಸಕ್ತ ಜನಸಂಖ್ಯೆಗೆ ಅನುಗುಣವಾಗಿ 27,000 ಯುವ ಮತದಾರರ ನೋಂದಣಿ ಆಗಬೇಕಿದ್ದು, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 18 ವರ್ಷ ತುಂಬಿದ ಯುವಕ/ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮ ರೂಪಿಸಲಾಗುವುದು. ಯುವ ಜನತೆ ತಾವು ವಾಸವಿರುವ ವಿಳಾಸದ ವ್ಯಾಪ್ತಿಗೆ ಬರುವ ಬಿ.ಎಲ್.ಓ ಗಳನ್ನು ಭೇಟಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ಆನ್ಲೈನ್ ವೆಬ್ ಪೋರ್ಟಲ್ https://www.nvsp.in/ ಹಾಗೂ Voter helpline app ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿ ಬಸರಾಜ್ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರು, ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯವಿರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೋಮೇಶ್ವರ ಬೀಚ್ ಮತ್ತು ಮರವಂತೆ ಬೀಚ್ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಡಿ.ಪಿ.ಆರ್. ಅಂತಿಮಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಪ್ರವಾಸೋದ್ಯಮ ಕಾಮಗಾರಿಗಳು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಿ.ಆರ್. ಝಡ್ ಅಧಿಸೂಚನೆಯನ್ನು ನವ್ಹೆಂಬರ್-2021 ಅಂತ್ಯದೊಳಗೆ ಅಂತಿಮಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಕೊಡಚಾದ್ರಿ-ಕೊಲ್ಲೂರು ರೋಪ್-ವೇ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ (ಪಿ.ಪಿ.ಪಿ. ಮಾದರಿಯಡಿ) ಅನುಷ್ಠಾನಗೊಳಿಸಲು ಶೀಘ್ರ ಟೆಂಡರ್ ಕರೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಸೌಕೂರು ಏತ ನೀರಾವರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವ್ಯಾಪ್ತಿಯಲ್ಲಿ ಧಾರಾಳ ಹಾಲು ಲಭ್ಯವಿದೆ. ಹಾಲು ಉತ್ಪಾದಕರು ಈಗ ಹಾಲಿನ ಗುಣಮಟ್ಟಕ್ಕೆ ಆಧ್ಯತೆ ನೀಡಬೇಕು ಎಂದು ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು, ಅರೆಹೊಳೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎನ್. ನರಸಿಂಹ ದೇವಾಡಿಗ ಮಾತನಾಡಿ, ಸಂಘವು ವರದಿ ವರ್ಷದಲ್ಲಿ ರೂ 3.57 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 10 ಡಿವಿಡೆಂಡ್ ಹಾಗೂ ಹಾಲು ಉತ್ಪಾದಕ ಸದಸ್ಯರಿಗೆ ಶೇ 65 ಬೋನಸ್ ವಿತರಿಸಲು ನಿರ್ಧರಿಸಲಾಗಿದೆ ಎಂದರು. ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಮಾಧವ ಐತಾಳ್ ಮತ್ತು ವಿಸ್ತರಣಾಧಿಕಾರಿ ರಾಜಾರಾಮ್ ಹಾಲು ಉತ್ಪದನೆ ಹೆಚ್ಚಿಸಲು ಹಾಗೂ ಗುಣಮಟ್ಟದ ಹಾಲು ಪಡೆಯಲು ಅನುಸರಿಸಬೇಕಾದ ಕ್ರಮಗಳ ಮಾಹಿತಿ ನೀಡಿದರು. ಕಾರ್ಯದರ್ಶಿ ಉಮೇಶ ಮಧ್ಯಸ್ಥ ವರದಿ, ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷೆ ದೇವಕಿ ಚಂದನ್, ನಿರ್ದೇಶಕರಾದ ರಾಜು ದೇವಾಡಿಗ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು, ನ.09: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 204 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, 1.02ರೂ.ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ 12 ಡಿವಿಡೆಂಡ್ ನೀಡಲು ಉದ್ದೇಶಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 37.04 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ 34.60 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ 8.28 ಕೋಟಿ ಮೊತ್ತದ ಕೃಷಿ ಸಾಲವನ್ನು ಸಂಘವು ನೀಡಿದೆ ಎಂದರು. ಮುಂದಿನ ತಿಂಗಳು ಸಂಘ ವ್ಯಾಪ್ತಿಯ ಪ್ರತಿ ರೈತರ ಮನೆ ಮನೆಗೆ ತೆರಳಿ ಸಂಘದ ಕೃಷಿ ಸಾಲ ಸೌಲಭ್ಯಗಳ ಬಗ್ಗೆ ತಿಳುವಳಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪ್ರತಿ ರೈತರಿಗೂ ಇದರ ಸದುಪಯೋಗ ದೊರೆಯುವಂತೆ ಮಾಡುವುದು ನಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗಿರಿಜನ ಮಹಿಳಾ ವಿಕಲಚೇತನರ ಸರಕಾರಿ ಯೋಜನೆಗಳ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರವು ಇತ್ತೀಚೆಗೆ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಾಣಿಜ್ಯ ವಿಭಾಗ, ಮಣಿಪಾಲ ಎಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಉದ್ಘಾಟಿಸಿದರು. ಮಾಹೆಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಸಂದೀಪ್ ಎಸ್ ಶೆಣೈ ಅತಿಥಿ ಭಾಷಣವನ್ನು ಮಾಡಿದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ದೂದ್ಪೀರ್ ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ ಶೇಷಪ್ಪ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಯತೀಶ್ ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟ ಯೋಜನೆಗಳ ಕುರಿತು ಮಾಹಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಚುನಾವಣಾ ಆಯೋಗವು ಜನವರಿ 1 2022ನ್ನು ಅರ್ಹತಾ ದಿನವಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಮಾಡಲಾಗುತ್ತಿದ್ದು, ನವೆಂಬರ್ 8 ರಂದು ಕರಡು ಮತದಾರರ ಪಟ್ಟಿ ಪ್ರಕಟ, ನವೆಂಬರ್ 8 ರಿಂದ ಡಿಸೆಂಬರ್ 8 ರ ವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದ್ದು, ನವೆಂಬರ್ 7, 14,21 ಮತ್ತು 28ರಂದು ವಿಶೇಷ ನೊಂದಣಿ ಕಾರ್ಯಕ್ರಮ, ಡಿಸೆಂಬರ್ 27ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಹಾಗೂ 13-1-2022 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಅರ್ಹ ಭಾರತೀಯ ನಾಗರಿಕರು ಮತದಾರರರ ಪಟ್ಟಿಗೆ ಹೆಸರುಗಳನ್ನು ಸೇರಿಸಲು ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 01.01.2022ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವವರು ಈ ಕೆಳಗೆ ತಿಳಿಸಿರುವ ಯಾವುದಾದರೊಂದು ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ವಯಸ್ಸಿನ ಬಗ್ಗೆ ಸಲ್ಲಿಸಬೇಕಾದ ದಾಖಲೆಗಳು: ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ ಕಾರ್ಡ್, ಎಸ್.ಎಸ್.ಎಲ್.ಸಿ/ಪಿ.ಯು.ಸಿ.ಅಂಕಪಟ್ಟಿಗಳು, ಪಾನ್ ಕಾರ್ಡು ಹಾಗೂ ವೈದ್ಯಕೀಯ ಪ್ರಮಾಣ ಪತ್ರ. ವಾಸ್ತವ್ಯದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೇಸಿಐ ಭಾರತ ವಲಯ 15ರ ವ್ಯವಹಾರ ಸಮ್ಮೇಳನ ‘ಉನ್ನತಿ’ ಇಲ್ಲಿನ ಸಹನಾ ಕನ್ವೆಕ್ಷನ್ ಹಾಲ್‌ನಲ್ಲಿ ಜರುಗಿತು. ಈ ಸಂದರ್ಭ ಜೇಸಿಐ ಪೂವ೯ ವಲಯ ಉಪಾಧ್ಯಕ್ಷೆ , ಪತ್ರಕರ್ತೆ ಅಕ್ಷತಾ ಗಿರೀಶ್ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರು, ಜೇಸಿ ಕುಂದಾಪುರದ ಪೂರ್ವ ಅಧ್ಯಕ್ಷರಾಗಿ, ಕೋಟೇಶ್ವರ ರೋಟರಿ ಕ್ಲಬ್‌ನ ಆನ್ಸ್ ಘಟಕದ ಅಧ್ಯಕ್ಷರಾಗಿ ಪ್ರಧಾನಮಂತ್ರಿ ಪ್ರಚಾರ ಪ್ರಸಾರ ಸಮಿತಿಯ ಜಿಲ್ಲಾ ಮಹಿಳಾ ಅಧ್ಯಕ್ಷರಾಗಿ, ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ, ತರಬೇತುದಾರರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿ ಸದಾನಂದ ನಾವಡ, ವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ, ಸಂಯೋಜಕರಾದ ಸಮದ್ ಖಾನ್, ಉಪಾಧ್ಯಕ್ಷರಾದ ಜೆಸಿ ಗಿರೀಶ್ ಎಸ್ ಪಿ, ಜೆಸಿ ದರ್ಶಿತ್ ಶೆಟ್ಟಿ, ಜೆಸಿ ಶರತ್ ಕುಮಾರ್, ಜೆಸಿಐ ಕುಂದಾಪುರ ಅಧ್ಯಕ್ಷರಾದ ವಿಜಯ ನರಸಿಂಹ ಐತಾಳ್, ಪೂರ್ವಾಧ್ಯಕ್ಷರಾದ ವಿಷ್ಣು ಕೆ ಬಿ., ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಹಿತಿ ಹಕ್ಕು ಕಾಯಿದೆಯನ್ನು ದುರುಪಯೋಗಪಡಿಸಿಕೊಂಡು ತಾಲೂಕಿನ ಕೆ. ವೆಂಕಟೇಶ ಕಾರಂತ ಎನ್ನುವ ವ್ಯಕ್ತಿಯು ಬೈಂದೂರು ಭಾಗದ ಉದ್ಯಮಿಗಳು, ಅಧಿಕಾರಿಗಳು, ನೌಕರರುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಹಾಗೂ ಬೈಂದೂರು ಕ್ಷೇತ್ರ ಅಭಿವೃದ್ಧಿ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಅಡ್ಯಂತಾಯ ಅವರು ರಾಜ್ಯಪಾಲರು, ಮುಖ್ಯಮಂತ್ರಿಗಳಿಂದ ಹಿಡಿದು ಗೃಹ ಇಲಾಖೆ, ಜನಪ್ರತಿನಿಧಿಗಳಿಗೆ ದೂರು ಸಲ್ಲಿಸಿದ್ದಾರೆ. ದೂರಿನ ವಿವರ:ಯಡ್ತರೆ ಗ್ರಾಮದ ಕೆರೆಕಟ್ಟೆ ಸಮೀಪದ ನಿವಾಸಿಯಾದ ವೆಂಕಟೇಶ ಕಾರಂತ ಎನ್ನುವ ವ್ಯಕ್ತಿ ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿ. ನಿವೃತ್ತಿಯ ನಂತರ ತನ್ನ ಉಪಕಸುಬಾಗಿ ಮಾಹಿತಿ ಹಕ್ಕು ಕಾಯಿದೆಯನ್ನು ದುರುಪಯೋಗಪಡಿಸಿಕೊಂಡು ಬೈಂದೂರು ತಾಲೂಕಿನಾದ್ಯಂತ ಉದ್ಯಮಿಗಳಿಗೆ, ಅಧಿಕಾರಿ, ನೌಕರರುಗಳಿಗೆ ಸಾಮಾಜಿಕ ಕಾರ್ಯಕರ್ತನ ಹೆಸರಿನಲ್ಲಿ ಕಿರುಕುಳ ನೀಡಿ, ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದು, ಅನಗತ್ಯ ಕಿರಿ ಕಿರಿಯಿಂದ ವ್ಯವಹಾರ ಮಾಡಲು ಹಿಂದೇಟು ಹಾಕುತಿದ್ದಾರೆ. ಇದು ಬೈಂದೂರಿನ ಬೆಳವಣಿಗೆಗೆ ಮಾರಕವಾಗಿದೆ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ನ.14ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬಹುಮುಖ ಪ್ರತಿಭೆ ರೋಶನ್ ಗಿಳಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ವಿವೇಕ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ರೋಶನ್ ಗಿಳಿಯಾರ್ ಯಕ್ಷಗಾನ, ಸಂಗೀತ, ಚಿತ್ರಕಲೆ, ಏಕಪಾತ್ರಾಭಿನಯ, ಸಿನಿಮಾ ಕ್ಷೇತ್ರ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಕೂಡಾ ಹೊಂದಿದ್ದಾರೆ. ನ.14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಕಾರ್ಯಕ್ರಮ ನಡೆಯಲಿದ್ದು ಮಕ್ಕಳ ಕವಿಗೋಷ್ಠಿ, ಬಹುವಿಧ ಗೋಷ್ಠಿ ಕಥಾ ವಾಚನ, ಸಾಂಸ್ಕೃತಿಕ ಕಾರ್ಯಕ್ರಮ, ಕನ್ನಡ ಗಾನ ನಮನ, ಕೋಶಿಕಾ ಚೇರ್ಕಾಡಿ ತಂಡದವರಿಂದ ಬೇಂದ್ರೆ ವಿರಚಿತ ಸಾಯೋ ಆಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಬಿ .ರಾಮ ಟೈಲರ್ ಅವರನ್ನು ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು . ಈ ಸಂದರ್ಭ ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಬಿಲ್ಲವ ಮುಖಂಡರಾದ ಎಸ್. ರಾಜು ಪೂಜಾರಿ, ವೆಂಕಟ ಪೂಜಾರಿ, ಮುತ್ತಯ್ಯ ಪೂಜಾರಿ ಇತರರು ಉಪಸ್ಥಿತರಿದ್ದರು

Read More