ಕುಂದಾಪ್ರ ಡಾಟ್ ಕಾಂ ಕುಂದಾಪುರ: ಇಲ್ಲಿನ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ಐಕ್ಯೂಎಸಿ ಆಯೋಜಿಸಿದ ಶಿಕ್ಷಕ ಸಮುದಾಯದ ಮೇಲೆ ಕೋವಿಡ್-19 ಬೀರಿದ ಪರಿಣಾಮಗಳು ಮತ್ತು ಸವಾಲುಗಳು ಎಂಬ ವಿಷಯದ ಕುರಿತು ಆಯೋಜಿಸಿದ ರಾಷ್ಟ್ರ ಮಟ್ಟದ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಕೋವಿಡ್ – 19ನಿಂದಾಗಿ ಇಡೀ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಮಟ್ಟದ ಪೆಟ್ಟು ಬಿದ್ದಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ. ಕರೋನದಿಂದಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಹನ ನಡೆಸಲು ಕಷ್ಟವಾಗುತ್ತಿದೆ. ಅದೆಷ್ಟೋ ಶಿಕ್ಷಕರು ಕೋವಿಡ್‌ನಿಂದಾಗಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ – ರಾಜ್ಯ ಸರ್ಕಾರಗಳು ಶಿಕ್ಷಕ ಮತ್ತು ವಿದ್ಯಾರ್ಥಿ ಸಮುದಾಯಗಳ ಶೈಕ್ಷಣಿಕ ಅಗತ್ಯಗಳಿಗೆ ಶೀಘ್ರ ಸ್ಪಂದಿಸಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿಚಾರಣ ಸಂಕಿರಣವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪತ್ರಕರ್ತ, ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅವರು ಸಂಕಲಿಸಿ, ಜನಪ್ರತಿನಿಧಿ ಪ್ರಕಾಶನ ಪ್ರಕಟಿಸಿರುವ ’ಜನಾಧಿಕಾರ’ ಗ್ರಾಮ ಪಂಚಾಯಿತಿ ಮಾರ್ಗದರ್ಶಿ ಪುಸ್ತಕ ಅ31ರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಬಿಡುಗಡೆಗೊಳ್ಳಲಿದೆ. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಸಮಿತಿ ಸದಸ್ಯ ಟಿ. ಬಿ. ಶೆಟ್ಟಿ ಪುಸ್ತಕದ ಕುರಿತು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ ಎಂದು ಪ್ರಕಾಶಕ, ಜನಪ್ರತಿನಿಧಿ ಬಳಗದ ಸುಬ್ರಹ್ಮಣ್ಯ ಪಡುಕೋಣೆ ತಿಳಿಸಿದ್ದಾರೆ. ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆಯಲ್ಲಿ ಮಹಿಳೆಯರ ಸ್ವಾವಲಂಬನಾ ಹೊಲಿಗೆ ವೃತ್ತಿ ತರಬೇತಿ ಕೇಂದ್ರವನ್ನು ಮುಚ್ಚಿರುವುದನ್ನು ಖಂಡಿಸಿ ಪಂಚಾಯತ್ ರಾಜ್ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಸರಣಿ ಸತ್ಯಾಗ್ರಹದ ಸಭೆ ಅಂಪಾರು ಬಸ್ ನಿಲ್ದಾಣದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಹೋಬಳಿ ಕೇಂದ್ರವಾದ ವಂಡ್ಸೆಯಲ್ಲಿ ರಾಜ್ಯದಲ್ಲಿ ಪ್ರಥಮವಾಗಿ ಘನ ತ್ಯಾಜ್ಯ ಘಟಕ ಅನುಷ್ಟಾನಗೊಂಡಿತ್ತು. ಈ ಘಟಕಕ್ಕೆ ದೇಶದ ನಾನಾ ರಾಜ್ಯಗಳಿಂದ ಪ್ರತಿನಿಧಿಗಳು ಭೇಟಿ ನೀಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು. ಜತೆಯಲ್ಲಿ ರಾಜ್ಯ ಬಿಜೆಪಿ ಮುಖಂಡರು ಸಹ ಭೇಟಿ ನೀಡಿ, ಘಟಕದ ಕಾರ್ಯವೈಖರಿ ಬಗ್ಗೆ ಪ್ರಶಂಸಿದ್ದರು. ಆದರೆ ಬೈಂದೂರು ಕ್ಷೇತ್ರದ ಶಾಸಕರಿಗೆ ಮಾತ್ರ ಇದರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿಲ್ಲ. ಈ ಹಿನ್ನಲೆಯಲ್ಲಿ ವಂಡ್ಸೆಯಲ್ಲಿರುವ ಘನ ತ್ಯಾಜ್ಯ ಯೋಜನೆಯಡಿಯಲ್ಲಿ ಸ್ವಾವಲಂಬನಾ ಹೋಲಿಗೆ ತರಬೇತಿ ಕೇಂದ್ರವನ್ನು ಕಾನೂನು ಬಾಹಿರವಾಗಿ ಸ್ಥಳಾಂತರಿಸುವ ಮೂಲಕ ಬದುಕಿನ ಕನಸನ್ನು ಕಟ್ಟಿಕೊಂಡ ಮಹಿಳೆಯರು ಬೀದಿ ಪಾಲಾಗಿದ್ದಾರೆ. ಮೊದಲು ಶಾಸಕರು ಸಮಾಜಕ್ಕೆ ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಪೇಟೆಯ ಸರ್ವೀಸ್ ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದಿದ್ದು, ಸರಿಯಾಗಿ ವಿಲೇವಾರಿ ಮಾಡದಿರುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಉಪ್ಪುಂದ ಪೇಟೆಯ ಮಾರ್ಕೆಟ್‌ನ ಒಂದು ಬದಿಯಲ್ಲಿ ಕಸ ಹಾಗೂ ತ್ಯಾಜ್ಯ ರಾಶಿ ಉಂಟಾಗಿದೆ. ಕಸಗಳ ರಾಶಿಯನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದೆ ಇರುವುದರಿಂದ ವಾಸನೆ ಬೀರುತ್ತಿದೆ. ಪ್ರತಿ ಮಂಗಳವಾರ ವಾರದ ಸಂತೆ ನಡೆಯುತ್ತಿದ್ದು ಈ ಸಂದರ್ಭ ಹಾಳಾದ ತರಕಾರಿ, ಹಣ್ಣು ಹಂಪಲುಗಳು, ಪ್ಲಾಸ್ಟಿಕ್ ಸೇರಿದಂತೆ ವಿವಿಧ ಬಗೆಯ ತ್ಯಾಜ್ಯಗಳನ್ನು ಇಲ್ಲಿ ತಂದು ಎಸೆಯಲಾಗುತ್ತಿದೆ. ಮಳೆಯಿಂದಾಗಿ ತ್ಯಾಜ್ಯಗಳು ಕೊಳೆತು ಸುತ್ತಮುತ್ತಲಿನ ಪರಿಸರ ಮಾಲಿನ್ಯಗೊಳ್ಳುವ ಆತಂಕವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ನಿತ್ಯ ಸಾವಿರಾರು ಜನರು ಸಂಚರಿಸುವ ಪೇಟೆ ಹಾಗೂ ರಸ್ತೆಯ ಬದಿಯಲ್ಲಿನ ತ್ಯಾಜ್ಯಗಳನ್ನು ತೆರವುಗೊಳಿಸದೆ ಇರುವುದಕ್ಕೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯಾಡಿತ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ತೆರವುಗೊಳಿಸುವಂತೆ ಸಾರ್ವಜನಿಕರು ಸ್ಥಳೀಯಾಡಳಿತವನ್ನು ಆಗ್ರಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಓಶಿಯನ್ ವರ್ಲ್ಡ್ ಎಂಟರ್ಪ್ರೈಸಸ್ ಆಶ್ರಯದಲ್ಲಿ ನೂತನ ಆನ್ಲೈನ್ ‘ಫಿಶ್ ಮಾರ್ಕೆಟ್ ಆ್ಯಪ್’ ಲೋಕಾರ್ಪಣಾ ಸಮಾರಂಭ ನಡೆಯಿತು. ತಾಜಾ ಮೀನಿಗೆ ಆನ್‌ಲೈನ್ ಮೂಲಕ ಮಾರುಕಟ್ಟೆ ಒದಗಿಸಲು ಕರಾವಳಿ ಪ್ರದೇಶಲ್ಲಿಯೇ ವಿನೂತನ ಪ್ರಯೋಗಕ್ಕೆ ಯುವಕರು ಹೆಜ್ಜೆ ಇರಿಸಿದ್ದು, ‘ಫಿಶ್ ಮಾರ್ಕೆಟ್ ಆ್ಯಪ್’ಗೆ ಚಾಲನೆ ನೀಡಲಾಯಿತು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ ಹೆಗ್ಡೆ ಮಾತನಾಡಿ, ‘ಸ್ಪರ್ಧಾತ್ಮಕ ಯುಗದಲ್ಲಿ ಜಾಲತಾಣವನ್ನು ಸದ್ಭಳಕೆ ಮಾಡುವ ಮೂಲಕ ಸ್ವಉದ್ಯೋಗ ಸೃಷ್ಟಿಮಾಡಬಹುದೆಂಬ ಪ್ರಯೋಗಕ್ಕೆ ಇವರು ಮಾದರಿಯಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಖಾರ್ವಿಕೇರಿ ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯನಂದ ಖಾರ್ವಿ, ‘ಮತ್ಸ್ಯಪ್ರಿಯರಿಗೆ ಅವರ ಆಯ್ಕೆಯ ಮೀನುಗಳನ್ನು ಆ್ಯಪ್ ಮೂಲಕ ಮನೆಗೆ ತಲುಪಿಸುವ ಯುವಕರ ಪ್ರಯತ್ನ ಶ್ಲಾಘನೀಯ’ ಎಂದರು. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮತ್ಸ್ಯೋದ್ಯಮಿ ಆನಂದ ಸಿ.ಕುಂದರ್, ಪುರಸಭಾ ಸದಸ್ಯ ಶೇಖರ ಪೂಜಾರಿ, ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಾನ್ಸನ್ ಡಿ ಆಲ್ಮೇಡಾ, ಕಂಡ್ಲೂರು ಜಾಮೀಯ ಮಸೀದಿ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಿಸಿ ಮನ್ನಾ ಭೂಮಿಯನ್ನು ಆದಷ್ಟು ಶೀಘ್ರದಲ್ಲಿ ಗುರುತಿಸಿ ನಿಖರವಾದ ಅಂಕಿ ಅಂಶಗಳೊಂದಿಗೆ ಮುಂದಿನ ಕುಂದು ಕೊರತೆ ಸಭೆಗೆ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಕಂದಾಯ ಇಲಾಖಾಧಿಕಾರಿಯವರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದರು. ಅವರು ಕುಂದಾಪುರ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಡೆದ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ, 1989 ನಿಯಮ 995 ತಿದ್ದುಪಡಿ ನಿಯಮಗಳು 2013ರಂತೆ ನಿಯಮ 17 ಎ ಪ್ರಕಾರ ಕಂದಾಯ ಉಪವಿಭಾಗ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ನಿಯಮಾವಳಿಯಂತೆ ಡಿಸಿ ಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿತರಿಸಲು ಆದಷ್ಟು ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದ ದಿನಕರ ಬಾಬು, ಪ್ರತೀ ದಲಿತ ಕಾಲೋನಿಗಳಲ್ಲಿ ಪೊಲೀಸ್ ಸಭೆಗಳನ್ನು ಔಚಿತ್ಯ ಪೂರ್ಣವಾಗಿ ಏರ್ಪಡಿಸಬೇಕು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ವಿವಿಧ ಇಲಾಖೆಗಳಡಿ ಸ್ವ ಉದ್ಯೋಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನಿವಾಸಿ ಭಾರತೀಯ ಉದ್ಯಮಿ, ಶಿರೂರು ಮೂಲದ ಮಣೆಗಾರ್ ಮೀರಾನ್ ಸಾಹೇಬ್ ಅವರು ಸಾಮಾಜಿಕ – ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಳೆದ 40 ವರ್ಷಗಳಿಂದ ಗಲ್ಪ್ ರಾಷ್ಟ್ರಗಳಲ್ಲಿ ಕನ್ನಡದ ನಾಡು ನುಡಿಯ ಸೇವೆ ಜೊತೆಗೆ ಶಿಕ್ಷಣ, ಸಾಮಾಜಿಕ, ಸಾಂಸ್ಕ್ರತಿಕ ಸೇರಿದಂತೆ ಹೊರನಾಡಿನಲ್ಲಿ ಪ್ರತಿ ವರ್ಷ ಕನ್ನಡಿಗರ ಸಂಘಟನೆಗೆ ಮತ್ತು ಕನ್ನಡದ ಅಭಿವೃದ್ದಿಗಾಗಿ ನಾನಾ ಸಂಘ ಸಂಸ್ಥೆಗಳ ಮೂಲಕ ಅನುಪಮ ಕೊಡುಗೆ ನೀಡುತ್ತಾ ಬಂದಿದ್ದಾರೆ. ಬೆಂಗಳೂರಿನಲ್ಲಿ ಸಂಘ ಸಂಸ್ಥೆಯ ಸಹಕಾರದೊಂದಿಗೆ ಸ್ಲಮ್ ಏರಿಯಾದಲ್ಲಿ ದುಶ್ಚಟಗಳಿಗೆ ಮಾರು ಹೋಗಿರಿರುವ ನೂರಾರು ಯುವಕರಿಗೆ ಸ್ವ ಉದ್ಯೋಗ ಕಲ್ಪಿಸಿ ಸ್ವಾವಲಂಬನೆಯ ಬದುಕು ಕಟ್ಟಿ ಕೊಟ್ಟಿದ್ದಾರೆ. ಶಿರೂರು ಉತ್ಸವದ ಮೂಲಕ ಶಿರೂರಿನ ಅಭಿವೃದ್ದಿಗೆ ಶ್ರಮಿಸಿದ ಇವರು ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾಗಿದ್ದಾರೆ. ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್, ಶಿರೂರು ಅಸೋಸಿಯೇಶನ್ ಸೇರಿದಂತೆ ವಿವಿಧ ಸಂಘ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂ. ಎ (ಇತಿಹಾಸ), ಎಂ. ಎ ( ರಾಜ್ಯಶಾಸ್ತ್ರ), ಎಂ. ಕಾಂ, ಎಂ. ಎಸ್ಸಿ (ಗಣಿತ), ಎಂ. ಎಸ್ಸಿ ( ರಸಾಯನಶಾಸ್ತ್ರ) ಕೋರ್ಸುಗಳು ಲಭ್ಯವಿದೆ. ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820 -2527955, ಮೊ. ನಂ. 9449969818 ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ವಕೀಲ, ವಾಗ್ಮಿ, ಲೇಖಕ ಎ.ಎಸ್.ಎನ್. ಹೆಬ್ಬಾರ್ ಅವರ 12 ಪುಸ್ತಕಗಳ ಗುಚ್ಛ ನ.1ರ ಕನ್ನಡ ರಾಜ್ಯೋತ್ಸವದಂದು ಕುಂದಾಪುರ ಕಲಾಮಂದಿರದಲ್ಲಿ ಬಿಡುಗಡೆಗೊಳ್ಳಲಿದೆ. ಅಂದು ಸಂಜೆ 5:30ಕ್ಕೆ ವಿನೂತನ ರಾಜ್ಯೋತ್ಸವ ಕಾರ್ಯಕ್ರಮವಾಗಿ ಕಲಾಕ್ಷೇತ್ರ-ಕುಂದಾಪುರ ಈ ಅಪೂರ್ವ ಸಮಾರಂಭವನ್ನು ಕೊರೊನಾ ಕಟ್ಟುಪಾಡಿನ ಚೌಕಟ್ಟಿನಲ್ಲಿ ನಡೆಸಲು ಸಜ್ಜಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಮಾನ್ಯ ಮಂತ್ರಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಸಾಹಿತಿ ಮತ್ತು ಮಾಜಿ ಪ್ರಾಂಶುಪಾಲರಾದ ಡಾ. ಜಯಪ್ರಕಾಶ್ ಮಾವಿನಕುಳಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಭಾಗವಹಿಸಲಿದ್ದಾರೆ. ಸದಾ ಸಭೆ, ಸಮಾರಂಭ, ಸಮ್ಮೇಳನ, ಭಾಷಣ ಎಂದುತಿರುಗಾಟದಲ್ಲೇ ಇರುತ್ತಿದ್ದ, ತನ್ನ ಬರಹಗಳನ್ನು ಪುಸ್ತಕವಾಗಿಸಲು ಸಮಯವಿಲ್ಲವೆನ್ನುತ್ತಿದ್ದ ಹೆಬ್ಬಾರರಿಗೆ ಲಾಕ್‌ಡೌನ್ ಸದವಕಾಶ ಒದಗಿಸಿಕೊಟ್ಟಿತ್ತು. ಮನೆಯಲ್ಲೇ ಕುಳಿತುಕೊಳ್ಳುವ ಹಾಗಾದ್ದನ್ನು ಬಳಸಿಕೊಂಡ ಅವರು ತಮ್ಮ ಬರಹಗಳ ಕಡತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು – ಗಂಗಾನಾಡು ಮಾರ್ಗದಲ್ಲಿ ಎತ್ತಬೇರು ಹಾಗೂ ಮಾವಡ ನಡುವಿನ ಕಿರು ಸಂಪರ್ಕ ಸೇತುವೆ ಶಿಥಿಲಗೊಂಡು ಮುರಿದುಬಿದ್ದು ಎರಡು ವರ್ಷ ಕಳೆದಿದ್ದರೂ ಮರುನಿರ್ಮಾಣವಾಗದೆ ಸಂಚಾರಕ್ಕೆ ತೊಡಕಾಗಿದೆ. ಗ್ರಾಮೀಣ ಭಾಗದ ನಡೆದಾರಿ ಮತ್ತು ಸಣ್ಣ ವಾಹನ ಸಂಚರಿಸುವ ಈ ಮಾರ್ಗ ಅಲ್ಲಿನ ಜನರ ಜೀವನಾಡಿ. ಈಗಲೂ ಅದರಲ್ಲೇ ಓಡಾಡುತ್ತಿದ್ದಾರೆ. ಮಳೆಗಾಲದಲ್ಲಿ ಅದರ ಮೇಲೆ ಹಳ್ಳದ ನೀರು ಹರಿಯುವುದರಿಂದ ಸಂಚಾರ ಸಾಧ್ಯವಾಗುವುದಿಲ್ಲ. ಸ್ಥಳೀಯರು ಹಲವು ಬಾರಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ನೀಡಿರೂ ಕ್ರಮ ಆಗಿಲ್ಲ. ಈ ಬಗ್ಗೆ ಬೇಸತ್ತಿರುವ ಜನಸಾಮಾನ್ಯರು ಶೀಘ್ರ ದುರಸ್ತಿಗೆ ಆಗ್ರಹಿಸಿದ್ದಾರೆ ‘ಯಡ್ತರೆ, ಬೈಂದೂರು ಹಾಗೂ ಪಡುವರಿ ಗ್ರಾಮ ಪಂಚಾಯಿತಿಗಳು ವಿಲೀನಗೊಂಡು ಎರಡು ತಿಂಗಳುಗಳು ಆಗಿವೆ. ಇಷ್ಟರಲ್ಲೇ ವ್ಯಾಪ್ತಿಯಲ್ಲಿ ಕೆಟ್ಟು ಹೋಗಿರುವ ರಸ್ತೆ, ಸೇತುವೆಗಳ ದುರಸ್ತಿ ಬಗ್ಗೆ ಕ್ರಿಯಾಯೋಜನೆ ಸಿದ್ಧಪಡಿಸಿದೆ. ಅಂದಾಜು ವೆಚ್ಚದ ಕರಡು ಪಟ್ಟಿಯನ್ನು ಸಂಬಂಧಪಟ್ಟವರಿಗೆ ಕಳುಹಿಸಲಾಗಿದೆ. ಅನುದಾನ ಬಿಡುಗಡೆಯಾದ ನಂತರ ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಹಾಗೂ ಎತ್ತಬೇರು-ಮಾವಡ ಸೇತುವೆ…
