Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ಪಟ್ಟಣ ಪಂಚಾಯತ್ ಗೆಜೆಟ್ ನೋಟಿಫಿಕೇಶನ್ ಆಗಿ ಆರು ತಿಂಗಳು ಕಳೆದಿದೆ. ಇದುವರೆಗೂ ನೂತನ ಪಟ್ಟಣ ಪಂಚಾಯತ್ ಗಡಿ ಗುರುತು ಕಾರ್ಯ ಪೂರ್ಣಗೊಳ್ಳಲಿಲ್ಲ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಏಕೆ ಗಮನ ಹರಿಸುತ್ತಿಲ್ಲ? ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯೋಜನಾ ಪ್ರಾಧಿಕಾರದ 60-70ಕ್ಕೂ ಕಡತಗಳು ವಿಲೇವಾರಿಯಾಗದ ಹಿನ್ನೆಲೆಯಲ್ಲಿ ಜನರು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗದೇ ಸಂಕಷ್ಟ ಎದುರಿಸುವಂತಾಗಿದೆ. ನೀವೇನು ಮಾಡುತ್ತಿದ್ದೀರಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಟ್ಟಣ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೊಲ್ಲೂರಿನ ಅಮ್ಮ ವಸತಿ ಗೃಹದಲ್ಲಿ ಬುಧವಾರ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಯೋಜನಾ ಪ್ರಾಧಿಕಾರದ ಅಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು. ಶೀಘ್ರ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಮಹಿಳಾ ವೇದಿಕೆ ಮತು ಕುಂದಾಪುರದ ಪ್ರದಾನಮಂತ್ರಿ ಜನೌಷಧಿ ಕೇಂದ್ರ ಕುಂದಾಪುರ ರೆಡ್‌ಕ್ರಾಸ್‌ಘಟಕದ ಸಹಯೋಗದಲ್ಲಿಸುವಿಧಾ ಪ್ಯಾಡ್‌ಕ್ರಾಂತಿ ಆಚರಣೆ ಪ್ರಯುಕ್ತ ಉಚಿನ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕುಂದಾಪುರ ರೆಡ್‌ಕ್ರಾಸ್ ಘಟಕ ಸಭಾಪತಿಗಳಾದ ಕೆ.ಜಯಕರ ಶೆಟ್ಟಿ, ಮಹಿಳೆಯರಲ್ಲಿ ಪ್ಯಾಡ್ ಬಳಕೆ ಮುಖ್ಯವಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಅದರ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು. ಕುಂದಾಪುರದ ರೆಡ್‌ಕ್ರಾಸ್ ಘಟಕದ ಸದಸ್ಯೆ ಡಾ. ಸೋನಿ ಡಿಕೋಸ್ತಾ, ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಪ್ಯಾಡ್ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿಕಾಲೇಜಿನ ಮಹಿಳಾ ವೇದಿಕೆಯ ಸಂಚಾಲಕರಾದಡಾ.ಯಶವಂತಿ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಯಜುಶಾ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕೆಗಾ೯ಲ್ ಗ್ರಾಮದ ಮೊಗೇರಿಯ ಭಟ್ಟರ್ ಹಿತ್ಲ್ ಪ್ರದೇಶದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಡು ಹೂಳೆತ್ತುವ ಕಾಮಗಾರಿಯ ಸ್ಥಳಕ್ಕೆ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾಯ೯ದಶಿ೯ ವೆಂಕಟೇಶ್ ಕೋಣಿ ಭೇಟಿ ನೀಡಿದರು ಅವರು ಮಾಚ್೯ 31ರಂದು ನಡೆಯುವ ಕೂಲಿಕಾರರ ‘ಬೇಡಿಕಾ ದಿನಾಚರಣೆ’ ರಾಜ್ಯವ್ಯಾಪಿ ಹೋರಾಟ ಕಾಯ೯ಕ್ರಮದ ಅಂಗವಾಗಿ ಬೈಂದೂರು ತಾಲೂಕು ಪಂಚಾಯತ್ ಕಚೇರಿ ಮುತ್ತಿಗೆ ಹೋರಾಟದಲ್ಲಿ ಕೂಲಿಕಾರರೆಲ್ಲರೂ ಭಾಗವಹಿಸಿ, ಯಶಸ್ವಗೊಳಿಸಬೇಕು ಎಂದು ಕರೆ ನೀಡಿದರು. ಏಳಜೀತ್ ಗ್ರಾಮದ ಕೃಷಿಕೂಲಿಕಾರರ ಸಂಘದ ಮುಖಂಡರಾದ ಸೀತಕ್ಕ ಭಾಗವಹಿಸಿ ಕೂಲಿಕಾರರಿಗೆ ಸಲಹೆ, ಮಾಗ೯ದಶ೯ನ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಈಚೆಗೆ ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪರಿಸರವನ್ನು ಸ್ವಚ್ಛಗೊಳಿಸಿ ಶ್ರಮದಾನ ನಡೆಸಿದರು. ಸಂಘದ ಉಪಾಧ್ಯಕ್ಷ ಸತೀಶ ಪೂಜಾರಿ ಗಂಗೊಳ್ಳಿ ಅವರ ಮನೆ, ಆವರಣ ಸಮತಟ್ಟು ಮಾಡಿ ಪೈಪ್ ಅಳವಡಿಸಲು ಜೆಸಿಬಿ ಯಂತ್ರ ಒದಗಿಸಿದ್ದರು. ವಿಶ್ವನಾಥ್ ಶ್ಯಾನುಬಾಗ್ ಸಹಕರಿಸಿದರು. ಸಂಘದ ಗೌರವಾಧ್ಯಕ್ಷ ದಯಾನಂದ ಬಳೆಗಾರ್, ಅಧ್ಯಕ್ಷ ರವಿ ಮಡಿವಾಳ, ಸದಸ್ಯರಾದ ಸೋಮಯ್ಯ ಬಿಲ್ಲವ, ಯೋಗೇಶ ಆಚಾರ್ಯ, ರಾಜು ಗಾಂಧಿನಗರ, ಅಣ್ಣಪ್ಪ ಖಾರ್ವಿ, ಗ್ರಾಮ ಪಂಚಾಯಿತಿ ಸದಸ್ಯೆ ಸುಜಾತಾ, ಇತರ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು. ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಅವರು ಶ್ರಮದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತ ಕಲಾರಂಗ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಪ್ರಭಾ ವಾರಪತ್ರಿಕೆ ಸಂಪಾದಕರಾದ ಯು.ಎಸ್.ಶೆಣೈ ಮಾತನಾಡಿ, ಅಂಕಗಳಿಕೆಯೊಂದೇ ವಿದ್ಯಾರ್ಥಿಗಳ ಸಾಧನೆಯಾಗಿರದೆ ಲಲಿತಕಲೆಗಳೊಂದಿಗೆ ಬದುಕನ್ನು ಸಂಭ್ರಮಿಸಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್ ಮಾತನಾಡಿ, ಪಠ್ಯೇತರ ಚಟುವಟಿಕೆ ವಿದ್ಯಾರ್ಥಿಗಳ ಭವಿಷ್ಯದ ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ನುಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್ ಹಾಗೂ ಲಲಿತ ಕಲಾರಂಗದ ಸಂಘಟಕ ಡಾ.ಸಂದೀಪ್ ಕುಮಾರ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಕುಮಾರಿ ಕಾವ್ಯಾ ಸ್ವಾಗತಿಸಿ, ವಿದ್ಯಾರ್ಥಿನಿ ಸಾಯಿಮಾ ವಂದಿಸಿದರು. ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಂಗಳೂರಿನ ಕರ್ನಾಟಕ ಪವರ್ ಲಿಫ್ಟಿಂಗ್ ಸಂಸ್ಥೆ ಹಾಗೂ ಸಾಲಿಗ್ರಾಮದ ವೀರಮಾರುತಿ ಜಿಮ್ ಸಹಯೋಗದಲ್ಲಿ ನಡೆದ 24 ನೇ ರಾಜ್ಯಮಟ್ಟದ ಜೂನಿಯರ್ ಮತ್ತು ಸಬ್ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡವು ಪ್ರಥಮ ಸ್ಥಾನ ಪಡೆದರೆ, ಪುರುಷರ ವಿಭಾಗದಲ್ಲಿ ರನ್ನರ್‌ಅಪ್ ಸ್ಥಾನ ಗಳಿಸಿದೆ. ಈ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾರೆ. ಇವರು ಮೂಡುಬಿದಿರೆಯ ಪ್ರಸನ್ನ ಹೆಗ್ಡೆ ಹಾಗೂ ಶ್ರೇಯಾ ದಂಪತಿ ಪುತ್ರ ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿರುವ ಇವರ ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಕಾಸ್, ಸ್ಪೆಲ್‌ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿ ರೂಪಿಸುವಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೊಲ್ಲೂರಿನಲ್ಲಿಯೂ ಒಳಚರಂಡಿ, ಕುಡಿಯುವ ನೀರು, ರಿಂಗ್ ರೋಡ್ ಯೋಜನೆ ಪ್ರಗತಿಯಲ್ಲಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಅಮ್ಮ ವಿಶ್ರಾಂತಿಗೃಹವನ್ನು ಬುಧವಾರ ಲೋಕಾರ್ಪಣೆಗೊಳಿಸಿ ಬಳಿಕ ಮಾತನಾಡಿ ಜಿ. ಶಂಕರ್ ಅವರು ನೂರಾರು ಸೇವಾ ಕಾರ್ಯಗಳನ್ನು ಕೈಗೊಂಡು ಜನರಿಗೆ ನೆರವಾಗುತ್ತಲೇ ಬಂದಿದ್ದಾರೆ. ಇದೀಗ ಅಮ್ಮ ವಿಶ್ರಾಂತಿಗೃಹ ನಿರ್ಮಿಸಿಕೊಡುವ ತಾಯಿಯ ಸೇವೆಗೈದಿದ್ದಾರೆ ಎಂದರು. ಬಾಲ್ಯದಲ್ಲಿ ತಂದೆ ತಾಯಿಯೊಂದಿಗೆ ಕೊಲ್ಲೂರು ಕ್ಷೇತ್ರಕ್ಕೆ ಬರುತ್ತಿದ್ದೆ. ಇಂದು ಅದೇ ಕ್ಷೇತ್ರದಲ್ಲಿ ಸೇವೆ ಮಾಡುವ ಅವಕಾಶವನ್ನು ತಾಯಿ ಕರುಣಿಸಿದ್ದಾಳೆ ಎಂದ ಅವರು ಕೇಬಲ್ ಕಾರ್ ಯೋಜನೆಯನ್ನು ಜಾರಿಗೊಳಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೋಡಲಾಗುವುದು ಎಂದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಷ್ಟೇ ದುಡಿದರೂ ಕೊನೆಯಲ್ಲಿ ಎಲ್ಲವನ್ನು ಬಿಟ್ಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದಶಕದಿಂದ ರಕ್ಷಣೆ, ಪ್ರಚಲಿತ ವಿದ್ಯಮಾನ, ಕಲೆ, ಸಂಸ್ಕೃತಿ ಕುರಿತು ಪತ್ರಿಕಾ ಅಂಕಣ ಬರಹಗಳಿಂದ ಪರಿಚಿತರಾಗಿರುವ ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡರ ಸೈನಿಕ ಜೀವನಾನುಭವದ ‘ಸೇನಾನುಭವ’ ಕೃತಿ ಬಿಡುಗಡೆ ಮಾ.13ರಂದು ಸಂಜೆ 4 ಗಂಟೆಗೆ ಉಡುಪಿಯ ಸುಹಾಸಂ ಆಶ್ರಯದಲ್ಲಿ ಕಿದಿಯೂರು ಹೋಟೆಲ್‌ನ ಪವನ್ ರೂಫ್‌ಟಾಪ್‌ನಲ್ಲಿ ನಡೆಯಲಿದೆ. ಹಿರಿಯ ಸಾಹಿತಿ ಡಾ. ನಾ. ಮೊಗಸಾಲೆ ಬಿಡುಗಡೆ ಮಾಡಲಿದ್ದಾರೆ. ಸಾಲಿಗ್ರಾಮದ ಲೇಖಕರ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರೊ. ಚಿತ್ರಪಾಡಿ ಉಪೇಂದ್ರ ಸೋಮಯಾಜಿ ಕೃತಿ ಪರಿಚಯ ಮಾಡಲಿದ್ದಾರೆ. ಸುಹಾಸಂನ ಅಧ್ಯಕ್ಷ ಶಾಂತರಾಜ ಐತಾಳರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕುಂದಪ್ರಭದ ಸಂಪಾದಕ ಯು. ಎಸ್. ಶೆಣೈ ಪಾಲ್ಗೊಳ್ಳಲಿದ್ದಾರೆ. ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರು ಇರುವಂತೆ ಸುಹಾಸಂ ಕಾರ್ಯದರ್ಶಿ ಎಚ್. ಗೋಪಾಲ ಭಟ್ ತಿಳಿಸಿದ್ದಾರೆ. ಪ್ರಸ್ತುತ ಚಂದ್ರಶೇಖರ ನಾವಡ ಅವರು ಸಾರ್ವಜನಿಕ ರಂಗದ ಯೂನಿಯನ್ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಕ್ಷಣೆ, ವಿದೇಶಾಂಗ, ನೀತಿ, ಬ್ಯಾಂಕಿಂಗ್ ಸಂಬಂಧಿಸಿದ ಲೇಖನ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ಹರಿಕಥಾ ಕಲಾಕ್ಷೇಪ’ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಹರಿಕಥಾ ಯುವ ಕಲಾವಿದೆ ಬೆಂಗಳೂರು ರಾಜಾಜಿನಗರದ ಇ.ಎಸ್.ಐ.ಸಿ. ವೈದ್ಯಕೀಯ ಕಾಲೇಜಿನ ಅಂತಿಮ ವೈದ್ಯಕೀಯ ವಿದ್ಯಾರ್ಥಿನಿ ತುಷಾರಾ ಎಲ್. ಆಚಾರ್ಯ ಶ್ರೀ ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರದ ಐತಿಹ್ಯದ ಕುರಿತಾಗಿ ಹರಿಕಥೆ ಪ್ರಸ್ತುತ ಪಡಿಸಿದರು. ವಿದ್ವಾನ್ ಪ್ರದೀಪ್ ಉಪಾಧ್ಯ ಹಾಗೂ ವಿದ್ವಾನ್ ಅನಂತ ಪದ್ಮನಾಭ ಭಟ್ ಕ್ರಮವಾಗಿ ತಬಲ ಮತ್ತು ಹಾರ್ಮೋನಿಯಂನಲ್ಲಿ ಸಹಕರಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಲಲಿತ ಕಲಾ ಸಂಘದ ಸಂಯೋಜಕರಾದ ಅಮೃತಾ, ಮಾಲತಿ ಉಪಸ್ಥಿತರಿದ್ದರು. ಸಹ ಸಂಯೋಜಕರಾದ ರಸಿಕ್ ಕುಮಾರ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಶುಭಾ ಅಡಿಗ ನಿರೂಪಿಸಿದರು.

Read More