ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉತ್ತರಾಖಾಂಡದ ಡೆಹ್ರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8 ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ನಡೆಸಲಾಗುವುದು. 7 ನೇ ತರಗತಿಯಲ್ಲಿ ಓದುತ್ತಿರುವ , ಜುಲೈ 1 2022 ಕ್ಕೆ 11.5 ವರ್ಷದಿಂದ 13 ವರ್ಷದೊಳಗಿನ ಬಾಲಕರು ಮಾತ್ರ ಪ್ರವೇಶಕ್ಕೆ ಅರ್ಹರಿದ್ದು, ಅರ್ಜಿಯನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.ಅಥವಾವೆಬ್ಸೈಟ್:http://www.rimc.gov.in/ ನ್ನು ಸಂಪರ್ಕಿಸಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಅಕ್ಟೋಬರ್ 5 ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ ಬೆಂಗಳೂರು-25 ಇವರಿಗೆ ಸಲ್ಲಿಸಬಹುದಾಗಿದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆಪ್ಟೆಂಬರ್ 7 ರೊಳಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ : ಎ-201, ಎ ಬ್ಲಾಕ್ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ರಜತಾದ್ರಿ ಮಣಿಪಾಲ ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಅರ್ಹತೆಗಳ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574977 ಅಥವಾ ಮೊಬೈಲ್ ಸಂಖ್ಯೆ: 85531 41512 ಗೆ ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು , ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅವರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಡ್ತಾಡಿ ಯುವವಾಹಿನಿ ಘಟಕದಿಂದ ರುದ್ರಭೂಮಿ ಸ್ವಚ್ಛತೆ ಮತ್ತು ಜಲ ಸಂರಕ್ಷಣೆಗೆ ತಡೆಗೋಡೆ ನಿರ್ಮಾಣ ಕಾರ್ಯ ಮಾಡುವ ನಡೆಯಿತು. ಯಡ್ತಾಡಿ ಹಿಂದೂ ರುದ್ರಭೂಮಿ ಸ್ವಚ್ಛತೆ ಹಾಗೂ ಪೋಲಾಗುತ್ತೀರುವ ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ ತಡೆಗೋಡೆ ನಿರ್ಮಾಣ ಮಾಡುವ ಕ್ರಾಂತಿಕಾರಿ ಹೆಜ್ಜೆ ಇಡುವ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡರು. ಯುವವಾಹಿನಿ ಸದಸ್ಯರ ಈ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಘಟಕದ ಅಧ್ಯಕ್ಷರಾದ ರಾಜು ಪೂಜಾರಿ ಕಾರ್ಯದರ್ಶಿ ಅಜಿತ್ ಕುಮಾರ್ ಎಸ್ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಂಬಾಳೆ ಫಿಲ್ಮ್ಸ್ ಹಾಗೂ ರಿಷಬ್ ಶೆಟ್ಟಿ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಸಿನೆಮಾ ’ಕಾಂತಾರ’ ಮುಹೂರ್ತ ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯಾಹ್ನ ಜರುಗಿತು. ದೇವಸ್ಥಾನದಲ್ಲಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಮಂಜುನಾಥ್ ಕೆ.ಎಸ್ ಕ್ಲಾಪ್ ಮಾಡಿದರು, ಯುವ ಮೆರಿಡಿಯನ್ ಉದಯಕುಮಾರ್ ಶೆಟ್ಟಿ ಕ್ಯಾಮರಾಕ್ಕೆ ಚಾಲನೆ ನೀಡಿದರು. ಈ ವೇಳೆ ನಿರ್ಮಾಪಕ ವಿಜಯ ಕಿರಗಂದೂರು, ನಟರಾದ ಪ್ರಮೋದ್ ಶೆಟ್ಟಿ, ನಟಿ ಸಪ್ತಮಿ ಗೌಡ, ಕಾರ್ತಿಕ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು. ಕಾಂತಾರ – ಒಂದು ದಂತಕಥೆ ಚಿತ್ರಕ್ಕೆ ರಿಷಬ್ ಶೆಟ್ಟಿ ಅವರೇ ಆಕ್ಷನ್ ಕಟ್ ಹೇಳುತ್ತಿದ್ದು, ನಾಯಕ ನಟನಾಗಿಯೂ ಕಾಣಿಸಿಕೊಳ್ಳಲಿದ್ದಾರೆ. ನಟಿ ಸಪ್ತಮಿ ಗೌಡ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊಂಬಾಳೆ ಫಿಲ್ಮ್ಸ್ನ ವಿಜಯ ಕಿರಗಂದೂರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇತ್ತಿಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಿನೆಮಾದ ಪೋಸ್ಟ್ರ್ ಬಿಡುಗಡೆಗೊಳಿಸಿ, ಈ ಕಿಚ್ಚು ನಮ್ಮ ಸುತ್ತಲೂ ಸದ್ಯ ಕವಿದಿರುವ ಕರಾಳತೆಯನ್ನು ದಹಿಸುತ್ತದೆ ಎಂಬ ನಂಬಿಕೆಯೊಂದಿಗೆ… ಎಂದು ರಿಷಬ್ ಶೆಟ್ಟಿ ಹೇಳಿಕೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದರ ವಿನೂತನ ಯೋಜನೆಯಾದ ಹೈವೆ ನೆಕ್ಸ್ಟ್ (ಮಿನಿ) ಮಳಿಗೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಶಿರೂರಿನಲ್ಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಹಲವು ಸವಲತ್ತುಗಳನ್ನು ಪ್ರಯಾಣಿಕರಿಗೆ ನೀಡಲಾಗುತ್ತಿದೆ. ಜೊತೆಗೆ ಇನ್ನಷ್ಟು ಸೌಲಭ್ಯಗಳು ಲಭಿಸಲಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಪಾರ್ಕಿಂಗ್ ಹಾಗೂ ಎಮ್ಯುನಿಟಿಸ್ ಸೆಂಟರ್ಗಳನ್ನು ಮಾಡಲಾಗುತ್ತದೆ ಹಾಗೂ ಯಾತ್ರಿಗರ ಸೌಲಭ್ಯವನ್ನು ಮಾಡುವ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತಿದೆ. ಮುಂದಿನ ದಿನದಲ್ಲಿ ಹೆದ್ದಾರಿ ಪ್ರಾಧಿಕಾರದ ಸಹಕಾರದೊಂದಿಗೆ ಆದಷ್ಟು ಶೀಘ್ರ ಇನ್ನಷ್ಟು ವಿನೂತನ ಯೋಜನೆಗಳನ್ನು ಹೆದ್ದಾರಿ ಪ್ರಾಕಾರಗಳಲ್ಲಿ ಅನುಷ್ಟಾಣಗೊಳಿಸಲಾಗುವುದು ಎಂದರು ಮತ್ತು ಮಿನಿ ನೆಕ್ಸ್ಟ್ ನಿಂದ ಸರಳ ಹಾಗೂ ಅತ್ಯಂತ ರಿಯಾಯಿತಿ ದರದಲ್ಲಿ ಪ್ರಯಾಣಿಕರಿಗೆ ತುರ್ತು ಸೇವೆ ದೊರೆಯಲಿರುವುದು ಅತ್ಯಂತ ಉತ್ತಮ ವ್ಯವಸ್ಥೆಯಾಗಿದೆ ಎಂದರು. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಂದ ಉತ್ತಮ ಕಾರ್ಯ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರಿನ ಪ್ರೊಜೆಕ್ಟ್ ಡೈರೆಕ್ಟರ್ ಶಿಶುಮೋಹನ್ ಬಂದ ಬಳಿಕ ಮಂಗಳೂರು ವಿಭಾಗದಲ್ಲಿ ಅತ್ಯಂತ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ದಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಮ್.ಎಮ್.ಹೌಸ್ ಶಿರೂರು ಇದರ ವತಿಯಿಂದ ಸುಮಾರು 5 ಲಕ್ಷ ರೂಪಾಯಿ ವೆಚ್ಚದ ಸಲಕರಣೆಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮದ ಅಭಿವೃದ್ದಿಗೆ ಇಲಾಖೆಗಳ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ. ಶಿರೂರಿನಂತಹ ಗ್ರಾಮೀಣ ಭಾಗದಲ್ಲಿ ಮಣಿಗಾರ್ ಮೀರಾನ್ ರವರ ಎಮ್.ಎಮ್.ಹೌಸ್ ಇದರ ಕೊಡುಗೆ ಅಪಾರವಾಗಿದೆ. ಊರಿನ ಅಭಿವೃದ್ದಿಗೆ ಇವರ ಕೊಡಗೆ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಕಮಿಷನರ್ ರಾಜು, ಬಂದೂರು ತಹಶೀಲ್ದಾರ ಶೋಭಾಲಕ್ಷ್ಮೀ ಎಚ್.ಎಸ್., ಶಿರೂರು ಗ್ರಾ.ಪಂ ಅಧ್ಯಕ್ಷೆ ದಿಲ್ಶಾದ್ ಬೇಗಂ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್, ಗ್ರಾ.ಪಂ ಸದಸ್ಯರಾದ ಮುಕ್ರಿ ಮಹ್ಮದ್ ಅಲ್ತಾಫ್, ಉದಯ ಪೂಜಾರಿ ಮೈದಿನಪುರ, ಪ್ರಸನ್ನ ಕುಮಾರ್ ಶೆಟ್ಟಿ, ರಘುರಾಮ ಕೆ. ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸಲಕರಣೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಾಜಿ ಆಟಗಾರ, ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ ಇದರ ಅಧ್ಯಕ್ಷರಾಗಿರುವ ಗೌತಮ್ ಶೆಟ್ಟಿ ಕುಂದಾಪುರ ಅವರು ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಕೂಟಗಳನ್ನು ಆಯೋಜಿಸಿ ಕ್ರೀಡೆಗೆ ತನ್ನದೇ ಆದ ಪ್ರೋತ್ಸಾಹ ನೀಡುತ್ತಿರುವ ಗೌತಮ್ ಶೆಟ್ಟಿ ಅವರು ಹಿಂದೆ ಜಿಲ್ಲೆಯ ಪ್ರತಿಷ್ಠಿತ ಟಾರ್ಪೆಡೋಸ್ ಕ್ರಿಕೆಟ್ ಕ್ಲಬ್ ನ ಆಟಗಾರರಾಗಿ, ನಾಯಕರಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಈಗಲೂ ಕ್ರಿಕೆಟ್ ಮಾತ್ರವಲ್ಲದೆ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಚೆಸ್ ಸೇರಿದಂತೆ ಹಲವಾರು ಟೂರ್ನಿಗಳನ್ನು ಆಯೋಜಿಸಿರುತ್ತಾರೆ. ಜಿಲ್ಲೆಯಲ್ಲಿ ನಡೆಯುವ ಇತರ ಕ್ರೀಡಾಕೂಟಗಳಿಗೂ ತನ್ನಿಂದಾದ ನೆರವನ್ನು ನೀಡುತ್ತಿದ್ದಾರೆ. ಮಣಿಪಾಲದ ಡಾ. ವಿನೋದ್ ನಾಯಕ್ ಅವರು ಸಂಸ್ಥೆಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಶರತ್ ಶೆಟ್ಟಿ ಪಡುಬಿದ್ರಿ, ಶ್ರೀಪಾದ್ ಉಪಾಧ್ಯ, ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ, ದಯಾನಂದ ಬಂಗೇರ, ಉದಯ್ ಕಟಪಾಡಿ, ಗಿರೀಶ್ ಬೈಂದೂರು, ಅಧ್ಯಕ್ಷರಾಗಿ ಗೌತಮ್ ಶೆಟ್ಟಿ ಕುಂದಾಪುರ, ಉಪಾಧ್ಯಕ್ಷರಾಗಿ ಉದಯ್ ಕಿನ್ನಿಮೂಲ್ಕಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೇಶ್ವರದ ನಾಣು ಚಂದನ್ ಅವರ ನೇತೃತ್ವ ಮತ್ತು ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ರಕ್ಷಾಬಂಧನ ದಿನಾಚರಣೆಯಲ್ಲಿ ವಿವಿಧ ಸೇವಾನಿರತರನ್ನು ಸನ್ಮಾನಿಸಲಾಯಿತು. ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಧರ್ಮದರ್ಶಿ ತಿಮ್ಮ ವಿ. ದೇವಾಡಿಗ ಕಾರ್ಯಕ್ರಮ ಉದ್ಘಾಟಿಸಿದರು. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬೈಂದೂರು ತಾಲ್ಲೂಕು ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಮಹೇಂದ್ರ ಪೂಜಾರಿ, ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೇಖರ ಖಾರ್ವಿ, ಧಾರ್ಮಿಕ ಚಟುವಟಿಕೆ ನಡೆಸುತ್ತಿರುವ ಪದ್ಮಾವತಿ ಟಿ. ದೇವಾಡಿಗ ಅವರು ಸನ್ಮಾನ ಸ್ವೀಕರಿಸಿದರು. ಕೋವಿಡ್ ವಾರಿಯರ್ಸ್ ದುಡಿಯುತ್ತಿರುವ ಕಿರಿಮಂಜೇಶ್ವರ ಗ್ರಾಮದ ಎಲ್ಲ ಆಶಾ ಕಾರ್ಯಕರ್ತರ ಸೇವೆಯನ್ನು ಗುರುತಿಸಿ ಅವರಿಗೆ ಕಿರು ಕಾಣಿಕೆ ನೀಡಿ ಶುಭ ಕೋರಲಾಯಿತು. ಮೀನುಗಾರಿಕಾ ಇಲಾಖೆಯ ನಿವೃತ್ತ ಅಧಿಕಾರಿ ಸಿ. ಎಸ್. ಖಾರ್ವಿ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೋವಿಡ್ ನಂತರದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಆನ್ಲೈನ್ ಶಿಕ್ಷಣ ಈಗ ಅನಿವಾರ್ಯವಾಗಿದ್ದು ಅದಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದೆ. ಸರಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣದ ದೊರೆಯುವಂತೆ ಮಾಡುವುದು ಸರಕಾರದ ಗುರಿಯಾಗಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಾಗ್ನಿಜೆಂಟ್ ಕಂಪೆನಿ ಹೆಲ್ಫ್ ಟು ಎಜುಕೇಟ್ ಯೋಜನೆಯಡಿ ಬೈಂದೂರು ರೋಟರಿ ಸಂಸ್ಥೆಯ ಮೂಲಕ ಕೊಡಮಾಡಿದ ರೂ. 10 ಲಕ್ಷ ಮೌಲ್ಯದ 30 ಕಂಪ್ಯೂಟರ್ ಸಿಸ್ಟಮ್ ಹಸ್ತಾಂತರಿಸಿ ಮಾತನಾಡಿದರು. ರೋಟರಿ ಕ್ಲಬ್ ಸಮಾಜ ಕಟ್ಟುವ ಕಾರ್ಯ ಮಾಡುತ್ತಿದೆ. ಬೈಂದೂರು ಸರಕಾರಿ ಕಾಲೇಜಿಗೆ ಕಾಗ್ನಿಜೆಂಟ್ ಸಂಸ್ಥೆಯ ಸಿಎಸ್ಆರ್ ಮೂಲಕ ನೀಡುವ ಕಾರ್ಯ ಮಾಡಿದೆ. ರೋಟರಿ ಸಂಸ್ಥೆಯ ಮೂಲಕ ಇನ್ನಷ್ಟು ಉತ್ತಮ ಕಾರ್ಯಗಳಾಗಲಿ ಎಂದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಕುಮಾರ್ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ಎಸ್. ಕುಮಾರ್ ಅವರು ಎರಡು ಭಾರಿ ಕೊಲ್ಲೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಕೊಲ್ಲೂರು ಜೀಪು ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.
