ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಭಿನವ ಕಲಾ ತಂಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಕುಂದಾಪುರದ ವಿಠಲವಾಡಿಯಲ್ಲಿ ನಡೆಯಿತು. ಕುಂದಗನ್ನಡದ ರಾಯಾಭಾರಿ ಅಧ್ಯಾಪಕರು ಮನು ಹಂದಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ನಾಟಕ ನಿರ್ದೇಕರಾದ ರಾಮಚಂದ್ರ ಉಡುಪ ವಹಿಸಿದ್ದರು. ಕಲಾ ತಂಡದ ಚೊಚ್ಚಲ ನಾಟಕ ಕೃತಿ ‘ರತ್ನ ಶ್ಯಾಮಿಯಾನ’ ಇದರ ಬಿಡುಗಡೆಯನ್ನು ದಿನೇಶ ಗೋಡೆ ನೆರವೇರಿಸಿದರು. ಸಂಸ್ಥೆಯ ಸಾಮಾಜಿಕ ಜಾಲತಾಣವನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ರಾಯಪ್ಪನ ಮಠ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ನಾಟಕ ನಿರ್ದೇಶಕರಾದ ರಾಮಚಂದ್ರ ಉಡುಪ ಇವರಿಗೆ ಗುರುವಂದನೆ ಸಲ್ಲಿಸಲಾಯಿತು. ಸಂಸ್ಥೆಯ ಸ್ಥಾಪಕರಾದ ನಾಗರಾಜ ವಿಠಲವಾಡಿ, ಗುರು ಕುಂದಾಪುರ, ಉದಯ ಪೂಜಾರಿ, ಉಪಸ್ಥಿತರಿದ್ದರು. ಶ್ರೀನಿವಾಸ ಪೈ ಸ್ವಾಗತಿಸಿದರು, ಚೈತ್ರ ಕಾರ್ಯಕ್ರಮ ನಿರೂಪಿಸಿದರು, ಗುರು ಕುಂದಾಪುರ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಯನ್ಸ್ ಕ್ಲಬ್ ವತಿಯಿಂದ ಕೋಟೇಶ್ವರದ ಗಣೇಶ್ ಕಲ್ಪತರು ಇಂಡಸ್ಟ್ರೀಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಕುಂದಾಪುರದ ನಂದಾ ಡೆಂಟಲ್ ಕ್ಲಿನಿಕ್‌ನ ವೈದ್ಯರಾದ ಡಾ. ಸ್ಮಿತಾ ಆರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಕಾರ್ಯದರ್ಶಿ ರಾಜೇಂದ್ರ, ಮಾಜಿ ಅಧ್ಯಕ್ಷರಾದ ರಾಜೀವ ಕೋಟ್ಯಾನ್, ಕೋಶಾಧಿಕಾರಿ ಕಿರಣ್ ಕುಮಾರ್, ಮಾಜಿ ಅಧ್ಯಕ್ಷರಾದ ರಮಾನಂದ ಇಂಜಿನಿಯರ್, ಸದಸ್ಯರಾದ ನಾರಾಯಣ ಶೆಟ್ಟಿ ಉಪಸ್ಥಿತರುದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟೇಶ್ವರದ ಸನ್‌ರೈಸ್ ಪೈಪ್ ಇಂಡಸ್ಟ್ರಿ ಮತ್ತು ರಾಜಾರಾಮ್ ಪೊಲಿಮರ‍್ಸ್ ಇಂಡಸ್ಟ್ರಿ ಕೋಟೇಶ್ವರ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸನ್‌ರೈಸ್ ಕೈಗಾರಿಕೆಯ ವ್ಯವಸ್ಥಾಪಕರಾದ ಕುಮಾರ್ ಹಾಗೂ ರಾಜರಾಮ್ ಪೊಲಿಮರ‍್ಸ್ ಇಂಡಸ್ಟ್ರಿಯ ಪಾಲುದಾರರಾದ ವಿಘ್ನೇಶ್ ಕಾಮತ್‌ರವರು ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆಯ ಕುರಿತು ಉಪನ್ಯಾಸ ನೀಡಿದರು. ಜೊತೆಗೆ ಯಂತ್ರಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿಗೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ವೇತಾ ಯು. ಶೆಟ್ಟಿಯವರು ವಂದಿಸಿದರು. ಕಾಲೇಜಿನ ವತಿಯಿಂದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚೈತ್ರಾ ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಿರುಷಾ ಶೆಟ್ಟಿಯವರು ಸ್ಮರಣಿಕೆ ನೀಡಿ ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2020ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಲ್ಕು ಸಂಘ ಸಂಸ್ಥೆಗಳು ಸೇರಿ ಒಟ್ಟು 40 ಮಂದಿಯನ್ನು ಆಯ್ಕೆ ಮಾಡಲಾಗಿದೆ. ದೈವಾರಾಧನೆ, ರಂಗಭೂಮಿ, ಸಾಹಿತ್ಯ, ಯಕ್ಷಗಾನ, ಪತ್ರಿಕೋದ್ಯಮ, ಶೈಕ್ಷಣಿಕ, ಸಂಕೀರ್ಣ, ಯೋಗ, ಕಲೆ – ಕರಕುಶಲ, ಕಲೆ ಕಾಷ್ಟ ಶಿಲ್ಪ, ಕಲೆ – ಪೆನ್ಸಿಲ್ ಲೆಡ್ ಕಲೆ, ಕಲೆ – ಶಿಲ್ಪಕಲೆ, ವೈದ್ಯಕೀಯ, ಸಂಗೀತ, ನೃತ್ಯ, ಸಮಾಜಸೇವೆ, ಕ್ರೀಡೆ, ಬಾಲಪ್ರತಿಭೆ, ಸಂಘ ಸಂಸ್ಥೆ ವಿಭಾಗಗಳಿಂದ ಒಟ್ಟು 40 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದೈವಾರಾಧನೆ: ರಂಗ ಪಾಣ, ಮೋಂಟು ಪಾಣರ, ಮಂಜುನಾಥ ಶೇರಿಗಾರ ರಂಗಭೂಮಿ: ಪಾರಂಪಳ್ಳಿ ನರಸಿಂಹ ಐತಾಳ್, ವಸಂತ ಪೂಜಾರಿ ಮುನಿಯಾಲು, ದಿನಕರ ಭಂಡಾರಿ ಕಣಜಾರು ಸಾಹಿತ್ಯ: ನವೀನ್ ಸುವರ್ಣ ಪಡ್ರೆ ಯಕ್ಷಗಾನ: ಸುದರ್ಶನ ಉರಾಳ, ಶಶಿಕಲಾ ಪ್ರಭು, ನಾಗೇಶ್ ಗಾಣಿಗ ಪತ್ರಿಕೋದ್ಯಮ: ಉದಯ ಪಡಿಯಾರ್, ಆರ್. ಶ್ರೀಪತಿ ಹೆಗಡೆ ಹಕ್ಲಾಡಿ ಶೈಕ್ಷಣಿಕ: ಡಾ. ಕೆ ಗೋಪಾಲಕೃಷ್ಣ ಭಟ್, ಡಾ. ಸುಧಾಕರ ಶೆಟ್ಟಿ, …
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಮುಂದಿನ ಮೂರು ವರ್ಷಗಳ ಆಡಳಿತಾವಧಿಗೆ 9 ಮಂದಿ ಸದಸ್ಯರನ್ನೊಳಗೊಂಡ ನೂತನ ವ್ಯವಸ್ಥಾಪನ ಸಮಿತಿಯನ್ನು ರಾಜ್ಯ ಸರಕಾರ ಧಾರ್ಮಿಕ ಪರಿಷತ್ ನೇಮಕ ಮಾಡಿ ಆದೇಶ ಹೊರಡಿಸಿದ್ದು, ವ್ಯವಸ್ಥಾಪನ ಸಮಿತಿಯ ಪ್ರಥಮ ಸಭೆಯಲ್ಲಿ ಆನಂದ್ ಸಿ. ಕುಂದರ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಸದಸ್ಯರೆಲ್ಲರೂ ಸರ್ವಾನುಮತದಿಂದ ಪುನರಾಯ್ಕೆ ಮಾಡಿದ್ದಾರೆ. ಒಟ್ಟು 43 ಮಂದಿ ಆಕಾಂಕ್ಷಿಗಳು ಸಮಿತಿಯ ಸದಸ್ಯರಾಗಲು ಅರ್ಜಿ ಸಲ್ಲಿಸಿದ್ದು ಇವರಲ್ಲಿ ಓರ್ವ ಪ್ರಧಾನ ಅರ್ಚಕರು ಹಾಗೂ ಸಾಮಾನ್ಯ ವರ್ಗದಿಂದ ಆನಂದ್ ಸಿ. ಕುಂದರ್, ರಾಮದೇವ ಐತಾಳ್, ಸುಬ್ರಾಯ ಆಚಾರ್ಯ, ಸತೀಶ್ ಹೆಗಡೆ, ಚಂದ್ರ ಪೂಜಾರಿ ಕದ್ರಿಕಟ್ಟು ಹಾಗೂ ಮಹಿಳಾ ಮೀಸಲಾತಿಯಲ್ಲಿ ಜ್ಯೋತಿ ಬಿ. ಶೆಟ್ಟಿ ಸುಶೀಲಾ ಸೋಮಶೇಖರ್, ಎಸ್. ಸಿ ಕೋಟಾದಿಂದ ಸುಂದರ್ ಕೆ. ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ₹50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ ಗ್ರಾಮ ಪಂಚಾಯಿತಿಯ ಕಲ್ಲಾನಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗದಿಂದ ಬೇಲೆಬದಿಗೆ ಹೋಗುವ ರಸ್ತೆ ಕಾಮಗಾರಿಗೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ರಸ್ತೆಗಳು ಊರಿನ ಜೀವನಾಡಿಯಿದ್ದಂತೆ. ಊರಿನ ವಿವಿಧ ರಂಗಗಳ ಅಭಿವೃದ್ಧಿಯಲ್ಲಿ ಉತ್ತಮ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ ರಾಜ್ಯ ಸರ್ಕಾರ ರಸ್ತೆ ನಿರ್ಮಾಣ, ದುರಸ್ತಿ ಮತ್ತು ಉನ್ನತೀಕರಣಕ್ಕೆ ಆದ್ಯತೆ ನೀಡುತ್ತಿದೆ. ಈ ವಿಚಾರದಲ್ಲಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೂ ಆದ್ಯತೆ ನೀಡಲಾಗುತ್ತಿದೆ’ ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ. ಜಿ ಪುತ್ರನ್, ರಾಜ್ಯ ಯೋಜನಾ ಮಂಡಳಿ ಸದಸ್ಯೆ ಪ್ರಿಯದರ್ಶಿನಿ ಬೆಸ್ಕೂರ್, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ. ತ್ರಾಸಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಿಥುನ್ ದೇವಾಡಿಗ, ಜಿಲ್ಲಾ ಪಂಚಾಯಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ – ಯಡ್ತಾಡಿ ಇದರ ನೂತನ ಅಧ್ಯಕ್ಷರಾಗಿ ರತ್ನಾಕರ ಪೂಜಾರಿ , ಕಾರ್ಯದರ್ಶಿಯಾಗಿ ಪ್ರಶಾಂತ್ ಸೂರ್ಯ ಇವರು ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕೋಶಾಧಿಕಾರಿಯಾಗಿ ಜಗದೀಶ್ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಪ್ರಭಾಕರ್ ಶಾಮಂತ್ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಘವೇಂದ್ರ ಸಿ. ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಕಾರ್ತಿಕ್, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವನಾಥ ಅವರನ್ನು ನೂತನವಾಗಿ ಮುಂದಿನ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೆಂಪು – ವಂಡ್ಸೆಯ ಶ್ರೀ ಸಾಯಿ ಕಲ್ಚರಲ್ ಸ್ಪೋಟ್ಸ್ ಕ್ಲಬ್‌ನಲ್ಲಿ ಈಗಾಗಲೇ ಎರಡು ಒಳಾಂಗಣ ಶಟಲ್ ಬ್ಯಾಡ್ಮಿಂಟನ್ ಕೋರ್ಟು, ಸ್ನೂಕರ್ ಕೋರ್ಟು, ಎರಡು ಕೇರಂ ಕೋರ್ಟುಗಳು ಇದ್ದು ದಿನ ಸುಮಾರು 40 – 50 ಜನ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳುತ್ತಿದ್ದು, ನ.1ರಂದು ಟೇಬಲ್ ಟೆನಿಸ್ ಒಳಾಂಗಣ ಕೋರ್ಟನ್ನು ಆರಂಭ ಮಾಡುತ್ತಿದ್ದು, ರಾಷ್ಟ್ರೀಯ ಟೇಬಲ್ ಟೆನಿಸ್ ಕ್ರೀಡಾಪಟು ಪಲ್ಲವಿ ವಿ. ರಾವ್ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಶ್ರೀ ಸಾಯಿ ಕಲ್ಚರಲ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷರಾದ ಅಶೋಕ ಶೆಟ್ಟಿ ಜಾಡ್ಕಟ್ಟು ತಿಳಿಸಿದರು. ಅ.29ರಂದು ಶ್ರೀ ಸಾಯಿ ಕಲ್ಚರಲ್ ಸ್ಪೋಟ್ರ್ಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಸಂಸ್ಥೆಯು ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಹಂಗಳೂರು ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಈಗಾಗಲೇ ಯಕ್ಷಗಾನ ತರಬೇತಿ ಶಿಬಿರವನ್ನು ನಡೆಸುತ್ತಿದ್ದೇವೆ. ಪ್ರಸಿದ್ಧ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ತರಬೇತಿ ನೀಡುತ್ತಿದ್ದಾರೆ. ನ.1ರಂದು ಈ ಶಿಬಿರದ ಸಮಾರೋಪ ಸಮಾರಂಭ…
ಕುಂದಾಪ್ರ ಡಾಟ್ ಕಾಂ ಕುಂದಾಪುರ: ಇಲ್ಲಿನ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ಐಕ್ಯೂಎಸಿ ಆಯೋಜಿಸಿದ ಶಿಕ್ಷಕ ಸಮುದಾಯದ ಮೇಲೆ ಕೋವಿಡ್-19 ಬೀರಿದ ಪರಿಣಾಮಗಳು ಮತ್ತು ಸವಾಲುಗಳು ಎಂಬ ವಿಷಯದ ಕುರಿತು ಆಯೋಜಿಸಿದ ರಾಷ್ಟ್ರ ಮಟ್ಟದ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಕೋವಿಡ್ – 19ನಿಂದಾಗಿ ಇಡೀ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಮಟ್ಟದ ಪೆಟ್ಟು ಬಿದ್ದಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ. ಕರೋನದಿಂದಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಹನ ನಡೆಸಲು ಕಷ್ಟವಾಗುತ್ತಿದೆ. ಅದೆಷ್ಟೋ ಶಿಕ್ಷಕರು ಕೋವಿಡ್‌ನಿಂದಾಗಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ – ರಾಜ್ಯ ಸರ್ಕಾರಗಳು ಶಿಕ್ಷಕ ಮತ್ತು ವಿದ್ಯಾರ್ಥಿ ಸಮುದಾಯಗಳ ಶೈಕ್ಷಣಿಕ ಅಗತ್ಯಗಳಿಗೆ ಶೀಘ್ರ ಸ್ಪಂದಿಸಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿಚಾರಣ ಸಂಕಿರಣವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪತ್ರಕರ್ತ, ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅವರು ಸಂಕಲಿಸಿ, ಜನಪ್ರತಿನಿಧಿ ಪ್ರಕಾಶನ ಪ್ರಕಟಿಸಿರುವ ’ಜನಾಧಿಕಾರ’ ಗ್ರಾಮ ಪಂಚಾಯಿತಿ ಮಾರ್ಗದರ್ಶಿ ಪುಸ್ತಕ ಅ31ರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಬಿಡುಗಡೆಗೊಳ್ಳಲಿದೆ. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಸಮಿತಿ ಸದಸ್ಯ ಟಿ. ಬಿ. ಶೆಟ್ಟಿ ಪುಸ್ತಕದ ಕುರಿತು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ ಎಂದು ಪ್ರಕಾಶಕ, ಜನಪ್ರತಿನಿಧಿ ಬಳಗದ ಸುಬ್ರಹ್ಮಣ್ಯ ಪಡುಕೋಣೆ ತಿಳಿಸಿದ್ದಾರೆ. ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ
