Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ಪವನ್‌ ನಾಯಕ್‌ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಬಂಧಿಸಲಾಗಿದೆ. ಗೋ ಮಾಂಸ, ಗೋವಿನ 2 ತಲೆ, ಗೋವಿನ ಕಾಲುಗಳು ಮತ್ತಿತ್ತರ ತ್ಯಾಜ್ಯಗಳು ಶೆಡ್‌ನ‌ಲ್ಲಿ ಹರಡಿಕೊಂಡಿತ್ತು. ಒಂದು ಜೀವಂತ ಗೋವನ್ನು ಕಟ್ಟಿ ಹಾಕಲಾಗಿತ್ತು. ಅದನ್ನು ಪೊಲೀಸರು ರಕ್ಷಿಸಿದ್ದಾರೆ. ಮೊಹಮ್ಮದ್‌ ಯೂಸುಬ್‌, ಮೊಯ್ದಿನ್‌ ಹಾಗೂ ನಾಸೀರ್‌ಆಲಿ ಸೇರಿ ಗುಲ್ವಾಡಿ ಬೊಳುಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ 3 ಗೋವುಗಳನ್ನು ಕಳವು ಮಾಡಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಪ್ರಾಯೋಜಿತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇಂಟರಾಕ್ಟ್ ಕ್ಲಬ್ಬಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ ನಾವುಂದ ಅವರು ಮಾತನಾಡಿ, ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ ನಾವು ನೀವು ನಾವು ಕಲಿತ ಶಾಲೆಗೆ, ನಮ್ಮ ಊರಿಗೆ ಮತ್ತು ನಮ್ಮ ಮನೆಗೆ ಮಾದರಿಯಾಗಲು ಪ್ರಯತ್ನಿಸೋಣ ಎಂದರು. ಮುಖ್ಯ ಕುಮಾರ್ ಎಸ್. ಕಾಂಚನ್ ಮಾತನಾಡಿ ಹತ್ತನೆ ತರಗತಿಯ ವಿದ್ಯಾರ್ಥಿಯರಿಗೆ 2022-23ನೇ ಸಾಲಿನ ಪರೀಕ್ಷೆ ಭಯ, ಪರೀಕ್ಷೆ ಎದುರಿಸುವ ರೀತಿ, ಪರೀಕ್ಷೆಗೆ ತಯಾರಿ ಮತ್ತು ಶಿಕ್ಷಣದ ಬಗ್ಗೆ ಸುದೀರ್ಘವಾಗಿ ಮಕ್ಕಳ ಮನಸ್ಸು ನಾಟುವ ರೀತಿಯಲ್ಲಿ ಮಾತನಾಡಿ ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ ಶುಭಾಶಯಗೈದರು ಇಂಟರಾಕ್ಟ್ ಕೋಆರ್ಡಿನೇಟರ್ ಗಣೇಶ್ ಐತಾಳ್, ಶಿಕ್ಷಕ ನಾಗರಾಜ ಉಪಸ್ಥಿತರಿದ್ದರು. ಶಿಕ್ಷಕ ಕೃಷ್ಣ ಮೂರ್ತಿ ಪಿ.ಕೆ. ಸ್ವಾಗತಿಸಿ ಧನ್ಯವಾದಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಜನವರಿ 26ರಿಂದ 30ರ ತನಕ ‘ನವೀಕೃತ ಶಿಲಾದೇಗುಲ ಲೋಕಾರ್ಪಣೆ – ಪುನಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ’ ಮೊದಲಾದ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇಗುಲದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದಯಾನಂದ ಜೋಗಿ ನಾವುಂದ ಕೋರಿದ್ದಾರೆ. ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ಶುಕ್ರವಾರ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 5 ದಿನಗಳ ಕಾಲ ಕಂಬದಕೋಣೆ ಗ್ರಾಮದಲ್ಲಿ ನಡೆಯುವ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಮಂಗಳೂರು ಕದ್ರಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಹಾರಾಜ್ ಹಾಗೂ ಯಡಮೊಗೆ ಹಲವರಿ ಮಠದ ಶ್ರೀ ಫೀರ್ ಯೋಗಿ ಜಗದೀಶನಾಥ್ಜಿ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನವೀಕೃತ ಶಿಲಾದೇಗುಲ ಲೋಕಾರ್ಪಣೆ, ಪುನರ್ಪ್ರತಿಷ್ಠೆ, ಅಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ನಾಗದೇವರಿಗೆ ಮಂಡಲೋತ್ಸವ, ಸಾಮೂಹಿಕ ಜೋಗಿ ದೀಕ್ಷಾ ಕಾರ್ಯಕ್ರಮ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಜ.14: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮುಂಬರುವ ಪರೀಕ್ಷೆಯನ್ನು ಎದುರಿಸುವ ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ವಾಗ್ಮಿ ಮುನಿರಾಜ್ ರೆಂಜಾಳ ಅವರು ವಿದ್ಯಾರ್ಥಿಗಳಿಗೆ ಭಯವಿಲ್ಲದೆ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎನ್ನುವುದನ್ನು ತಿಳಿಸುತ್ತಾ ಓದಿನ ಮಹತ್ವವನ್ನು ತಿಳಿಸಿದರು. ಬದುಕಿನ ಪಾಠವನ್ನು ಕಲಿಯುತ್ತಾ ಆತ್ಮವಿಶ್ವಾಸವನ್ನು ಬೆಳೆಸಿಕೊಂಡರೆ ಎಲ್ಲವೂ ಸಾಧ್ಯ ಎಂದು ಹೇಳುತ್ತಾ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಬಾಯಿರಿ, ಕುಮಾರಿ ಗೀತಾ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ವೈಶಾಲಿ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಜ.14 ರಿಂದ 16ರ ವರೆಗೆ ನಡೆಯಲಿರುವ ಮಕರ ಸಂಕ್ರಮಣ ಉತ್ಸವಕ್ಕೆ ಸಂಪೂರ್ಣ ಸಿದ್ಧತೆ ನಡೆದಿದ್ದು, ಸಾವಿರಾರು ಭಕ್ತರು ಬೆಳಿಗ್ಗೆಯಿಂದ ದೇವರ ದರ್ಶನ ಪಡೆಯುತ್ತಿದ್ದಾರೆ. ಜ.14ರಂದು ಬೆಳಗ್ಗೆ 9ಕ್ಕೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಹಾಮಂಗಳಾರತಿ, ರಾತ್ರಿ 10.30ಕ್ಕೆ ಕೆಂಡಸೇವೆ, ಜ.15, 16 ರಂದು ಬೆಳಗ್ಗೆ ಮಹಾಮಂಗಳಾರತಿ, ರಾತ್ರಿ 9.30ಕ್ಕೆ ಮಂಡಲ ಸೇವೆ, ಜ.14 ರಂದು ಸಂಜೆ 6ರಿಂದ 2.30 ರತನಕ ಕೆಂಡಸೇವೆ, ಜ.17 ರಂದು ಬೆಳಗ್ಗೆ ಸಂಪ್ರೋಕ್ಷಣೆ ನಡೆಯಲಿದೆ. ಕೆಂಡಸೇವೆ,ಮಂಡಲಸೇವೆ, ಮಹಾ ಪೂಜೆ ನಡೆಯುವ ಸಮಯ ಭಕ್ತರ ಪೂಜೆ, ಹಣ್ಣುಕಾಯಿ ಸೇವೆ ಜರಗುವುದಿಲ್ಲವೆಂದು ಆನುವಂಶೀಯ ಆಡಳಿತ ಮೊಕ್ತಸರ ಸಿ. ಸದಾಶಿವ ಶೆಟ್ಟಿ ತಿಳಿಸಿದ್ದಾರೆ. ಹಬ್ಬದ ಸಂದರ್ಭ ಭಕ್ತರು ಸೇವಂತಿಗೆ, ಸಿಂಗಾರ ಹೂವನ್ನು ಬುಟ್ಟಿಯಲ್ಲಿಟ್ಟು ತಲೆಯಲ್ಲಿ ಹೊತ್ತು ಹರಕೆ ರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ಪದ್ಧತಿ ಇಂದಿಗೂ ಜಾರಿಯಲ್ಲಿದೆ. ಮಾರಣಕಟ್ಟೆ ಕ್ಷೇತ್ರವನ್ನು ಬಡಗಿನ ದೇವರೆಂದು ಭಕ್ತರು ನಂಬಿದ್ದಾರೆ. ಕುಂದಾಪುರ, ಬೈಂದೂರು ಸೇರಿದಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಡ್ತರೆ ಗುರ್ಗಿಬೆಟ್ಟು ಶ್ರೀ ಜೈನ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಶ್ರೀ ಜೈನ ಜಟ್ಟಿಗೇಶ್ವರ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಜನವರಿ 19 ಹಾಗು 20ರಂದು ಜರುಗಲಿದೆ. ಜ.19ರ ಗುರುವಾರ ಸಂಜೆ ದೇವತಾ ಪ್ರಾರ್ಥನೆ, ಪುಣ್ಯಾಹ, ಗೇಹ ಪ್ರತಿಗ್ರಹ, ಸ್ಥಾನಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜಾ ಬಲಿ, ಬಿಂಬ ಶುದ್ಧಿ, ಅಧಿವಾಸ ಪೂಜೆ, ಅಧಿವಾಸ ಹೋಮ, ಶ್ರೀ ದೈವಗಳ ಪ್ರತಿಷ್ಠೆ ನ್ಯಾಸಾದಿಗಳು ಜರುಗಿಲಿದೆ. ಜ.20ರ ಶುಕ್ರವಾರ ಬೆಳಿಗ್ಗೆ ಪುಣ್ಯಹ, ಕಲಾತತ್ವ ಹೋಮ, ಬ್ರಹ್ಮಕಲಶ ಸ್ಥಾಪನೆ, ಅಧಿವಾಸ ಹೋಮ, ಕಲಶಾಭಿಷೇಕ, ಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ 6-30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ಕ್ಕೆ ಯಕ್ಷಗಾನ ಕೇಂದ್ರ ಶಿವಪ್ರಭಾ ಇಂದ್ರಾಳಿ ಉಡುಪಿ ಇವರಿಂದ ಯಕ್ಷಗಾನ ‘ಸುದರ್ಶನ ವಿಜಯ’ ಜರುಗಿದೆ. ಈ ಎಲ್ಲಾ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳುವಂತೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಕನಾ ಪ್ರೊಡಕ್ಷನ್ ನಿರ್ಮಾಣದ 5ನೇ ಪ್ರಾಜೆಕ್ಟ್ ‘ಹೇಯ್ ಲಡ್ಕಿ’ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗ್, ಮಕರ ಸಂಕ್ರಾತಿಯಂದು ಏಕನಾ ಪ್ರೊಡಕ್ಷನ್ಸ್ ಯುಟ್ಯೂಬ್ ಚಾನೆಲಿನಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಕಲಾವಿದ ಆರ್. ಪ್ರಹ್ಲಾದ್ ಆಚಾರ್ಯ ಹೇಳಿದರು. ಕುಂದಾಪುರದಲ್ಲಿ ಗುರುವಾರ ಆಯೋಜಿಸಲಾದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿ, ‘ಹೇಯ್ ಲಡ್ಕಿ’ ಎಂಬ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗನ್ನು ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಹಾಡಿರುವುದು ವಿಶೇಷ. ಖ್ಯಾತ ಕನ್ನಡ ಸಿನಿಮಾ ನಿರ್ದೇಶಕ ಸಿಂಪಲ್ ಸುನಿ ಆಲ್ಬಂ ಸಾಂಗ್ ಜ.14ರಂದು ಬಿಡುಗಡೆಗೊಳಿಸಲಿದ್ದಾರೆ. ಹಾಡಿನ ಸಂಗೀತ ನಿರ್ದೇಶನವನ್ನು ಗೌತಮ್ ಕೆ. ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣವನ್ನು ಸನತ್ ಉಪ್ಪುಂದ ನಿರ್ವಹಿಸಿರುತ್ತಾರೆ. ಸಂಕಲನ ತಕ್ಷಕ್ ಮಾಡಿದ್ದರೇ, ಸಾಹಿತ್ಯ, ನಿರ್ದೇಶನ ಹಾಗೂ ಮುಖ್ಯ ಪಾತ್ರವನ್ನು ಆರ್. ಪ್ರಹ್ಲಾದ್ ಆಚಾರ್ಯ ನಿರ್ವಹಿಸಿದ್ದಾರೆ. ನಾಯಕಿಯಾಗಿ ಚಿತ್ರಾ ಸೂರಜ್ ಆಚಾರ್ಯ ನಟಿಸಿದ್ದಾರೆ. ಆಲ್ಬಂ ಸಾಂಗನ್ನು ಮಂಜುನಾಥ ಸಾಲಿಯಾನ್ ತ್ರಾಸಿ, ಆರ್. ಪ್ರಹ್ಲಾದ್ ಆಚಾರ್ಯ ಹಾಗೂ ಗೌತಮ್ ಕೆ. ನಿರ್ಮಿಸಿದ್ದಾರೆ ಎಂದು ಮಾಹಿತಿ ನೀಡಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರಕ್ಕೆ 12,195 ಕೆ.ಎಲ್ ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಮಾತ್ರ ಮಂಜೂರಾಗಿತ್ತು. ಆದ್ದರಿಂದ, ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡುಲು ಉಳಿದ 6,723 ಕೆಎಲ್ಗಳನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಸಂಸದರು ಡಿಸೆಂಬರ್ 2022ರ ಚಳಿಗಾಲದ ಅಧಿವೇಶನದ ಸಮಯದಲ್ಲಿ ಮಾನ್ಯ ಕೇಂದ್ರ ಸಚಿವರಲ್ಲಿ ವಿನಂತಿಸಿದ್ದರು. ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆ.ಎಲ್ ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 2500 ಕೆಎಲ್ ಸಬ್ಸಿಡಿ ರಹಿತ ಪಿಡಿಎಸ್ ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಸ್ಪರ್ಧಾತ್ಮಕ ಯುಗದಲ್ಲಿ ಸ್ವರ್ಧಾ ಮನೋಭಾವ ಬೆಳೆಸಿಕೊಳ್ಳುವುದೂ ಅಗತ್ಯ: ಸೂರ್ಯ ಎಸ್. ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಮುಂಬಯಿ,ಜ.11: ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ, ಸೋಲು ಗೆಲುವು ಮುಖ್ಯವಲ್ಲ. ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ನುಡಿದರು. ಅವರು ಜ.8 ರಂದು ಸಯನ್ ಪೂರ್ವ ಜಿಟಿಬಿ ನಗರದಲ್ಲಿರುವ ಗುರುನಾನಾಕ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ ಕುಂದಾಪುರ ಬಿಲ್ಲವ ಕೋಟಿ-ಚೆನ್ನಯ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪಾಲಕರು ತಮ್ಮ ಮಕ್ಕಳಿಗೆ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಅವರನ್ನು ಸಮುದಾಯ ಸಂಘಟನೆಗಳಲ್ಲಿ ಸಕ್ರಿಯಗೊಳ್ಳುವಂತೆ ಮಾಡಬೇಕು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದಾಗ ಇನ್ನು ಹಲವಾರು ಕಾರ್ಯಕ್ರಮಗಳನ್ನು ನೀಡುವ ಪ್ರೇರಣೆ ದೊರೆಯುತ್ತದೆ ಎಂದರು. ಮುಖ್ಯ ಅತಿಥಿ ಅಂತರಾಷ್ಟ್ರೀಯ ಕರಾಟೆ ಪಟು ವಿಜಯ ಪೂಜಾರಿ ಕೋಟ ಮಾತನಾಡಿ, ನಾನು ಮಹಾನಗರಕ್ಕೆ ಬಂದು ಕ್ಯಾಂಟೀನ್ ಮತ್ತು ಹೋಟೆಲ್ಗಳಲ್ಲಿ ದುಡಿದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಸ್ತಾವಿತ ಕೊಲ್ಲೂರು ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಬಿಜೂರು ಗ್ರಾಮ ಸೇರ್ಪಡೆಗೆ ಆಕ್ಷೇಪಿಸಿ ಬಿಜೂರು ಗ್ರಾಮಸ್ಥರು ಬೈಂದೂರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಈ ವೇಳೆ ಗ್ರಾಮ ಪಂಚಾಯತ್ ಸದಸ್ಯ ವಿರೇಂದ್ರ ಶೆಟ್ಟಿ ಮಾತನಾಡಿ, ಈಗಿನ ಪ್ರಸ್ತಾವಿತ ಸೀಮಾ ನಿರ್ಣಯ ಮಾಡುವಾಗ ತಾಲ್ಲೂಕಿನ ನಕ್ಷೆಯನ್ನು ನೋಡದೇ ಮಾಡಿದ ಹಾಗೇ ತೋರುತ್ತದೆ. ಬಿಜೂರು ಗ್ರಾಮವನ್ನು ಕಂಬದಕೋಣೆ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಅಥವಾ ಶಿರೂರು ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಸೇರಿಸಿದರೆ ಜನರಿಗೆ ಮತ್ತು ಮುಂದೆ ಆಯ್ಕೆಯಾಗಲಿರುವ ಜಿಲ್ಲಾ ಪಂಚಾಯತ್ ಸದಸ್ಯರಿಗೆ ಅನುಕೂಲವಾಗಲಿದೆ ಎಂದರು. ಗ್ರಾಮಸ್ಥರಾದ ಶ್ರೀಧರ ಬಿಜೂರು ಮಾತನಾಡಿ, ಹೊಸದಾಗಿ ರಚನೆಗೊಂಡಿರುವ ಕೊಲ್ಲೂರು ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಬಿಜೂರು ಗ್ರಾಮ ಪ್ರಸ್ತಾವಿಸಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಕೊಲ್ಲೂರು ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಬಿಜೂರು ಗ್ರಾಮವು ಸುಮಾರು 52 ಕಿಲೋ ಮೀಟರ್ ದೂರವಿದ್ದು, ಅಲ್ಲಿಂದ ಬಿಜೂರು ಗ್ರಾಮಕ್ಕೆ ನೇರ ರಸ್ತೆ ಕೂಡ ಇರುವುದಿಲ್ಲ. ಮುಂದೆ ಕೊಲ್ಲೂರು ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಆಯ್ಕೆಯಾಗುವ ಸದಸ್ಯರು ಇಡೀ…

Read More