ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮ ಶ್ರೀ ಕ್ಷೇತ್ರ ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಆಳುಪ ರಾಜ ಮನೆತನದ ದೇವಿ ಮಹಾಮಾತೆ ಪದ್ಮಾವತಿ ಅಮ್ಮನವರ ದೇವಸ್ಥಾನ ಬಸದಿಯ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ, ನೂತನ ಶಿಲಾಮಯ ಮಾನಸ್ತಂಭ ಪ್ರತಿಷ್ಠಾಪನೆ, ಶ್ರೀ ಪದ್ಮಾವತಿ ಅಮ್ಮನವರ ಬಸದಿಯ ನೂತನ ರಥೋತ್ಸವ ಮಹೋತ್ಸವವು ಎಪ್ರಿಲ್ 6 ರಿಂದ 10ನೇ ತಾರೀಕಿನ ತನಕ ಜರುಗಲಿದೆ. ಮೂಡಬಿದ್ರೆ ಜೈನಮಠ ಚಾರುಕೀರ್ತಿ ಭಟ್ಟಾರಕರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರ ಹೊಂಬುಜ ಜೈನ ಮಠ ದೇವೇಂದ್ರಕೀರ್ತಿ ಭಟ್ಟಾರಕ ಹಾಗೂ ಸೋಂದೆ ಮಠ ಭಟ್ಟಾಕಳಂಕ ಸ್ವಾಮೀಜಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಜರುಗುವ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗಿನಿಂದ ರಾತ್ರಿಯವರೆಗೆ ದೇವಪೂಜಾ ಕಾರ್ಯಗಳು, ಮಹಾಮಾತೆ ಪದ್ಮಾವತಿಯ ಆರಾಧನೆ, ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮಗಳು, ರಾತ್ರಿ 8 ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಯಕ್ಷಗಾನ ಜೋಡಾಟ, ನಾಟಕಗಳು, ಮನುಹಂದಾಡಿ ಅವರಿಂದ ಹಾಸ್ಯಸಂಜೆ, ಮಹೇಶ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು, ಸರಕಾರ ಪರಿಕಲ್ಪನೆಯ ಮೂಲಕವೇ ಲಕ್ಷಾಂತರ ಮಂದಿ ಸ್ವಾವಲಂಬಿಗಳಾಗಿದ್ದಾರೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು. ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 110ನೇ ನೂತನ ಉಪ್ಪುಂದ ಶಾಖೆ ಉದ್ಘಾಟಿಸಿ ಈ ಮಾತನಾಡಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಅತ್ಯುತ್ತಮ ಕಾರ್ಯಸಾಧನೆಗಳ ಮೂಲಕ ಇತರರಿಗೂ ಮಾದರಿಯಾಗಿದೆ ಎಂದರು. ನವೋದಯ ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶ ಉದ್ಘಾಟಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಮಾತನಾಡಿ ರಾಜ್ಯ ಸರಕಾರ ರೈತರ ಅಭಿವೃದ್ಧಿಯ ಜೊತೆಗೆ ರೈತ್ಯೋದ್ಯಮದ ಬಗ್ಗೆ ಹಲವು ಮಹತ್ತರ ಯೋಜನೆಗಳನ್ನು ಜಾರಿಗೆ ತರುವ ಚಿಂತನೆಯಲ್ಲಿದೆ. ನವೋದಯ ಸ್ವ-ಸಹಾಯ ಸಂಘಗಳು ಹಲವರ ಬದುಕಿಗೆ ಬೆಳಕಾಗಿದೆ. ಕೃಷಿಕರ ಮತ್ತು ಮಹಿಳೆಯರಿಗೆ ಸ್ವಾವಲಂಬನೆಯ ಜೀವನ ನೀಡಿದೆ ಎಂದರು. ಹೊಸ ಸ್ವ-ಸಹಾಯ ಗುಂಪುಗಳನ್ನು ಉದ್ಘಾಟಿಸಿದ ಕೃಷಿ ಸಚಿವ ಬಿ. ಸಿ ಪಾಟೀಲ್ ಮಾತನಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಗ್ನ್ಯಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಸಂಸ್ಥೆಯ ಆಡಳಿತದೊಂದಿಗೆ ತಾಲೂಕಿನ ಉಪ್ಪುಂದದಲ್ಲಿ ‘ನಂದನವನ ಹಾಸ್ಪಿಟಾಲಿಟಿ & ಸರ್ವಿಸಸ್’ (ರೆಸ್ಟೋರೆಂಟ್, ಲಾಡ್ಜಿಂಗ್ & ಆಡಿಟೋರಿಯಂ) ಸಂಸ್ಥೆಯ ಪುನರಾರಂಭ ಕಾರ್ಯಕ್ರಮದಲ್ಲಿ ಸೋಮವಾರ ಜರುಗಿತು. ನವೀಕೃತ ಉದ್ಯಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಸಚಿವಎಸ್.ಟಿ. ಸೋಮಶೇಖರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮುರುಗೇಶ್ ನಿರಾಣಿ, ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಸಹಕಾರಿ ಧುರೀಣರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಶುಭಕೋರಿದರು. ಪ್ರಗ್ನ್ಯಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಗೋವಿಂದ ಬಾಬು ಪೂಜಾರಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭ ಬಿ. ಎಸ್. ಸುರೇಶ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘದ ರಜತ ವರ್ಷದ ಅಧ್ಯಕ್ಷರಾಗಿ ಮಹೇಶ್ ಪೂಜಾರಿ ಕೋಣೆ ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರ ಆಚಾರ್ ಕೋಣಿ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಸುಬ್ಬಣ್ಣ ಕೋಣಿ, ಉಪಾಧ್ಯಕ್ಷರಾಗಿ ಸಂದೇಶ ಕಾಂಚನ್, ಜೊತೆ ಕಾರ್ಯದರ್ಶಿಯಾಗಿ ಗಜೇಂದ್ರ ಪೂಜಾರಿ ಕಟ್ಕೇರಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ, ಪ್ರವೀಣ್ ಭಂಡಾರಿ, ಶ್ರೀಧರ ಚಂದನ್, ಮಂಜುನಾಥ ಪೂಜಾರಿ, ಅಂಕಿತಾ ತನುಜ, ಕ್ರೀಡಾ ಕಾರ್ಯದರ್ಶಿಗಳಾಗಿ ಈಶ್ವರ ಪೂಜಾರಿ, ಸುಧೀರ್ ಚಂದನ್, ರಾಮಲಲ್ಲಾ ಆಚಾರ್, ವಿಖ್ಯಾತ ಬಂಗೇರ ರಾಜೇಶ್ ಬಂಗೇರ ಕೋಶಾಧಿಕಾರಿಗಳಾಗಿ ಪ್ರದೀಪ್ ಚಂದನ್ ಸುಮಂತ್ ಬಂಗೇರ, ಜಯಪ್ರಶಾಂತ ಪೂಜಾರಿ ಪ್ರಶಾಂತ ಬಂಗೇರ, ರಘು ವಿ ಪೂಜಾರಿ, ಲೆಕ್ಕ ಪರಿಶೋಧಕರಾಗಿ ಅಶೋಕ ಭಂಡಾರಿ,ದಿನೇಶ್ ಆಚಾರ್, ವಸಂತ ಬಂಗೇರ, ಸುಬ್ರಹ್ಮಣ್ಯ ಆಚಾರ್, ಗಣೇಶ ಮೂರೂರು ಅಚ್ಚುತ ಮೂರೂರು, ಆಯ್ಕೆಯಾಗಿದ್ದಾರೆ. ಧಾರ್ಮಿಕ,ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸತತ 24 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕೋಣಿ ಮೂರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆಯನ್ನು ವಿಶೇಷವಾಗಿ ನೆರವೇರಿಸುತ್ತ ಮುಂದಿನ ವರ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾದ ಡಾ. ರೇಖಾ ವಿ.ಬನ್ನಾಡಿ ಮತ್ತು ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರೊ. ಸಂಧ್ಯಾ ಜಿ. ಕೆ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ. ಲಲಿತಾದೇವಿ ವಹಿಸಿದ್ದರು. ಕಾಲೇಜಿನ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ನಿವೃತ್ತ ಉಪನ್ಯಾಸಕರನ್ನು ಗೌರವಿಸಿ ಮಾತನಾಡಿದರು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಮತ್ತು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು. ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಉನ್ನತ ಉದ್ಯೋಗ ನಿಮಿತ್ತ ತೆರಳಿದ ಉಪನ್ಯಾಸಕರಾದ ಗುರುದಾಸ ಪ್ರಭು ಮತ್ತು ಅಮರ್ ಸಿಕ್ವೆರಾ ಅವರನ್ನು ಗೌರವಿಸಲಾಯಿತು. ಕಾಲೇಜಿನಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದವರನ್ನು ಗುರುತಿಸಲಾಯಿತು. ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ-2022 ಪ್ರಯುಕ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.04: ರಾಜ್ಯದಾದ್ಯಂತ ಗ್ರಾಮಗಳಲ್ಲಿ ಸಂಗ್ರಹವಾಗುವ ಒಣ ತ್ಯಾಜ್ಯವನ್ನು ಸಪರ್ಮಕವಾಗಿ ವಿಲೇವಾರಿ ಮಾಡಲು ಒಟ್ಟು 50 ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು (ಎಂ.ಆರ್.ಎಫ್ ) ಈ ವರ್ಷ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದವು ನಲ್ಲಿ, ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾರ್ಕಳ, ಗ್ರಾಮ ಪಂಚಾಯತ್ ಕಾರ್ಕಳ ಇವರಸಂಯುಕ್ತ ಆಶ್ರಯದಲ್ಲಿ, ಸ್ವಚ್ಛ ಬಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ನಿಟ್ಟೆ ಗ್ರಾ.ಪಂ ವ್ಯಾಪ್ತಿಯಲ್ಲಿ ಇಂದು ಆರಂಭವಾದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರದ ಕಾರ್ಯವೈಖರಿ ಅತ್ಯುತ್ತಮವಾಗಿದ್ದು, ಇದರಿಂದ ಗ್ರಾಮ ಪಂಚಾಯತ್ ಗಳು ಎದುರಿಸುತ್ತಿರುವ ಘನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಸಮರ್ಪಕ ಪರಿಹಾರ ದೊರೆಯಲಿದ್ದು, ಇಂತಹ 50 ಘಟಕಗಳನ್ನು ರಾಜ್ಯಾದ್ಯಂತ ಈ ವರ್ಷ ಆರಂಭಿಸಲಾಗುವುದು, ಈ ಘಟಕಗಳ ಸ್ಥಾಪನೆಯಿಂದ…
ಎಸ್ಸಿಡಿಸಿಸಿ ಬ್ಯಾಂಕ್ ಲಿ. 110ನೇ ಉಪ್ಪುಂದ ಶಾಖೆ ಉದ್ಘಾಟನಾ ಸಮಾರಂಭ | ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಕೈಗಾರಿಕಾ ವಲಯ ಕೋವಿಡ್-19 ಬಳಿಕ ಚೇತರಿಸಿಕೊಳ್ಳುತ್ತಿದ್ದು, ಸರಕಾರವೂ ಕೈಗಾರಿಕಾ ಕ್ಷೇತ್ರದ ಉತ್ತೇಜನಕ್ಕಾಗಿ ಅಗತ್ಯ ಕ್ರಮ ಕೈಗೊಂಡಿದೆ. ಪ್ರಸ್ತುತ ವರ್ಷ ಕರ್ನಾಟಕ ಕೈಗಾರಿಕಾ ವಲಯದ ಉತ್ತಮ ಪ್ರಗತಿ ಸಾಧಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಹೇಳಿದರು. ಅವರು ಭಾನುವಾರ ಸಂಜೆ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹೊಸ ಕೈಗಾರಿಕಾ ವಲಯ, ಒಂದು ದೇಶ ಒಂದು ಪ್ರಾಡೆಕ್ಟ್ ಯೋಜನೆ, ಹೂಡಿಕೆದಾರ ಸ್ನೇಹಿ ನಿಯಮಗಳ ಮಾರ್ಪಾಡು, ಕಡಿಮೆ ಬಡ್ಡಿದರದಲ್ಲಿ ಸಾಲ ಮೊದಲಾದ ಯೋಜನೆಯನ್ನು ಕೈಗೊಳ್ಳಲಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಕೈಗಾರಿಕಾ ಪ್ರಗತಿಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು. ಈ ಸಂದರ್ಭ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಾಜ್ಯದಲ್ಲಿ ಪೈಲೆಟ್ ಕಾರ್ಯಕ್ರಮವಾಗಿ ದೇಶದಲ್ಲಿಯೇ ಮೊದಲ ಭಾರಿಗೆ ಸಣ್ಣ ರೈತರ ಟ್ರ್ಯಾಕ್ಟರ್ಗಳಿಗೆ ಎಕರೆಗೆ ರೂ. 250ರಂತೆ ಗರಿಷ್ಠ 5 ಎಕರೆ ತನಕ ಡೀಸೆಲ್ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆ ಎಪ್ರಿಲ್ 1ರಿಂದ ಜಾರಿಗೆ ಬಂದಿದ್ದು, ಇದಕ್ಕಾಗಿ ರೂ.500 ಕೋಟಿ ಮೀಸಲಿರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ಅವರು ಭಾನುವಾರ ಸಂಜೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಕುಟುಂಬಿಕರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬೆಳೆ ಪರಿಹಾರವನ್ನು ರೂ.6,000 ದಿಂದ ರೂ.28,000ಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಿದ್ದಕ್ಕಾಗಿ, ರಾಜ್ಯ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದರು. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯಕ್ಕೆ ಪ್ರತಿಭಾರಿಯೂ ಕೇಂದ್ರ ನಾಯಕರು ಭೇಟಿ ನೀಡಿದ ಸಂದರ್ಭ ಸಂಪುಟ ಪುನರ್ ರಚನೆಯ ವಿಚಾರ ಮುನ್ನೆಲೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವರು ಸಜೀವ ದಹನವಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಗಂಗೊಳ್ಳಿ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42) ಮೃತ ದುರ್ದೈವಿ. ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಅವರು, ಬೆಳಿಗ್ಗೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಬಳಿ ತೆರಳಿ ಮತ್ತೆ ಮನೆಯಲ್ಲಿ ಬಂದು ಮಲಗಿದ್ದರು. ಬೆಳಿಗ್ಗೆ ಸುಮಾರು 8:30ರ ಹೊತ್ತಿಗೆ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಗಣೇಶ ಖಾರ್ವಿ ಮಂಚದ ಮೇಲೆ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ. ಮೃತ ಗಣೇಶ್ ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಜೊತೆ ವಾಸಿಸುತ್ತಿದ್ದರು. ಇವರ ಪತ್ನಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರಿಂದ ಮನೆಯಲ್ಲಿ ಮತ್ಯಾರು ಇದ್ದಿರಲಿಲ್ಲ. ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮನೆಗೆ ತಗುಲಿದ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರೂ ಗಣೇಶ ಖಾರ್ವಿ ಮನೆಯ ಒಳಗೆ ಇರುವುದು ಆರಂಭದಲ್ಲಿ ಯಾರಿಗೂ ತಿಳಿದಿರಲಿಲ್ಲ. ಬಳಿಕ…
