ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾಸ್ಥ್ಯ ಸಮಾಜಕ್ಕೆ ಕಾನೂನಿನ ಅರಿವು ಅಗತ್ಯ ಸಂವಿದಾನ-ಮೂಲಭೂತ ಹಕ್ಕು-ಕರ್ತವ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ, ಕಡ್ಡಾಯ ಶಿಕ್ಷಣ ಹಕ್ಕು ಇದರ ಅರಿವು ಅರಿತಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಕೋಡಿ ಬ್ಯಾರೀಸ್ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ ಹೇಳಿದರು. ಅವರು ಕಾಲೇಜಿನಲ್ಲಿ ಮತದಾರರ ಸಾಕ್ಷರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ರಾಜ್ಯಶಾಸ್ತ್ರ ಉಪನ್ಯಾಸಕಿ ನಿಲುಫರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಕಲಾ ವಿದ್ಯಾರ್ಥಿನಿ ರುಕ್ಸಾನ ಸ್ವಾಗತಿಸಿ, ಪ್ರಥಮ ಕಲಾ ವಿದ್ಯಾರ್ಥಿನಿ ಫಾಯಿಝಾ ವಂದಿಸಿದರು, ಪ್ರಥಮ ಕಲಾ ವಿದ್ಯಾರ್ಥಿನಿ ರಿಫಾನ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಟ ಪುನೀತ್ ರಾಜಕುಮಾರ್ ಸಮಾಜಕ್ಕೆ ಬಹುದೊಡ್ಡ ಶಕ್ತಿಯನ್ನು ನೀಡಿದವರು. ಏನೂ ಪ್ರಚಾರ ಬಯಸದೆ ಸಮಾಜದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ ಅಪರೂಪದ ವ್ಯಕ್ತಿತ್ವದ ಪುನೀತ್ ಪರಿಪೂರ್ಣ ವ್ಯಕ್ತಿತ್ವ ಅನಾವರಣಗೊಂಡದ್ದೆ ಅವರ ಸಾವಿನ ಬಳಿಕ ಎನ್ನುವುದು ದುರಂತ ಎಂದು ಶಿಕ್ಷಕ ಉದಯ್ ಬಳೆಗಾರ್ ಹೇಳಿದರು. ಅವರು ಹೆಮ್ಮಾಡಿ ರಿಕ್ಷಾ ನಿಲ್ದಾಣದಲ್ಲಿ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ, ಇತ್ತೀಚೆಗಷ್ಟೇ ಅಗಲಿದ ನಟ ಪುನೀತ್ ರಾಜಕುಮಾರ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಮೊದಲು ಪುನೀತ್ ಅವರ ಸಾಮಾಜಿಕ ಕಾರ್ಯಗಳ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಎಲ್ಲಾ ಮಾಧ್ಯಮಗಳಲ್ಲೂ ಅವರ ಸಾಮಾಜಿಕ ಕಾರ್ಯದ ಕಳಕಳಿಯ ಚಿಂತನೆಗಳು ಹೊರಹೊಮ್ಮಿದ್ದು ಅವರ ಮರಣದ ನಂತರದ ದಿನಗಳಲ್ಲಿ. ಯಾವುದೇ ಸಿನಿ ತಾರೆಯರು ಮರಣ ಹೊಂದಿದಾಗ ಇಡೀ ಕರಾವಳಿ ಇಷ್ಟೊಂದು ನೋವುಂಡಂತಹ ಇತಿಹಾಸವೇ ಇಲ್ಲ. ಹೆಚ್ಚೆಂದರೆ ಒಂದೆರಡು ದಿನ ಮರೆತು ಎಲ್ಲರೂ ತಮ್ಮ ಕಾಯಕದಲ್ಲಿ ತೊಡಗಿಕೊಳ್ಳುತ್ತಾರೆ. ಆದರೆ ಪುನೀತ್ ರಾಜಮಾರ್ ನಮ್ಮನ್ನಗಲಿ ಹತ್ತು ದಿನಗಳು ಕಳೆದರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕಿನ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರ ವೈಯಕ್ತಿಕ ಖಾತೆಗೆ ಪ್ರಗತಿ ನಿಧಿ ಜಮೆ ಮಾಡುವ ನೂತನ ಕಾರ್ಯಕ್ರಮಕ್ಕೆ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಚಾಲನೆ ನೀಡಿದರು. ಯೋಜನೆಯ ತ್ರಾಸಿ ವಲಯ ಮುಳ್ಳಿಕಟ್ಟೆ ಗ್ರಾಹಕ ಸೇವಾ ಕೇಂದ್ರದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಬ್ಯಾಂಕಿನ ಮೂಲಕ ಪ್ರಗತಿನಿಧಿ ಸಾಲವನ್ನು ನೀಡಲಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸದಸ್ಯರು ಸಂಘದಲ್ಲಿ ಬೇಡಿಕೆ ನೀಡಿದ ಪ್ರಗತಿ ನಿಧಿ ಮೊತ್ತವನ್ನು ಸದಸ್ಯರ ವೈಯಕ್ತಿಕ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ರಾಜ್ಯದಾದ್ಯಂತ ಅನು?ನ ಗೊಳಿಸಲಾಗುತ್ತಿದೆ. ಸಂಘದ ಸದಸ್ಯರ ಪ್ರಗತಿನಿಧಿ ವಿತರಣೆಯಲ್ಲಿ ಇನ್ನೂ ಹೆಚ್ಚಿನ ಸುರಕ್ಷತಾ ಕ್ರಮವನ್ನು ಕೈಗೊಳ್ಳುವ ಸಲುವಾಗಿ ಈ ಪ್ರಕ್ರಿಯೆಯನ್ನು ಅನು?ನಗೊಳಿಸಲಾಗುತ್ತಿದೆ. ಸಂಘದ ಸದಸ್ಯರಿಗೆ ಸರಳವಾಗಿ ಹಾಗೂ ಪಾರದರ್ಶಕವಾಗಿ ಸದಸ್ಯರ ವೈಯಕ್ತಿಕ ಖಾತೆಗೆ ಪ್ರಗತಿನಿಧಿ ಜಮೆ ಮಾಡುವುದರ ಮೂಲಕ ಆರ್ಥಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರ್‌ಟಿಐ ಕಾರ್ಯಕರ್ತರನ್ನು ಹತ್ತಿಕ್ಕುವ ಉದ್ದೇಶದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಸಿಕ ಸ್ಥಿಮಿತ ಕಳಕೊಂಡ ಕೆಲವು ವ್ಯಕ್ತಿಗಳು ಆಧಾರ ರಹಿತವಾದ ಸಂದೇಶಗಳನ್ನು ಸಂಘಟನೆಗಳ ಹೆಸರಿನಲ್ಲಿ ಹರಿದುಬಿಟ್ಟಿದ್ದಾರೆ. ಇದರಲ್ಲಿ ನಾಗರಿಕಾ ಹೋರಾಟ ಸಮಿತಿ ಮತ್ತು ಗೂಡ್ಸ್ ವಾಹನ ಚಾಲಕ ಮಾಲಕ ಸಂಘವನ್ನು ಹೆಸರಿಸಲಾಗಿದೆ. ನಮ್ಮ ಹೋರಾಟವನ್ನು ಅಸ್ಥಿರಗೊಳಿಸುವ ಉದ್ದೇಶದಲ್ಲಿ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದವರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬ್ರಹ್ಮಾವರ ತಾಲೂಕು ಗೂಡ್ಸ್ ವಾಹನ ಮಾಲಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ತಿಳಿಸಿದರು. ಅವರು ಬ್ರಹ್ಮಾವರದ ಮದರ್ ಪ್ಯಾಲೇಸ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಹೇರೂರು ನಾಗರಿಕಾ ಹೋರಾಟ ಸಮಿತಿಯು 2003ರಲ್ಲಿ ರಚನೆಯಾಗಿದ್ದು ಗ್ರಾಮದ ಮೂಲಭೂತ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಆಶ್ರಯ ಶರ್ತ ಉಲ್ಲಂಘನೆ ಮಾಡಿರುವ ಪ್ರಕರಣಗಳನ್ನು ದಾಖಲೆ ಮೂಲಕ ಸಂಗ್ರಹಿಸಿ 150ಕ್ಕೂ ಹೆಚ್ಚು ನಿವೇಶನಗಳನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವಲ್ಲಿ ಕಾನೂನು ಹೋರಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಚಾರ, ವಿನೋದದೊಂದಿಗೆ ಸತತ ಎಂಟನೇ ವರ್ಷ ಆಯೋಜಿಸಲಾಗುತ್ತಿರುವ ಕಾರ್ಟೂನು ಹಬ್ಬ ಇಲ್ಲಿನ ಕಲಾಮಂದಿರದಲ್ಲಿ ಡಿ.3ರಿಂದ 5ರ ತನಕ ನಡೆಯಲಿದೆ. ಸ್ವಾತಂತ್ರ್ಯದ 75ನೇ ವರ್ಷದ ಪ್ರಯುಕ್ತ ಭಾರತ ಮುಂದಿನ 75 ವರ್ಷಗಳು ಎಂಬ ಥೀಮ್’ನೊಂದಿಗೆ ನಡೆಯುವ ಮೂರು ದಿನಗಳ ಕಾರ್ಯಕ್ರಮದಲ್ಲಿ ಕಾರ್ಟೂನ್ ಪ್ರದರ್ಶನ, ಕ್ಯಾರಿಕೇಚರ್ ತರಬೇತಿ, ಕಾರ್ಟೂನಿಗೆ ಕ್ಯಾಪ್ಟನ್ ಬರೆಯುವ ಸ್ಪರ್ಧೆ, ವಿದ್ಯಾರ್ಥಿಗಳು ಹಾಗೂ ಹೆತ್ತವರಿಗೆ ಕಾರ್ಟೂನು ಸ್ಪರ್ಧೆ, ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸ್ವರ್ಧೆ, ಬಡ ವಿದ್ಯಾರ್ಥಿಗಳ ಸಹಾಯಕ್ಕಾಗಿ ಸ್ಥಳದಲ್ಲೇ ಕ್ಯಾರಿಕೇಚರ್ ರಚನೆಯ ಚಿತ್ರನಿಧಿ, ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ ನಡೆಯಲಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎಸ್.ವಿ. ದತ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚೆಗೆ ನಿಧನ ಹೊಂದಿದ ಚಿತ್ರನಟ ಪುನೀತ್ ರಾಜಕುಮಾರ್ ಅವರಿಗೆ ವಿವಿಧ ಕಾರ್ಟೂನಿಸ್ಟ್ ಗಳಿಂದ ವಿಶೇಷ ನೆನಪಿನ ಸರಣಿ ಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದು ಕಾರ್ಟೂನಿಷ್ಟ್ ಸತೀಶ್ ಆಚಾರ್ಯ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಕರು ಮತ್ತು ಪಾರ್ಸಿ ಜನಾಂಗದ ಸಿ.ಇ.ಟಿ / ನೀಟ್ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ನಿಗಮದ ವೆಬ್ಸೈಟ್ https://kmdconline.karnataka.gov.in/Portal/ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೆ.ಎಂ.ಡಿ.ಸಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ಕೌನ್ಸಿಲಿಂಗ್ ಮುಗಿದ ಕೂಡಲೇ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಟ್ ಕಾಂ ಸುದ್ದಿ.ಮೂಡುಬಿದಿರೆ: ಪುಸ್ತಕವನ್ನು ಸ್ನೇಹಿತರಾಗಿ ಯಾರು ನೋಡುತ್ತಾರೋ, ಅವರು ಯಾವತ್ತೂ ಕೂಡ ಬದುಕಿಗೆ ಬೆನ್ನು ಹಾಕಲ್ಲ ಎಂದು ಲೇಖಕಿ, ಪ್ರಾಧ್ಯಪಕಿ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ರೇಖಾ ವಿ. ಬನ್ನಾಡಿ ನುಡಿದರು ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ 2021-22 ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿ ಸಾಹಿತ್ಯದ ಓದು ಪ್ರಶ್ನಿಸುವ ಗುಣವನ್ನು ನೀಡುತ್ತದೆ. ಎಷ್ಟು ಅಪ್ರಿಯವಾದ್ರು ಸತ್ಯವನ್ನು ಹೇಳುವ ತಾಕತ್ತನ್ನು ನೀಡುತ್ತದೆ. ಆತ್ಮವಿಶ್ವಾಸದ ಜತೆಗೆ ಜಗತ್ತನ್ನು ಪ್ರೀತಿಸುವ, ಸಹಬಾಳ್ವೆಯನ್ನು ಆಶಿಸುವ ಹಾಗೂ ಜೀವನ ಪ್ರೀತಿಯನ್ನು ಕರಗತಗೊಳಿಸುವ ಶಕ್ತಿಯನ್ನು ನೀಡುತ್ತದೆ. ಒಳ್ಳೆಯ ಓದುಗನಿಗೆ ಒಂಟಿತನ ಎಂದೂ ಕಾಡಲ್ಲ ಎಂದರು. ಭಾಷೆ ಎನ್ನುವುದು ಅಂತರಂಗದ ಹಣತೆಯ ಹಾಗೆ. ದುರಾದೃಷ್ಟವಶಾತ್ ಇಂದು ಹಿರಿಯರಿಂದ ಹಿಡಿದು ಕಿರಿಯರವೆರೆಗೆ ಭಾಷೆ ಸಾಹಿತ್ಯಗಳು ಅನುಉತ್ಪಾದಕ ಎಂಬ ಭಾವನೆ ಮೂಡುತ್ತಿರುವುದು ಖೇದಕರ. ಮನುಷ್ಯ ಸಮತೋಲನವನ್ನು ಕಾಪಾಡಿಕೊಳ್ಳುವುದು ಬುದ್ದಿ ಮತ್ತು ಭಾವವನ್ನು ಸರಿಯಾಗಿ ಉಪಯೋಗಿಸಿಕೊಂಡಾಗ ಮಾತ್ರ. ಯುವಜನತೆ ಈ ಸಮಾಜದ ಮೌಲ್ಯಗಳನ್ನು ಸಾಕಾರಗೊಳಿಸಲು ಸದಾ ಶ್ರಮಿಸಬೇಕು…
ಕುಂದಾಪ್ರ ಡಾಟ್ ಕಾಣ ಸುದ್ದಿ.ಉಡುಪಿ: ಜನವರಿ 1 2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಪ್ರಸಕ್ತ ಜನಸಂಖ್ಯೆಗೆ ಅನುಗುಣವಾಗಿ 27,000 ಯುವ ಮತದಾರರ ನೋಂದಣಿ ಆಗಬೇಕಿದ್ದು, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 18 ವರ್ಷ ತುಂಬಿದ ಯುವಕ/ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮ ರೂಪಿಸಲಾಗುವುದು. ಯುವ ಜನತೆ ತಾವು ವಾಸವಿರುವ ವಿಳಾಸದ ವ್ಯಾಪ್ತಿಗೆ ಬರುವ ಬಿ.ಎಲ್.ಓ ಗಳನ್ನು ಭೇಟಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ಆನ್ಲೈನ್ ವೆಬ್ ಪೋರ್ಟಲ್ https://www.nvsp.in/ ಹಾಗೂ Voter helpline app ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿ ಬಸರಾಜ್ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕುರಿತಂತೆ ಬೆಂಗಳೂರಿನಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರು, ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯವಿರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೋಮೇಶ್ವರ ಬೀಚ್ ಮತ್ತು ಮರವಂತೆ ಬೀಚ್ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಡಿ.ಪಿ.ಆರ್. ಅಂತಿಮಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಪ್ರವಾಸೋದ್ಯಮ ಕಾಮಗಾರಿಗಳು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಿ.ಆರ್. ಝಡ್ ಅಧಿಸೂಚನೆಯನ್ನು ನವ್ಹೆಂಬರ್-2021 ಅಂತ್ಯದೊಳಗೆ ಅಂತಿಮಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಕೊಡಚಾದ್ರಿ-ಕೊಲ್ಲೂರು ರೋಪ್-ವೇ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ (ಪಿ.ಪಿ.ಪಿ. ಮಾದರಿಯಡಿ) ಅನುಷ್ಠಾನಗೊಳಿಸಲು ಶೀಘ್ರ ಟೆಂಡರ್ ಕರೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಸೌಕೂರು ಏತ ನೀರಾವರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವ್ಯಾಪ್ತಿಯಲ್ಲಿ ಧಾರಾಳ ಹಾಲು ಲಭ್ಯವಿದೆ. ಹಾಲು ಉತ್ಪಾದಕರು ಈಗ ಹಾಲಿನ ಗುಣಮಟ್ಟಕ್ಕೆ ಆಧ್ಯತೆ ನೀಡಬೇಕು ಎಂದು ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು, ಅರೆಹೊಳೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎನ್. ನರಸಿಂಹ ದೇವಾಡಿಗ ಮಾತನಾಡಿ, ಸಂಘವು ವರದಿ ವರ್ಷದಲ್ಲಿ ರೂ 3.57 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 10 ಡಿವಿಡೆಂಡ್ ಹಾಗೂ ಹಾಲು ಉತ್ಪಾದಕ ಸದಸ್ಯರಿಗೆ ಶೇ 65 ಬೋನಸ್ ವಿತರಿಸಲು ನಿರ್ಧರಿಸಲಾಗಿದೆ ಎಂದರು. ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಮಾಧವ ಐತಾಳ್ ಮತ್ತು ವಿಸ್ತರಣಾಧಿಕಾರಿ ರಾಜಾರಾಮ್ ಹಾಲು ಉತ್ಪದನೆ ಹೆಚ್ಚಿಸಲು ಹಾಗೂ ಗುಣಮಟ್ಟದ ಹಾಲು ಪಡೆಯಲು ಅನುಸರಿಸಬೇಕಾದ ಕ್ರಮಗಳ ಮಾಹಿತಿ ನೀಡಿದರು. ಕಾರ್ಯದರ್ಶಿ ಉಮೇಶ ಮಧ್ಯಸ್ಥ ವರದಿ, ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷೆ ದೇವಕಿ ಚಂದನ್, ನಿರ್ದೇಶಕರಾದ ರಾಜು ದೇವಾಡಿಗ,…
