ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.23: ರಾಜ್ಯ ಸರ್ಕಾರದ ಆದೇಶದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ 104 ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘ, ಸ್ಥಳೀಯ ನ್ಯಾಯಾಲಯಗಳ ವಕೀಲರ ಸಂಘ ಹಾಗೂ ಸದಸ್ಯ ಕಾರ್ಯದರ್ಶಿ/ಸರ್ಕಾರಿ ಅಭಿಯೋಜಕರು, ಉಡುಪಿ ಇವರ ಕಛೇರಿಯನ್ನು ಸಂಪರ್ಕಿಸುವಂತೆ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.22: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ (ಫೆ. 27 ಭಾನುವಾರ ಹಾಗೂ ಮಾರ್ಚ್ 1 ರಂದು ಮಹಾಶಿವರಾತ್ರಿ ಪ್ರಯುಕ್ತ ರಜೆ ಇದ್ದು, ಈ ಎರಡು ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. ಈ ಅವಧಿಯಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.23: ಫೆಬ್ರವರಿ 27 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 0-5 ವರ್ಷದೊಳಗೆ ಗ್ರಾಮೀಣ ಪ್ರದೇಶದ 61105 ಮತ್ತು ನಗರ ಪ್ರದೇಶದ 12890 ಸೇರಿದಂತೆ ಒಟ್ಟು 73995 ಮಕ್ಕಳಿಗೆ ಫೆಬ್ರವರಿ 27 ರಂದು ಪಲ್ಸ್ ಪೋಲಿಯೋ ಲಸಿಕೆ ನೀಡಲು, ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಇದಲ್ಲದೆ 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ಗಳನ್ನು ಹಾಗೂ ಎಲ್ಲಾ ಟೋಲ್ಗೇಟ್ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು ಲಸಿಕೆ ನೀಡಲಾಗುವುದು ಎಂದರು. ಲಸಿಕಾ ಕಾರ್ಯಕ್ರಮದಲ್ಲಿ 2794 ಲಸಿಕಾ ಸ್ವಯಂಸೇವಕರು ಮತ್ತು 125 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಚೆನ್ನೈನ ಎಸ್.ಆರ್.ಎಂ. ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಮಂಗಳೂರು ವಿವಿ ೧೧ನೇ ಬಾರಿ ತನ್ನ ಮುಡಿಗೇರಿಸಿಕೊಂಡಿತು. ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ಎಲ್ಲಾ ೧೦ ಮಂದಿ ಆಟಗಾರರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಉಚಿತ ಶಿಕ್ಷಣ ಯೋಜನೆಯಡಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಈ ಚಾಂಪಿಯನ್‌ಶಿಪ್‌ನ್ನು ಮಂಗಳೂರು ವಿವಿಯು ಸತತ ೭ನೇ ಬಾರಿ ಜಯಿಸಿದ್ದಲ್ಲದೆ, ೧೭ ಬಾರಿ ಲೀಗ್ ಹಂತಕ್ಕೆ ತಲುಪಿತ್ತು. ಈ ಕ್ರೀಡಾಪಟುಗಳು ಮುಂದಿನ ವಾರ ಮೂಡಬಿದ್ರೆಯಲ್ಲಿ ನಡೆಯಲಿರುವ ೬೭ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಶ್ಲಾಘಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ , ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ಕೊಡಮಾಡುವ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ದಿ.ಕೋಟ ವೈಕುಂಠ ದತ್ತಿ ಪುರಸ್ಕಾರಕ್ಕೆ ಬಡಗುತಿಟ್ಟಿನ ಉದಯೋನ್ಮುಖ ಭಾಗವತ ಶ್ರೀ ಉದಯ ಕುಮಾರ್ ಹೊಸಾಳ ಅವರು ಆಯ್ಕೆಯಾಗಿದ್ದಾರೆ. ಬಡಗುತಿಟ್ಟು ಯಕ್ಷಗಾನ ರಂಗಭೂಮಿಯಲ್ಲಿ ಸಾಂಪ್ರದಾಯಿಕ ರಂಗ ಸಂವಿಧಾನಕ್ಕೆ ಸುಸ್ವರ ಶ್ರೀಮಂತಿಕೆಯ ರಾಗ ಮಾಧುರ‍್ಯದ ಬೆಸುಗೆಯಾದ ಗಾನ ವಿಧಾನವನ್ನು ಸಂಯುಕ್ತಗೊಳಿಸಿ ಪ್ರಬುದ್ಧ ಭಾಗವತರಾಗಿ ರೂಪುಗೊಂಡವರು ಶ್ರೀ ಉದಯ ಕುಮಾರ್ ಹೊಸಾಳ ಅವರು. ಖಚಿತ ಲಯಗಾರಿಕೆ, ತಾಳದ ಗಟ್ಟಿತನ, ಉತ್ತಮ ಪೌರಣಿಕ ಜ್ಞಾನ, ಫ್ರೌಡ ರಂಗ ತಂತ್ರಗಳನ್ನು ತನ್ನ ಭಾಗವತಿಕೆಯಲ್ಲಿ ನಿಚ್ಚಳವಾಗಿ ಕಾಣಿಸುವ ಇವರು ಬಡಗುತಿಟ್ಟಿನ ಪ್ರಸಿದ್ಧ ಭಾಗವತರಲ್ಲಿ ಒಬ್ಬರು. ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಫೆಬ್ರವರಿ ೨೭ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.21: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ವೇದಿಕೆ ಉದ್ಘಾಟನೆ ಮತ್ತು ವಿಶ್ವ ಮಾತೃಭಾಷಾ ದಿನಾಚರಣೆಯನ್ನು ಆಚರಿಸಲಾಯಿತು. ಕೆರಾಡಿ ವರಸಿದ್ದಿ ವಿನಾಯಕ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಆರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶ್ವ ಮಾತೃಭಾಷಾ ದಿನಸದ ಹಿನ್ನೆಲೆ ಮತ್ತು ಅಗತ್ಯತೆಯನ್ನು ವಿವರಿದರು. ಅಧ್ಯಕ್ಷತೆ ವಹಿಸಿದ್ದ ಡಾ. ರಘು ನಾಯ್ಕ ಅವರು ಕಾಲೇಜುಗಳು ಸಾಹಿತ್ಯ ಚಟುವಟಿಕೆಯ ಕೇಂದ್ರವಾಗಬೇಕು ಎಂಬುದನ್ನು ತಿಳಿಸಿದರು. ಸಹಾಯಕ ಪ್ರಾಧ್ಯಾಪಕ ನವೀನ್ ಹೆಚ್ ಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೀನಾಕ್ಷಿಯವರು ವಿದ್ಯಾರ್ಥಿಗಳು ಉತ್ಸಾಹದಿಂದ ಸಾಹಿತ್ಯ ಚಟುವಟಿಕೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿ ಯುತಿಕಾ ಸ್ವಾಗತಿಸಿದರು ಹಾಗೂ ವಿನಾಯಕ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನ್ಸರ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಭಾಗ್ಯಲಕ್ಷ್ಮಿ ಇವರು ರೋಗ ಬಂದ ಮೇಲೆ ಚಿಕಿತ್ಸೆಗೆ ಒಳಗಾಗುವ ಬದಲು ರೋಗ ಬಾರದೆ ಇರುವ ಹಾಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಕ್ಯಾನ್ಸರ್ ರೋಗದ ಮುನ್ಸೂಚನೆ ಮತ್ತು ಅದರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೋಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಉಮೇಶ್ ನಾಯಕ್ ಇವರು ಉಪಸ್ಥಿತರಿದ್ದು ಉತ್ತಮ ಆರೋಗ್ಯಕ್ಕಾಗಿ ನಾವು ದೈಹಿಕ ಧೃಢತೆಯೊಂದಿಗೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿಯೂ ಪ್ರಬಲರಾಗಬೇಕು ಎಂದು ಮಾತನಾಡಿದರು. ಕೋಡಿ ಆರೋಗ್ಯ ಕೇಂದ್ರದ ಜ್ಯೂನಿಯರ್ ಹೆಲ್ತ್ ಅಸಿಸ್ಟೆಂಟ್ ವಿದ್ಯಾಲಕ್ಷ್ಮಿ ಕುಷ್ಠ ರೋಗದ ಜಾಗೃತಿ ಕ್ರಮಗಳನ್ನು ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಮಾಲತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣಕ ವಿಭಾಗದ ಉಪನ್ಯಾಸಕಿ ಹರ್ಷಿತ ಕಾರ್ಯಕ್ರಮ ನಿರೂಪಿಸಿ ಅತಿಥಿ ಗಣ್ಯರನ್ನು ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.21: ಜಿಲ್ಲೆಯ ಉಡುಪಿ ಮತ್ತು ಕುಂದಾಪುರ ತಾಲೂಕಿನ ಆಟೋರಿಕ್ಷಾ ಚಾಲಕ ಹಾಗೂ ಮಾಲಕರು ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್ಗಳನ್ನು ಅಳವಡಿಸಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಇದುವರೆಗೂ ವಲಯ ಸ್ಟಿಕ್ಕರ್ ಅಳವಡಿಸಲು ಬಾಕಿ ಇರುವ ಆಟೋರಿಕ್ಷಾ ಮಾಲಕರು ವಾಹನದ ಮೂಲ ದಾಖಲೆಗಳೊಂದಿಗೆ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಗೆ ಹಾಜರಾಗಿ ವಲಯ ಸ್ಟಿಕ್ಕರ್ ಅನ್ನು ಕೂಡಲೇ ಅಳವಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ. ಪಿ. ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಂದ್ರಯಾನಕ್ಕೆ ತಯಾರಿ ನಡೆಸುತ್ತಿರುವ ನಮ್ಮ ದೇಶದಲ್ಲಿ ಬಹುದೊಡ್ಡ ವರ್ಗವೊಂದು ಇನ್ನೂ ಮೌಢ್ಯದ ಕೂಪದಲ್ಲೇ ನರಳಾಡುತ್ತಿರುವುದು ಬೇಸರದ ವಿಚಾರ. ವಿದ್ಯಾವಂತರೆಂದು ಹೇಳಿಕೊಳ್ಳುವ ಜನರು ಸಹ ವೈಚಾರಿಕವಾಗಿ, ವೈಜ್ಞಾನಿಕವಾಗಿ ಚಿಂತನೆ ನಡೆಸದೇ ನಡೆದುಬಂದ ಸಂಪ್ರದಾಯ ಎನ್ನುವ ನೆಪದಲ್ಲಿ ಮೂಢನಂಬಿಕೆಗಳನ್ನು ಬೆಳೆಸಿಕೊಂಡು ಬರುತ್ತಿದ್ದಾರೆ. ಇಂತಹ ವಿಷಯದಲ್ಲಿ ಜನಜಾಗೃತಿ ಮೂಡಿಸುವ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಕಾರ್ಯ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಮೂಲಕ ನಡೆಯಲಿ ಎಂದು ಹಿರಿಯ ವಿಚಾರವಾದಿ ಎಸ್.ಜನಾರ್ದನ್ ಮರವಂತೆ ಆಶಯ ವ್ಯಕ್ತಪಡಿಸಿದರು. ಅವರು ಕಂಬದಕೋಣೆಯ ಸಂವೇದನಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಕವಿ ಪ್ರೊ. ಎಂ. ಗೋಪಾಲಕೃಷ್ಣ ಅಡಿಗರ 104ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್ ಸ್ಥಾಪನೆಯಾಗಿ 108 ವರ್ಷದ ಸಂಭ್ರಮದ ಸಂದರ್ಭದಲ್ಲಿ ತಲ್ಲೂರು ಶ್ರೀಜಲ ಅವೆನ್ಯೂ ಕಟ್ಟಡದಲ್ಲಿ ಸೋಮವಾರ 108ನೇ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖಾ ಕಚೇರಿ ಉದ್ಘಾಟನೆ ಜರುಗಿತು. ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಬ್ಯಾಂಕ್ ಹಲವಾರು ಪರಿವರ್ತನೆ ಮೂಲಕ ಸೇವಾ ಕ್ಷೇತ್ರದಲ್ಲಿ ಎತ್ತರಕ್ಕೆ ಏರಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸರಿಸಮಾನಾಗಿ ನಿಂತಿದೆ. ಗ್ರಾಹಕರು ಹೆಚ್ಚಿನ ಠೇವಣಿ ಇಡುವ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್ ತಮ್ಮ ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ. ಉತ್ತಮ ಸೇವೆಗೆ ಸಹಕಾರಿ ಬ್ಯಾಂಕ್ ಮಾದರಿಯಾಗಿದೆ ಎಂದರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಹಕರು ಕೊಟ್ಟ ಸಾಲ ಕಟ್ಟುವುದಿಲ್ಲ ಎನ್ನುವ ಆರೋಪ ಸಾಮಾನ್ಯ. ಆದರೆ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಕೊಟ್ಟ ಸಾಲ ನೂರಕ್ಕೆ ನೂರು ಹಿಂದಕ್ಕೆ ಬರುತ್ತಿದೆ. ಕಳೆದ ೨೭ ವರ್ಷದಿಂದ ವಸೂಲಾತಿ ಎಂಬ ಶಬ್ದ…
