Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತ ಥೀಮ್ ಪಾರ್ಕ್‌ಗೆ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಇತ್ತೀಚೆಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರ್ಟ್ ಗ್ಯಾಲರಿ, ರಂಗ ಮಂದಿರ , ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ವೀಕ್ಷಿಸಿ ಮಾತನಾಡಿದ ಅಂಬಾತನಯ ಮುದ್ರಾಡಿ, ಶಿವರಾಮ ಕಾರಂತರು ಯಕ್ಷಗಾನ ಕ್ಷೇತ್ರಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದಾರೆ, ಯಕ್ಷಗಾನ ಬ್ಯಾಲೆ ಮೂಲಕ ವಿದೇಶಗಳಲ್ಲಿ ಯಕ್ಷಗಾನದ ಕಂಪನ್ನು ಪಸರಿಸಿದವರು ಕಾರಂತರು ಅಂತಹ ವ್ಯಕ್ತಿ ಹೆಸರಿನಲ್ಲಿ ಈ ಕಾರಂತ ಥೀಮ್ ಪಾರ್ಕ್ ಚಟುವಟಿಕೆ ನಡೆಸುತ್ತಿರುವ ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ನಮ ತುಳುವೆರ್ ಸಂಘಟನೆಯ ಸುಕುಮಾರ್ ಮುದ್ರಾಡಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಲಲಿತಾ ಮತ್ತಿತ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮದುವೆ ನಿಂತು ಹೋದ ಕಾರಣಕ್ಕೆ ಮನನೊಂದು ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಗ್ರಾಮದಲ್ಲಿ ನಡೆದಿದೆ. ನಾಡ ಗುಡ್ಡೆಯಂಗಡಿ ನಿವಾಸಿ ಮುರಳೀಧರ ನಾಯಕ್ ಅವರ ಪುತ್ರಿ ಸ್ಫೂರ್ತಿ ಎಂ. ನಾಯಕ್ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಗಸ್ಟ್ 16 ರಂದು ಉಡುಪಿಯ ಯುವಕನೊಂದಿಗೆ ಸ್ಪೂರ್ತಿಯ ಮದುವೆ ನಿಶ್ಚಿತಾರ್ಥ ಮಾಡಿದ್ದು, ಬಳಿಕ ಕಾರಣಾಂತರಗಳಿಂದ ಈ ಮದುವೆ ನಿಂತು ಹೋಗಿತ್ತು. ಇದೇ ವಿಚಾರದಲ್ಲಿ ಸ್ಫೂರ್ತಿ ಬಹಳಷ್ಟು ನೊಂದುಕೊಂಡಿದ್ದಳು. ನ.6 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಸಹಯೋಗದಲ್ಲಿ ನಡೆಯುತ್ತಿರುವ ವಾರಾಂತ್ಯ ಉಪನ್ಯಾಸ ಮಾಲಿಕೆ ವಿಚಾರ ಸಂಕಿರಣ ವಿಚಾರಗೋಷ್ಠಿ ಸಾಂಸ್ಕೃತಿಕ ಚಿತ್ತಾರ ಕಾರ್ಯಕ್ರಮದಲ್ಲಿ ಸಾಹಿತ್ಯ ಪ್ರೇರಣೆ ವಿಷಯದ ಬಗ್ಗೆ ಉಪನ್ಯಾಸ ನಡೆಯಿತು. ಉಪನ್ಯಾಸದಲ್ಲಿ ಮಾತನಾಡಿದ ಉಡುಪಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಕ್ಕಳು ಚಿಕ್ಕವರಿದ್ದಾಗ ಅವರ ಆಸಕ್ತಿ ಕ್ಷೇತ್ರವನ್ನು ಗುರುತಿಸಿ ಅದರಂತೆ ಪ್ರೋತ್ಸಾಹ ನೀಡಿದಾಗ ಮಕ್ಕಳು ಬದುಕಿನಲ್ಲಿ ಏನಾದರೂ ಸಾಧಿಸೋಕೆ ಸಾಧ್ಯ. ಮಕ್ಕಳಲ್ಲಿ ಸಕರಾತ್ಮಕ ವಿಷಯಗಳನ್ನು ಯೋಚಿಸುವ ಗುಣಗಳನ್ನು ಬೆಳೆಸುವುದು ಪೋಷಕರ ಹಾಗೂ ಶಿಕ್ಷಕರ ಕೆಲಸ ಅದನ್ನು ಚಿಕ್ಕ ಮಕ್ಕಳಿರುವಾಗಲೇ ಪ್ರೇರೆಪಿಸಿದಾಗ ಮಕ್ಕಳು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ನಿರೂಪಿಸಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತಾವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿ, ಟ್ರಸ್ಟಿ ಸತೀಶ್ ವಡ್ಡರ್ಸೆ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ತ್ರಾಸಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಕಛೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ’ಜ್ಞಾನತಾಣ’ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್, ಕೋವಿಡ್ ಸಮಸ್ಯೆಯಿಂದ ಶಾಲೆಗಳು ಮುಚ್ಚಿರುವ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಗ್ರಾಮೀಣ ಮಕ್ಕಳಲ್ಲಿ ಅಂತರ್ಜಾಲ ಶಿಕ್ಷಣದ ಮಹತ್ವವನ್ನು ತಿಳಿಸಲು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ, ಭವಿಷ್ಯದಲ್ಲಿ ಅವರ ಕಲಿಕೆಯನ್ನು ಗಮನದಲ್ಲಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿರುವ ’ಜ್ಞಾನತಾಣ’ ಕಾರ್ಯಕ್ರಮ ಗ್ರಾಮೀಣ ಮಕ್ಕಳ ವಿದ್ಯಾಬ್ಯಾಸಕ್ಕೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದ್ಭಳಕೆ ಮಾಡಿಕೊಳ್ಳಬೇಕು. ಸರಕಾರ ಕೂಡ ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಇರುವ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಆಶಯ ವ್ಯಕ್ತಪಡಿಸಿರುವುದು ಶ್ಲಾಘನೀಯ, ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿತ್ತು. ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಸಿದಿತ್ತು. ಆದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ‘ಪ್ರವಾದಿ ಮುಹಮ್ಮದರ ಜೀವನ ಮತ್ತು ಸಂದೇಶ ಪರಿಚಯ’ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ, ಕೆಲವೇ ಕುತರ್ಕಿಗಳ ಅವಹೇಳನ, ಅಗೌರವದ ಕೃತಿಗಳಿಂದ ಜಗತ್ತಿಗೆ ಬೆಳಕು ನೀಡಿದ ಪ್ರವಾದಿ ಮತ್ತು ಮಹಾತ್ಮರ ವ್ಯಕ್ತಿತ್ವ ಮತ್ತು ಸಂದೇಶಗಳಿಗೆ ಚ್ಯುತಿ ಉಂಟಾಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ನೊಂದವರು ಅಷ್ಟೇ ಕೀಳುಮಟ್ಟದ ಪ್ರತಿಕ್ರಿಯೆ ನೀಡಬಾರದು, ಮಹಾನ್ ವ್ಯಕ್ತಿಗಳು ಯಾವ ಮತ, ಪಂಥಗಳಿಗೆ ಸೇರಿದ್ದರೂ ಅವರು ಸಾರುವ ಸಂದೇಶಗಳ ಸಾರ ಜಗತ್ತಿಗೇ ಮಾರ್ಗದರ್ಶಕ ಆಗಿರುತ್ತದೆ. ಪ್ರವಾದಿ ಮುಹಮ್ಮದರು ಈ ಸಾಲಿಗೆ ಸೇರಿದವರು. ಒಕ್ಕೂಟ ನಡೆಸುವ ಇಂತಹ ಕಾರ್ಯಕ್ರಮಗಳು ವಾಸ್ತವ ವಿಚಾರಗಳನ್ನು ಪ್ರಚುರಪಡಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ನಾವುಂದ ಆಕಳಬೈಲು ಜುಮ್ಮಾ ಮಸೀದಿಯ ಖತೀಬ್ ಮೌಲಾನಾ ಇಸ್ಮಾಯಿಲ್ ಮುಸ್ಲಿಯಾರ್, ಪ್ರವಾದಿ ಮುಹಮ್ಮದರ ಜೀವನ ಮತ್ತು ಸಂದೇಶಗಳನ್ನು ವಿವರಿಸಿದರು. ಬೈಂದೂರು ಹೋಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮರವಂತೆ ಮೀನುಗಾರರ ಸಹಕಾರಿ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ ಇತ್ತಿಚೆಗೆ ನಡೆಯಿತು. ಶಂಕು ಸ್ಥಾಪನೆ ಮಾಡಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕರಾವಳಿಯ ಆರ್ಥಿಕ ಜೀವನಾಡಿಯಾಗಿರುವ ಮೀನುಗಾರಿಕೆಗೆ ಮೀನುಗಾರರ ಸಹಕಾರ ಸಂಘಗಳು ದೀರ್ಘ ಕಾಲದಿಂದ ಹಣಕಾಸಿನ ಹಾಗೂ ಅಗತ್ಯ ಪರಿಕರಗಳನ್ನು ಪೂರೈಸುವ ಮೂಲಕ ಬೆಂಬಲ ನೀಡುತ್ತ ಬಂದಿವೆ ಎಂದು ಹೇಳಿದರು. ಮರವಂತೆಯ ಸಂಘವು ಜಿಲ್ಲೆಯ ಅತ್ಯಂತ ಹಳೆಯ ಸಂಸ್ಥೆಗಳಲ್ಲಿ ಒಂದು. ಅದರಿಂದ ಪರಿಸರದ ಮೀನುಗಾರರು ಹೆಚ್ಚಿನ ಸೇವೆ ನಿರೀಕ್ಷಿಸುತ್ತಾರೆ. ಅದಕ್ಕೆ ಅನುಗುಣವಾಗಿ ಸಂಘ ತನ್ನ ವ್ಯವಹಾರವನ್ನು ವಿಸ್ತರಿಸಿಕೊಳ್ಳಬೇಕು. ಅದರ ನೂತನ ಕಟ್ಟಡ ಮತ್ತು ಅನ್ಯ ಚಟುವಟಿಕೆಗಳಿಗೆ ಸರ್ಕಾರದಿಂದ ಸಿಗುವ ಎಲ್ಲ ನೆರವನ್ನು ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಸಂಘದ ಅಧ್ಯಕ್ಷ ಪ್ರವೀಣ ಖಾರ್ವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೈತ್ರಾ ವಂದಿಸಿದರು. ಸಂಘದ ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಖಾರ್ವಿ, ಭಾಗ್ಯಾ, ನಿರ್ದೇಶಕ ಮಂಡಳಿಯ ಸದಸ್ಯರು, ಗ್ರಾಮ ಪಂಚಾಯಿತಿ ಮಾಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ‘ಯಕ್ಷಗಾನಕ್ಕೆ ಅದರದ್ದೇ ಆದ ಪರಂಪರೆ ಇದೆ. ಹಿಮ್ಮೇಳ ಹಾಗೂ ಮುಮ್ಮೇಳಗಳ ಮೂಲಕ ಶ್ರೋತೃಗಳನ್ನು ಸಂಪ್ರೀತಗೊಳಿಸುವ ಕಾರ್ಯ ನಿರಂತರವಾಗಿ ನಡೆಯಬೇಕು’ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅಭಿಪ್ರಾಯಪಟ್ಟರು. ಇಲ್ಲಿಗೆ ಸಮೀಪದ ಕೊಲ್ಲೂರಿನ ಮೂಕಾಂಬಿಕಾ ಸಭಾಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಆಶ್ರಯದಲ್ಲಿ ಶನಿವಾರ ನಡೆದ 2019ನೇ ಸಾಲಿನ ‘ಪಾರ್ತಿಸುಬ್ಬ ಪ್ರಶಸ್ತಿ’, ‘ಯಕ್ಷಸಿರಿ’ ವಾರ್ಷಿಕ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ನಮ್ಮ ಸಾಂಸ್ಕೃತಿಕ ರಾಯಭಾರಿಗಳಾಗಿರುವ ಯಕ್ಷಗಾನ ಕಲಾವಿದರ ಶ್ರಮ ಹಾಗೂ ಕಲಾರಾಧನೆಗೆ ಸೂಕ್ತ ಗೌರವ ದೊರಕಬೇಕು. ಕಾಲಮಿತಿ ಯಕ್ಷಗಾನ ಪ್ರದರ್ಶನಗಳ ಮೂಲಕ ಹೆಚ್ಚು ಶ್ರೋತೃಗಳನ್ನು ಸೆಳೆಯುವಂತಾಗಬೇಕು. ಯಕ್ಷಗಾನ ಪ್ರದರ್ಶನದ ಹಳೆಯ ವೈಭವ ಮರುಕಳಿಸಬೇಕು. ಸಜ್ಜನ ಅಂಬಾತನಯ ಮುದ್ರಾಡಿಯಂತಹ ಹಿರಿಯ ಸಾಹಿತಿಯನ್ನು ಕೊಲ್ಲೂರು ಕ್ಷೇತ್ರದಲ್ಲಿ ಗೌರವಿಸುವ ಮೂಲಕ ಯಕ್ಷಗಾನ ಅಕಾಡೆಮಿಯ ಗೌರವ ಹೆಚ್ಚಾಗಿದೆ’ ಎಂದು ಹೇಳಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ. ಎ. ಹೆಗಡೆ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕೊಡೇರಿ ಕಿರು ಬಂದರಿನಲ್ಲಿ ಮೀನು ಹರಾಜು ಪ್ರಕ್ರಿಯೆಯಗೆ ಸಂಬಂಧಿಸಿದಂತೆ ಉಪ್ಪುಂದ ಹಾಗೂ ಕೊಡೇರಿ ಭಾಗದ ಮೀನುಗಾರರ ನಡುವೆ ಘರ್ಷಣೆ ತಾರಕಕ್ಕೇರಿ, ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಶನಿವಾರ ನಡೆದಿದೆ. ಕೊಡೇರಿ ಬಂದರಿನ ಮೀನು ಹರಾಜು ಪ್ರಾಂಗಾಣದಲ್ಲಿ ಮೀನು ಹರಾಜು ಮಾಡಲು ಉಪ್ಪುಂದ, ಕೊಡೇರಿ ಹಾಗೂ ಮರವಂತೆ ಭಾಗದ ಮೀನುಗಾರರಿಗೆ ಮೀನುಗಾರಿಕಾ ಇಲಾಖೆ ತಾತ್ಕಲಿಕ ಅನುಮತಿ ನೀಡಿತ್ತು, ಉಪ್ಪುಂದ ಭಾಗದ ಸುಮಾರು 100ಕ್ಕೂ ಹೆಚ್ಚು ದೋಣಿಗಳು ಶನಿವಾರ ಮಧ್ಯಾಹ್ನದ ಮೀನುಗಾರಿಕೆ ನಡೆಸಿ, ಎಡಮಾವಿನ ಹೊಳೆಯ ಮೂಲಕ ಮೀನು ಮಾರಾಟ ಮಾಡಲು ಬಂದರಿನ ಪ್ರಾಂಗಾಣ ಪ್ರವೇಶಿಸುವಾಗ, ಕೊಡೇರಿ ಭಾಗದ ಮೀನುಗಾರರು ಇಲ್ಲಿನ ಪ್ರಾಂಗಾಣದಲ್ಲಿ ಮೂಲಸೌಕರ್ಯ ಕಲ್ಪಿಸದ ಹಾಗೂ ಕೊಡೇರಿ ಭಾಗದ ಮೀನುಗಾರರಿಗೆ ಅನುಕೂಲವಾಗುವಂತೆ ಎಡಮಾವಿನ ಹೊಳೆಯಲ್ಲಿ ಸೇತುವೆ ನಿರ್ಮಾಣ ಮಾಡುವವರೆಗೆ ಪ್ರಾಂಗಣದಲ್ಲಿ ಮೀನು ಹರಾಜಿಗೆ ಅವಕಾಶ ನೀಡುವುದಿಲ್ಲ ಎಂದು ಎಡಮಾವಿನ ಹೊಳೆಯಲ್ಲಿ ಉಪ್ಪುಂದ ಭಾಗದ ದೋಣಿಗಳು ಸಂಚರಿಸದಂತೆ ತಮ್ಮ ದೋಣಿಯನ್ನು ಅಡ್ಡಲಾಗಿರಿಸಿ, ಮೀನು ಹರಾಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೆಹರು ಯವ ಕೇಂದ್ರ ಉಡುಪಿ ಹಾಗೂ ಸ್ನೇಹ ಮಹಿಳಾ ಮಂಡಲ ರಿ. ಮರವಂತೆ ಇವರ ಸಹಯೋಗದಲ್ಲಿ ಮಹಿಳಾ ಮಂಡಲದ ಸದಸ್ಯರು ಹಾಗೂ ಸಾರ್ವಜನಿಕರಿಗೆ ಕೋವಿಡ್- 19 ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ಇಲ್ಲಿನ ಮರವಂತೆಯ ಸುಭಾಶ್ಚಂದ್ರ ಬೋಸ್ ಸರಕಾರಿ ಫ್ರೌಡಶಾಲೆಯ ವಠಾರದಲ್ಲಿ ಜರುಗಿತು. ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸ್ವಚ್ಛತೆ ಮತ್ತು ಪರಸ್ಪರ ಅಂತರ ಕಾಯ್ದುಕೊಳ್ಳುವ ಪದ್ದತಿ ಮೊದಲಿನಿಂದಲೂ ಇದೆ. ಇಂತಹ ಗಂಭೀರ ಸಂಧರ್ಭಗಳಲ್ಲಿ ಅದನ್ನು ಚಾಚು ತಪ್ಪದೆ ಪಾಲಿಸುವುದು ಅಗತ್ಯ. ಕೋವಿಡ್-19ಗೆ ಸೂಕ್ತ ಲಸಿಕೆ ದೊರೆಯುವ ತನಕ ನಿರ್ಲಕ್ಷ ವಹಿಸುವುದು ಸರಿಯಲ್ಲ. ಜನರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ತಪ್ಪು ಸಂದೇಶಗಳಿಗೆ ಕಿವಿಗೊಡದೇ ಸರಕಾರ ನೀಡಿರುವ ಅಧಿಕೃತ ಮಾಹಿತಿಯನ್ನು ಅನುಸರಿಸಬೇಕು. ನಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದುವುದಲ್ಲದೇ ನಮ್ಮ ಸುತ್ತಮುತ್ತಲಿನವರ ಆರೋಗ್ಯ ಕಾಳಜಿಯೂ ಬಹುಮುಖ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಸ್ನೇಹ ಮಹಿಳಾ ಮಂಡಲದ ಅಧ್ಯಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುರಭಿ ರಿ. ಬೈಂದೂರು ಮತ್ತು ನೆಹರು ಯುವ ಕೇಂದ್ರ ಸಹಯೋಗದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಇಲ್ಲಿನ ರೋಟರಿ ಭವನದಲ್ಲಿ ಜರುಗಿತು. ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ದೇಶದ ಏಕತೆ ಮತ್ತು ಐಕ್ಯತೆಗಾಗಿ ನಿರಂತರವಾಗಿ ಶ್ರಮಿಸಿದವರು. ಮೊದಲ ಗೃಹಮಂತ್ರಿಯಾಗಿ ಬೇರೆ ಬೇರೆ ಇದ್ದ ಸಂಸ್ಥಾನಗಳನ್ನು ಒಗ್ಗೂಡಿಸಿ ಒಂದೇ ರಾಷ್ಟ್ರವನ್ನು ಕಟ್ಟುವಲ್ಲಿ ಶ್ರಮಿಸಿದ್ದರು. ತಾನು ಕೈಗೊಂಡ ಕಾರ್ಯವನ್ನು ಪೂರ್ಣಗೊಳಿಸದೆ ಬಿಡುತ್ತಿರಲಿಲ್ಲ ಎಂದರು. ಸುರಭಿ ಬೈಂದೂರು ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೆಂದ್ರದ ಸ್ವಯಂಸೇವಕ ಸುನಿಲ್ ಪ್ರ್ರಾಸ್ತಾವಿಕ ಮಾತುಗಳನ್ನಾಡಿದರು ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ಸುಧಾಕರ ಪಿ. ವಂದಿಸಿದರು.

Read More