ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರ ಎರಡನೆ ಅಲೆ ಕಾರಣ ರಾಜ್ಯದಲ್ಲಿ ವಿಧಿಸಿರುವ ಜನತಾಕರ್ಪ್ಯೂಅವಧಿಯಲ್ಲಿ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್ ರೂ. 10,000 ಪರಿಹಾರವನ್ನು ಗರಿಷ್ಟ 1 ಹೆಕ್ಟೇರ್ ಗೆ ಹಾಗೂ ಕನಿಷ್ಟ ರೂ.2000 ಕ್ಕೆ ಮಿತಿಗೊಳಿಸಿ ವಿತರಿಸಲಾಗುವುದು. ವಾರ್ಷಿಕ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಳಿಗೆ 2021-22 ನೇ ಸಾಲಿನ ಬೇಸಿಗೆ ಬೆಳೆ ಸಮೀಕ್ಷೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 2021-22 ನೇ ಸಾಲಿನಮುಂಗಾರು ಬೆಳೆ ಸಮೀಕ್ಷೆ ಮಾಹಿತಿಯಆಧಾರದಲ್ಲಿ ಪಾವತಿಸಲು ಸರ್ಕಾರದ ಸೂಚನೆಯಿದ್ದು, ಬೆಳೆಸಮೀಕ್ಷೆಯಲ್ಲಿ ನಮೂದಾಗಿರುವ ಹಾಗೂ ಇಲಾಖೆಯ ತಂತ್ರಾಶದಲ್ಲಿ ನೊಂದಣಿಯಾಗಿರುವ ಹಾಗೂ ನೊಂದಣಿಯಾಗದೆಇರುವರೈತರ ವಿವರಗಳು ತೋಟಗಾರಿಕೆ ಇಲಾಖಾ ಕಛೇರಿಗಳಲ್ಲಿ ಲಭ್ಯವಿರುತ್ತದೆ. ರೈತರು ಈಗಾಗಲೇಇಲಾಖೆಯ FRUITS ತಂತ್ರಾಂಶದಲ್ಲಿ ನೊಂದಣಿಯಾಗಿದ್ದರೆ ಅರ್ಹ ರೈತರಿಗೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು. FRUITS ತಂತ್ರಾಂಶದಲ್ಲಿ ನೋಂದಣಿಯಾಗದೇ ಇರುವ ರೈತರು ತಮ್ಮಆಧಾರ್ ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ತಾಲೂಕು ತೋಟಗಾರಿಕೆ ಇಲಾಖೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ವಂಡ್ಸೆ ಸಮೀಪದ ರಸ್ತೆಯಲ್ಲಿ ನಡೆದ ಟಿಪ್ಪರ್ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಸ್ಕೂಟರ್ ಸವಾರ ರಾಜು ಮೊಗವೀರ ಮೃತ ದುರ್ದೈವಿ. ವಂಡ್ಸೆ ಕಡೆಯಿಂದ ಬೆಳ್ಳಾಲ ಕಡೆಗೆ ತೆರಳುತ್ತಿದ್ದ ಟಿಪ್ಪರ್, ವಂಡ್ಸೆ ಕಡೆಗೆ ತೆರಳುತ್ತಿದ್ದ ರಾಜು ಮೊಗವೀರ ಎಂಬುವವರ ಸ್ಕೂಟರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದು, ಟಿಪ್ಪರ್ ಚಕ್ರ ತಲೆಯ ಮೇಲೆ ಹರಿದು ತೀವ್ರ ಸ್ವರೂಪದ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್ಐ ನಾಸೀರ್ ಹುಸೇನ್, ಸಿಬ್ಬಂದಿಗಳು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಡೆಯುವುದು ಅವಶ್ಯವಕವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯ ಅತಿಅವಶ್ಯಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಯಾವುದೇ ಮೈಕ್ರೋಫೈನ್ಸ್/ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ. ಯಾವುದೇ ಮೈಕ್ರೋಫೈನಾನ್ಸ್/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ, ಅಲ್ಲದೇ ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ, ರುದ್ರೇಶ್ ಡಿ.ಸಿ , ಲೀಡ್ ಡಿಸ್ಟಿಕ್ ಮ್ಯಾನೆಜರ್, 9449860858, ಪ್ರವೀಣ್ ಬಿ. ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 9448633338 ಇವರನ್ನು ನೇಮಿಸಲಾಗಿದೆ. ಈ ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 766 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 285, ಕುಂದಾಪುರ, ಬೈಂದೂರು ತಾಲೂಕಿನ 293, ಕಾರ್ಕಳ, ಹೆಬ್ರಿ ತಾಲೂಕಿನ 186 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 766 ಪ್ರಕರಣಗಳಲ್ಲಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 749 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 62 ವರ್ಷದ ವೃದ್ಧೆ, 57 ವರ್ಷದ ಮಹಿಳೆ, 40 ವರ್ಷದ ಮಹಿಳೆ, ಕುಂದಾಪುರದ 51 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 835 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5942 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3396 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6335 ಮಂದಿಗೆ ಮೊದಲನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಯಾಗಿರುವ ಡಾ. ನಾಗಭೂಷಣ ಉಡುಪ ಅವರನ್ನು ಉಡುಪಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ (ಡಿಎಚ್ಓ) ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ಮೇ 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಡಿಎಚ್ಓ ಸ್ಥಾನಕ್ಕೆ ಡಾ. ನಾಗಭೂಷಣ್ ಅವರು ಆಯ್ಕೆ ಆಗಿದ್ದು ಇದೇ ಮೇ 31ರಂದು ಡಾ. ಸುಧೀರ್ಚಂದ್ರ ಸೂಡ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
‘ನಿನ್ನ ಕಷ್ಟ ನನಗೆ ಅರ್ಥವಾಗುತ್ತದೆ’ ಹೀಗೆ ನಾವು ಹೇಳುವ ಒಂದು ಚಿಕ್ಕ ವಾಕ್ಯ ಹಲವರ ಬದುಕಿನಲ್ಲಿ ಹೊಸ ಚೈತನ್ಯವನ್ನೇ ತುಂಬಬಹುದು. ನಮ್ಮ ಮಾತನ್ನು ಕೇಳಿಸಿಕೊಳ್ಳುವವರಿದ್ದಾರೆ. ನಮ್ಮ ನೋವಿಗೆ ಹೆಗಲಾಗುವವರಿದ್ದಾರೆ ಎಂಬ ಸಣ್ಣ ವಿಶ್ವಾಸವೂ ಕೂಡ ಮನುಷ್ಯನ ಬದುಕಿನ ದೊಡ್ಡ ಆತ್ಮವಿಶ್ವಾಸಕ್ಕೆ ದಾರಿಮಾಡಿಕೊಡಬಲ್ಲದು./ಕುಂದಾಪ್ರ ಡಾಟ್ ಕಾಂ/ ಕೀಳರಿಮೆ ಹೆಚ್ಚಾದಾಗ, ಪ್ರೀತಿಯಲ್ಲಿ ಸೋತಾಗ, ಉದ್ಯೋಗದಲ್ಲಿ ಅಂದುಕೊಂಡ ಯಶಸ್ಸು ಸಿಗದಾಗ, ಕಾಯಿಲೆಗಳು ಕಂಗೆಡಿಸಿದಾಗ, ಅವಮಾನದಿಂದ ಬೇಸತ್ತಾಗ… ಹೀಗೆ ಅನೇಕ ಕಾರಣಕ್ಕೆ ಜನರು ಖಿನ್ನತೆಗೆ ಜಾರುತ್ತಾರೆ. ನಮ್ಮ ಸುತ್ತಮುತ್ತಲಲ್ಲೇ ಹಲವರು ಖಿನ್ನತೆಯಿಂದ ನರಳುತ್ತಿರುತ್ತಾರೆ. ಅವರು ನಮ್ಮವರೇ ಆಗಿದ್ದಾಗ ಅವರನ್ನು ಸಮಾಧಾನ ಪಡಿಸಲು ಮನಸ್ಸು ಚಡಪಡಿಸಿದರೂ, ಏನು ಮಾತನಾಡಬೇಕೆಂಬುದು ಹಲವರಿಗೆ ತಿಳಿಯುವುದಿಲ್ಲ. ಇಂಥ ಸಂದರ್ಭದಲ್ಲಿ ಅವರಿಗೆ ಯಾವುದೇ ಕ್ಷಣ ಬೇಕಾದರೂ ನಾವಿರುವುದಾಗಿ ಅರಿವು ಮೂಡಿಸುವುದೇ ದೊಡ್ಡ ಬಲ. ಖಿನ್ನತೆಯಲ್ಲಿರುವವರ ಬಳಿ ಎಂಥ ಮಾತುಗಳು ಕೆಲಸ ಮಾಡಬಹುದು ಎಂಬ ಅರಿವಿದ್ದರೆ, ಹತ್ತಿರದವರನ್ನು ಈ ವೇದನೆಯಿಂದ ಹೊರತರಲು ಸಹಾಯ ಆಗಬಹುದು. ನಿನಗೇನಾಗುತ್ತಿದೆ ಎಂದು ನನ್ನಲ್ಲಿ ಹೇಳಿಕೋ. ಅರ್ಥ ಮಾಡಿಕೊಳ್ಳುತ್ತೇನೆ. ಇದರಿಂದ ನಿನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಡಲ್ಕೊರೆತ ಮತ್ತು ಚಂಡಮಾರುತದ ಹೊಡೆತದಿಂದ ಕಡಿದು ಹೋಗಿದ್ದ ಮರವಂತೆ ಕರಾವಳಿ ಮಾರ್ಗವನ್ನು ಮರುಜೋಡಿಸುವ ಕೆಲಸ ಪೂರ್ಣಗೊಂಡಿದ್ದು, ಅದೀಗ ಜನ ಮತ್ತು ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮರವಂತೆ ಮೀನುಗಾರಿಕಾ ಹೊರಬಂದರಿನ ಉತ್ತರ ತಡೆಗೋಡೆಯ ಉತ್ತರದ ತೀರ ಪ್ರದೇಶ ನಿರಂತರ ಕಡಲ್ಕೊರೆತದಿಂದ ನಶಿಸುತ್ತಿತ್ತು. ಈಚಿನ ಚಂಡಮಾರುತದ ವೇಳೆ ಸಮುದ್ರದ ಮಟ್ಟ ಹೆಚ್ಚಿ, ಅಲೆಗಳ ಅಬ್ಬರ ತೀವ್ರಗೊಂಡ ಕಾರಣ ೩೫೦ ಮೀಟರು ಉದ್ದದ ರಸ್ತೆ ತುಂಡಾಗಿ ಸಂಪರ್ಕ ಕಡಿತಗೊಂಡಿತ್ತು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಹಿಂದಿನ ವಾರ ಭೇಟಿನೀಡಿ ತಾತ್ಕಾಲಿಕವಾಗಿ ಸಂಪರ್ಕ ಕಲ್ಪಿಸುವ ಭರವಸೆ ನೀಡಿದ್ದರು. ಅದರಂತೆ ಮರುದಿನದಿಂದಲೇ ಇಲ್ಲಿ ಸಮುದ್ರ ತೀರದುದ್ದಕ್ಕೆ ಕಲ್ಲಿನ ತಡೆ ನಿರ್ಮಿಸಿ, ಕುಸಿದ ರಸ್ತೆಯ ಭಾಗವನ್ನು ಎತ್ತರಿಸುವ ಕಾಮಗಾರಿ ಆರಂಭವಾಯಿತು. ಈಗ ಅದರ ಮೇಲೆ ಕಚ್ಚಾ ರಸ್ತೆ ನಿರ್ಮಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ನೀಡಿದ ಭರವಸೆಯಂತೆ ರಸ್ತೆ ಸಂಪರ್ಕ ಮರುಸ್ಥಾಪಿಸಲು ಕಾರಣರಾದ ಶಾಸಕರು ಮತ್ತು ಸಚಿವರಿಗೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಚಿಕಿತ್ಸೆ ನೀಡುತ್ತಿರುವ ಸರಕಾರಿ ಹಾಗೂ ಖಾಸಗಿ ನೋಂದಾಯಿತ ಆಸ್ಪತ್ರೆಗಳಿಗೆ ಆರೋಗ್ಯ ಮಿತ್ರರನ್ನು ತಾತ್ಕಾಲಿಕ ನೆಲೆಯಲ್ಲಿ( ಸುಮಾರು 3 ತಿಂಗಳ ಅವಧಿಗೆ) ಒಟ್ಟು 14 ಹುದ್ದೆಗಳಿಗೆ ( ಉಡುಪಿ-9, ಬ್ರಹ್ಮಾವರ-1, ಕುಂದಾಪುರ-3, ಕಾರ್ಕಳ-1) ನೇಮಕಾತಿಗೊಳಿಸುವ ಬಗ್ಗೆ ಸ್ಥಳೀಯ ಅರ್ಹ ಅಭ್ಯರ್ಥಿಗಳಿಗೆ ಮೇ 29ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ,ರಜತಾದ್ರಿ ಮಣಿಪಾಲ ಉಡುಪಿ ಇಲ್ಲಿ ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಲಾಗುವುದು. ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ, ಕಂಪ್ಯೂಟರ್ ನಲ್ಲಿ ಕೆಲಸ ಮಾಡಿದ ಅನುಭವ ಇರುವ ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ವಿದ್ಯಾರ್ಹತೆಯ ಮೂಲ ದಾಖಲಾತಿ, ಆಧಾರ್ಕಾರ್ಡ್ ಹಾಗೂ ಇವುಗಳ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗುವಂತೆ ಹಾಗೂ ಆಯ್ಕೆಯಾದವರಿಗೆ ಪ್ರತೀ ಮಾಹೆ ರೂ.15,000 ಗೌರವಧನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಗಂಗೊಳ್ಳಿಯ ಜಾಮಿಯಾಥುಲ್ ಮುಸ್ಲಿಮಿನ್ ಟ್ರಸ್ಟ್ ಕರೋನಾ ಮಹಾಮಾರಿ ಕಟ್ಟಿಹಾಕಲು ಮಾದರಿ ಕಾರ್ಯ ಮಾಡುವ ಮೂಲಕ ಗಮನ ಸೆಳೆದಿದೆ. ಗಂಗೊಳ್ಳಿ ಪರಿಸರದಲ್ಲಿ ಕೋವಿಡ್ ಸೋಂಕಿನ ಕುರಿತು ಪರಿಸರದ ಜನರಲ್ಲಿ ಜಾಗೃತಿ ಮೂಡಿಸುದರೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಆಶಾ ಕಾರ್ಯಕರ್ತೆಯೊಡಗೂಡಿ ಮನೆ ಮನೆಗೆ ತೆರಳಿ ಕೋವಿಡ್ ಪರೀಕ್ಷೆ ನಡೆಸಿ ಗ್ರಾಮದಲ್ಲಿ ಸೋಂಕು ನಿವಾರಣೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಜಾಮಿಯಾಥುಲ್ ಮುಸ್ಲಿಮಿನ್ ಟ್ರಸ್ಟ್ ಅಧ್ಯಕ್ಷ ಪಿ.ಎಂ.ಹಸೈನಾರ್ ಮತ್ತು ಕಾರ್ಯದರ್ಶಿ ಜಿ.ರೆಹಾನ್ ಅಹ್ಮದ್ ಹಾಗೂ ಟ್ರಸ್ಟ್ನ ಸದಸ್ಯರ ಮುಂದಾಳುತ್ವದಲ್ಲಿ ಗಂಗೊಳ್ಳಿಯ ಮೂರು ವಠಾರಗಳಲ್ಲಿನ ಸುಮಾರು ೧೫೦ ಕ್ಕೂ ಮಿಕ್ಕಿ ಮನೆಯ ಸದಸ್ಯರನ್ನು ಕೋವಿಡ್ ಪರೀಕ್ಷೆ ಒಳಪಡಿಸಲಾಗಿದೆ. ಪಾಸಿಟಿವ್ ಇದ್ದವರನ್ನು ಹೋಮ್ ಐಸೋಲೇಶನ್ ಮಾಡಿಸಿ ಅವರ ಚಲನವಲನಗಳ ಮೇಲೆ ನಿಗಾ ಇರಿಸುವ ಕೆಲಸವನ್ನೂ ಮಾಡಲಾಗುತ್ತಿದೆ ಅಲ್ಲದೆ ತುರ್ತು ಚಿಕಿತ್ಸೆ ಅಗತ್ಯವಿದ್ದವರನ್ನು ಆಸ್ಪತ್ರೆಗೆ ದಾಖಲಿಸಲು ಕ್ರಮಕೈಗೊಳ್ಳಲಾಗುತ್ತಿದೆ. ವ್ಯಾಪಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 905 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 420, ಕುಂದಾಪುರ, ಬೈಂದೂರು ತಾಲೂಕಿನ 246, ಕಾರ್ಕಳ, ಹೆಬ್ರಿ ತಾಲೂಕಿನ 233 ಮಂದಿಗೆ ಹಾಗೂ ಹೊರ ಜಿಲ್ಲೆಯ 6 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 905 ಪ್ರಕರಣಗಳಲ್ಲಿ 30 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 875 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ► ಉಡುಪಿ ಜಿಲ್ಲೆಯ ಬ್ಯಾಂಕುಗಳ ಕೆಲಸದ ಸಮಯ ಬದಲಿಸಲು ಆದೇಶ – https://kundapraa.com/?p=48719 . ಇಂದು ಉಡುಪಿಯ 69 ವರ್ಷದ ವೃದ್ಧೆ, 70 ವರ್ಷದ ವೃದ್ಧ, ಕುಂದಾಪುರದ 78 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 753 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6015 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3648 ಮಂದಿಗೆ ಕೋವಿಡ್…
