Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಲಿತಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ನೇತ್ರಾವತಿ ವಿಜೇಂದ್ರ ಆಚಾರ್ಯ ಆಯ್ಕೆಗೊಂಡಿದ್ದಾರೆ. ಒಟ್ಟು 13 ಸದಸ್ಯ ಬಲ ಹೊಂದಿರುವ ಕಾಲ್ತೋಡು ಗ್ರಾಮ ಪಂಚಾಯಿತಿ 10 ಕಾಂಗ್ರೆಸ್, 3 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆರಾಡಿ ಗ್ರಾ.ಪಂ.ನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸಮಾಬಲ ಕಂಡುಕೊಂಡ ಹಿನ್ನೆಲೆಯಲ್ಲಿ ಅದೃಷ್ಟದಾಟದಲ್ಲಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುದರ್ಶನ್ ಬಿ. ಆರ್. ಆಯ್ಕೆಗೊಂಡಿದ್ದಾರೆ. 14 ಸದಸ್ಯ ಬಲದ ಕೆರಾಡಿ ಗ್ರಾ.ಪಂ.ನಲ್ಲಿ 8 ಬಿಜೆಪಿ ಬೆಂಬಲಿತ ಹಾಗೂ 6 ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಗಿರಿಜಾ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತರಾಗಿ ಜ್ಯೋತಿ ವಿ. ಶೆಟ್ಟಿ ಸ್ಪಧಿಸಿದ್ದರು. ಮತದಾನ ನಡೆದಾಗ ಇಬ್ಬರಿಗೂ ತಲಾ7 ಮತ ಪಡೆದು ಸಮಬಲ ಸಾಧಿಸಿದ್ದರು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಅವರಿಗೆ ಅದೃಷ್ಟ ಒಲಿದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಬಿ.ಆರ್. ಸುದರ್ಶನ್ ಶೆಟ್ಟಿ ಅವರು 8 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತರಾಗಿ ಕಣಕ್ಕಿಳಿದಿದ್ದ ಮಂಜು ಕೊಠಾರಿ ಅವರು 6 ಮತ ಪಡೆದರು. ಕುಂದಾಪುರ ತಾ.ಪಂ. ಕಾರ‍್ಯನಿರ್ವಹಣಾಧಿಕಾರಿ ಕೇಶವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು 74 ಉಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ ಶೆಟ್ಟಿ ಕಟ್ಟಿನಬೈಲು, ಉಪಾಧ್ಯಕ್ಷರಾಗಿ ರತ್ನ ಶೇಖರ ನಾಯ್ಕ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ 74ಉಳ್ಳೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಿದ್ಧಾಪುರ ನೀರಾವರಿ ಇಲಾಖಾ ಇಂಜಿನಿಯರ್ ಭಾನು ನಾಯಕ್ ಭಾಗವಹಿಸಿದ್ದರು. 74 ಉಳ್ಳೂರು ಗ್ರಾಮ ಪಂಚಾಯತಿ ಒಟ್ಟು 9 ಸದಸ್ಯ ಸ್ಥಾನವನ್ನು ಹೊಂದಿದೆ. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಮಹಿಳೆಗೆ ಮೀಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ತೆಕ್ಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಸಂಜೀವ ದೇವಾಡಿಗ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ತೆಕ್ಕಟ್ಟೆ ಗ್ರಾಮ ಪಂಚಾಯತಿಯಲ್ಲಿ ನಡೆಯಿತು. ತೆಕ್ಕಟ್ಟೆ ಗ್ರಾ.ಪಂ.ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಂದಾವರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಾಬಿ, ಉಪಾಧ್ಯಕ್ಷರಾಗಿ ಶೋಭಾ ದೇವಾಡಿಗ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕಂದಾವರ ಗ್ರಾಮ ಪಂಚಾಯತಿಯಲ್ಲಿ ನಡೆಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕೋಟೇಶ್ವರ ಗ್ರಾಮ ಪಂಚಾಯತಿಯ ಮೊದಲ ಹಂತದ ೩೦ ತಿಂಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಕೃಷ್ಣ ಗೊಲ್ಲ, ಉಪಾಧ್ಯಕ್ಷರಾಗಿ ರಾಗಿಣಿ ದೇವಾಡಿಗ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೋಟೇಶ್ವರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಕುಸುಮಾಕರ ಶೆಟ್ಟಿ ಭಾಗವಹಿಸಿದ್ದರು. ಕೋಟೇಶ್ವರ ಗ್ರಾಮ ಪಂಚಾಯತಿ ಒಟ್ಟು 26 ಸದಸ್ಯ ಸ್ಥಾನವನ್ನು ಹೊಂದಿದ್ದು, ಇದರಲ್ಲಿ 20 ಬಿಜೆಪಿ ಬೆಂಬಲಿತರು, 5 ಕಾಂಗ್ರೆಸ್ ಬೆಂಬಲಿತರು, 1 ಪಕ್ಷೇತರರು ಇದ್ದಾರೆ. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಗ್ರಾಮ ಪಂಚಾಯಿತಿಯಲ್ಲಿ 30 ತಿಂಗಳ ಅವಧಿಗೆ ಅಧ್ಯಕ್ಷೆಯಾಗಿ ಪ್ರಥಮ ಬಾರಿಗೆ ಅನುಸೂಚಿತ ಪಂಗಡದ ಮಹಿಳೆ ರುಕ್ಮಿಣಿ ಮತ್ತು ಉಪಾಧ್ಯಕ್ಷರಾಗಿ ಲೋಕೇಶ ಖಾರ್ವಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ–ಅಗೆ ಮೀಸಲಾಗಿತ್ತು. ಬುಧವಾರ ಬೈಂದೂರು ವಲಯ ಶಿಕ್ಷಣಾಧಿಕಾರಿ ಜಿ. ಎಂ. ಮುಂದಿನಮನಿ ಆಯ್ಕೆ ಪ್ರಕ್ರಿಯೆ ನಡೆಸಿದರು.ಮರವಂತೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಇದೇ ಮೊದಲ ಬಾರಿಗೆ ಅನುಸೂಚಿತ ಪಂಗಡದ ಮಹಿಳೆಗೆ ಮೀಸಲಾಯಿತು. ಪ್ರಥಮ ಬಾರಿ ಸದಸ್ಯೆಯಾದ ರುಕ್ಮಿಣಿ ಅವರಿಗೆ ಅಧ್ಯಕ್ಷ ಸ್ಥಾನ ಅವಿರೋಧವಾಗಿ ಒಲಿಯಿತು. ಅವರಿಗೆ ಯಾವುದೇ ಪಕ್ಷದ ಬೆಂಬಲ ಪಡೆಯುವ ಅಗತ್ಯ ಉದ್ಭವಿಸಲಿಲ್ಲ. ಆದರೂ ಅವರು ಸಲ್ಲಿಸಿದ ಎರಡು ಪ್ರತ್ಯೇಕ ನಾಮಪತ್ರಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು ಅನುಮೋದಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಬೆಂಬಲಿಸಿದರು.ಬಿಜೆಪಿ ಬೆಂಬಲಿತ ಲೋಕೇಶ ಖಾರ್ವಿ ಎರಡನೇ ಅವಧಿಗೆ ಸದಸ್ಯರಾಗಿದ್ದಾರೆ. ಇಲ್ಲಿನ 14 ಸ್ಥಾನಗಳಲ್ಲಿ 11 ಬಿಜೆಪಿ ಬೆಂಬಲಿತರು ಮತ್ತು 2 ಕಾಂಗ್ರೆಸ್ ಬೆಂಬಲಿತರು ಗೆದ್ದಿದ್ದರು.ನಿಕಟಪೂರ್ವ ಅಧ್ಯಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ 2ಎ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿಯ ಪ್ರಕಾರ ಅಧ್ಯಕ್ಷರಾಗಿ ರಮೇಶ ವಿ. ದೇವಾಡಿಗ, ಉಪಾಧ್ಯಕ್ಷರಾಗಿ ಶ್ರೀಮತಿ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ರಮೇಶ ದೇವಾಡಿಗ 3ನೇ ಭಾರೀ  ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾಗಿದ್ದು, ಶ್ರೀಮತಿ ಶೆಟ್ಟಿ ಮೊದಲ ಬಾರಿಗೆ ವಿಜೇತರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದಲ್ಲಿ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಸಚಿವಾಲಯದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಸಪ್ತಪದಿ ಸಾಮೂಹಿಕ ವಿವಾಹ ನಡೆಯಿತು. 10 ಜೋಡಿಗಳು ಹಸಮಣೆ ಏರಿದರು. ಮಧುಸೂದನ್ ಬಾಯರಿ, ರಾಜೇಂದ್ರ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು. ವಿಪ್ರ ಮಹಿಳೆಯರು ಸೋಭಾನಿ ಹಾಡುವುದರ ಮೂಲಕ ವಿವಾಹ ಮಹೋತ್ಸವದ ಉದ್ದಕ್ಕೂ ಗಮನ ಸೆಳೆದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ನವವಧುವರರಿಗೆ ಶುಭ ಹಾರೈಸಿದರು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಲಿತಾ, ದೇವಳದ ಟ್ರಸ್ಟಿ ಸುಶೀಲಾ ಸೋಮಶೇಖರ್, ಜ್ಯೋತಿ.ಬಿ.ಶೆಟ್ಟಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಪತ್ನಿ ಶಾರದಾ ಆರತಿ ಬೆಳಗಿ ವಧುವರರನ್ನು ಶುಭಹಾರೈಸಿದರು. ಜುಲೈವರೆಗೆ ಸಪ್ತಪದಿ: ರಾಜ್ಯದಲ್ಲಿ ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿದ್ದ ಸಪ್ತಪದಿಗೆ ಈಗ ಮತ್ತೆ ಚಾಲನೆ ನೀಡಲಾಗಿದೆ. ಹಲವು ಕಡೆ ನಡೆದ ಸಪ್ತಪದಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಪ್ರದೇಶದ ಸಂಪರ್ಕ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ತ್ರಾಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಣದಮಕ್ಕಿ-ದೇವಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೋಟೆಮಕ್ಕಿ ಕ್ರಾಸ್ನಿಂದ ಮೊವಾಡಿ ಕ್ರಾಸ್ವರೆಗೆ ಎಸ್ಸಿಪಿ ಯೋಜನೆಯ ಅಡಿಯಲ್ಲಿ ₹ 38.21 ಲಕ್ಷ ಅಂದಾಜು ವೆಚ್ಚದಲ್ಲಿ 800 ಮೀಟರ್ ಕಾಂಕ್ರೀಟ್ ರಸ್ತೆಯಾಗುವುದರಿಂದ ಮಣ್ಣಿನ ರಸ್ತೆ ಮೇಲ್ದರ್ಜೆಗೇರಲಿದೆ ಎಂದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟ ಪೂಜಾರಿ, ಸದಸ್ಯ ರೇನ್ಸಮ್ ಪಿರೇರಾ, ರಮೇಶ ಆಚಾರ್ಯ ಅರಾಟೆ, ಸೀತಾರಾಮ ಶೆಟ್ಟಿ ಕೋಟೆಮಕ್ಕಿ, ಬಿಜೆಪಿ ಮುಖಂಡ ಶಿವರಾಮ ಶೆಟ್ಟಿ ಕಮ್ಮಾರಕೊಡ್ಲು, ಮಂಜು ಶೆಟ್ಟಿ, ನಾಗರಾಜ ಅರಾಟೆ, ರಾಘವೇಂದ್ರ ಆಚಾರ್ಯ, ಮಂಜುನಾಥ್, ಗುತ್ತಿಗೆದಾರ ಗುರುಪ್ರಸಾದ್ ಶೆಟ್ಟಿ ಯಡೇರಿ ಇದ್ದರು.

Read More