Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ 16 ಕೊನೆಯ ದಿನ. ಭರ್ತಿ  ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ 23ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು/ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಎಸ್. ವಿ. ಜ್ಯೂನಿಯರ್ ಕಾಲೇಜು ರಸ್ತೆಯ ಪಂಚಾಯತ್ ಹಳೆ ಕಛೇರಿ ವಠಾರದಲ್ಲಿ ಸುಮಾರು 3.30ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಕಲಚೇತನರ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕಾರ್ಯದರ್ಶಿ ದಿನೇಶ ಶೇರುಗಾರ್, ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ದೇವಾಡಿಗ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೂತನ ಬೈಂದೂರು ತಾಲೂಕು ಪಂಚಾಯತಿಯ ಎರಡನೇ ಸಾಮಾನ್ಯ ಸಭೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹೇಂದ್ರ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕುಂದಾಪುರದ ತಾ.ಪಂ ಸಭಾಂಗಣದಲ್ಲಿ ಗುರುವಾರ ಜರುಗಿತು. ಕುಂದಾಪುರ ತಾಲ್ಲೂಕು ಪಂಚಾಯಿತಿ ವಿಭಜನೆಯಿಂದ ಬೈಂದೂರು ತಾಲ್ಲೂಕು ಪಂಚಾಯಿತಿ ಅಸ್ತಿತ್ವಕ್ಕೆ ಬಂದಿರುವುದರಿಂದ ಸ್ಥಿರ ಚರ ಆಸ್ತಿಗಳು, ನಿಧಿಯ ಅರ್ಧಾಂಶವನ್ನು ತಕ್ಷಣ ವರ್ಗಾಯಿಸಬೇಕು. ಬೈಂದೂರಿನಲ್ಲಿ ಕಚೇರಿಗೆ ಸೂಕ್ತ ಸ್ಥಳಾವಕಾಶ ಹೊಂದಿಸಿಕೊಳ್ಳಬೇಕು, ನಿವೃತ್ತ ಯೋಧರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು. ವರ್ಷದಿಂದ ಸ್ಥಗಿತವಾಗಿರುವ ಪಿಂಚಣಿ ಅದಾಲತ್ ನಡೆಸಬೇಕು ಸೇರಿದಂತೆ ಹಲವು ವಿಷಯಗಳೂ ಸಭೆಯಲ್ಲಿ ಚರ್ಚೆಗೆ ಬಂದವು. ಬೈಂದೂರು ತಾಲ್ಲೂಕು ವ್ಯಾಪ್ತಿಯ ಕೆಲವು ಗ್ರಾಮ ಪಂಚಾಯತಿ ಪಿಡಿಒಗಳನ್ನು ಶಾಸಕರ, ಸಚಿವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಇವರ ಹುದ್ದೆ ಖಾಲಿ ಎಂದು ಪರಿಗಣಿಸುತ್ತಿಲ್ಲ. ಇದರಿಂದ ಬದಲಿ ನೇಮಕಕ್ಕೂ ಅವಕಾಶ ಇಲ್ಲ. ಇದರಿಂದ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಭಿವೃದ್ಧಿ ಕಾರ್ಯಗಳೂ ಕುಂಠಿತಗೊಂಡಿದೆ‘ ಎಂದು ಸದಸ್ಯ ಪ್ರವೀಣಕುಮಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ಕುಂದಾಪುರ ತಾಲೂಕು ಕಾರ್ಮಿಕ ಪ್ರಕೋಷ್ಟ ಸಂಚಾಲಕರಾಗಿ ರಾಜು ದೇವಾಡಿಗ ಕುಂದಾಪುರ ಇವರು ಆಯ್ಕೆಯಾಗಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯತ್ ವತಿಯಿಂದ ನಿರ್ಮಿಸಲಾಗಿರುವ ಬಾಪೂಜಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಗುರುವಾರ ಉಧ್ಗಾಟನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ, ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿಗ್ರಾಮ ಪಂಚಾಯತ್‌ಗಳು ಸ್ಥಳೀಯ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಅರ್ಹರನ್ನು ಗುರುತಿಸಿ ಸರಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ನೀಡಲು ಕ್ರಮಕೈಗೊಳ್ಳಬೇಕು. ಪಂಚಾಯತ್ ಕಛೇರಿಗೆ ಜನರ ಅಲೆದಾಟ ತಪ್ಪಿಸಿ ಅವರಿಗೆ ಸಕಾಲದಲ್ಲಿ ಎಲ್ಲಾ ಸೇವೆ ದೊರೆಯುವಂತೆ ಮಾಡಬೇಕು. ವಿವಿಧ ಅಭಿವೃದ್ಧಿ ಯೋಜನೆಗಳ ಅನುದಾನದ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕಾರ್ಯದರ್ಶಿ ದಿನೇಶ ಶೇರುಗಾರ್, ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ದೇವಾಡಿಗ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ  ಕನ್ನಡ ಮಾಧ್ಯಮದ ಪ್ರೌಢಶಾಲೆಯ ಶಾಲೆಯಲ್ಲಿ 22 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸಂಸ್ಕೃತ ಅಧ್ಯಾಪಕ ಶಂಕರನಾರಾಯಣ ಭಟ್ ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು ಇದರ ಅಧ್ಯಕ್ಷತೆ ವಹಿಸಿ ಮಾತನಾಡಿದ,  ಜಿ. ಎಸ್. ವಿ.  ಎಸ್  ಅಸೋಸಿಯೇಷನ್ನಿನ ಅಧ್ಯಕ್ಷ ಡಾ. ಕಾಶಿನಾಥ್ ಪೈ ಗಂಗೊಳ್ಳಿ – ವಿದ್ಯಾರ್ಥಿಗಳ ಬಹುಮುಖ ಯಶಸ್ಸಿನ ಸಾಧನೆಗಳ ಹಾದಿಯಲ್ಲಿ ಅಧ್ಯಾಪನ ವೃತ್ತಿಯ ಯಶಸ್ಸು ಇರುತ್ತದೆ. ಉತ್ತಮ ನಡೆಯುಳ್ಳ ಗುರುಗಳು ಈ ಸಮಾಜದ ನಿಜವಾದ ಆಸ್ತಿ ಎಂದು ಅಭಿಪ್ರಾಯಪಟ್ಟರು ಜಿ ಎಸ್. ವಿ. ಎಸ್ ಅಸೋಸಿಯೇಷನ್ನಿನ ಕಾರ್ಯದರ್ಶಿ, ಎಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಉಪನ್ಯಾಸಕರಾದ ಹೆಚ್. ಭಾಸ್ಕರ್ ಶೆಟ್ಟಿ, ನರೇಂದ್ರ ಎಸ್ ಗಂಗೊಳ್ಳಿ, ಕಚೇರಿ ಸಿಬ್ಬಂದಿ ಶ್ರೀಧರ ಗಾಣಿಗ ಅವರು ಶಂಕರನಾರಾಯಣ ಭಟ್ ಅವರನ್ನು ಅಭಿನಂದಿಸಿದರು ಶಂಕರನಾರಾಯಣ ಭಟ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ.ಆಪರೇಟಿವ್ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಬುಧವಾರ ಜರಗಿದ ಗ್ರಾಮ ಮಟ್ಟದ ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ಮತ್ತು ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಕರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಈ ಸಮಯದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ವಿಶೇಷ ಜಾಗ್ರತೆ ವಹಿಸಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿಕೊಳ್ಳಬೇಕು. ಪೌಷ್ಠಿಕ ಆಹಾರ ಸೇವನೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಯಾವುದೇ ರೋಗ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಂದ ಸೂಕ್ತ ಚಿಕಿತ್ಸೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ೩ನೇ ವಾರ್ಡ್‌ನ ಬಿಜೂರು ಶಾಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಹದಗೆಟ್ಟಿದ್ದು ಇದುವರೆಗೆ ದುರಸ್ತಿಗೊಂಡಿಲ್ಲ. ರಾ. ಹೆದ್ದಾರಿ66ರಿಂದ ಹಾದುಹೋಗುವ ರಸ್ತೆಯು ಹೊಂಡಗಳಿಂದ ಕೂಡಿದ್ದು ಸಂಪೂರ್ಣ ಹದಗೆಟ್ಟಿದೆ. ಇದೇ ಮಾರ್ಗದಲ್ಲಿ ನಿತ್ಯವೂ ನೂರಾರು ವಾಹನಗಳು ಸಂಚರಿಸುತ್ತಿದ್ದು. ಮಳೆಗಾಲದಲ್ಲಿ ದೊಡ್ಡ ಗಾತ್ರದ ಹೊಂಡಗಳು ಉಂಟಾಗಿದ್ದು ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ ಈ ರಸ್ತೆಯು ಬಿಜೂರು ಸರಕಾರಿ ಪೌಢಶಾಲೆ, ಹಿರಿಯ ಪಾಥಮಿಕ ಶಾಲೆ, ಪುರಾಣ ಪ್ರಸಿದ್ದ ಮೂರ‍್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಅರೆಕಲ್ಲು ಶ್ರೀ ಹಿರೇಮಾಲಿಂಗೆಶ್ವರ ದೆವಸ್ಥಾನಕ್ಕೆ ಸಂಪರ್ಕ ಕೊಂಡಿಯಾಗಿದೆ ಸುಮನಾವತಿ ಸೇತುವೆ ಮೂಲಕ ತಗ್ಗರ್ಸೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ ಶಾಸಕರಿಗೆ ಮನವಿ: ರಸ್ತೆಯ ದುರವಸ್ಥೆಯ ಬಗ್ಗೆ ಬೈಂದೂರು ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿಯವರಿಗೆ ಸ್ಥಳಿಯರು ಮನವಿ ಸಲ್ಲಿಸಿದ್ದು, ಇತ್ತೀಚಿಗೆ ಸ್ಥಳಕ್ಕೆ ಆಗಮಿಸಿದ ಶಾಸಕರು ರಸ್ತೆಯ ದು:ಸ್ಥಿಯನ್ನು ಪರಿಶೀಲಿಸಿ ಮಾತನಾಡಿ, ಸೂಕ್ತ ಅನುದಾನ ಮಂಜೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಂಗಳೂರು ವಿಭಾಗದ ಮಂಗಳೂರು ಬಸ್ಸು ನಿಲ್ದಾಣದಿಂದ ಹೈದರ್‌ಬಾದ್‌ಗೆ  ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮಾರ್ಗವಾಗಿ ಹಾಗೂ ಹೈದರ್‌ಬಾದ್‌ದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ‘ಅಂಬಾರಿ ಡ್ರೀಮ್ಕ್ಲಾಾಸ್ ಮಲ್ಟಿಅಕ್ಸ್ಲ್‍ ಎ. ಸಿ. ಸ್ಲೀಪರ್’ ವಾಹನ ಹಾಗೂ ಉಡುಪಿ ಬಸ್ಸ್ ನಿಲ್ದಾಣದಿಂದ ಉಡುಪಿ – ಹೈದರಾಬಾದ್ ವಯಾ ಮಣಿಪಾಲ್-ಕುಂದಾಪುರ – ಸಿದ್ದಾಪುರ – ತೀರ್ಥಹಳ್ಳಿ – ಶಿವಮೊಗ್ಗ – ಹರಿಹರ – ಹರಪ್ಪನಹಳ್ಳಿ – ಹೊಸಪೇಟೆ – ಗಂಗಾವತಿ – ಮಾನ್ವಿ – ರಾಯಚೂರು ಮಾರ್ಗದಲ್ಲಿ ರಾಜಹಂಸ ವಾಹನವನ್ನು ಅಕ್ಟೋಬರ್ 1 ರಿಂದ ಆರಂಭಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ನಿಗಮದ ಎಸ್ಒನಪಿ (Standard operating procedure) ರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು. ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು, ಸಾರ್ವಜನಿಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದಿಂದ ಕಾರವಾರದವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ರಸ್ತೆಯನ್ನು ಐ. ಆರ್. ಬಿ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿದ್ದು, ಇದರ ಭಾಗವಾಗಿ ಮುಳ್ಳಿಕಟ್ಟೆ ಆರಾಟೆ ಎಂಬಲ್ಲಿ ಸೇತುವೆಯನ್ನು ಸಹ ನಿರ್ಮಿಸಲಾಗಿದೆ. ನಿರ್ಮಾಣಗೊಂಡ ಮೂರೇ ವರ್ಷಗಳಲ್ಲಿ ಬೈಂದೂರು – ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66 ಮುಳ್ಳಿಕಟ್ಟೆ ಆರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುತ್ತದೆ ಎಂದು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ. ಈ ಬಗ್ಗೆ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು ಈ ಬಗ್ಗೆ ಸ್ಥಳ ಪರಿಶೀಲನೆಗೆ ತಾಂತ್ರಿಕ ತಜ್ಞರ ಸಮಿತಿಗೆ ಸೂಚಿಸಲಾಗಿತ್ತು. ಬಿರುಕು ಕಾಣಿಸಿಕೊಂಡಿರುವುದರ ಬಗ್ಗೆ ತಾಂತ್ರಿಕ ತಜ್ಞರ ಸಮಿತಿಯು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದು, ವರದಿಯಂತೆ ಸೇತುವೆ ರಚನೆಯಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಸೇತುವೆಯ ಮೇಲ್ಬಾಗದಲ್ಲಿ ಮಾತ್ರ ಬಿರುಕು ಕಂಡು ಬಂದಿದ್ದು, ಸ್ವಾನ್ ಜಾಯಿಂಟ್ ನಲ್ಲಿ ಕಂಡು ಬಂದಿರುವುದರಿಂದ ಅಪಾಯವಿಲ್ಲ ಹಾಗೂ ಸೇತುವೆ ಮೂಲ ರಚನೆಯಲ್ಲಿ ಯಾವುದೇ ದೋಷವಿಲ್ಲ ಎಂದು ತಿಳಿದುಬಂದಿದೆ ಎಂದು…

Read More