ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಸಹಕಾರ ಸೇವೆಯಲ್ಲಿನ ಅಪೂರ್ವ ಕೊಡುಗೆಗಾಗಿ ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ “ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ-2025” ಪ್ರದಾನಿಸಲಾಯಿತು. ಈ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಮತ್ತು ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ. ನರಸಿಂಹ ಹೊಳ್ಳ ಸ್ವೀಕರಿಸಿದರು. ಜವುಳಿ & ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್, ಕರ್ನಾಟಕ ಸರಕಾರ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿಯಾದ ಆರ್. ಅಶೋಕ್, ಕನ್ನಡ ಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ ಇವರ ಘನ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸ೦ಘದ ನಿರ್ದೇಶಕರಾದ ನಿತ್ಯಾನಂದ ಶೇರಿಗಾರ್, ನಾರಾಯಣ ಖಾರ್ವಿ, ಗೋಪಾಲ್ ಪೂಜಾರಿ ಹಾಗೂ ಸೀತಾರಾಮ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್, ಸಂಭಾವನೆ, ಕಮೀಷನ್ ಪಡೆದಿರುವ ದಾಖಲೆ) ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟ್ಮೆಂಟ್ ಲಗತ್ತಿಸಿ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ಲೈನ್ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಿರಿಮಂಜೇಶ್ವರದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ರ್ಯಾಲಿಯು ಇದೇ ಫೆಬ್ರವರಿ 18 ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ಈ ಸೈಕ್ಲಿಂಗ್ ರ್ಯಾಲಿಯನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಸಿ.ಐ.ಎಸ್.ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಂದೇ ಮಾತರಂ ಗೀತೆಯು 150 ವರ್ಷ ಪೂರೈಸಿರುವ ಹಿನ್ನೆಲೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್.ಎಫ್) ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ಅನ್ನು ಹಮ್ಮಿಕೊಳ್ಳಲಾಗಿದ್ದು, ದೇಶದ ಪಶ್ಚಿಮ ಸಮುದ್ರ ತೀರದಲ್ಲಿ ಕರಾವಳಿ ಸಮುದಾಯಗಳು, ಸಂಸ್ಕೃತಿ ಮತ್ತು ರಾಷ್ಟ್ರೀಯ ಸಂಕಲ್ಪವನ್ನು ಒಟ್ಟುಗೂಡಿಸುವ ಉದ್ದೇಶದಿಂದ ಕೋಸ್ಟಲ್ ಸೈಕ್ಲೋಥಾನ್ ಸ್ಪರ್ಧೆಯನ್ನು ಆಯೋಜಿಸಿದ್ದು, ರ್ಯಾಲಿಗೆ ಈಗಾಗಲೆ ಜನವರಿಯಲ್ಲಿ ಗುಜರಾತ್ ಮತ್ತು ಪಶ್ಚಿಮ ಬಂಗಾಳದಲ್ಲಿ ಏಕಕಾಲಕ್ಕೆ ಚಾಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ನ 2024-25ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಕುಂದಾಪುರ ತಾಪಂ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರ ನಾಯ್ಕ್ ಜಮಾಬಂದಿ ಅಧಿಕಾರಿಯಾಗಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ತಬ್ರೇಜ್, ಕಾರ್ಯದರ್ಶಿ ಅನೂಪ್ ಶೇಟ್, ಜಮಾಬಂಧಿ ಸಹಾಯಕಿ ಪ್ರೇಮಾ, ಗ್ರಾಪಂ. ಸದಸ್ಯರು, ಗ್ರಾಪಂ. ಮಾಜಿ ಸದಸ್ಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ. ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು. ಇದೇ ಸಂದರ್ಭ 2024-25ನೇ ಸಾಲಿನಲ್ಲಿ ನಡೆದ ಕೆಲವು ಕಾಮಗಾರಿಗಳನ್ನು ಪರಿಶೀಲನೆ ನಡೆಸಲಾಯಿತು. ಗ್ರಾಪಂ. ಪಿಡಿಒ ರವಿ ಸ್ವಾಗತಿಸಿದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಬಿ. ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಮತ್ತು ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸ್ನೇಹ ಪರಪ್ಪ ಸಮಾಯಿ ಕನ್ನಡ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಬೈಂದೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಬೈಂದೂರು ಹೋಬಳಿಯ 9 ಗ್ರಾಮಗಳ ಸುಮಾರು 55 ಅರ್ಹ ಬಡ ಫಲಾನುಭವಿಗಳಿಗೆ 94 ಸಿ ಹಾಗೂ 94 ಸಿಸಿ ಹಕ್ಕು ಪತ್ರ ವಿತರಿಸಿದರು. ನಂತರ ಶಾಸಕರು ಮಾತನಾಡಿ, ಬೈಂದೂರು ಹೋಬಳಿಯಲ್ಲಿ ಅರ್ಹ ಎಲ್ಲಾ ಫಲಾನುಭವಿಗಳಿಗೆ ಹಕ್ಕು ಪತ್ರ ಈಗಾಗಲೇ ವಿತರಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನ ಸಂಪರ್ಕ ಸಭೆ ನಡೆಸಿ ಜನರ ಬಳಿ ಅಧಿಕಾರಿಗಳನ್ನು ಕರೆದುಕೊಂಡು ಹೋದ ಪರಿಣಾಮ ಸಣ್ಣ ಪುಟ್ಟ ನ್ಯೂನ್ಯತೆ ಇರುವ ಕಡಗಳನ್ನು ಸರಿ ಪಡಿಸಿ ಅರ್ಹರನ್ನು ಹುಡುಕಿ ಅವರಿಗೆ ಭೂಮಿ ಹಕ್ಕು ನೀಡುವ ಕೆಲಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆ ನಿರಂತರವಾಗಿ ನಡೆದು ಯಾವೊಂದು ಅರ್ಹ ಬಡ ಕುಟುಂಬ ಹಕ್ಕು ಪತ್ರ ವಂಚಿತರಾಗದೆ ಇರುವಂತೆ ಮಾಡಲಾಗುವುದು ಎಂದರು. ಗೊಳಿಹೊಳೆ ಹಾಗೂ ಯಳಜಿತ್ ಗ್ರಾಮದ 32, ಹೇರೂರು ಗ್ರಾಮದ 04, ಜಡ್ಕಲ್ 04, ಕಾಲ್ತೊಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿ, ಸಾರ್ವಜನಿಕ ಸ್ಥಳದಲ್ಲಿ ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಅವರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಯಾದ ಹಂಗಾರಕಟ್ಟೆ ಬಾಳ್ಕುದ್ರು ಗ್ರಾಮದ ಮನಿತ್ (26) ಎಂಬ ಯುವಕನನ್ನು ಬಂಧಿಸಿದ್ದಾರೆ. ಆರೋಪಿಯ ವಶದಿಂದ ಕ್ರಿಕೆಟ್ ಬೆಟ್ಟಿಂಗ್ಗೆ ಬಳಸಲಾಗುತ್ತಿದ್ದ ಐಫೋನ್ ಮೊಬೈಲ್ ಹಾಗೂ ನಗದು ರೂ.800ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆಯಲ್ಲಿ, ಆರೋಪಿಯು ಇತರರೊಂದಿಗೆ ಓಮನ್ ಹಾಗೂ ಜಿಂಬಾಂಬ್ವೆ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ, PARKKER777 ಎಂಬ ಆನ್ಲೈನ್ ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದನು ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ದೇವಾಡಿಗರು, ಓರ್ವ ಸಜ್ಜನ ರಾಜಕಾರಣಿ, ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು. ರಾಜಕೀಯ ಜೀವನದಲ್ಲಿ ಪ್ರಾಮಾಣಿಕವಾಗಿ, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾದವರು. ಓರ್ವ ಶಾಸಕನಾಗುವ ಎಲ್ಲಾ ಗುಣಗಳನ್ನು ಹೊಂದಿದವರು. ಅವರ ಅಗಲುವಿಕೆ ಸಮಾಜಕ್ಕೆ ಆದ ನಷ್ಟ ಎಂದು ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಹಿರಿಯ ಕಾಂಗ್ರೆಸ್ಸಿಗ ಕೆದರು ಸದಾನಂದ ಶೆಟ್ಟಿ ಹೇಳಿದರು. ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜು ದೇವಾಡಿಗ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಮೊಳಹಳ್ಳಿ ದಿನೇಶ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಮನ ಸಾಮಾಜಿಕ ಕಾರ್ಯಕರ್ತ ಗುಲ್ವಾಡಿ ಪ್ರಭಾಕರ ಶೆಟ್ಟಿ ಶ್ರದ್ಧಾಂಜಲಿಯ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದಿನೋಡ್ ಕ್ರಾಸ್, ಮಹಿಳಾ ಬ್ಲಾಕ್ ಅಧ್ಯಕ್ಷ ದೇವಕಿ ಪಣ್ಣನ್ನು, ಅನಗಳ್ಳಿ ಪಂಚಾಯತ್ ಅಧ್ಯಕ್ಷೆತೆ ಸವಿತಾ, ಕೆಡಿಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯು ಹಳೆಯ ವಿದ್ಯಾರ್ಥಿ ಘಟಕವನ್ನು ಉದ್ಘಾಟಿಸಿದರು. ಇದು ಹಳೆಯ ವಿದ್ಯಾರ್ಥಿಗಳೊಂದಿಗೆ ಸಂಬಂಧವನ್ನು ಬಲಪಡಿಸುವ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್.ಎನ್.ಭಟ್ ಅವರು, ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಅಧ್ಯಾಪಕ ವೃಂದ ಮತ್ತು ಹಳೆಯ ವಿದ್ಯಾರ್ಥಿ ಪ್ರತಿನಿಧಿಗಳ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಹಳೆಯ ವಿದ್ಯಾರ್ಥಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿ ಘಟಕದ ಲೋಗೋವನ್ನೂ ಅನಾವರಣಗೊಳಿಸಲಾಯಿತು. ಶಿಲ್ಪಾಶ್ರೀ ಹಾಗೂ ಸ್ವರ್ಣ ರಾಣಿ ಯು. ಪಿ. ಅವರು ಹಳೆಯ ವಿದ್ಯಾರ್ಥಿ ಘಟಕದ ಸಂಯೋಜಕರಾಗಿ ಅಧಿಕೃತವಾಗಿ ಹೊಣೆಗಾರಿಕೆಯನ್ನು ವಹಿಸಿಕೊಂಡರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಹಳೆಯ ವಿದ್ಯಾರ್ಥಿ ಘಟಕದ ಉದ್ದೇಶಗಳು ಮತ್ತು ಮಹತ್ವವನ್ನು ವಿವರಿಸಿ, ಹಂಚಿಕೊಂಡ ಯಶಸ್ಸು, ಹಳೆಯ ವಿದ್ಯಾರ್ಥಿಗಳ ಸಾಧನೆಗಳು, ಭಾವನಾತ್ಮಕ ಹಾಗೂ ಸಂಸ್ಥಾತ್ಮಕ ಬೆಂಬಲದ ಮೂಲಕ ಸಂಬಂಧಗಳನ್ನು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು.…
