Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯತ್ ಪ್ರದೇಶವನ್ನು ಬೈಂದೂರು ಪಟ್ಟಣ ಪಂಚಾಯತ್‌ಯನ್ನಾಗಿ ಮೇಲ್ದರ್ಜೇಗೇರಿಸಿ ರಾಜ್ಯ ಸರಕಾರ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್ 315ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕಾರ್ಯನಿರ್ವಹಣೆಗಾಗಿ ಪಟ್ಟಣ ಪಂಚಾಯತ್‌ಗೆ ಸಂಬಂಧಿಸಿದ ತಹಶೀಲ್ದಾರ್‌ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಅಧಿಸೂಚನೆಯಲ್ಲಿ ನಿರ್ದೇಶನ ನೀಡಲಾಗಿದೆ. ಆದ್ದರಿಂದ ಪಟ್ಟಣ ಪಂಚಾಯತ್‌ನ ದೈನಂದಿನ ಕಾರ್ಯನಿರ್ವಹಣೆಗಾಗಿ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಬೈಂದೂರು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಬೈಂದೂರು ತಹಶೀಲ್ದಾರರನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4ರಂತೆ ಕುಂದಾಪುರ ತಾಲೂಕು ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇನಾಪುರ ಗ್ರಾಮವನ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ ಕುರಿತು ಸಾರ್ವಜನಿಕರು ಮೇಲ್ಮನವಿ ಸಲ್ಲಿಸುವುದಾದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ಇವರಿಗೆ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯು ಜನವರಿ 1, 2019 ರಿಂದ ಡಿಸೆಂಬರ್ 31, 2019 ರ ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ, ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು / ಪ್ರಕಾಶಕರು / ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ಅಕ್ಟೋಬರ್ ೨೫ ರ ಒಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಲಿಕಾರ್ಥಿ ಸಹಾಯಕೇಂದ್ರ ಪ್ರಾರಂಭವಾಗಿದೆ. ಕರಾವಳಿಯ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ ಅಧ್ಯಯನಕ್ಕೆ ಇದರಿಂದಾಗಿ ಸಹಾಯವಾಗಲಿದ್ದು, ಇದರ ಪ್ರಯೋಜನವನ್ನು ಅಗತ್ಯವುಳ್ಳವರು ಪಡೆದುಕೊಳ್ಳಬಹುದಾಗಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿರುವ ಏಕೈಕ ಅಧಿಕೃತ ದೂರಶಿಕ್ಷಣ ನೀಡುವ ವಿಶ್ವವಿದ್ಯಾನಿಲಯವಾಗಿದ್ದು ಅತೀ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಸೆಪ್ಟಂಬರ್ 1 ರಿಂದ ಸೆಪ್ಟಂಬರ್-ಅಕ್ಟೋಬರ್ ಆವೃತ್ತಿಯ ಈ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ದಂಡ ಶುಲ್ಕವಿಲ್ಲದೆ ಅಕ್ಟೋಬರ್ ೧೦ರ ತನಕ ಪ್ರವೇಶಾತಿಗೆ ಅವಕಾಶವಿರುತ್ತದೆ. ದಂಡ ಶುಲ್ಕ ರೂ. 100/-ರೊಂದಿಗೆ ಅಕ್ಟೋಬರ್ ೨೦ರ ವರೆಗೂ ಹಾಗೂ ದಂಡ ಶುಲ್ಕ ರೂ.200/- ರೊಂದಿಗೆ ಅಕ್ಟೋಬರ್ ೨೯ರ ವರೆಗೆ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ. ಬಿ.ಎ., ಬಿ.ಕಾಂ., ಎಂ.ಎ. ಹಾಗೂ ಎಂ.ಕಾಂ. ಅಧ್ಯಯನ ಮಾಡಬಯಸುವವರು ಸಂವೇದನಾ ಪ್ರಥಮದರ್ಜೆ ಕಾಲೇಜಿನಲ್ಲಿ (7899418506, 9449725906) ವಿಚಾರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ:  ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ ಅವರು 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಕನ್ನಡ ನಾಡಿನ ಖ್ಯಾತ ಬರಹಗಾರ, ಪದ್ಮಶ್ರೀ ಪುರಸ್ಕೃತ , ನಾಡೋಜ ಡಾ. ಎಸ್ ಎಲ್ ಭೈರಪ್ಪನವರಿಗೆ ನೀಡಲು ನಿರ್ಧರಿಸಿದ್ದಾರೆ. ಮಾನ್ಯ ಭೈರಪ್ಪನವರು ಈ ಪ್ರಶಸ್ತಿಯನ್ನು ಸ್ವೀಕರಿಸಲು ಒಪ್ಪಿಗೆ ನೀಡಿದ್ದಾರೆ. ಈ ಪ್ರಶಸ್ತಿ ಕಾರಂತರ ಜನ್ಮ ದಿನವಾದ ಅಕ್ಟೋಬರ್ 10 ರಂದು ನೀಡಲಾಗುತ್ತದೆ. ಕಳೆದ ಹದಿನೈದು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡುತ್ತಾ ಬಂದಿದ್ದು, ಕಾರಂತ ಆಸಕ್ತಿ ಕ್ಷೇತ್ರವಾದ ಸಾಹಿತ್ಯ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಎಸ್. ಎಲ್ ಭೈರಪ್ಪನವರ ಗಣನೀಯ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಈಗಾಗಲೇ ವೀರಪ್ಪ ಮೊಯ್ಲಿ, ವೇಂಕಟಾಚಲ, ಕೆ. ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ್ ಕಾಸರವಳ್ಳಿ, ಜಯಶ್ರೀ, ಮೋಹನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾಸನದ ನ್ಯಾಷನಲ್ ಕ್ಲಾಸಿಕಲ್ ಡಾನ್ಸ್ ಅಕಾಡೆಮಿ ಇತ್ತೀಚಿಗೆ ಆನ್‌ಲೈನ್ ಮೂಲಕ ನಡೆಸಿದ ಆರನೇ ಹಂತದ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಕೋಟದ ಶರ್ಮದಾ ಎಮ್. ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಬೇರೆ ಬೇರೆ ರಾಜ್ಯಗಳಿಂದ ಭಾಗವಹಿಸಿದ್ದ ಸ್ಪರ್ಧಿಗಳ ಪೈಕಿ ಶರ್ಮದಾ ಎಮ್. ಅವರೊಂದಿಗೆ ಉಡುಪಿಯ ಅನ್ವಿತಾ ಹಾಗೂ ತೆಲಂಗಾಣದ ಪೆಂಡ್ಯಾಲಾ ಲಕ್ಷ್ಮೀ ಪ್ರಿಯಾ ಮೊದಲ ಸ್ಥಾನವನ್ನು ಹಂಚಿಕೊಂಡಿರುತ್ತಾರೆ. ಭರತನಾಟ್ಯ ಹಾಗೂ ಸಂಗೀತದಲ್ಲಿ ಆಸಕ್ತಿ ಹೊಂದಿರುವ ಶರ್ಮದಾ ಕಳೆದ ೫ ವರ್ಷಗಳಿಂದ ಸಾಲಿಗ್ರಾಮದ ಚಿತ್ರಪಾಡಿಯ ’ಶ್ರೀ ನಟರಾಜ ನೃತ್ಯ ನಿಕೇತನ’ ಕೇಂದ್ರದಲ್ಲಿ ವಿದೂಷಿ ಭಾಗೀರಥಿ ಎಮ್. ರಾವ್ ಅವರ ಬಳಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ. ೨೦೧೯ ರ ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಶೇಕಡಾ ೯೩ ಅಂಕ ಪಡೆದು ಉರ್ತ್ತೀಣರಾಗಿದ್ದಾರೆ. ಜೊತೆಗೆ ಈ ವರ್ಷ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜ್ಯೂನಿಯರ್ ಪರೀಕ್ಷೆಯನ್ನು ಬರೆಯಲಿದ್ದಾರೆ. ಮೂಲತ ಉಪ್ಪುಂದ ಮಕ್ಕಿ ದೇವಸ್ಥಾನದವರಾಗಿದ್ದು, ಪ್ರಸ್ತುತ ಕೋಟದಲ್ಲಿ ನೆಲೆಸಿರುವ ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಸೆ.24: ಬೈಂದೂರು ಮಂಜುನಾಥ ಸ್ಟೋರ್ಸ ಸ್ಥಾಪಕ  ಸುಬ್ರಹ್ಮಣ್ಯ ನಾವುಡ ಅವರು ವಯೋಸಹಜ ಬಳಲಿಕೆಯಿಂದ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರು ಈ ಹಿಂದೆ ಕೂಟ ಮಹಾಜಗತ್ತು ಕಿರಿಮಂಜೇಶ್ವರ ವಲಯದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಿತಭಾಷಿ, ವ್ಯವಹಾರದಲ್ಲಿ ಅತ್ಯಂತ ಪ್ರಾಮಾಣಿಕರಾಗಿ, ಸ್ನೇಹಜೀವಿಯಾಗಿದ್ದರು. ಮೃತರು ಪತ್ನಿ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಕಳೆದ ಕೆಲವಾರು ವರ್ಷಗಳಿಂದ ಬೈಂದೂರು ಮಂಜುನಾಥ ಸ್ಟೋರ್ಸ್’ನ್ನು ಗಣೇಶ್ ನಾಯಕ್ ಹಾಗೂ ಶ್ರೀನಿವಾಸ ನಾಯಕ್ ಸಹೋದರರು ಮುನ್ನಡೆಸುತ್ತಿದ್ದು, ಇಂದಿಗೂ ಅದು ನಾವಡರ ಅಂಗಡಿ ಎಂದೇ ಪ್ರಸಿದ್ಧಿ ಪಡೆದಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿಶ್ವ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಅಧ್ಯಕ್ಷ, ಇಂಜಿನಿಯರ್ ಎಚ್.ಗಣೇಶ ಕಾಮತ್ ಅವರನ್ನು ಬುಧವಾರ ಗಂಗೊಳ್ಳಿಯಲ್ಲಿನ ಅವರ ಕಛೇರಿಯಲ್ಲಿ ಗೌರವಿಸಿ ಅಭಿನಂದಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರಾದ ಜನಾರ್ದನ ಪೂಜಾರಿ ಪೆರಾಜೆ, ಕೆ.ರಾಮನಾಥ ನಾಯಕ್, ಉಪನ್ಯಾಸಕ ನಾರಾಯಣ ಇ. ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ:  ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಬಿ ಪ್ರವರ್ಗದ 8 ಮತ್ತು ಸಿ ಪ್ರವರ್ಗದ 44 ಅಧಿಸೂಚಿತ ಸಂಸ್ಥೆಗಳು/ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷದ ಅವಧಿಗೆ ರಚಿಸಲು ಆಸಕ್ತ ಭಕ್ತಾಧಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಹಾಯಕ ಆಯುಕ್ತರ ಕಛೇರಿ ಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 21 ರ ಒಳಗೆ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಉಡುಪಿ ಇವರಿಗೆ ಸಲ್ಲಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ:  ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಜನಪರ ಕಲ್ಯಾಣ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ, ಇವುಗಳ ಬಗ್ಗೆ ಅವರುಗಳಿಗೆ ಅರಿವು ಮೂಡಿಸುವುದರೊಂದಿಗೆ ಅವರನ್ನು ಫಲಾನುಭವಿಗಳನ್ನಾಗಿಸಬೇಕು ಎಂದರು. ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮವು ಸರ್ಕಾರ ನಿಗದಿಪಡಿಸಿದಂತೆ ಮಾಡಿಸಬೇಕು. ಅದರ ಜೊತೆಗೆ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಹೆಲ್ತ್ ಚೆಕ್ಆವಪ್ ಕಾರ್ಯವು ಉನ್ನತ ಆಸ್ಪತ್ರೆಯ ಸಹಯೋಗದೊಂದಿಗೆ ಚಿಕಿತ್ಸೆ ನೀಡಬೇಕೆಂದರು. ಸ್ಥಳೀಯ ಸಂಸ್ಥೆ ವ್ಯಾಪ್ತಿ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸಕ್ಕಿಂಗ್ ಯಂತ್ರ ಖರೀದಿಸಲು ಸಫಾಯಿ ಕರ್ಮಚಾರಿಗಳಿಗೆ ಬ್ಯಾಂಕಿನಿಂದ ಸಾಲ-ಸೌಲಭ್ಯ ಒದಗಿಸಬೇಕು ಎಂದ ಅವರು ಇದಕ್ಕೆ ಪೂರಕವಾಗಿ ಬ್ಯಾಂಕುಗಳು ರಿಯಾಯಿತಿ ದರದಲ್ಲಿ ಸಾಲ…

Read More