ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಮಣಿಪಾಳದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಐಕ್ಯಾಎಸಿ ಆಶ್ರಯದಲ್ಲಿ ಪರಿಣಾಮಕಾರಿ ಸಂಶೋಧನಾ ಗ್ರಂಥಸೂಚಿ – ಸಾಂಸ್ಥಿಕವಾಗಿ ಮೌಲ್ಯಮಾಪನ ಎಂಬ ವಿಷಯದ ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಣಿಪಾಲದ ಮಾಹೆಯ ಗ್ರಂಥಸೂಚಿಕರಾದ ಶೀಬಾ ಪಕ್ಕನ್ ಮಾತನಾಡಿ, ಸಂಶೋಧನಾ ಕ್ಷೇತ್ರವೆನ್ನುವುದು ಅತ್ಯಂತ ಪ್ರಮುಖವಾದ ಕ್ಷೇತ್ರವಾಗಿದೆ. ಇಲ್ಲಿ ಗ್ರಂಥಸೂಚಿ ಅತಿಮುಖ್ಯ ಪಾತ್ರ ವಹಿಸುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಎದುರಾಗುವ ಹಲವು ಸವಾಲುಗಳನ್ನು ಪರಿಹರಿಸಿಕೊಳ್ಳುವ ವಿಧಾನಗಳ ಕುರಿತು ಸೂಕ್ಷ್ಮವಾಗಿ ಮಾಹಿತಿ ನೀಡಿದರು. ಅಲ್ಲದೇ ಸಂಶೋಧನಾ ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿ ಸಂಶೋಧನೆ ಮಾಡಿದ ನಂತರ ಸಂಶೋಧಕನ ಸಂಶೋಧನಾ ಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಮತ್ತು ಅಲ್ಲಿ ಬರುವಂತಹ ಬರವಣಿಗೆ ನಂತರದ ವಿವಿಧ ಜರ್ನಲ್‌ಗಳಲ್ಲಿ ಪ್ರಕಟಣೆಯ ವಿಧಾನ ಭಾಷಾ ಶೈಲಿ. ಮಾಹಿತಿ ಕಲೆ ಹಾಕುವಂತಹ ವಿಧಾನಗಳ ಕುರಿತು ಸವಿಸ್ತಾರವಾಗಿ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ .ಪಿ ನಾರಾಯಣ ಶೆಟ್ಟಿ ಮಾತನಾಡಿದರು. ಸುಮಾರು 81…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕೃಪಾ ಕೊಂಕಣಿ ಮಹಿಳಾ ಮಂಡಳಿ ವತಿಯಿಂದ ವಿಶ್ವವೃದ್ಧಾಪ್ಯ ದಿನವನ್ನು ಮಂಡಳಿಯ ಅಧ್ಯಕ್ಷೆ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ್‌ರ ನೇತೃತ್ವದಲ್ಲಿ ಮಂಡಳಿ ಸದಸ್ಯೆಯರೊಂದಿಗೆ ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು. ಕುಂದಾಪುರದ ಗೋಪಾಲ ಕೃಷ್ಣ ಪೈಯವರ ತಾಯಿ ಪ್ರೇಮ ಡಿ. ಪೈಯವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ (ಎಸ್‌ಕೆಪಿಎ) ಕುಂದಾಪುರ ವಲಯದ ಸದಸ್ಯತ್ವ ನವೀಕರಣ ಸಭೆ ಇತ್ತಿಚಿಗೆ ಅಕ್ಷತಾ ಸಭಾಂಗಣದಲ್ಲಿ ನಡೆಯಿತು. ದ.ಕ. – ಉಡುಪಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಅಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಕೊರೊನಾ ಮಹಾಮಾರಿಯಿಂದ ಪ್ರಪಚಂದ ಎಲ್ಲಾ ವರ್ಗದ ಜನರು ಸಮಸ್ಯೆಗೆ ಒಳಗಾಗಿದ್ದು ನಮ್ಮ ಛಾಯಾಗ್ರಾಹಕರು ಇದಕ್ಕೆ ಎದೆಗುಂದದೆ ಕೊರೊನಾ ಸಮಸ್ಯೆಯನ್ನು ಎದುರಿಸಿ ಉತ್ತಮ ಜೀವನ ಶೈಲಿಯನ್ನು ರೂಪಿಸೊಕೊಳ್ಳುವ ಮೂಲಕ ಒಳ್ಳೆಯ ಬದುಕನ್ನು ನಡೆಸಬೇಕೆಂದು ಹೇಳಿದರು. ಎಸ್‌ಕೆಪಿಎ ಕುಂದಾಪುರ ವಲಯದ ಅಧ್ಯಕ್ಷರಾದ ರಾಜ ಮಠದಬೆಟ್ಟು ಸಭೆಯ ಅಧ್ಯಕ್ಷತೆ ವಹಿಸಿದರು. ಎಸ್‌ಕೆಪಿಎ ಕುಂದಾಪುರ ವಲಯದ ಉಪಾಧ್ಯಕ್ಷರಾದ ನಾಗರಾಜ ರಾಯಪ್ಪನಮಠ, ಕಾರ್ಯದರ್ಶಿ ಹರೀಶ್ ಅಡ್ಯಾರು, ಜೊತೆ ಕಾರ್ಯದರ್ಶಿ ಸಂತೋಷ ಕಾಪು, ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಬ್ರಹ್ಮಾವರ, ಕುಂದಾಪುರ ವಎಸ್‌ಕೆಪಿಎ ಕುಂದಾಪುರ ವಲಯದ ಸಲಹಾ ಸಂಚಾಲಕರಾದ ಗಿರೀಶ್ ಜಿ. ಕೆ, ಪ್ರಧಾನ ಕಾರ್ಯದರ್ಶಿ ಅಮೃತ್ ಬೀಜಾಡಿ, ಉಪಾಧ್ಯಕ್ಷರುಗಳಾದ ಪ್ರಕಾಶ್ ಕುಂದೇಶ್ವರ, ಸುರೇಶ್ ಜಮದಗ್ನಿ, ಚಂದ್ರಶೇಖರ್ ನಾಯ್ಕನಕಟ್ಟೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ kacdc.karnataka.gov.in ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ನಿಗಮದ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಾದ ತಾಲೂಕು ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳಕ್ಕೆ ಕೋವಿಡ್ ಹತೋಟಿ ಹಿನ್ನೆಲೆಯಲ್ಲಿ ತೆರವಾಗಿರುವ ಶುಶ್ರೂಷಕರ 29 ಹುದ್ದೆ, ಪ್ರಯೋಗಶಾಲಾ ತಂತ್ರಜ್ಞರ 45 ಹುದ್ದೆ ಹಾಗೂ ಗ್ರೂಪ್ ಡಿ. 29 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕ್ಟೋಬರ್ 15 ರ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಅಜ್ಜರಕಾಡು, ಉಡುಪಿ ಇವರಿಗೆ ಸಲ್ಲಿಸಿ, ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕ್ಕೆ ನಡೆಯುವ ಸಂದರ್ಶನದಲ್ಲಿ ವಿದ್ಯಾರ್ಹತೆ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಪ್ರಕಟಣೆ ತಿಳಿಸಿದೆ. ವಿವಿಧ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಶುಶ್ರೂಷಕರು, ಎಲ್‍ಎಚ್‍ವಿ, ಡೆಂಟಲ್ ಹೈಜೆನಿಸ್ಟ್, ಎಮ್. ಬಿ. ಬಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಟ್ರಸ್ಟ್ ಉಡುಪಿ, ಯು – ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಿಕ – ಸಾಂಸ್ಕೃತಿಕ ಸುಗ್ಗಿ ಆಲ್ಮೋರ – 2020 ಮರೆಯಲಾಗದ ಶಬ್ಧತೀರ ಎರಡನೇ ದಿನದ ಕಾರ್ಯಕ್ರಮ ನಡೆಯಿತು. ಕಾರಂತ ಚಿಂತನ ಕಾರ್ಯಕ್ರಮದಲ್ಲಿ ಮಾತನಾಡಿದ ಯಕ್ಷಗಾನ ಕಲಾವಿದ ಕೃಷ್ಣಮೂರ್ತಿ ಉರಾಳ, ಬ್ಯಾಲೆಯ ಮೂಲಕ ಯಕ್ಷಗಾನಕ್ಕೆ ಹೊಸ ಆಯಾಮ ನೀಡಿದವರು ಕಾರಂತರು , ತಮ ಯಕ್ಷಗಾನ ಬ್ಯಾಲೆಯನ್ನು ವಿದೇಶಗಳಿಗೆ ಕರೆದೊಯ್ದು ಯಕ್ಷಗಾನದ ಕಂಪನ್ನು ವಿದೇಶದಲ್ಲೂ ಪಸರಿಸಿದರು. ಅಲ್ಲದೇ ಕಾರಂತರು ಯಕ್ಷಗಾನಕ್ಕೆ ಹೊಸ ಸ್ವರೂಪ ನೀಡುವ ದೃಷ್ಟಿಯಿಂದ ಹೊಸ ಪ್ರಯೋಗ ಮಾಡಿ ಮಾತುಗಳಿಲ್ಲದೇ ಕೇವಲ ಭಾವಾಭಿನಯದ ಮೂಲಕ ವೈಲಿನ್ ಮತ್ತು ಸ್ಯಾಕ್ಸ್‌ಫೋನ್ ವಾದನ ಬಳಸಿ ಬ್ಯಾಲೆ ನಿರ್ಮಿಸಿ ಯಕ್ಷಗಾನದಲ್ಲಿ ಒಂದು ಕ್ರಾಂತಿ ಮಾಡಿದರು. ಕಾರಂತರ ಶಿಷ್ಯರಾಗಿ ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ದ್ವಿತೀಯ ಬಹುಮಾನ ಪಡೆದಿದ್ದಾನೆ. ನೇಹಿಗ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಪ್ರಾಧ್ಯಾಪಕಿ ಡಾ. ಮೌಲ್ಯ ಜೀವನ್ ದಂಪತಿಯ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಪ್ರಶಂಸಿಸಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ. ಜಿ. ಆರ್. ಸಿಂಧ್ಯಾ ಬಹುಮಾನ ವಿತರಣೆ ಮಾಡಿದರು. ಪ್ರಸಿದ್ಧ ಗಾಯಕ ಶಶಿಧರ್ ಕೋಟೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮೈಸೂರಿನ ಪ್ರಮತಿ ಶಾಲೆಯಲ್ಲಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾ. ಪಂ. ಡಾ. ಶಿವರಾಮ ಕಾರಂತ ಟ್ರಸ್ಟ್ ಆಶ್ರಯದಲ್ಲಿ ನಡೆದ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಎಸ್. ಎಲ್. ಭೈರಪ್ಪ ಮಾತನಾಡಿ, ಡಾ. ಕೋಟ ಶಿವರಾಮ ಕಾರಂತರು ಕೇವಲ ಓರ್ವ ಸಾಹಿತಿಯಲ್ಲ, ತನ್ನ ಜೀವನ ಹಾಗೂ ಸಾಹಿತ್ಯ ಕೃತಿಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಿ ಸುಧಾರಣೆಯನ್ನು ತಂದ ಸಮಾಜ ಸುಧಾರಕ ಸಾಹಿತಿ ಕಾರಂತರು ಈ ನೆಲದ ಸಾಕ್ಷಿ ಪ್ರಜ್ಞೆ. ಅವರ ಮೂಲಕವಾಗಿ ಅವಿಭಜಿತ ದ. ಕ. ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ಅವು ಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕಾರಂತರ ಹೆಸರಲ್ಲಿ ಪ್ರಶಸ್ತಿ ಸ್ವೀಕರಿಸುವುದು ನನ್ನ ಪಾಲಿನ ಭಾಗ್ಯ ಎಂದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ . ಟಿ. ಸೋಮಶೇಖರ್ ಪ್ರಶಸ್ತಿ ಪ್ರದಾನ ಮಾಡಿದರು ಮುಜರಾಯಿ ಸಚಿವ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ನೇಮಕ ಮಾಡಿದ್ದಾರೆ. ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್‌ನ ಪೂರ್ವಾಧ್ಯಕ್ಷರಾಗಿ, ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷರಾಗಿ ಸಾಮಾಜಿಕ ಸಾಂಸ್ಕೃತಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ಕಿಶೋರ್ ಅವರು ಭಾರತೀಯ ಜನತಾ ಪಾರ್ಟಿಯ ಮೂಲಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು. ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಅವರು, 2014ರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿಯೂ ಸ್ವರ್ಧಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ 19 ನಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವವರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಇಡೀ ರಾಜ್ಯದಲ್ಲಿ ಈ ಸಾಧನೆ ಮಾಡಿರುವ 3 ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದೆ, ಆದರೆ ಉಳಿದ 2 ಜಿಲ್ಲೆಗಳಲ್ಲಿ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ, ಸಾವಿನ ದವಡೆಯಲ್ಲಿದ್ದ ರೋಗಿಗಳನ್ನು , ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಂತಹ ರೋಗಿಗಳಿಗೆ , ಇಲ್ಲೇ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ, ಇದಕ್ಕೆ ಮುಖ್ಯ ಮುಖ್ಯ ಕಾರಣ ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿರ್ಯ ಸ್ ಗಳು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಉಡುಪಿಯ ಶಾಮಿಲಿ ಸಭಾಂಗಣದಲ್ಲಿ , ಜಿಲ್ಲೆಯ ಕೋವಿಡ್ ಫ್ರಂಟ್ ಲೈನ್ ವಾರಿರ್ಯಸ್ ಗಳು ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಒತ್ತಡಗಳಿಗೆ ಒಳಗಾಗದೇ, ಮನೋಸ್ಥೆರ್ಯದಿಂದ ಕೆಲಸ ನಿರ್ವಹಿಸುವ ಕುರಿತು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ ದಿನ ಅನಾರೋಗ್ಯದ ಕಾರಣ , ಕೋವಿಡ್ ವಿರುದ್ದ ಹೋರಾಟದಲ್ಲಿ ಕಾರ್ಯ ನಿರ್ವಹಿಸಿದ ಸಾಧಕರಿಗೆ ಜಿಲ್ಲಾಡಳಿತ ನೀಡಿದ…
