ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾಧ್ಯಕ್ಷರಾಗಿ ಕುಂದಾಪುರದ ನೇರಂಬಳ್ಳಿ ರಮೇಶ್ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಮಹಾಸಭಾದ ಕರಾವಳಿ ಜಿಲ್ಲೆಗಳ ಉಸ್ತುವಾರಿಯಾಗಿರುವ ಮಾಧ್ಯಮ ವಕ್ತಾರ ಮಾರುತಿ ಬಡಿಗೇರ್ರಾಯಚೂರು ಅವರ ಶಿಫಾರಸ್ಸಿನಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಧ್ಯಕ್ಷರಾದ ವಿಧಾನ ಪರಿಷತ್ಸದಸ್ಯ ಕೆ. ಪಿ. ನಂಜುಂಡಿ ವಿಶ್ವಕರ್ಮ ಅವರು ನೇಮಕ ಮಾಡಿದ್ದಾರೆ. ಉದ್ಯಮಿಯಾಗಿರುವ ರಮೇಶ ಆಚಾರ್ಯ ಸಮಾಜಸೇವಕರಾಗಿ ಸಕ್ರೀಯರಾಗಿ ಬೀಜಾಡಿ ಗೋಪಾಡಿ ಮಿತ್ರ ಸಂಘಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೈಂದೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ, ಜನಜಾಗೃತಿ ವೇದಿಕೆ ಬೈಂದೂರು ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ 151ನೇ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ’ಜನಜಾಗೃತಿ ಸಮಾವೇಶ ಹಾಗೂ ಗಾಂಧಿ ಸ್ಮೃತಿ ಕಾರ್ಯಕ್ರಮ’ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ಕುಂದಾಪುರ ತಾಲ್ಲೂಕು ಮಾಜಿ ಅಧ್ಯಕ್ಷರು ಬಿ. ಅಪ್ಪಣ್ಣ ಹೆಗ್ಡೆ. ಉಡುಪಿ ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ನಾಗೇಶ್ ಎನ್. ಪಿ. ದಿಕ್ಸೂಚಿ ಭಾಷಣ ಮಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಚೆನ್ನೈ ಮೂಲದ ಪ್ರತಿಷ್ಠಿತ ಕಂಪೆನಿಯಾದ ಮೆಕೇನ್ ಇನ್ನೋವೇಶನ್ಸ್ ನಡುವೆ, ಕಾಲೇಜಿನಲ್ಲಿ ಅಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಲ್ಯಾಬೋರೇಟರಿ ಪ್ರಾರಂಭಿಸುವ ಕಾರ್ಯಕ್ರಮದಡಿ ಮಹತ್ವದ ಒಪ್ಪಂದಕ್ಕೆ ಕಾಲೇಜಿನ ಚೇರ್ಮನ್, ಸಿದ್ದಾರ್ಥ್ ಜೆ ಶೆಟ್ಟಿ ಮತ್ತು ಕಂಪನಿಯ ವಿಷ್ಣು ಟಿ ಎನ್ ರವರು ಸಹಿ ಮಾಡಿದರು. ಈ ಒಪ್ಪಂದದ ಮೂಲಕ ಕಾಲೇಜಿನ ವಿದ್ಯಾರ್ಥಿಗಳ ಕೌಶಲ್ಯತೆಯನ್ನು ಹೆಚ್ಚಿಸಲು ಡಿಜಿಟಲ್ ತಂತ್ರಜ್ಞಾನದ ಮೂಲಕ ವರ್ಚುಯಲ್ ರಿಯಾಲಿಟಿ, ಮಿಕ್ಸೆಡ್ ರಿಯಾಲಿಟಿ ಮತ್ತು ಆಗ್ಮೆಂಟೆಡ್ ರಿಯಾಲಿಟಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು. ಅಲ್ಲದೆ 3ಡಿ ಪ್ರಿಂಟಿಂಗ್ ಮತ್ತು ಕ್ಯಾಪಿಡ್ ಪ್ರೊಟೋಟೈಪ್ ನಂತಹ ತರಬೇತಿಗಳನ್ನ ನೀಡುತ್ತಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಲಾಭ ಪಡೆಯಲಿದ್ದಾರೆ. ಹಾಗೆಯೇ ಕ್ಯಾಂಪಸ್ ಸಂದರ್ಶನ ದ ಮೂಲಕ ಕಂಪನಿಗಳಲ್ಲಿ ಉದ್ಯೋಗ ಪಡೆಯಲಿಕ್ಕೆ ಬೇಕಾಗುವ ಅಗತ್ಯ ವಿಷಯಗಳ ಮೇಲೆ ಅಧ್ಯಯನ ಮಾಡಲು ಈ ಒಪ್ಪಂದ ಬಹಳ ಉಪಯೋಗಕಾರವಾಗಲಿದೆ, ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಿ ಅವರಿಗೆ ಹೆಚ್ಚಿನ ಉದ್ಯೋಗ ಸೃಷ್ಟಿಸಿ, ಕಾಲೇಜು ಮತ್ತು ಕಂಪನಿಗಳ ಸಂಪರ್ಕ ಉತ್ತಮವಾಗಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಇಲ್ಲಿನ ಹರಳೂರು ಮುಖ್ಯ ರಸ್ತೆಯಲ್ಲಿ ಕೆ.ಎಫ್.ಡಿ.ಸಿ ಸಹಭಾಗಿತ್ವದಲ್ಲಿ ಪ್ರಜ್ಞಾ ಸಾಗರ ಹೋಟೆಲ್ಸ್ ಮತ್ತು ರೆಸಾರ್ಟ್ಸ್ ಇದರ ನೂತನ ಮತ್ಸ್ಯ ದರ್ಶಿನಿ ಮತ್ತು ಪ್ರಗ್ನ್ಯಾ ಸಾಗರ ಹೋಟೆಲ್ ಹಾಗೂ ಫಿಶ್ ಔಟ್ಲೆಟ್ ಗುರುವಾರ ಉದ್ಘಾಟನೆಗೊಂಡಿತು. ರಾಜ್ಯ ಮಾನ್ಯ ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ಸ್ಯ ದರ್ಶಿನಿ ಹಾಗೂ ಪ್ರಜ್ಞ್ನಾ ಸಾಗರ ಹೋಟೆಲ್ ಉದ್ಘಾಟಿಸಿದರು. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷರಾದ ಪಿ. ಸಿ. ರಾವ್ ಅವರು ಪ್ರಜ್ಞ್ನಾ ಸಾಗರ ಹೋಟೆಲ್ನ 2ನೇ ಯುನಿಟ್ ಹಾಗೂ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷರಾದ ವೇದಕುಮಾರ್ ಅವರು ಫೀಶ್ ಔಟ್ಲೆಟ್ ಉದ್ಘಾಟಿಸಿದರು. ಈ ಸಂದರ್ಭ ಚೆಫ್’ಟಾಕ್ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಗೋವಿಂದ ಬಾಬು ಪೂಜಾರಿ, ಪ್ರಜ್ಞಾ ಸಾಗರ ಹೋಟೆಲ್ಸ್ ಮತ್ತು ರೆಸಾರ್ಟ್ಸ್ ಸಂಸ್ಥೆಯ ಡೈರೆಕ್ಟರ್ ಮಾಲತಿ ಗೋವಿಂದ ಪೂಜಾರಿ, ಉದ್ಯಮಿಗಳಾದ ಅರುಣ್ ಧನಪಾಲ್, ಗುರುರಾಜ ಪೂಜಾರಿ ಸೇರಿದಂತೆ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ವಿಶೇಷ ಶಿಕ್ಷಣ ಶಿಕ್ಷಕರ ಸಮಾವೇಶ ಕುಂದಾಪುರ ನೌಕರರ ಭವನದ ಕಛೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಉಡುಪಿ ಜಿಲ್ಲಾ ವಿಶೇಷ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಗಣಪತಿ ಹೋಬಳಿದಾರ್ ಬೈಂದೂರು, ವಿಶೇಷ ಶಿಕ್ಷಕರ ಸಮಸ್ಯೆಯನ್ನು ವಿವಿಧ ಸಂಘಟನೆಗಳ ಸಹಕಾರದಿಂಧ ರಾಜ್ಯ ಸಂಘದಲ್ಲಿ ಚರ್ಚಿಸಿ ಪರಿಹಾರಕ್ಕೆ ಶ್ರಮಿಸುವುದಾಗಿ ತಿಳಿಸಿದರು. ಮುಖ್ಯ ಅಥಿತಿಗಳಾಗಿ ಕುಂದಪುರ ನೌಕರರ ಸಂಘದ ಅಧ್ಯಕ್ಷರಾದ ದಿನಕರ ಶೆಟ್ಟಿ ಮಾತನಾಡಿ, ವಿಶೇಷ ಶಿಕ್ಷಕರಿಗಾಗಿ ಜಿಲ್ಲಾ ಪ್ರಶಸ್ತಿ ವಿಜೇತ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಶಿಕ್ಷಕರ ಹೋರಾಟಕ್ಕೆ ಸದಾ ಸಹಕರಿಸುವುದಾಗಿ ಹೆಳಿದರು. ಈ ಸಂದರ್ಭದಲ್ಲಿ ವಿಶೇಷ ಶಿಕ್ಷಕರಾಗಿ ಶಾಲಾ ಅಭಿವೃದ್ಧಿಯಲ್ಲಿ ಸಕ್ರಿಯರಾಗಿ ಜಿಲ್ಲಾ ಪ್ರಶಸ್ತಿ ವಿಜೇತ ಚಂದ್ರಶೇಖರ ಸೆಟ್ಟಿ ಮತ್ತು ಜಿಲ್ಲಾ ವಿಶೇಷ ಶಿಕ್ಷಣ ಅಧಿಕಾರಿಯಾಗಿ ನಿವೃತ್ತರಾಗಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ತರಬೇತಿ ಕೇಂದ್ರ ರಚನೆಗೆ ಶ್ರಮಿಸುತ್ತಿರುವ ಗಂಗೆ ಶ್ಯಾನುಭಾಗ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕಾರಿಣಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಶಾಲಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧೀನದಲ್ಲಿದ್ದ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿರುವ ಮಂಜುಗಡ್ಡೆ ಸ್ಥಾವರವನ್ನು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಐದು ವರ್ಷದ ಅವಧಿಗೆ ಗುತ್ತಿಗೆಗೆ ನೀಡಲಾಗಿದೆ. ಮಂಗಳವಾರ ಮಂಗಳೂರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಪ್ರಧಾನ ಕಛೇರಿಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಮನಿ ಅವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಅವರಿಗೆ ಗಂಗೊಳ್ಳಿಯಲ್ಲಿರುವ ಮಂಜುಗಡ್ಡೆ ಸ್ಥಾವರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ಮುದ್ದಣ್ಣ, ಮಾರ್ಕೇಟಿಂಗ್ ಮ್ಯಾನೇಜರ್ ಶಿವಪ್ಪ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ಸೂರಜ್ ಖಾರ್ವಿ, ನಿರ್ದೇಶಕ ಚಂದ್ರ ಖಾರ್ವಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸರ್ಕಾರ ಪ್ರತಿ ವರ್ಷ ಉತ್ತಮವಾಗಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯತಿಗಳಿಗೆ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕುಂದಾಪುರ ತಾಲೂಕಿನ ಹೊಂಬಾಡಿ – ಮಂಡಾಡಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. 2019-20ನೇ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತಾ ಯೋಜನೆಗಳ ವಿವಿಧ ಮಾನದಂಡಗಳನ್ನು ಪರಿಗಣಿಸಲಾಗಿದೆ. ಹೊಂಬಾಡಿ – ಮಂಡಾಡಿ ಗ್ರಾಮ ಪಂಚಾಯಿತಿಯಲ್ಲಿ ಶೇ 99 ರಷ್ಟು ಸಾಕ್ಷಾರತಾ ಪ್ರಮಾಣ ದಾಖಲಾಗಿದೆ. ಕಾಳಾವರ ಹಾಗೂ ಕೂರ್ಗಿ ಗ್ರಾಮಗಳ ತ್ಯಾಜ್ಯವನ್ನು ಸಂಗ್ರಹಿಸಿ ಹೊಂಬಾಡಿಯಲ್ಲಿರುವ ತಾಜ್ಯ ಸಂಸ್ಕರಣಾ ಘಟಕದಲ್ಲಿ ಪ್ರತ್ಯೇಕಗೊಳಿಸಲಾಗುತ್ತಿದಿದೆ. ಇದಕ್ಕಾಗಿ 60 ಸಾವಿರ ರೂ. ವೆಚ್ಚ ಮಾಡಲಾಗಿದ್ದು 6 ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಗೆ 4ನೇ ಸ್ಥಾನವನ್ನು ಪಡೆದುಕೊಂಡಿದ್ದು ಪಂಚಾಯಿತಿ ಕಟ್ಟಡ, ಸಭಾ ಭವನ ಅಂಗನವಾಡಿ ಕಟ್ಟಡ ಹಾಗೂ ಆಯ್ದ ರಸ್ತೆಗಳ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ದ್ವಿತೀಯ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರವನ್ನು ತನ್ನದಾಗಿಸಿಕೊಂಡ ಮರವಂತೆ ಗ್ರಾಮ ಪಂಚಾಯಿತಿ, 2019-20ನೇ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತಾ ಯೋಜನೆಗಳ ವಿವಿಧ ಮಾನದಂಡಗಳಿಗೆ ನಿಗದಿಗೊಳಿಸಿದ 200 ಅಂಕಗಳಲ್ಲಿ 161 ಅಂಕ ಗಳಿಸಿ ಈ ಪ್ರಶಸ್ತಿಗೆ ಪಾತ್ರವಾಗಿದೆ. 2,000ಕ್ಕಿಂತ ಈಚೆಗೆ ಮರವಂತೆ ಪಂಚಾಯಿತಿ ಅನನ್ಯ ಸಾಧನೆಗಳ ಮೂಲಕ ರಾಜ್ಯ, ರಾಷ್ಟ್ರದ ಗಮನ ಸೆಳೆದಿದೆ. ಸ್ವಯಂಪ್ರೇರಿತ ಸಮಗ್ರ ಸಾಮಾಜಿಕ ಆರ್ಥಿಕ ಸಮೀಕ್ಷೆ, ಯಶಸ್ವಿ ಸಂಪೂರ್ಣ ಸ್ವಚ್ಛತಾ ಆಂದೋಲನ, ಜನತಾ ಜೀವ ವೈವಿಧ್ಯ ದಾಖಲಾತಿ ಮತ್ತು ಪ್ರಕಟಣೆ, ಕುಡಿಯುವ ನೀರು ಪೂರೈಕೆ ಯೋಜನೆ, ಕೇಂದ್ರೀಕೃತ ಸೋಲಾರ್ ಬೀದಿದೀಪ, ದಾನಿಯಿಂದ ಪಂಚಾಯತ್ ಸೌಧ ನಿರ್ಮಾಣ, ಸುವರ್ಣ ಗ್ರಾಮೋದಯ ಯೋಜನೆ ಮೂಲಕ ಗ್ರಾಮದ ಮೂಲ ಸೌಲಭ್ಯ ವೃದ್ಧಿ, ಆರ್ಥಿಕ ಶಿಸ್ತು ಪಾಲನೆ, ವಸತಿ ಸಭೆ, ವಾರ್ಡ್ಸಭೆ, ಗ್ರಾಮಸಭೆ, ಮಹಿಳಾ ಗ್ರಾಮಸಭೆ, ಮಕ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಮಟ್ಟದ ಮೂರು ದಿನಗಳ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಕಮ್ಮಟ ಹಾಗೂ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟಗಳನ್ನು ನಡೆಸಲು ಉದ್ದೇಶಿಸಿದ್ದು, ಈ ನಾಲ್ಕು ಕಮ್ಮಟಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದ್ದು, ಪ್ರತಿ ವಿಭಾಗದ ಕಮ್ಮಟಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು ಆಸಕ್ತರು ಅರ್ಜಿ ನಮೂನೆ ಹಾಗೂ ವಿವರಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ http://karnatakasahithyaacademy.org ಯಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ನಾಗರಾಜ ಪಿ. ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಬ್ದುಲ್ ರವೂಫ್, ಜೊತೆ ಕಾರ್ಯದರ್ಶಿಗಳಾಗಿ ನಿಶ್ಚಿತಾ, ಗಣೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಗಾಣಿಗ, ಖಜಾಂಚಿಯಾಗಿ ಸುರೇಶ್ ಹುದಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಾಲಕೃಷ್ಣ ಜೋಶಿ, ನಾಗರಾಜ ಬೆಳ್ಳಿ, ರಾಘವೇಂದ್ರ ಕೆ., ಉದಯ, ಗಿರೀಶ್ ಮೇಸ್ತ, ರವಿರಾಜ, ಲಕ್ಷ್ಮಣ, ಸುನಿಲ್ ಹೆಚ್. ಜಿ., ಗಣೇಶ್ ಟೈಲರ್ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
