ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಕುಂದಾಪುರ ಮಿಡ್‌ಟೌನ್ ಆಶ್ರಯದಲ್ಲಿ ಕುಂದಾಪುರದ ಈಸ್ಟ್‌ವೆಸ್ಟ್ ಕ್ಲಬ್‌ನಲ್ಲಿ ಜರಗಿದ ರೋಟರಿ ಜಿಲ್ಲೆ 3182ರ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಏಳು ಪ್ರಥಮ ಬಹುಮಾನದೊಂದಿಗೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಗೀತ ಗಾಯನ ವಿಭಾಗದ ಏಕವ್ಯಕ್ತಿ ಸೋಲೋ, ಏಕವ್ಯಕ್ತಿ 12 ವರ್ಷ ಮೇಲ್ಪಟ್ಟು ಸೋಲೋ, ಯುಗಳ ಗೀತೆ, ಸಮೂಹ ಗಾಯನದಲ್ಲಿ ಪ್ರಥಮ ಸ್ಥಾನವನ್ನು, ನೃತ್ಯ ವಿಭಾಗದ ಏಕ ವ್ಯಕ್ತಿ ಸೋಲೋ ಮತ್ತು ಸಮೂಹ ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ರಂಗೋಲಿಯಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡು ಚಾಂಪಿಯನ್ ಆಗಿ ಮೂಡಿ ಬಂದಿದೆ. ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಅಭಿನಂದನ ಎ. ಶೆಟ್ಟಿ ವಿಜೇತರರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವು ಭಾರತೀಯರು ಎನ್ನುವ ಘನತೆಯೊಂದಿಗೆ ಜಾತ್ಯಾತೀತ, ಪ್ರಜಾಸತ್ತಾತ್ಮಕ, ಭಾತೃತ್ವದ ತಳಹದಿಯೊಂದಿಗೆ ರೂಪಿತವಾಗಿರುವ ಸಂವಿಧಾನದ ಅಳವಡಿಕೆ ಸ್ಮರಣೀಯ ಎಂದು ಉಪವಿಭಾಗಾಧಿಕಾರಿ ಕೆ. ರಾಜು ಹೇಳಿದರು. ಇಲ್ಲಿನ ಗಾಂಧಿ ಮೈದಾನದಲ್ಲಿ ಮಂಗಳವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತ್ರತ್ವದಲ್ಲಿ ನಡೆದ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಅವರು ಧ್ವಜಾರೋಹಣ ನಡೆಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು. ದೇಶದ ನಾಗರಿಕರ ಹಿತರಕ್ಷಣೆಯನ್ನ ಆದ್ಯತೆಯಾಗಿ ಇರಿಸಿಕೊಂಡು ಡಾ. ಬಿ. ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ನಮ್ಮ ಹಿರಿಯರು ವಿಶ್ವಕ್ಕೆ ಮಾದರಿಯಾಗಿ ರೂಪಿಸಿರುವ ನಮ್ಮ ಹೆಮ್ಮೆಯ ಸಂವಿಧಾನವನ್ನು ಅನುಸರಿಸುವುದು ನಮ್ಮ ಹೊಣೆಯಾಗಿದೆ. ಕೋವಿಡ್ ಮಹಾವಿಪತ್ತಿನ ಸಂದರ್ಭದಲ್ಲಿ ಜಿಲ್ಲೆಯ ಜನತೆ ತೋರಿದ ಸ್ಪಂದನೆ ದೇಶಕ್ಕೆ ಮಾದರಿಯಾಗಿದೆ. ಕುಸಿದಿರುವ ಉದ್ಯಮ ಹಾಗೂ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಾದ ಅನೀವಾರ್ಯತೆ ಇದೆ. ಕರಾವಳಿಯ ನೈಸರ್ಗಿಕ ಸೊಬಗನ್ನು ಬಳಸಿಕೊಂಡು ಪ್ರವಾಸೋದ್ಯಮವನ್ನು ಉತ್ತೇಜಿಸಬೇಕಾಗಿದೆ. ಸರ್ಕಾರದ ಕಾರ್ಯಕ್ರಮಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು. ಈ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ತೋರಬೇಕು ಎಂದು ಅವರು ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರೀ ಗಾಳಿಗೆ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ಅಪಾರ ಹಾನಿಯಾದ ಘಟನೆ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಎಂಬಲ್ಲಿ ನಡೆದಿದೆ. ಭಾರೀ ಗಾಳಿಗೆ ಮುದೂರು ಹಾರ್ಕೆ ನಿವಾಸಿ ಶ್ರೀಮತಿ ಗಾಣಿಗ ಎಂಬುವರ ವಾಸ್ತವ್ಯದ ಮನೆ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಜಖಂಗೊಂಡಿದೆ. ಮನೆಯಲ್ಲಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು1.5ಲಕ್ಷ ಕ್ಕೂ ಮಿಕ್ಕಿ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ಪಡೆದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರು ತಹಶೀಲ್ದಾರ್ ಅವರನ್ನು ಸಂಪರ್ಕಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದ್ದು, ಸರಕಾರದಿಂದ ಗರಿಷ್ಠ ಪರಿಹಾರ ನೀಡುವ ಭರವಸೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಐ. ವಸಂತಕುಮಾರಿ ಕಲಾಂಗಣದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಶೆಟ್ಟಿ ಮಾತನಾಡಿ, ಸಮುದಾಯದಲ್ಲಿ ಹೆಣ್ಣು ಮಕ್ಕಳ ಬಗೆಗೆ ಇರುವ ತಾರತಮ್ಯ ಮನೋಭಾವದ ಕಾರಣ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿದೆ. ಅದರ ಪರಿಣಾಮವಾಗಿ ಲಿಂಗ ಅಸಮತೋಲನ ಉಂಟಾಗುತ್ತಿದೆ. ಇದು ಸಮಾಜದ ಬೆಳವಣಿಗೆಗೆ ಮಾರಕ ಎಂದು ಹೇಳಿದರು. ಸಮಾಜದಲ್ಲಿ ಹೆಣ್ಣು ಮಕ್ಕಳ ಕಿರುಕುಳ, ಲೈಂಗಿಕ ಶೋಷಣೆ ಹೆಚ್ಚುತ್ತಿದೆ. ಇದರ ವಿರುದ್ಧ ಹೆಣ್ಣು ಮಕ್ಕಳು ಮಾತ್ರವಲ್ಲದೆ ಇಡೀ ಸಮಾಜ ಎಚ್ಚತ್ತುಕೊಂಡು ಪ್ರತಿಭಟಿಸಿ, ತಡೆಗಟ್ಟಬೇಕು ಎಂದು ಹೇಳಿದರು. ಮಕ್ಕಳ ಮಿತ್ರೆ ಅನಿತಾ ಆರ್.ಕೆ ಹದಿಹರೆಯದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಿಯಾಜ್ ಅಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಸಿಬ್ಬಂದಿ ಶೇಖರ ಮರವಂತೆ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕ ಸರ್ವೊತ್ತಮ ಭಟ್ ವಂದಿಸಿದರು. ಪ್ರೌಢಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯು ಕರೋನಾ ಪ್ರತಿಕೂಲ ಸನ್ನಿವೇಶಗಳಲ್ಲಿಯೂ ಕ್ರಿಯಾಶೀಲವಾಗಿ ಸಮಾಜಕ್ಕೆ ಸ್ಪಂದಿಸಿದೆ. ರೋಟರಿ ಸಂಸ್ಥೆಯ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ರೋಟರಿ ಸಂಸ್ಥೆಗಳು ಕೆಲಸ ಮಾಡಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರೋಟರಿ ಸಂಸ್ಥೆಯ ಸೇವೆ ಲಭಿಸಿದೆ. ಗಂಗೊಳ್ಳಿ ರೋಟರಿ ಸಂಸ್ಥೆ ಇತರ ರೋಟರಿ ಸಂಸ್ಥೆಗಳಿಗೆ ಮಾದರಿಯಾಗಿದ್ದು, ರೋಟರಿಯ ವಿವಿಧ ಅನುದಾನಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಿರುವುದು ರೋಟರಿ ಜಿಲ್ಲೆಗೆ ಹೆಮ್ಮೆ ತರುವ ಸಂಗತಿಯಾಗಿದೆ ಎಂದು ರೋಟರಿ ಜಿಲ್ಲೆ 3182ರ ಗವರ್ನರ್ ರಾಜಾರಾಮ ಭಟ್ ಹೇಳಿದರು. ಜಿಲ್ಲಾ ರೋಟರಿ ಗವರ್ನರ್ ವಾರ್ಷಿಕ ಅಧಿಕೃತ ಭೇಟಿ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಸಿಸ್ಟೆಂಟ್ ಗವರ್ನರ್ ಡಾ.ನಾಗಭೂಷಣ ಉಡುಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೋಮಾಳ ವಿವರ ನೀಡದ ಕಂದಾಯ ಅಧಿಕಾರಿಗಳ ವಿರುದ್ಧ ಆಕ್ರೋಶ, ತಹಶೀಲ್ದಾರ್ ನೇಮಕಕ್ಕೆ ಆಗ್ರಹ, ಮಾಹಿತಿ ಇಲ್ಲದ ಅಧಿಕಾರಿಗಳ ವಿರುದ್ಧ ಗರಂ, ಮಾಹಿತಿದಾರರನ್ನು ಬಲಿಪಶು ಮಾಡದಂತೆ ಗಣಿ ಇಲಾಖೆಗೆ ಸೂಚನೆ ಸೇರಿದಂತೆ ಹಲವು ವಿಚಾರಗಳ ಕುರಿತು ಬೈಂದೂರು ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಚರ್ಚೆ ನಡೆಯಿತು. ಕಂದಾಯ ಇಲಾಖೆಯ ಕೆಲಸಗಳನ್ನು ಬಿಟ್ಟು ಭೂ ಪರಿವರ್ತನೆಯಲ್ಲಿಯೇ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸುತ್ತಾರೆ. ಗೋಮಾಳ ಗುರುತಿಸಿ ಮಾಹಿತಿ ನೀಡುವಂತೆ ಸೂಚಿಸಿದರೂ ಕೆಲಸ ಆಗುತ್ತಿಲ್ಲ, ಪ್ರತಿ ಗ್ರಾಮದಲ್ಲೂ ಗೋಮಾಳ ಹಾಗೂ ಒತ್ತುವರಿ ಗೋಮಾಳಗಳನ್ನು ತೋರಿಸಿ, ಗೋಮಾಳ ನಿರ್ಮಾಣ ಹಾಗೂ ಒತ್ತುವರಿ ತೆರಿಗೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರಿನಲ್ಲಿ ಕಾಯಂ ತಹಶೀಲ್ದಾರ್ ಇಲ್ಲ ಎಂದು ಪ್ರಸ್ತಾಪಿಸಿದ ಪ್ರವೀಣ್ ಕುಮಾರ್ ಶೆಟ್ಟಿ ಕಡ್ಕೆ , ತಾಲ್ಲೂಕು ಕಚೇರಿಯಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ. ಇಂತಹ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಇದನ್ನು ಧ್ವನಿಗೂಡಿಸಿದ ಜಗದೀಶ ದೇವಾಡಿಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ಆಚರಣೆಯ ಅಂಗವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ರೇಕಾ ಬನ್ನಾಡಿ ಮಾತನಾಡಿ, ಮತದಾನ ನಮ್ಮ ಹಕ್ಕು. ಕೆಲವು ಕಡೆ ನಗರ ಪ್ರದೇಶಗಳಲ್ಲಿ ಮತದಾನದಿಂದ ವಿದ್ಯಾವಂತರೆನಿಸಿಕೊಂಡವರು ಮತದಾನದಿಂದ ಹಿಂದೆ ಉಳಿಯುತ್ತಾರೆ. ಹಾಗೆ ಕೆಲವು ಕಡೆ ಅವಿದ್ಯಾವಂತರಿಗೆ ಮತದಾನದ ಮಹತ್ವದ ಬಗ್ಗೆ ಸಾಕಷು ತಿಳುವಳಿಕೆ ಇರುವುದಿಲ್ಲ. ನಾವು ನೀವು ಮತದಾನದ ಮಹತ್ವವನ್ನು ಕುರಿತು ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಅರುಣ್ ಎ.ಎಸ್. ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಬೋಧಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಸೇವಾ ಸಂಘ ಮತ್ತು ರಾಷ್ಟ್ರೀಯ ಮತದಾರರ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಿತು. ಹಿರಿಯ ಶಿಕ್ಷಕರಾದ ಯು.ಹೆಚ್ ರಾಜಾರಾಮ್ ಭಟ್ ಮತದಾನ ಜಾಗೃತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ಧಾರಿಯ ಕುರಿತು ತಿಳಿಸಿದರು. ಶಿಕ್ಷಕ ರಾಘವೇಂದ್ರ ಬಿಲ್ಲವ ಪ್ರತಿಜ್ಞಾವಿಧಿ ವಾಚಿಸಿದರು. ಮುಖ್ಯೋಪಾಧ್ಯಾಯರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ರೋಸಮ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸೇನೆಶ್ವರ ಕಲಾ ಮತ್ತು ಕ್ರೀಡಾ ಸಂಘದ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಜೆ.ಡಿ., ಕಾರ್ಯದರ್ಶಿಯಾಗಿ ಸುಕುಮಾರ ಶೆಟ್ಟಿ ಸೂರ್ಕುಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರೀಶ್ ಹುದಾರ್, ಗಿರಿಶ್ ಯೋಜನನಗರ, ಸಂದೀಪ, ಜೊತೆ ಕಾರ್ಯದರ್ಶಿಯಾಗಿ ವೆಂಕಟೇಶ ಪೂಜಾರಿ, ಸುಧೀರ ರೋಡ್ರಿಗಾಸ್ ಜಗದೀಶ ದೇವಾಡಿಗ, ಸುರೇಶ್ ಯರುಕೋಣೆ, ಸುರೇಶ್ ಡಿ. ಉಪ್ಪಿನಕೋಟೆ, ಬಾಬು ರಾವ್, ಗೌರಾಧ್ಯಕ್ಷರಾಗಿ ಸುಧಾಕರ ಶೆಟ್ಟಿ ನೆಲ್ಯಾಡಿ, ಗೌರವ ಸಲಹೆಗಾರರಾಗಿ ರಾಮಕೃಷ್ಣ ದೇವಾಡಿಗ, ವಿಜಯ್ ಶಂಕರ್ ಭಟ್ ಪ್ರಶಾಂತ ಪೂಜಾರಿ, ಮಂಜುನಾಥ ರಾವ್, ಸುರೇಂದ್ರ ಡಿ. ಬಾಡಾ, ಖಜಾಂಜಿಯಾಗಿ ಗೌರಿಶ್ ಹುದಾರ್, ಅಮರ ದೇವಾಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ದುರ್ಮಿ, ಪ್ರೀತಂ ಅಶೋಕ ಯಡ್ತರೆ, ಅಯಬ್, ಜಗದೀಶ ದೇವಾಡಿಗ, ವೆಂಕಟೇಶ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿತ್ಯನಂದ ಮೊಗವೀರ, ಸೀತರಾಮ ಶ್ರೀಯಾನ್, ನಾಗೇಶ್ ಕಳವಾಡಿ, ನಟೇಶ್ ದೇವಾಡಿಗ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ ದೇವಾಡಿಗ, ಚಂದ್ರ ಪೂಜಾರಿ, ಭಾಸ್ಕರ ಶಿರೂರು. ಸದಸ್ಯರಾದ ಶಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಯಡ್ತರೆ ಫ್ರೆಂಡ್ಸ್ ಎರಡು ದಿನಗಳ ಕಾಲ ಯಡ್ತರೆ ಕ್ರೀಡಾಂಗಣದಲ್ಲಿ ಆಯೋಜಿಸಿದ 30 ಗಜಗಳ ಕ್ರಿಕೆಟ್ ಪಂದ್ಯಾಟದಲ್ಲಿ ಉಪ್ಪುಂದ ವಿವೇಕಾನಂದ ತಂಡ ಯಡ್ತರೆ ಟ್ರೋಫಿ – 2021ನ್ನು ಮುಡಿಗೇರಿಸಿಕೊಂಡಿದ್ದು, ಸೋಮಲಿಂಗೇಶ್ವರ ಫ್ರೆಂಡ್ಸ್ ಚಂದನ ತಂಡವು ರನ್ನರ್ಅಪ್ ಆಗಿದೆ. ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಮಾತನಾಡಿ, ಕ್ರೀಡೆಯಿಂದ ಸಮರಸ್ಯ ಸಾಧ್ಯವಿದ್ದು, ಜಾತಿ, ಧರ್ಮಗಳ ಭೇದವಿಲ್ಲದೇ ಎಲ್ಲರೂ ಪಾಲ್ಗೊಳ್ಳುತ್ತಾರೆ. ಆಟದಲ್ಲಿ ಸೋಲು ಗೆಲುವು ಸಹಜವಾದರೂ ಕ್ರೀಡಾಳುಗಳ ಸಂಘಟನಾತ್ಮಕ ಪ್ರಯತ್ನ ಇನ್ನೊಂದು ಯಶಸ್ಸಿಗೆ ದಾರಿಮಾಡಿಕೊಡುತ್ತದೆ ಎಂದ ಅವರು ಯಡ್ತರೆ ಕ್ರೀಡಾಂಗಣದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ನೂರಾರು ಕ್ರೀಡಾ ಪಟುಗಳು ಇಲ್ಲಿ ತಯಾರಾಗಿದ್ದಾರೆ. ಆದರೆ ಅವರು ಜಿಲ್ಲೆ, ರಾಜ್ಯ ಮಟ್ಟದಲ್ಲಿ ಮುಂದುವರಿಯದಿರುವುದು ವಿಷಾದದ ಸಂಗತಿಯಾಗಿದ್ದು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಅರಣ್ಯ ಪಾಲಕ ತಿಮ್ಮಪ್ಪ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಲಕ್ಕಿ ಡ್ರಾ…
