ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾನೂನು ಸೇವಾ ಸಮಿತಿ ರಚನೆಯ ಹಿಂದಿನ ಉದ್ದೇಶ ಸಮಾಜದ ಕಟ್ಟಕಡೆ ಜನಗಿರಗೂ ನ್ಯಾಯ ಸಿಗಬೇಕು ಎನ್ನುವುದಾಗಿದೆ. ಮಹಿಳೆಯರು, ಮಕ್ಕಳು ನ್ಯಾಯದಿಂದ ವಂಚಿತರಾಗಬಾರದು ಎನ್ನುವ ಉದ್ದೇಶ ಕೂಡಾ ಇದರಲ್ಲಿದೆ ಎಂದು ಕುಂದಾಪುರ ಹಿರಿಯ ಸಿವಿಲ್ ನ್ಯಾಯಾದೀಶ ರಂಗೇಗೌಡ ಹೇಳಿದರು. ಅವರು, ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿ, ಬಾರ್ ಅಸೋಸಿಯೇಶನ್, ತಾಲೂಕು ಆಡಳಿತ, ಕುಂದಾಪುರ ತಾಪಂ. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಉಚಿತ ಕಾನೂನು ಅರಿವು ನೆರವು ಮಾಹಿತಿ ಸಮಾರೋಪ ಉದ್ಘಾಟಿಸಿ ಮಾತನಾಡಿದರು. ಉಡುಪಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ದೇವಿಂದ್ರ ಎಸ್. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಧೀಶ ದಿನೇಶ್ ಮುಗಳಿ, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶೆ ನಾಗರತ್ನಮ್ಮ, ಕುಂದಾಪುರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ರಿ. ಕುಂಭಾಸಿ ಇದರ ಪ್ರವರ್ತಕ ಕೊರ್ಗಿ ವಿಠಲ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಂಕಲನ – 2021 ಕಾರ್ಯಕ್ರಮವು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ಸಭಾಗೃಹದಲ್ಲಿ ನಡೆಯಿತು. ಈ ಸಂದರ್ಭ ಹಿರಿಯ ಪತ್ರಕರ್ತ ಜಾನ್ ಡಿಸೋಜಾ, ಪ್ರಗತಿ ಪರ ಕೃಷಿಕ ಹೆರಿಯಣ್ಣ ಶೆಟ್ಟಿ ಯಡಾಡಿ ಮತ್ಯಾಡಿ ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಗುರುತಿಸಿ ಸಮ್ಮಾನಿಸಲಾಯಿತು ಹಾಗೂ ಅಶಕ್ತರಿಗೆ ಅರ್ಥಿಕ ನೆರವು ನೀಡಲಾಯಿತು ಹಿರಿಯ ಪತ್ರಕರ್ತ ಜಾನ್ ಡಿಸೋಜಾ ಸಮ್ಮಾನ ಸ್ವೀಕರಿಸಿ ಮಾತನಾಡಿ, ನಾವು ಮಾಡುವ ಕಾರ್ಯದಲ್ಲಿ ಉತ್ಸಾಹ ಮತ್ತು ಇನ್ನಷ್ಟು ಕಾರ್ಯ ಮಾಡಲು ಸೂಚನೆ ನೀಡಲು ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸುತ್ತವೆ. ಪ್ರಕೃತಿಯ ವೈಪರಿತ್ಯದ ನಡುವೆ ಯಕ್ಷಗಾನ ಕ್ಷೇತ್ರಕ್ಕೆ ಪ್ರಕೃತಿಯೇ ಪರೋಕ್ಷವಾಗಿ ಲಾಕ್ಡೌನ್ ನೀಡುತ್ತಿದೆ. ಕಲೆ ಮತ್ತು ಸಂಸ್ಕೃತಿಗಳೇ ಬದುಕಿಗೆ ಟಾನಿಕ್ ಇದ್ದ ಹಾಗೆ ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೇಜಾವರ ಸ್ವಾಮಿ ಕುರಿತು ಅವಹೇಳನಕಾರಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖಾ ವಿರುದ್ದ ಕುಂದಾಪುರ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಸ್ತ್ರಿ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಸಮಿತಿ ಅಧ್ಯಕ್ಷ ಸುಪ್ರಸಾದ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಪುರಸಭೆ ಸದಸ್ಯರಾದ ಪ್ರಭಾಕರ ವಿ., ರಾಘವೇಂದ್ರ ಖಾರ್ವಿ, ಮಾಜಿ ತಾಪಂ ಸದಸ್ಯ ರೂಪಾ ಪೈ. ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಮಲ್ಯಾಡಿಯ ರಸ್ತೆಗಳಲ್ಲಿ ನಾಲ್ಕು ದಶಕಗಳ ಕಾಲ ಸಂಚರಿಸಿ, ಶೆಡ್ ಸೇರಿದ್ದ ಲಾರಿಯೊಂದು ಇದೀಗ ಧರ್ಮಸ್ಥಳದ ವಸ್ತು ಸಂಗ್ರಹಾಲಯವನ್ನು ಅಲಂಕರಿಸಿದೆ. ಮಂಜೂಷಾ ಮ್ಯೂಸಿಯಂಗೆ ಭೇಟಿ ನೀಡುವವರಿಗೆ ಇನ್ನು ತೆಕ್ಕಟ್ಟೆ ಗ್ರಾಮದ ಮಲ್ಯಾಡಿಯ ಶ್ರೀ ಮಹಾದೇವಿ ಪ್ರಸಾದ ಹೆಸರಿನ ಲಾರಿಯೂ ಕಾಣಸಿಗಲಿದೆ. ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ, ಉದ್ಯಮಿಯೂ ಆಗಿರುವ ಮಲ್ಯಾಡಿ ಶಿವರಾಮ ಶೆಟ್ಟಿ ಅವರು 1973ರ 12 10ಡಿ (ಟ್ವೆಲ್ ಟೆನ್ ಡಿ) ಮಾಡಲ್ ಲಾರಿಯನ್ನು ಕುಂದಾಪುರದ ಸಿಲ್ವೆಸ್ಟರ್ ಅಲ್ಮೆಡಾ ಅವರಿಂದ 1976ರಲ್ಲಿ ಖರೀಸಿದ್ದರು. ಮುಂದೆ 36 ವರ್ಷಗಳ ಕಾಲ ನಿರಂತರ ದುಡಿದ ಲಾರಿಯ ಸ್ಪೇರ್ಪಾರ್ಟ್ಸ್ ಸಿಗದ ಕಾರಣ ಶಿವರಾಮ ಶೆಟ್ಟಿ ಅವರು ಮನೆ ಮುಂದೆ ಶೆಡ್ ಮಾಡಿ ನಿಲ್ಲಿಸಿದ್ದರು. ಕೆಲ ಸಮಯದ ಹಿಂದೆ ಶಿವರಾಮ ಶೆಟ್ಟರ ಮನೆಯಲ್ಲಿ ಧರ್ಮಸ್ಥಳ ಮೇಳದ ಸೇವೆಯಾಟಕ್ಕಾಗಿ ಬಂದಿದ್ದ ಮೇಳದ ಮ್ಯಾನೇಜರ್ ಈ ಲಾರಿಯನ್ನು ಕಂಡು ಲಾರಿ ಪೋಟೋವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಕಳುಹಿಸಿ ಮಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಪ್ರಭ ಸಂಸ್ಥೆಯ ವತಿಯಿಂದ ಪ್ರತಿವರ್ಷ ಪ್ರದಾನ ಮಾಡಲಾಗುತ್ತಿರುವ ಕೋ.ಮ. ಕಾರಂತ ಪ್ರಶಸ್ತಿಗೆ ಮಾಜಿ ಶಾಸಕ, ಕರ್ನಾಟಕ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ, ಅಮಾಸೆಬೈಲು ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಎ. ಗೋಪಾಲ ಕೃಷ್ಣ ಕೊಡ್ಗಿ ಅವರು ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಕ್ರಷ್ಣರಾಯ ಕೊಡ್ಗಿ ಅವರ ಪುತ್ರ ಎ.ಜಿ. ಕೊಡ್ಗಿ, ಕಳೆದ ಆರು ದಶಕದಲ್ಲಿ ಹಲವು ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಖ್ಯಾತ ಪತ್ರಕರ್ತ, ಸಾಹಿತಿ, ವಾಗ್ಮಿ ಕುಂದಾಪುರದ ಕೋಣಿ ಮಹಾಬಲೇಶ್ವರ ಕಾರಂತರ ಹೆಸರಲ್ಲಿ ಪ್ರತಿ ವರ್ಷ ಸಾಧಕರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು. ಕೋಣಿ ಶಿವಾನಂದ ಕಾರಂತ ನೇತ್ರತ್ವದ ಸಮಿತಿ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 23ರಂದು ಆದಿತ್ಯವಾರ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮಿ ನರಸಿಂಹ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್.ಶೆಣೈ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಿಕೆ ಪೋಷಕರಿಂದ ಆರಂಭವಾಗಲಿ ಎಂದು ಯುವವಾಹಿನಿ ರಿ. ಯಡ್ತಾಡಿ ಘಟಕದ ಅಧ್ಯಕ್ಷ ರಾಜು ಪೂಜಾರಿ ಅವರು ಹೇಳಿದರು. ಅವರು ಯುವವಾಹಿನಿ ರಿ. ಯಡ್ತಾಡಿ ಘಟಕದ ವತಿಯಿಂದ ಗುಲಾಬಿ ಪೂಜಾರ್ತಿ ಅವರ ಮನೆ ವಠಾರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂದಿನ ಮಕ್ಕಳೇ ಮುಂದಿನ ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಗಳು, ಅವರನ್ನು ಸುಂದರ ಶಿಲ್ಪಿಗಳನ್ನಾಗಿ ರೂಪಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಾರ್ಕೂರು ಸ್ವಾಗತ್ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಅವರು ಹೇಳಿದರು. ಈ ಸಂದರ್ಭದಲ್ಲಿ ನಡೂರು ಬ್ರಿಕ್ಸ್ನ ಮಾಲಕರಾದ ಸಂದೀಪ್ ಪೂಜಾರಿ, ಯುವವಾಹಿನಿಯ ಕಾರ್ಯದರ್ಶಿ ಅಜಿತ್ ಪೂಜಾರಿ, ಸಾಂಸ್ಕೃತಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್ ಮೊಬೈಲ್ ಆಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, Bele Darshak Karnataka – 2021-22 ಆಪ್ ಅನ್ನು ಗೂಗಲ್ ಪ್ಲೇಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಅಥವಾ ರೈತರು ಲಿಖಿತವಾಗಿ ತಮ್ಮ ಆಕ್ಷೇಪಣೆಗಳನ್ನು ಕೃಷಿ, ಕಂದಾಯ ಹಾಗೂ ತೋಟಗಾರಿಕಾ ಇಲಾಖೆಗಳಲ್ಲಿಯು ಸಹ ಸಲ್ಲಿಸಬಹುದಾಗಿದೆ. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಆರೋಗ್ಯದಾಯಕ ವಾತಾವರಣ ಕಲ್ಪಿಸಿ, ಶಿಕ್ಷಣವನ್ನು ನೀಡುವುದರೊಂದಿಗೆ ಅವರನ್ನು ಭವಿಷ್ಯದಲ್ಲಿ ಉತ್ತಮ ಪ್ರಜೆಯನ್ನಾಗಿಸುವ ಜವಾಬ್ದಾರಿ ನಾಗರಿಕ ಸಮಾಜದ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಡಳಿತ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ, ಮಕ್ಕಳ ಸಹಾಯವಾಣಿ 1098, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ, ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ಲೈನ್ ಸೇ ದೋಸ್ತಿ ವೀಕ್ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಕ್ಕಳ ರಕ್ಷಣೆಗೆ ಅನೇಕ ಕಾನೂನುಗಳನ್ನು ಜಾರಿಗೆ ತರುವುದರೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೂ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ, ಬಾಲ್ಯ ವಿವಾಹ, ಸೇರಿದಂತೆ ಮತ್ತಿತರ ಅನಿಷ್ಟ ಪದ್ಧತಿಗಳು ಅಲ್ಪಪ್ರಮಾಣದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ಕೃಷ್ಣಭವನ ಕನ್ವೆನ್ಷನ್ ಹಾಲ್ನಲ್ಲಿ ಜರುಗಿದ ಕರ್ನಾಟಕ ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಮಹಿಳಾ ವಿಭಾಗ ದಲ್ಲಿ ಪ್ರಥಮ ತಂಡ ಪ್ರಶಸ್ತಿ ಪಡೆದರೆ ಪುರುಷರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ ಪಡೆದುಕೊಂಡಿದೆ. ಕರ್ನಾಟಕ ರಾಜ್ಯ ಪವರ್ಲಿಫ್ಟಿಂಗ್ ಸಂಸ್ಥೆ ಆಶ್ರಯದಲ್ಲಿ ನಡೆದ ಈ ಚಾಂಪಿಯನ್ಶಿಪ್ನಲ್ಲಿ ಪುರುಷರ ವಿಭಾಗದ ತಂಡ ಪ್ರಶಸ್ತಿ ಬಾಲಂಜನೇಯ ಜಿಮ್ ಮಂಗಳೂರು ಪಡೆದರೆ, ಮಹಿಳಾ ವಿಭಾಗದ ದ್ವಿತೀಯ ತಂಡ ಪ್ರಶಸ್ತಿ ಐರನ್ ಎನ್ ಡೆನ್ ಬೆಂಗಳೂರು ತಂಡ ಪಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪೋಷಕರು ತಾವು ಪೋಷಕರು ಎನ್ನುವ ಅಧಿಕಾರದಿಂದ ಮಕ್ಕಳ ಮೇಲೆ ಒತ್ತಡ ಹೇರದೆ ಮಕ್ಕಳಲ್ಲಿನ ಆಸಕ್ತಿ ಕ್ಷೇತ್ರ ಗುರುತಿಸಿ ಅದರಲ್ಲಿ ಅವರನ್ನು ತೊಡಗಿಸಿಕೊಳ್ಳುವುದಕ್ಕೆ ಪ್ರೇರೇಪಿಸುವ ಕೆಲಸ ಮಾಡಬೇಕು. ಮಕ್ಕಳಲ್ಲಿನ ಸೂಕ್ತ ಪ್ರತಿಭೆ ಹೊರಹೊಮ್ಮಲು ಸೂಕ್ತವಾದ ವೇದಿಕೆ ಅಗತ್ಯ, ಈ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್ ಕಾರ್ಯವೆಸಗುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕಿ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್ ಅವರು ಹೇಳಿದರು. ಅವರು ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ವತಿಯಿಂದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟದಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚಿಲುಮೆ-೨೦೨೧(ಭರವಸೆಯ ತಂಗಾಳಿ) ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆ ಕುಂಭಾಶಿ ವಿದ್ಯಾರ್ಥಿನಿ ಶ್ಲಾಘ ಸಾಲಿಗ್ರಾಮ,…
