Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಳೆಅಳಿವೆಯಿಂದ ಕೋಟೇಶ್ವರ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಿನಾರಾ ಬೀಚ್ ರೋಡಿನ ಪೋಸ್ಟ್ ಆಫೀಸ್ ಬಳಿ ನಡೆದಿದೆ. ಬೀಜಾಡಿ ಗ್ರಾಮದ ನಿವಾಸಿ ಬೈಕ್ ಸವಾರ ವಿಜಯೇಂದ್ರ ಪೂಜಾರಿ ಮೃತ ದುರ್ದೈವಿ. ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ವಿಜಯೇಂದ್ರ ಅವರು ಮಧ್ಯಾಹ್ನ ಮನೆಗೆ ಬಂದಿದ್ದು ಸಂಜೆ ಮರಳಿ ಕಛೇರಿಗೆ ತೆರಳುವ ಸಂದರ್ಭ ಈ ಘಟನೆ ನಡೆದಿದೆ. ಕುಟುಂಬದಲ್ಲಿ ಹಿರಿಯ ಮಗನಾಗಿದ್ದ ವಿಜಯೇಂದ್ರ ಅವರು ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಮಡದಿ ೭ ತಿಂಗಳ ಗರ್ಭಿಣಿಯಾಗಿದ್ದಾರೆ. ಮೃತರು ತಂದೆ ತಾಯಿ, ಪತ್ನಿ, ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Read More

ತಾಯಿಯ ಉದರದಿಂದ ಹೊರಬಂದು ಪ್ರಪಂಚಕ್ಕೆ ಇದಿರುಗೊಳ್ಳುವ ಪ್ರತಿ ಮಗುವಿಗು ತಾಯಿಯ ಹಾಲೇ ಅಮೃತಪಾನ. ಮಗು ದೊಡ್ಡದಾಗುವ ತನಕವೂ ಎಲ್ಲಾ ಹೊತ್ತಿನಲ್ಲಿಯೂ ಅಗತ್ಯವಿರುವಷ್ಟು ಎದೆಹಾಲನ್ನು ತಾಯಿ ಹೊಂದಿರಬೇಕಾಗುತ್ತದೆ. ಕೆಲವರಿಗೆ ಎದೆಹಾಲಿನ ಪ್ರಮಾಣ ಕಡಿಮೆ ಇರುತ್ತದೆ. ಹಾಲಿನ ಪ್ರಮಾಣವು ಹೆಚ್ಚಾಗಬೇಕು. ಅದರಲ್ಲಿ ಮಗುವಿನ ಬೆಳವಣಿಗೆಗೆ ಅಗತ್ಯವಿರುವ ಪೋಷಕಾಂಶಗಳು ಹೇರಳವಾಗಿರಬೇಕು ಎನ್ನುವುದಾದರೆ ಮೊದಲು ಆಹಾರ ಕ್ರಮದಲ್ಲಿ ಸೂಕ್ತ ಮಾರ್ಪಾಡು ಮಾಡಿಕೊಳ್ಳುವುದು ಅಗತ್ಯ. ಮಗು ಕೇವಲ ತಾಯಿಯ ಎದೆಹಾಲಿಗೆ ಅವಲಂಭಿತವಾಗಿರುವುದರಿಂದ, ತಾಯಿ ಸೇವಿಸುವ ಆಹಾರದ ಗುಣಗಳು ಹಾಲಿನ ಮುಖಾಂತರ ಮಗುವನ್ನು ತಲುಪುತ್ತದೆ. ಮಗುವಿಗೆ ಹಸಿವಾದ ಸಂದರ್ಭದಲ್ಲೆಲ್ಲಾ ತಾಯಿಯ ಎದೆ ಹಾಲು ಧಾರಾಳವಾಗಿ ಸಿಗುವಂತಾಗಬೇಕೆಂದರೆ ಕೆಲವು ವಿಶೇಷ ಆಹಾರವನ್ನು ಸೇವಿಸಬೇಕು. ಅವು ಯಾವುವು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು. ಓಟ್ ಮೀಲ್:ಓಟ್ ಮೀಲ್ ಕೊಲೆಸ್ಟ್ರಾಲ್ಅನ್ನು ಕಡಿಮೆ ಮಾಡಿ ಆರೋಗ್ಯಕರ ರಕ್ತದೊತ್ತಡವನ್ನು ನಿರ್ವಹಿಸುವುದು. ಇದೊಂದು ಆರೋಗ್ಯ ಪೂರ್ಣ ಆಹಾರ. ಇದು ತಾಯಿಯ ದೇಹವನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹಾಲಿನ ಉತ್ಪಾದನೆಗೆ ಸಹಾಯಮಾಡುವ ಆಕ್ಸಿಟೋಸಿನ್ ಹಾರ್ಮೋನ್ಅನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಬ್ಯಾರೀಸ್ ಶಿಕ್ಷ ಮತ್ತು ಸುರಕ್ಷಾ ಫೌಂಡೇಶನ್‌ನಿಂದ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಬ್ಯಾರೀಸ್ ಸಂಸ್ಥೆಗಳ ಸಿಬ್ಬಂದಿಯ ಮಕ್ಕಳ ವಿದ್ಯಾಭಾಸಕ್ಕಾಗಿ ಪ್ರತಿ ವರ್ಷ ಕೊಡಮಾಡುವ ಸಹಾಯ ಧನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾರೀಸ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ದೋಮ ಚಂದ್ರಶೇಖರ್ ಅವರು “ಗಾಂಧಿ ಜಯಂತಿ ಆಚರಣೆಯ ಸಂಧರ್ಭದಲ್ಲಿ ನಡೆದ ಈ ಸಹಾಯ ಧನ ವಿತರಣೆ ಬಹಳ ಔಚಿತ್ಯಪೂರ್ಣವಾದುದು ಎಂದು ಹೇಳುತ್ತಾ ಗಾಂಧೀಜಿಯವರ ಶಿಕ್ಷಣದ ಕಲ್ಪನೆಯ ಕುರಿತು ಮಾತನಾಡಿದರು. ಧೀಮಂತ ನಾಯಕ ಲಾಲ್ ಬಹುದ್ದೂರ್ ಶಾಸ್ತ್ರೀ ಯವರನ್ನು ನೆನಪಿಸಿಕೊಳ್ಳುತ್ತಾ, ಇಂತಹ ಅಪೂರ್ವ ಮಹಾನ್ ವ್ಯಕ್ತಿಗಳ ಚರಿತ್ರೆ ಓದುವ ಹವ್ಯಾಸವನ್ನು ಬೆಳೆಯಿಸಿಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಅಬ್ದುಲ್ ರೆಹಮಾನ್ ಸಹಾಯ ಧನವನ್ನು ವಿತರಿಸಿ ಗಾಂಧೀಜಿ ಮತ್ತು ಇತರ ನಾಯಕರ ಹೋರಾಟದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಿತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ನಮ್ಮ ದೇಶವನ್ನು ಕಟ್ಟೋಣ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಾದ ಶಂಕರ ಪಿ. ಹೆಚ್, ಶ್ರೀಧರ ರಾವ್ ಹಾಗೂ ದಾನಿಗಳಾದ ಬಾಲ್ತು ಲೋಬೊ ಅವರು ನೀಡಿದ ಸಮವಸ್ತ್ರ ವಿತರಣೆ ಹಾಗೂ ನೋಟ್ಸ್ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ. ವಿ. ವಿ. ಮಂಡಳಿ ರಿ. ಹೆಮ್ಮಾಡಿ ಇದರ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಸಮವಸ್ತ್ರ ಮತ್ತು ನೋಟ್ಸ್ ಪುಸ್ತಕ ನೀಡಿದ ದಾನಿಗಳಿಗೆ ಗೌರವಿಸಿದರು. ಈ ಸಂರ್ಭ ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಖ್ಯೋಪಾಧ್ಯಾಯರಾದ ಮಂಜು ಕಾಳಾವರ ಪ್ರಸ್ತಾವಿಸಿ, ಸ್ವಾಗತಿಸಿದರು. ಗಣಿತ ಶಿಕ್ಷಕರಾದ ಶ್ರೀಧರ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕರಾದ ದಿನಕರ ಧನ್ಯವಾದ ಸರ್ಮಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ ಗಳು ಕಸ ಸಂಗ್ರಹಣೆ ಮತ್ತು ವಿಲೇವಾರಿ ಹಾಗೂ ಕಸ ಸಂಗ್ರಹಣೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಹೊಂದುವ ಮೂಲಕ ಉಡುಪಿ ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು. ಅವರು ಇಂದು , ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ,ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿಯಲ್ಲಿನ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದ ಸಿಇಓ, ಎಸ್ಎಲ್ಆರ್ಎಂ ಘಟಕಗಳು ಕಸದಿಂದ ಆದಾಯವನ್ನು ಸಂಗ್ರಹಿಸಿ, ತಮ್ಮ ವೆಚ್ಚಗಳನ್ನು ನಿಭಾಯಿಸಿಕೊಂಡುವ ಲಾಭದಾಯಕವಾಗಿ ನಡೆಸುವಂತೆ ಹೇಳಿದರು. ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಿ, ತಮಗೆ ಈಗಾಗಲೇ ನೀರಿನ ಸಂಪರ್ಕ ಇದೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆಯುರ್ವೇದದಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಪೌಷ್ಠಿಕ ಆಹಾರ ಸೇವನೆಯು ಆಯುರ್ವೇದದ ಭಾಗವಾಗಿದೆ. ಹಾಗಾಗಿ ಗರ್ಭಿಣಿಯರು ಪೌಷ್ಠಿಕ ಆಹಾರ ಸೇವಿಸಿ ಸರ್ಕಾರದ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಆರೋಗ್ಯ ಇಲಾಖೆ, ಆಯುಷ್ ಇಲಾಖೆ, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಹಾಗೂ ರೋಟರಿ ಕ್ಲಬ್ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಗೂರು ಶ್ರೀ ಗೋಪಾಲಕೃಷ್ಣ ಕಲಾ ಮಂದಿರ ಒಡೆಯರ ಮಠದಲ್ಲಿ ಜರಗಿದ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭ ಉದ್ಘಾಟಿಸಿ, ಗರ್ಭಿಣಿಯರಿಗೆ ಆಯುಷ್ ಕಿಟ್ ವಿತರಿಸಿ ಅವರು ಮಾತನಾಡಿದರು. ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷೆ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಶುಭಾಶಂಸನೆಗೈದರು. ಕಾಲ್ತೋಡು ಸರಕಾರಿ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಅವರು ನಮ್ಮ ಸುತ್ತಮುತ್ತಲಿರುವ ಪೌಷ್ಠಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿ ಗರ್ಭೀಣಿಯರಿಗೆ ಹಾಗೂ ಕಡಿಮೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ‘ವರದಿಗಾರಿಕೆಯ ಸವಾಲುಗಳು ಮತ್ತು ಸುದ್ದಿ ಮನೆಯ ವೈವಿಧ್ಯತೆ’ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಡೆಪ್ಯುಟಿ ಚೀಫ್ ರಿಪೋರ್ಟರ್ ಹಾಗೂ ಅಂಕಣಕಾರ ರಂಜಿತ್ ಎಚ್ ಅಶ್ವತ್ ಮಾತನಾಡಿ, ವರದಿಗಾರಿಕೆ ಮಾಡುವಾಗ ಮುಂದಾಗುವ ಸವಾಲುಗಳನ್ನು ಎದುರಿಸಲು ವರದಿಗೆ ಹೋಗುವ ಮೊದಲೇ ವರದಿಗಾರರು ಮಾನಸಿಕವಾಗಿ ದೈಹಿಕವಾಗಿ ಸಿದ್ಧರಿರಬೇಕು. ವರದಿಗೆ ಬಳಸುವ ಮೂಲಗಳ ಬಗ್ಗೆ ಸ್ಪಷ್ಟ ಜ್ಞಾನ ಮತ್ತು ನಿಖರತೆಯನ್ನು ಹೊಂದಿರಬೇಕು. ಯಾವುದು ಸುದ್ದಿ ಯಾವುದು ಸುದ್ದಿಯಲ್ಲ ಎಂಬುದನ್ನು ಗ್ರಹಿಸುವ ದೃಷ್ಟಿಕೋನ ವರದಿಗಾರರಿಗೆ ಮುಖ್ಯವಾಗಿರಬೇಕು. ಪತ್ರಕರ್ತನಾದವನಿಗೆ ಸಾಹಿತ್ಯ ಜ್ಞಾನ, ಓದುಗಾರಿಕೆ, ಬರಹ, ವಿಷಯ ಜ್ಞಾನ, ಪದಗಳ ಮಿತಿ, ಅಕ್ಷರ ಜ್ಞಾನ ಅಗತ್ಯವಾಗಿರಬೇಕು. ಇವೆಲ್ಲ ಇಲ್ಲದಿದ್ದಲ್ಲಿ ಅಂತಹ ವರದಿ ತನ್ನ ಜೀವಂತಿಕೆಯನ್ನು ಕಳೆದುಕೊಳ್ಳುತ್ತದೆ. ಅಲ್ಲದೆ ಉತ್ತಮ ವರದಿಗಾರನಾಗಲು ವರದಿ ಕೌಶಲ್ಯ ಮಾತ್ರವಲ್ಲದೆ ಇದರ ಜೊತೆಗೆ ವಿನಯತೆ, ನೈತಿಕತೆ, ಉತ್ತಮ ಮಾತುಗಾರಿಕೆ ಹಾಗು ಉಡುಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರು ಕೃಷಿಯಲ್ಲಿ ಸೂಕ್ಷ್ಮ ನೀರಾವರಿಯನ್ನು ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಿಕೊಳ್ಳಲು ಸಾಮಾನ್ಯ ವರ್ಗದ ರೈತರು ಗರಿಷ್ಠ 5 ಹೆ. ಪ್ರದೇಶದವರೆಗ ಹನಿ/ತುಂತುರು ನೀರಾವರಿ ಸೌಲಭ್ಯವನ್ನು ಅಳವಡಿಸಿಕೊಳ್ಳಲು ಶೇ.45 ಹಾಗೂ ಸಣ್ಣ ಮತ್ತು ಅತೀ ಸಣ್ಣರೈತರು/ ಪ.ಜಾತಿ ಮತ್ತು ಪ.ಪಂಗಡದ ರೈತರಿಗೆ 2 ಹೆ. ಪ್ರದೇಶದವರೆಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದ್ದು, ವಿಕಲಚೇತನರಿಗೆ ಆದ್ಯತೆ ಮೇರೆಗೆ ವಿತರಿಸಲಾಗುವುದು. ಆಸಕ್ತ ರೈತರು ಅರ್ಜಿ, ಪಹಣಿ, ಆಧಾರ ಪ್ರತಿ ಬ್ಯಾಂಕ್ ಖಾತೆಯ ವಿವರ ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಜಮೀನಿನ ನಕ್ಷೆ, ಚೆಕ್ಬಂಧಿ, ಬೆಳೆ ದೃಢೀಕರಣ ಪತ್ರ ಹಾಗೂ ಹನಿ/ತುಂತುರು ನೀರಾವರಿ ಅಳವಡಿಸುವ ಕಂಪೆನಿಯ ವಿವರದೊಂದಿಗೆ ಇಲಾಖೆಯ ತಾಲೂಕು ಕಛೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕರ ಕಛೇರಿ ದೂ.ಸಂ:…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಸರಕಾರದ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೈಂದೂರು ವಲಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಶಿರೂರು ಶಾಲಾ ಸಂಸತ್ತನ್ನು ಉದ್ಘಾಟಿಸಿ  ಮಾತನಾಡಿ, ಭಾರತದ ಭವ್ಯ ಭವಿಷ್ಯ ತರಗತಿ ಕೋಣೆಯಲ್ಲಿ ನಿರ್ಮಾಣವಾಗುತ್ತದೆ ಅದಕ್ಕೆ ಬೇಕಾದ ತರಬೇತಿಯನ್ನು ಮತ್ತು ಜ್ಞಾನವನ್ನು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ನೀಡುವುದು ಶಿಕ್ಷಣದ ಮುಖ್ಯ ದ್ಯೇಯವಾಗಿರಬೇಕು. ಮೊದಲು ತಂದೆ-ತಾಯಿಗಳಿಗೆ ಉತ್ತಮ ಮಕ್ಕಳಾಗಿ ಭವ್ಯ ಭಾರತದ ಪ್ರಜೆಗಳಾಗಿ ದೇಶ ಕಟ್ಟುವ ಹೊಣೆಗಾರಿಕೆಯನ್ನು ಎಳೆಮೆಯಲ್ಲಿಯೇ ಬೆಳೆಸಿಕೊಳ್ಳುವ ಅವಶ್ಯಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಆನಂದ ಮದ್ದೋಡಿ ವಹಿಸಿದ್ದರು. ಈ ಸಂದರ್ಭ ಶಿಕ್ಷಕರಾದ ಗುರುರಾಜ್. ಎಸ್. , ನಿರ್ಮಲಾ, ಹೇಮಾವತಿ ಹಾಗೂ ಸಿಬ್ಬಂದಿ ವರ್ಗದವರಾದ ಗಿರಿಜಾ, ಪಾರ್ವತಿ ಹಾಗೂ ವಿದ್ಯಾರ್ಥಿ ನಾಯಕ ಮಹೇಶ್.ಎಂ. ಉಪಸ್ಥಿತರಿದ್ದರು ಶಾಲಾ ಸಂಸತ್ತಿನ ವಕ್ತಾರರಾದ ಚೈತ್ರಾ ಕಾರ್ಯಕ್ರಮದ ನಿರ್ವಹಿಸಿದರು. ಶಿಕ್ಷಕರಾದ ಚಂದ್ರ ಕೆ. ದೇವಾಡಿಗ ಸ್ವಾಗತಿಸಿ ಶಿಕ್ಷಕರಾದ ಶ್ರೀ ಪ್ರಕಾಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದೊಂದಿಗೆ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಗಾಂಧಿ ಹಾಗೂ ಶಾಸ್ತ್ರಿಗಳ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ‌ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸ್ಥಾನೀಯ ಆಯುಕ್ತರಾದ ಕೊಗ್ಗ ಗಾಣಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹತ್ಮಾ ಗಾಂಧಿ ಹಾಗೂ ಲಾಲ್‍ ಬಹದ್ದೂರ್ ಶಾಸ್ತ್ರಿ ವಿಚಾರಧಾರೆಗಳ ಕುರಿತು ಮಾತನಾಡಿದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‌ನ ತರಬೇತಿ ಆಯುಕ್ತರಾದ ಆನಂದ ಅಡಿಗ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕುರಿತು ಮಾತನಾಡಿದರು. ಈ ಸಂದರ್ಭ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಬ್ರಹ್ಮಣ್ಯ, ಸಂಸ್ಥೆಯ ಬೋಧಕ,ಬೋಧಕೇತರ ವೃಂದದದವರು ಉಪಸ್ಥಿತರಿದ್ದರು. ಸಂಸ್ಥೆಯ ಗೈಡ್ ಶಿಕ್ಷಕಿಯರಾದ ಪದ್ಮಾವತಿ, ಅಶ್ವಿನಿ ಪ್ರಾರ್ಥಿಸಿ, ಸಂಸ್ಥೆಯ ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜಾ…

Read More