Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಾದ ತಾಲೂಕು ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳಕ್ಕೆ ಕೋವಿಡ್ ಹತೋಟಿ ಹಿನ್ನೆಲೆಯಲ್ಲಿ ತೆರವಾಗಿರುವ ಶುಶ್ರೂಷಕರ 29 ಹುದ್ದೆ, ಪ್ರಯೋಗಶಾಲಾ ತಂತ್ರಜ್ಞರ 45 ಹುದ್ದೆ ಹಾಗೂ ಗ್ರೂಪ್ ಡಿ. 29 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕ್ಟೋಬರ್ 15 ರ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಅಜ್ಜರಕಾಡು, ಉಡುಪಿ ಇವರಿಗೆ ಸಲ್ಲಿಸಿ, ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕ್ಕೆ ನಡೆಯುವ ಸಂದರ್ಶನದಲ್ಲಿ ವಿದ್ಯಾರ್ಹತೆ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಪ್ರಕಟಣೆ ತಿಳಿಸಿದೆ. ವಿವಿಧ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಶುಶ್ರೂಷಕರು, ಎಲ್‍ಎಚ್‍ವಿ, ಡೆಂಟಲ್ ಹೈಜೆನಿಸ್ಟ್, ಎಮ್. ಬಿ. ಬಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ:  ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಟ್ರಸ್ಟ್ ಉಡುಪಿ, ಯು – ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಿಕ – ಸಾಂಸ್ಕೃತಿಕ ಸುಗ್ಗಿ ಆಲ್ಮೋರ – 2020 ಮರೆಯಲಾಗದ ಶಬ್ಧತೀರ  ಎರಡನೇ ದಿನದ ಕಾರ್ಯಕ್ರಮ ನಡೆಯಿತು. ಕಾರಂತ ಚಿಂತನ ಕಾರ್ಯಕ್ರಮದಲ್ಲಿ ಮಾತನಾಡಿದ ಯಕ್ಷಗಾನ ಕಲಾವಿದ ಕೃಷ್ಣಮೂರ್ತಿ ಉರಾಳ, ಬ್ಯಾಲೆಯ ಮೂಲಕ ಯಕ್ಷಗಾನಕ್ಕೆ ಹೊಸ ಆಯಾಮ ನೀಡಿದವರು ಕಾರಂತರು , ತಮ ಯಕ್ಷಗಾನ ಬ್ಯಾಲೆಯನ್ನು ವಿದೇಶಗಳಿಗೆ ಕರೆದೊಯ್ದು ಯಕ್ಷಗಾನದ ಕಂಪನ್ನು ವಿದೇಶದಲ್ಲೂ ಪಸರಿಸಿದರು. ಅಲ್ಲದೇ ಕಾರಂತರು ಯಕ್ಷಗಾನಕ್ಕೆ ಹೊಸ ಸ್ವರೂಪ ನೀಡುವ ದೃಷ್ಟಿಯಿಂದ ಹೊಸ ಪ್ರಯೋಗ ಮಾಡಿ ಮಾತುಗಳಿಲ್ಲದೇ ಕೇವಲ ಭಾವಾಭಿನಯದ ಮೂಲಕ ವೈಲಿನ್ ಮತ್ತು ಸ್ಯಾಕ್ಸ್‌ಫೋನ್ ವಾದನ ಬಳಸಿ ಬ್ಯಾಲೆ ನಿರ್ಮಿಸಿ ಯಕ್ಷಗಾನದಲ್ಲಿ ಒಂದು ಕ್ರಾಂತಿ ಮಾಡಿದರು. ಕಾರಂತರ ಶಿಷ್ಯರಾಗಿ ಅವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ದ್ವಿತೀಯ ಬಹುಮಾನ ಪಡೆದಿದ್ದಾನೆ. ನೇಹಿಗ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಪ್ರಾಧ್ಯಾಪಕಿ ಡಾ. ಮೌಲ್ಯ ಜೀವನ್ ದಂಪತಿಯ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಪ್ರಶಂಸಿಸಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ. ಜಿ. ಆರ್. ಸಿಂಧ್ಯಾ ಬಹುಮಾನ ವಿತರಣೆ ಮಾಡಿದರು. ಪ್ರಸಿದ್ಧ ಗಾಯಕ ಶಶಿಧರ್ ಕೋಟೆ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮೈಸೂರಿನ ಪ್ರಮತಿ ಶಾಲೆಯಲ್ಲಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾ. ಪಂ. ಡಾ. ಶಿವರಾಮ ಕಾರಂತ ಟ್ರಸ್ಟ್ ಆಶ್ರಯದಲ್ಲಿ ನಡೆದ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಎಸ್. ಎಲ್. ಭೈರಪ್ಪ ಮಾತನಾಡಿ, ಡಾ. ಕೋಟ ಶಿವರಾಮ ಕಾರಂತರು ಕೇವಲ ಓರ್ವ ಸಾಹಿತಿಯಲ್ಲ, ತನ್ನ ಜೀವನ ಹಾಗೂ ಸಾಹಿತ್ಯ ಕೃತಿಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಿ ಸುಧಾರಣೆಯನ್ನು ತಂದ ಸಮಾಜ ಸುಧಾರಕ ಸಾಹಿತಿ ಕಾರಂತರು ಈ ನೆಲದ ಸಾಕ್ಷಿ ಪ್ರಜ್ಞೆ. ಅವರ ಮೂಲಕವಾಗಿ ಅವಿಭಜಿತ ದ. ಕ. ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ಅವು ಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕಾರಂತರ ಹೆಸರಲ್ಲಿ ಪ್ರಶಸ್ತಿ ಸ್ವೀಕರಿಸುವುದು ನನ್ನ ಪಾಲಿನ ಭಾಗ್ಯ ಎಂದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ . ಟಿ. ಸೋಮಶೇಖರ್ ಪ್ರಶಸ್ತಿ ಪ್ರದಾನ ಮಾಡಿದರು ಮುಜರಾಯಿ ಸಚಿವ ಕೋಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ನೇಮಕ ಮಾಡಿದ್ದಾರೆ. ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್‌ನ ಪೂರ್ವಾಧ್ಯಕ್ಷರಾಗಿ, ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷರಾಗಿ ಸಾಮಾಜಿಕ ಸಾಂಸ್ಕೃತಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ಕಿಶೋರ್ ಅವರು ಭಾರತೀಯ ಜನತಾ ಪಾರ್ಟಿಯ ಮೂಲಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು. ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಅವರು, 2014ರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿಯೂ ಸ್ವರ್ಧಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ 19 ನಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವವರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಇಡೀ ರಾಜ್ಯದಲ್ಲಿ ಈ ಸಾಧನೆ ಮಾಡಿರುವ 3 ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದೆ, ಆದರೆ ಉಳಿದ 2 ಜಿಲ್ಲೆಗಳಲ್ಲಿ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ, ಸಾವಿನ ದವಡೆಯಲ್ಲಿದ್ದ ರೋಗಿಗಳನ್ನು , ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಂತಹ ರೋಗಿಗಳಿಗೆ , ಇಲ್ಲೇ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ, ಇದಕ್ಕೆ ಮುಖ್ಯ ಮುಖ್ಯ ಕಾರಣ ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿರ್ಯ ಸ್ ಗಳು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಉಡುಪಿಯ ಶಾಮಿಲಿ ಸಭಾಂಗಣದಲ್ಲಿ , ಜಿಲ್ಲೆಯ ಕೋವಿಡ್ ಫ್ರಂಟ್ ಲೈನ್ ವಾರಿರ್ಯಸ್ ಗಳು ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಒತ್ತಡಗಳಿಗೆ ಒಳಗಾಗದೇ, ಮನೋಸ್ಥೆರ್ಯದಿಂದ ಕೆಲಸ ನಿರ್ವಹಿಸುವ ಕುರಿತು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ ದಿನ ಅನಾರೋಗ್ಯದ ಕಾರಣ , ಕೋವಿಡ್ ವಿರುದ್ದ ಹೋರಾಟದಲ್ಲಿ ಕಾರ್ಯ ನಿರ್ವಹಿಸಿದ ಸಾಧಕರಿಗೆ ಜಿಲ್ಲಾಡಳಿತ ನೀಡಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬಹುನಿರೀಕ್ಷಿತ ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ರಸ್ತೆಯ ಸುಮಾರು 35 ಲಕ್ಷ ರೂ. ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿ ಪ್ರಾರಂಭಗೊಂಡಿದೆ. ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರ ಪ್ರಯತ್ನದ ಫಲವಾಗಿ ಗುಡ್ಡೆಕೇರಿ ರಸ್ತೆ ಕಾಂಕ್ರೀಟಿಕರಣಕ್ಕೆ ಕರ್ನಾಟಕ ನೀರಾವರಿ ನಿಗಮದ ಮೂಲಕ 35 ಲಕ್ಷ ರೂ. ಅನುದಾನ ಮಂಜೂರಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಲಾಗಿದ್ದು, ಕರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಕಾಮಗಾರಿ ಆರಂಭಿಸಲು ವಿಳಂಬವಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಕಾಂಕ್ರೀಟಿಕರಣ ಕಾಮಗಾರಿ ವೇಗದಿಂದ ಸಾಗುತ್ತಿದ್ದು, ನಿಗಮದ ಇಂಜಿನಿಯರ್‌ಗಳು ಸ್ಥಳದಲ್ಲಿದ್ದು ಕಾಮಗಾರಿ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ರಸ್ತೆಗೆ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರ ಪ್ರಯತ್ನದಿಂದ ಕಾಂಕ್ರೀಟಿಕರಣ ಭಾಗ್ಯ ಕೂಡಿ ಬಂದಿದೆ. ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿ ಸಹಕರಿಸಿದ ಶಾಸಕ ಬಿ. ಎಂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಪತ್ರದಲ್ಲಿ ನಿರ್ದೇಶನ ನೀಡಲಾಗಿದ್ದು, ಈ ಕೆಳಕಂಡಂತೆ ಮೀಸಲಾತಿ ನಿಗಧಿ ಪಡಿಸಲಾಗಿರುತ್ತದೆ. ಉಡುಪಿ ನಗರಸಭೆ : ಉಡುಪಿ ತಾಲೂಕಿನ ನಗರ ಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ. ಕುಂದಾಪುರ ಪುರಸಭೆ : ಕುಂದಾಪುರ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಅಭ್ಯರ್ಥಿ. ಕಾಪು ಪುರಸಭೆ : ಕಾಪು ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಅಭ್ಯರ್ಥಿ. ಸಾಲಿಗ್ರಾಮ ಪಟ್ಟಣ ಪಂಚಾಯತ್: ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಅಭ್ಯರ್ಥಿ. ಕಾರ್ಕಳ ಪುರಸಭೆ: ಕಾರ್ಕಳ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ಪರಿಶಿಷ್ಟ ವರ್ಗದ ಜನಾಂಗದವರಿಗೆ ಹನಿ ನೀರಾವರಿ ಮತ್ತು ಪಾಲಿ ಹೌಸ್ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದ ಕೃಷಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಉಡುಪಿ ಕಚೇರಿ ದೂರವಾಣಿ ಸಂಖ್ಯೆ – 0820 – 2574814, ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಕ್ಟೋಬರ್ 13 ಹಾಗೂ 14 ರಂದು ನಡೆಯಲಿರುವ ಡಿಪ್ಲೋಮಾ ಮತ್ತು ಪಿ. ಜಿ. ಸಿ. ಇ. ಟಿ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ತಡೆಗೆ ಸರ್ಕಾರ ಹೊರಡಿಸಿರುವ ಎಲ್ಲಾ ಅಗತ್ಯ ಮುಂಜಾಗೃತ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಬೇಕು ಎಂದು ಅಪರಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಪ್ಲೋಮಾ ಮತ್ತು ಪಿ. ಜಿ. ಸಿ.ಇ. ಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಸೋಂಕು ಹೆಚ್ಚು ಹರಡುತ್ತಿರುವ ಈ ಸಮಯದಲ್ಲಿ ನಡೆಯುತ್ತಿರುವ ಡಿಪ್ಲೋಮಾ ಮತ್ತು ಪಿಜಿಸಿಇಟಿ ಪರೀಕ್ಷೆಯಲ್ಲಿ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಮಾರ್ಗ ಸೂಚಿಗಳನ್ನು ತಪ್ಪದೇ ಪಾಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲಾಗಿರುವ ಅನುಭವವಿದ್ದು ಅದೇ ರೀತಿಯಲ್ಲಿ ಪರೀಕ್ಷೆಯನ್ನು ನಡೆಸಬೇಕು. ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ಹಾಗೂ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಎಚ್ಚರ ವಹಿಸಬೇಕೆಂದು…

Read More