ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ 2016,17 ಮತ್ತು 2018ರ ಸಾಲಿನಲ್ಲಿ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು , ವಿದ್ಯಾರ್ಥಿವೇತನ ಪಡೆಯಲು ನವೀಕರಣ ಮಾಡಿಕೊಳ್ಳುವುದು. ಹಾಗೆಯೇ 2019ನವೆಂಬರ್‌ನಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಹೊಸದಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ. ನೋಂದಾಣಿ ಮತ್ತು ನವೀಕರಣ ಮಾಡಿಕೊಳ್ಳಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ www.NSP.2.0 ಗೆ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಎನ್.ಎಂ.ಎಂ.ಎಸ್ ಅಧಿಕಾರಿ ಅಥವಾ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಉಪನ್ಯಾಸಕರು ಡಯಟ್ ಉಡುಪಿ ಮೊ.ನಂ: 9380241292 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೋಮವಾರ ಯಡ್ತರೆಯ ಬಂಟರ ಭವನದಲ್ಲಿ ಜರುಗಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯೆಯೆಂಬುದು ಮಕ್ಕಳ ಭವಿಷ್ಯವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟು ಅವರನ್ನು ಪ್ರೋತ್ಸಾಹಿಸುವ ಕಾರ್ಯ ಅಗತ್ಯ. ಓದುವ ಹಂಬಲವಿದ್ದು ಆರ್ಥಿಕ ಅಡಚಣೆ ಇರುವ ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಇಂತಹ ಕಾರ್ಯ ಶ್ಲಾಘನೀಯ. ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಉತ್ತಮವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಉನ್ನತ ಹುದ್ದೆ ಏರಲು ಸಾಧ್ಯವಿದೆ. ಸಮಾಜದಲ್ಲಿ ಅನೇಕ ಉದ್ಯಮಿಗಳು ಇದ್ದು ಸಮಾಜಕ್ಕೆ ಮಿಡಿಯುವರ ಸಂಖ್ಯೆ ಕಮ್ಮಿ. ನಿಸ್ವಾರ್ಥವಾಗಿ ಸಮಾಜಕ್ಕಾಗಿ ಬದುಕುವ ಉದ್ಯಮಿಗಳ ಪೈಕಿ ಗೋವಿಂದ ಬಾಬು ಪೂಜಾರಿ ಓರ್ವರು ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬಸ್ರೂರು ಶಾಖೆಯ ಸ್ವಂತ ಕಟ್ಟಡಕ್ಕೆ ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಮತ್ತು ಬಸ್ರೂರು ಚರ್ಚಿನ ಧರ್ಮಗುರು ವಂ|ಚಾಲ್ರ್ಸ್ ನೊರೊನ್ಹಾ ಅವರು ಆಶಿರ್ವಚನಗೈದು ಶಿಲಾನ್ಯಾಸ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭ ಬ್ರದರ್ ದಿಯೊಕೋನ್ ಜೊಯ್ಸಟನ್ ಪಿಂಟೊ, ಬಸ್ರೂರು ಚರ್ಚಿನ ಉಪಾಧ್ಯಕ್ಷ ಫ್ಲೈವನ್ ಡಿಸೋಜಾ, ಕುಂದಾಪುರ ವಲಯ ಕಥೊಲಿಕ್ ಸಭಾ ವರಾಡೋ ಅಧ್ಯಕ್ಷೆ ಮೇಬಲ್ ಡಿಸೋಜಾ, ಎಮ್. ಸಿ. ಸಿ ಬ್ಯಾಂಕಿನ ನಿರ್ದೇಶಕ ಕಿರಣ್ ಕ್ರಾಸ್ತಾ ಮೊದಲಾದವರು ಉಪಸ್ಥಿತರಿದ್ದರು. ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜಾನ್ಸನ್ ಡಿ ಆಲ್ಮೆಡಾ, ಉಪಾಧ್ಯಕ್ಷ ಕಿರಣ್ ಲೋಬೊ, ಬಸ್ರೂರು ಶಾಖೆಯ ಉಸ್ತುವಾರಿ, ಸೊಸೈಟಿ ನಿರ್ದೇಶಕ ಫಿಲಿಪ್ ಡಿಕೋಸ್ತಾ, ಶಿಲಾನ್ಯಸ ಗೈದರು. ಸೊಸೈಟಿ ನಿರ್ದೇಶಕರಾದ ವಿನೋದ್ ಕ್ರಾಸ್ಟೊ, ವಿಲ್ಫ್ರೆಡ್ ಮಿನೇಜೆಸ್, ಜಾಕೋಬ್ ಡಿಸೋಜಾ, ಪ್ರಕಾಶ್ ಲೋಬೊ, ಬ್ಯಾಪ್ಟಿಸ್ಟ್ ಡಾಯಸ್, ಸೊಸೈಟಿಯ ಪ್ರಧಾನ ನಿರ್ವಹಣಾ ವ್ಯವಸ್ಥಾಪಕ ಪಾಸ್ಕಲ್ ಡಿಸೋಜಾ, ರೋಜರಿ ಸೊಸೈಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನ ಹಿಂದಿ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಹಿಂದಿ ಅಧ್ಯಾಪಕರ ಸಂಘ (ವಿಹಾಸ್) ಇವರ ಸಂಯುಕ್ತ ಆಶ್ರಯದಲ್ಲಿರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಭಾರತೀಯ ಭಾಷೆಗಳು ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವೆಬಿನಾರ್ ನಡೆಯಿತು. ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಪಿ. ಸುಬ್ರಮಣ್ಯ ಯಡಪಡಿತಾರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಭಾಗವಹಿಸಿರುವ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ವಿಭಾಗ, ಕರ್ನಾಟಕ ಸರಕಾರಇದರ ವಿಶೇಷ ಅಧಿಕಾರಿಗಳಾಗಿರುವ ಪ್ರೊ. ಎ. ನಾರಾಯಣ ಪ್ರಸಾದ್‌ರವರು ವರ್ತಮಾನದಲ್ಲಿ ಶಿಕ್ಷಣದಲ್ಲಿ ಬದಲಾವಣೆ ಮತ್ತುಆನ್‌ಲೈನ್ ಶಿಕ್ಷಣದ ಮಹತ್ವವನ್ನು ತಿಳಿಸಿದರು. ಕೇಂದ್ರೀಯ ಆದಿವಾಸಿ ವಿಶ್ವವಿದ್ಯಾಲಯ, ಆಂದ್ರಪ್ರದೇಶಇದರ ಕುಲಪತಿಗಳಾಗಿರುವ ಪ್ರೊ. ಟಿ. ವಿ. ಕಟ್ಟಿಮನಿ ಅವರು ವೆಬಿನಾರ್‌ನಲ್ಲಿ ಮಾತನಾಡಿ ಮಾತೃ ಭಾಷೆ ಮತ್ತು ಭಾರತೀಯ ಭಾಷೆಗಳ ಮಹತ್ವ ವರ್ತಮಾನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಜನ ಹಾಗೂ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಉದ್ದೇಶವನ್ನು ಸವಿಸ್ತಾರವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.6ರ ಭಾನುವಾರ 216 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 43, ಉಡುಪಿ ತಾಲೂಕಿನ 137 ಹಾಗೂ ಕಾರ್ಕಳ ತಾಲೂಕಿನ 31 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಈತನಕ ಜಿಲ್ಲೆಯಲ್ಲಿ ಒಟ್ಟು 112 ಮಂದಿ ಮೃತಪಟಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 120 ಸಿಂಥಮೇಟಿವ್ ಹಾಗೂ 69 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 74, ILI 84, ಸಾರಿ 11 ಪ್ರಕರಣವಿದ್ದು, 40 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 7 ಮಂದಿ ಹೊರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 106 ಮಂದಿ ಆಸ್ಪತ್ರೆಯಿಂದ ಹಾಗೂ 164 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 629 ನೆಗೆಟಿವ್: ಈ ತನಕ ಒಟ್ಟು 77829 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 64752 ನೆಗೆಟಿವ್, 12727 ಪಾಸಿಟಿವ್ ಬಂದಿದ್ದು, 350 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಕ್ಕಿಗದ್ದೆ ತಗ್ಗರ್ಸೆ ರಿ. ಉತ್ಸವ ಸಮಿತಿ 2020 ಇದರ ಅಧ್ಯಕ್ಷರಾಗಿ ಮಂಜುನಾಥ ಚಂದನ್, ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ಕುರಿತಂತೆ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಅಪಪ್ರಚಾರಗಳಿಗೆ ಸಾರ್ವಜನಿಕರು ಕಿವಿಗೊಡದೇ, ಜ್ವರ, ಶೀತ, ಕೆಮ್ಮು ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳಬೇಕು, ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್-19 ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುವ ಸುದ್ದಿಗಳನ್ನು ನಂಬಿ, ಸಾರ್ವಜನಿಕರು ರೋಗ ಲಕ್ಷಣಗಳಿದ್ದರೂ ಕೋವಿಡ್ ಪರೀಕ್ಷೆಗೆ ಒಳಪಡುತ್ತಿಲ್ಲ, ಮನೆಯಲ್ಲಿಯೇ ಮನೆ ಮದ್ದು ಮತ್ತು ಇತರೆ ಮಾತ್ರೆಗಳನ್ನು ಪಡೆಯುತ್ತಿದ್ದು, ಇದರಿಂದ ಯಾವುದೇ ರೋಗ ಲಕ್ಷಣಗಳಿಲ್ಲದವರೂ ಮತ್ತು ರೋಗ ಲಕ್ಷಣಗಳಿರುವವರನ್ನು ಪತ್ತೆ ಹಚ್ಚಲು ಕಷ್ಟಕರವಾಗಿದ್ದು, ಇವರಿಂದ ಇತರರಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗ ಹರಡುತ್ತಿದ್ದು, ಇದರಿಂದ ಜಿಲ್ಲೆಯ ಹಿರಿಯ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವಿಷಾದ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಇದುವರೆಗೆ 12149 ಮಂದಿ ಕೋವಿಡ್ ಸೋಂಕಿತರಾಗಿದ್ದು , 105 ಮಂದಿ ಮರಣಹೊಂದಿದ್ದು, 55 ರಿದ 64 ವಯೋಮಿತಿಯ 1315 ಸೋಂಕಿತರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಮೀನುಗಾರಿಕೆ ಇಲಾಖೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗಂಗೊಳ್ಳಿ, ಮರವಂತೆ ಹಾಗೂ ಕೊಡೇರಿ ಮೀನುಗಾರಿಕಾ ಬಂದರಿಗೆ ಶನಿವಾರ ಭೇಟಿ ನೀಡಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕುಸಿದು ಬಿದ್ದ ಜೆಟ್ಟಿಯನ್ನು ಮತ್ತು ಬ್ರೇಕ್ ವಾಟರ್ ತಡೆಗೋಡೆಯನ್ನು ಪರಿಶೀಲಿಸಿದ ಸಚಿವರು, ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸ್ಥಳೀಯ ಮೀನುಗಾರ ಮುಖಂಡರ ಸಲಹೆ, ಸೂಚನೆ, ಅಭಿಪ್ರಾಯವನ್ನು ಆಲಿಸಿದರು. 102 ಕೋಟಿ ರೂ. ವೆಚ್ಚದ ಬ್ರೇಕ್ ವಾಟರ್‌ನ ತಡೆಗೋಡೆ ಕುಸಿಯುತ್ತಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದಷ್ಟು ಶೀಘ್ರ ತಡೆಗೋಡೆ ದುರಸ್ಥಿಗೆ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾತನಾಡಿದ ಅವರು, ಕುಸಿದು ಬಿದ್ದ ಜೆಟ್ಟಿ ಪುನರ್ ನಿರ್ಮಾಣಕ್ಕಾಗಿ ರಾಜ್ಯ ಸರಕಾರ 12 ಕೋಟಿ ರೂ. ಬಿಡುಗಡೆಗೆ ಸಚಿವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಭಾರತದಖ್ಯಾತ ಐಟಿ ಕಂಪನಿ ಟಿಸಿಎಸ್ ಐಯಾನ್‌ಜತೆಗೆ ಶೈಕ್ಷಣಿಕಒಪ್ಪಂದವನ್ನು ಮಾಡಿಕೊಂಡಿದೆ. ಟಿಸಿಎಸ್ ಐಯಾನ್, ಟಾಟಾಕನ್ಸಲ್ಟನ್ಸಿ ಸರ್ವೀಸಸ್‌ನ ಭಾಗವಾಗಿದೆ. ಸಲಹಾ ಮತ್ತು ವ್ಯವಹಾರ ಪರಿಹಾರದಲ್ಲಿ ಕುಶಲತೆಯನ್ನು ಹೊಂದಿರುವ ಈ ಸಂಸ್ಥೆಯೊಂದಿಗಿನ ಒಪ್ಪಂದವು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ನವಯುಗದಉದ್ಯಮ ಹೊಂದಾಣಿಕೆಯಕೌಶಲ್ಯ ಹಾಗೂ ಉದ್ಯಮ ಪ್ರವೃತ್ತಿಯ ಇಂಟರ್ನಶಿಫ್ ಅವಕಾಶವನ್ನು ಟಿಸಿಎಸ್ ಐಯಾನ್‌ನ ಐಎಚ್‌ಸಿ(ಇಂಡಸ್ಟ್ರಿ ಆನರ್ ಸರ್ಟಿಫಿಕೇಶನ್) ಮತ್ತುಆರ್‌ಐಒ (ರಿಮೋಟ್ ಇಂಟರ್ನ್‌ಶಿಪ್ ಅಪಾರ್ಚುನಿಟಿಸ್ ) ಮೂಲಕ ಒದಗಿಸಿ ಕೊಡುತ್ತದೆ. ಕರ್ನಾಟಕದ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಟಿಸಿಎಸ್ ಐಯಾನ್‌ನ ಒಡಂಬಡಿಕೆಗೆ ಒಳಪಡುತ್ತಿರುವ ಮೊದಲ ಕಾಲೇಜು ಎಂಬ ಹೆಮ್ಮೆಗೆ ಪಾತ್ರವಾಗುತ್ತಿದೆ. ಈ ಕೋರ್ಸುಗಳು ಆಳ್ವಾಸ್ ವಿದ್ಯಾರ್ಥಿ ಸಮೂಹಕ್ಕೆ ಔದ್ಯೋಗಿಕ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯ ಹಾಗೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗಬಲ್ಲ ಕ್ಷೇತ್ರಗಳಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ರೊಬೋಟಿಕ್ಸ್, ಕ್ಲೌಡ್ ಕಂಪ್ಯುಟಿಂಗ್, ಡಾಟಾ ಮೈನಿಂಗ್, ಅನಾಲಿಟಿಕ್ಸ್, ಐಒಟಿ ಮತ್ತು ಸೈಬರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ದೀಪ ಬೆಳಗಿಸಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ರವರು ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಭೋದಕ ಹಾಗೂ ಭೋದಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.
