ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ 2020-21ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಬಿದ್ಕಲ್‌ಕಟ್ಟೆಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ, ಯೋಜನೆಯ ಉದ್ದೇಶ ಪ್ರಯೋಜನದ ಕುರಿತು ಹಾಗೂ ದೇಶದ ಭವಿಷ್ಯಕ್ಕೆ ಪರಿಶುದ್ಧ ಮತ್ತು ಕಡ್ಡಾಯ ಮತದಾನ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಘಟನೆಯ ಪ್ರವೃತ್ತಿ ರೂಡಿಸಿಕೊಳ್ಳಬೇಕು. ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯೋಜನಾಧಿಕಾರಿ ಸಂದೀಪ ಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ನುಡಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಕಾರ್ಯದರ್ಶಿ ಮೊಹಮ್ಮದ ಅಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ವಿದ್ಯಾರ್ಥಿನಿ ಕಾವ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಮಿತಾ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್‌ಸಿಸಿ ಆರ್ಮಿ ವಿಂಗ್‌ನ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ, ವಿದ್ಯಾರ್ಥಿ ಸಮುದಾಯದಲ್ಲಿ ಶಿಸ್ತು ಕೇಂದ್ರಿತ ನಾಗರಿಕ ಪ್ರಜ್ಞೆಯನ್ನು ಪಡಿಮೂಡಿಸಿ ತನ್ಮೂಲಕ ಏಕತೆಯ ಭಾರತವನ್ನು ಕಟ್ಟುವಲ್ಲಿ ಎನ್.ಸಿ.ಸಿ. ನಿರ್ಣಾಯಕ ಪಾತ್ರ ವಹಿಸಿದ್ದು, ಕಾಲೇಜಿಗೆ ಎನ್‌ಸಿಸಿ ಆರ್ಮಿ ವಿಂಗ್‌ನ ಪ್ರವೇಶ ನಮ್ಮ ಶಿಸ್ತು ಕೇಂದ್ರಿತ ಶಿಕ್ಷಣದ ಪರಿಕಲ್ಪನೆಯನ್ನು ಪುಷ್ಠೀಕರಿಸಿದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಈ ಸಂದರ್ಭ ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಗಣಪತಿ ಖಾರ್ವಿ ಬಸ್ರೂರು ಮತ್ತು ಉಡುಪಿ ಜಿಲ್ಲಾ ಅತ್ಯುತ್ತಮ ರೆಡ್‌ಕ್ರಾಸ್ ಅಧಿಕಾರಿ ಗೌರವಕ್ಕೆ ಪಾತ್ರರಾದ ವಾಣಿಜ್ಯ ಉಪನ್ಯಾಸಕರಾದ ಶಿವರಾಜ್ ಸಿ. ನಾವುಂದ ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿ ಕೆ ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಕೃತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಇಲ್ಲಿನ ಜಟ್ಟಿಗೇಶ್ವರ ಗ್ರೂಪ್, ಸ್ನೇಹಾ ಮಹಿಳಾ ಮಂಡಲ, ಸಂಗಮ ಯುವಕ ಮಂಡಲ, ಆಸರೆ ಟ್ರಸ್ಟ್, ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ 72ನೇ ಗಣರಾಜ್ಯೋತ್ಸವವನ್ನು ಮರವಂತೆಯ ಕಡಲತೀರದಲ್ಲಿ ಸ್ವಚ್ಛತೋತ್ಸವವಾಗಿ ಆಚರಿಸಲಾಯಿತು. ಎಲ್ಲ ದಿನಗಳಲ್ಲಿ ಪ್ರವಾಸಿಗಳು ಹೆಚ್ಚು ಸಂಖ್ಯೆಯಲ್ಲಿ ವಿಹರಿಸುವ ಮಾರಸ್ವಾಮಿ ಕಡಲತೀರದಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿರುವುದರಿಂದ ಸಂಘಟನೆಗಳ ಸ್ವಯಂಸೇವಕರು ಈ ಸ್ಥಳವನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಹರಡಿಕೊಂಡಿದ್ದ ಬಾಟಲಿ, ಪ್ಲಾಸ್ಟಿಕ್ ಚೀಲ ಮತ್ತಿತರ ತ್ಯಾಜ್ಯವನ್ನು ಒಟ್ಟುಗೂಡಿಸಿದರು. ಆ ಬಳಿಕ ಅದನ್ನು ಗ್ರಾಮ ಪಂಚಾಯಿತಿಯ ಸ್ವಚ್ಛ ವಾಹಿನಿ ವಾಹನದಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಕೇಂದ್ರಕ್ಕೆ ಸಾಗಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ ಮಡಿವಾಳ, ಮಾಜಿ ಅಧ್ಯಕ್ಷ ದಯಾನಂದ ಬಳೆಗಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರುಣಾಕರ ಆಚಾರ್ಯ, ಸಂಗಮ ಯುವಕ ಮಂಡಲದ ಅಧ್ಯಕ್ಷ ನಾಗರಾಜ ಪಟ್ಕಾರ್, ಸ್ನೇಹಾ ಮಹಿಳಾ ಮಂಡಲದ ಅಧ್ಯಕ್ಷೆ ಅನಿತಾ ಆರ್. ಕೆ, ಶೋಭಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಸಿ ಮೂವಿಸ್‌ರವರ ‘ದಿ ಸ್ಟ್ರೇಂಜ್ ಕೇಸ್ ಆಫ್ ಕುಂದಾಪುರ’ ಚಿತ್ರದ ಟ್ರೇಲರ್ ಗುರುವಾರ ಇಲ್ಲಿನ ಕುಂದೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ ನಮ್ಮೂರಿನ ಪ್ರತಿಭೆಗಳೆ ನಿರ್ಮಿಸಲಿರುವ ಚಲನಚಿತ್ರ ನಮ್ಮೂರಿನ ವೈಶಿಷ್ಟ್ಯತೆಯನ್ನು ತೋರಿಸಲಿದೆ. ಚಲನಚಿತ್ರದಲ್ಲಿ ಹಲವು ಸ್ಥಳೀಯ ಪ್ರತಿಭೆಗಳು ಬೆಳಕಿಗೆ ಬರಲಿದ್ದಾರೆ ಎಂದ ಅವರು ನಮ್ಮತನವನ್ನು ಉಳಿಸಿಕೊಳ್ಳಲು ಚಲನಚಿತ್ರ ಸ್ಥೂರ್ತಿಯಾಗುವಂತಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡದ ವಾಗ್ಮಿ ಮನು ಹಂದಾಡಿ, ಉದ್ಯಮಿ ಪ್ರವೀಣ್ ಕುಮಾರ್, ನಟ ರಾಹುಲ್ ಹೆಗ್ಡೆ, ಸಿನೆಮಾ ನಿರ್ದೇಶಕ, ನಟ ಓಂಗುರು ಬಸ್ರೂರು, ನಿರ್ಮಾಪಕ, ನಟ ಚಂದ್ರಶೇಖರ್ ಬಸ್ರೂರು, ಸಂಗೀತ ನಿರ್ದೇಶಕ ಉತ್ತಮ ಸಾರಂಗ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ವ್ಯಾಪ್ತಿಯ 45 ಗ್ರಾಮ ಪಂಚಾಯತ್ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ಕೋಟೇಶ್ವರದ ಯುವ ಮೆರಿಡಿಯನ್ ಹಾಲ್‌ನಲ್ಲಿ ನಡೆಯಿತು. ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಗಳ ನೂತನ ಸದಸ್ಯರು ಆಯ್ಕೆ ಪ್ರಕ್ರಿಯೆ ಸಂದರ್ಭ ಭಾಗವಹಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಎಸಿ ರಾಜು ತಹಶೀಲ್ದಾರ್ ಆನಂದಪ್ಪ, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಕೇಶವ ಶೆಟ್ಟಿಗಾರ್ ಹಾಗೂ ಜಿಲ್ಲಾ ತಂತ್ರಜ್ಞಾನ ಇಲಾಖೆಯ ತಾಂತ್ರಿಕ ನಿರ್ದೇಶಕ ಮಂಜುನಾಥ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕುಂದಾಪುರ ತಾಲೂಕಿನ 45 ಪಂಚಾಯತಿಗಳಿಗೆ ಆಯ್ಕೆಯಾದವರ ವಿವರ ಈ ಕೆಳಗಿನಂತಿದೆ. ಮೀಸಲಾತಿ ವಿವರ : ಆಲೂರು : ಅಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ . ಕೆರಾಡಿ : ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ- ಬ (ಮಹಿಳೆ) ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ಪದವಿ ಪತ್ರಿಕೋದ್ಯಮ ವಿಭಾಗದಿಂದ ನಡೆದ ಆಳ್ವಾಸ್ ಮುದಮ್-ಪಾಡ್‌ಕಾಸ್ಟ್‌ನ ಮೊದಲ ಸಂಚಿಕೆ ಬಿಡುಗಡೆಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಕೊಳ್ಳಬೇಕು. ಅದೇ ನಮ್ಮನ್ನು ಉತ್ತಮ ಬರಹಗಾರರಾಗಿ, ಸಂವಹನಕಾರರಾಗಿ ರೂಪುಗೊಳಿಸಬಲ್ಲದು. ಕಲಿಕೆ ಎಂಬುದು ನಿರಂತರ ಪಕ್ರಿಯೆ ಹೊಸ ಹೊಸ ಪ್ರಯತ್ನಗಳ ಮೂಲಕ ವಿಷಯಗಳನ್ನು ಕಲಿಯುತ್ತಿರಬೇಕು. ವಿದ್ಯಾರ್ಥಿಗಳು ಓದಿನ ಜೊತೆಗೆ ವಿಭಾಗದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಬೆಳವಣಿಗೆ ಸಾಧ್ಯವಾಗುತ್ತದೆ. ಕಾಲೇಜಿನ ಪತ್ರಿಕೋದ್ಯಮ ವಿಭಾಗವು ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿ ನೂತನ ಪ್ರಯೋಗಗಳಲ್ಲಿ ತೊಡಗಿಸಿಕೊಂಡು, ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಅದಕ್ಕಾಗಿ ವಿದ್ಯಾರ್ಥಿಗಳು ಈಗಲೇ ತಯಾರಾಗಿರಬೇಕು. ಕಾಲೇಜುಗಳಲ್ಲಿ ಕಲಿತ ಪ್ರಾಯೋಗಿಕ ಪಾಠಗಳು ಮುಂದೆ ವೃತ್ತಿಕ್ಷೇತ್ರಕ್ಕೆ ಸುಲಭವಾದ ದಾರಿಯನ್ನು ಮಾಡಿಕೊಡುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮನ್ನು ತಾವು ಪ್ರತಿಯೊಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರೈತರು ದುಡಿಮೆಯ ಮೂಲಕ ಆದಾಯ ಹೆಚ್ಚಿಸಿಕೊಂಡು, ಭವಿಷ್ಯಕ್ಕಾಗಿ ಉಳಿತಾಯ ಮಾಡಲು ಸಾಧ್ಯವಾಗುವಂತೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ಸೂಕ್ತ ಅವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ‘ರೈತರೆಡೆಗೆ ಸಹಕಾರಿ ನಡಿಗೆ’ ಎಂಬ ವಿನೂತನ ಅಭಿಯಾನ ಕೈಗೊಂಡಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಸಹಕಾರಿ ಸಂಘ, ರೈತಸಿರಿ ಹಾಗೂ ರೈತ ಸೇವಾ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಕೆರ್ಗಾಲು ಗ್ರಾಮದ ಚೆರುಮಕ್ಕಿಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಸಂಘದಿಂದ ರೈತರಿಗೆ ಒದಗಿಸುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ಮತ್ತು ಲಾಭದಾಯಕ ಕ್ರಮಗಳ ಅರಿವನ್ನು ವ್ಯಾಪ್ತಿಯ ಎಲ್ಲ ರೈತರಿಗೆ ತಲುಪಿಸುವುದು ‘ರೈತರೆಡೆಗೆ ಸಹಕಾರಿ ನಡಿಗೆ’ ಕಾರ್ಯಕ್ರಮದ ಉದ್ದೇಶ. ಕೃಷಿ ಇಂದು ವಿಜ್ಞಾನವಾಗಿ ಪರಿವರ್ತಿತವಾಗಿದೆ. ರೈತರು ಪರಿಣಿತರಿಂದ ವೈಜ್ಞಾನಿಕ ಮಾಹಿತಿ ಪಡೆದು, ಆಧುನಿಕ ವಿಧಾನ ಮತ್ತು ಯಂತ್ರೋಪಕರಣ ಬಳಸಿ ಕೃಷಿಯಿಂದ ಲಾಭ ಗಳಿಸಬೇಕು. ಪ್ರತಿ ಗ್ರಾಮದಲ್ಲಿ ರೈತ ಸಂಘಟನೆ ಇರಬೇಕು. ರೈತರು ತಮ್ಮ ಬೆಳೆಗೆ ಸೂಕ್ತ ಮಾರುಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಕ್ಲಾಡಿ ಭಜನಾ ಮಂದಿರ ಯಕ್ಷ ಮಿತ್ರರು ಪ್ರತಿವರ್ಷ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶನಿವಾರ ಯಕ್ಷಗಾನ ಪ್ರದರ್ಶನ, ಭಜನೆ, ಧಾರ್ಮಿಕ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹಕ್ಲಾಡಿ ಭಜನಾ ಮಂದಿರ ವಠಾರದಲ್ಲಿಈ ಬಾರಿಯ ಕಾರ್ಯಕ್ರಮದ ಅಂಗವಾಗಿ ನಡೆದ ಆಜ್ರಿ ಜೋನನ ಮನೆ ಶನೇಶ್ವರ ಮೇಳದ ಯಕ್ಷಗಾನ ಪ್ರದರ್ಶನದಲ್ಲಿ ಹಕ್ಲಾಡಿ ಗ್ರಾಮಸ್ಥರ ಪರವಾಗಿ ಯಕ್ಷಮಿತ್ರರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಹಾಗೂ ಸ್ಥಳೀಯ ವೈದ್ಯ ಡಾ. ಸುಕೇಶ್ ಶೆಟ್ಟಿ ಹೊಳ್ಮಗೆ ಅವರನ್ನು ಸನ್ಮಾನಿಸಲಾಯಿತು. ಹಕ್ಲಾಡಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯಶಿಕ್ಷಕ ವಸಂತ್ ಹೆಗ್ಡೆ ಸನ್ಮಾನಿಸಿದರು. ಹೆಮ್ಮಾಡಿ ಪಂಚಗಂಗ ರೈತರ ಸೇವಾ ಸಹಕಾರಿ ಬ್ಯಾಂಕ್ನ ಜಗನ್ನಾಥ ಶೆಟ್ಟಿ, ಹಕ್ಲಾಡಿ ಸುರೇಂದ್ರ ಪೂಜಾರಿ ತೊಪ್ಲು, ಗಣೇಶ್ ಮೇಸ್ತ್ರಿ , ಅರ್ಚಕ ರಾಜು, ವಸಂತ, ಸತೀಶ್, ಶರತ್, ಉಮೇಶ್, ನಾಗರಾಜ ಡಿ, ಗಣೇಶ್, ಹರೀಶ್, ರತ್ನಾಕರ, ಗಣಪತಿ, ಚಂದ್ರ ಪೂಜಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಪರಿಶಿಷ್ಟ ಗೆಳೆಯರು(ಕೊರಗ), ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ದಕ್ಷಣ ಕನ್ನಡ ಜಿಲ್ಲೆ, ಕೆಳಪೇಟೆ ಶಿರೂರು, ಬೈಂದೂರು ತಾಲೂಕು ಮಹಾತ್ಮ ಜ್ಯೋತಿ ಬಾಪುಲೆ ಕೊರಗರ ಯುವ ಕಲಾ ವೇದಿಕೆ ಯೋಜನ ನಗರ ಬೈಂದೂರು ಇವರ ಸಹಕಾರದೊಂದಿಗೆ ರಾಜ್ಯ ಮಟ್ಟದ ಕೊರಗರ ಕ್ರೀಡಾಕೂಟ ಒಟ್ಟಾಮ್ ಬಲ್ಲಾ(ಒಂದಾಗೋಣ ಬನ್ನಿ) 2021 ಸಮಾರೋಪ ಸಮಾರಂಭ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾಬು ಶೆಟ್ಟಿ, ಕೊರಗರು ಅತ್ಯಂತ ಹಿಂದುಳಿದ ಪಂಗಡದವರಾಗಿದ್ದಾರೆ. ನಾವು ಬಾಲ್ಯದಿಂದಲೇ ಈ ಪಂಗಡವನ್ನು ಅತೀ ಹತ್ತಿರದಿಂದ ನೋಡಿದ್ದೇವೆ ಇವರಿಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ನಾವು ಅವರ ಅಭಿವೃದ್ಧಿ ಕೆಲಸವನ್ನು ಮಾಡುತ್ತೇವೆ ಮತ್ತು ಬಹಳ ಅಚ್ಚುಕಟ್ಟಾಗಿ ಈ ಕ್ರೀಡಾಕೂಟವನ್ನು ಆಯೋಜಿಸಿದ್ದಾರೆ. ಈ ಆಯೋಜನೆಯು ಬೇರೆ ಬೇರೆ ಸಮುದಾಯದವರಿಗೂ ಕೂಡ ಮಾದರಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಕೆ. ಶ್ರೀಕಾಂತ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಅವರು ಕಾರವಾರದ ಎಸಿಬಿಯಲ್ಲಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸಿದ್ದು ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದರು. ಮೂಲತಃ ಕಾರ್ಕಳದವರಾದ ಶ್ರೀಕಾಂತ್ ಅವರು, ಪೊಲೀಸ್ ಸೇವೆಗೆ ಬರುವ ಮೊದಲು ಹಾಸನದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. 1998ರಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಆರಂಭಿಸಿದ ಅವರು ಮೊದಲಿಗೆ ಮೈಸೂರಿನ ಕೆ.ಆರ್ ನಗರದಲ್ಲಿ ಪ್ರೊಬೆಷನರಿಯಾಗಿದ್ದು ಬಳಿಕ ಸೋಮವಾರಪೇಟೆ, ಹೊಳೆನರಸಿಪುರದಲ್ಲಿ ಪಿಎಸ್ಐ ಆಗಿ ಅಲ್ಲಿಂದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿ ಮಂಗಳೂರಿನ ಮೆಸ್ಕಾಂ ವಿಜಿಲೆನ್ಸ್, ಸಕಲೇಶಪುರ,ಪುತ್ತೂರು, ಕಾರವಾರದ ಕುಮಟಾ, ಉಡುಪಿ ನಗರ ಹಾಗೂ ಬ್ರಹ್ಮಾವರದಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದು ಅಲ್ಲಿಂದ ಡಿವೈಎಸ್ಪಿ ಆಗಿ ಪದೋನ್ನತಿ ಹೊಂದಿ ಕಾರವಾರ ಎಸಿಬಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅಪರಾಧ ವಿಭಾಗದಲ್ಲಿ ಉತ್ತಮ ಪರಿಣಿತಿ ಹೊಂದಿರುವ ಶ್ರೀಕಾಂತ್ ಅವರಿಗೆ ಬ್ಯಾಂಕೊಂದರ ಡಕಾಯಿತಿ ಪ್ರಕರಣ ಪತ್ತೆಹಚ್ಚಿದ್ದ ಹಿನ್ನೆಲೆ 2012ರಲ್ಲಿ ಮುಖ್ಯಮಂತ್ರಿ ಚಿನ್ನದ…
