ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಮೃತೇಶ್ವರಿ ಎಜುಕೇಶನಲ್ ಟ್ರಸ್ಟಿನ ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಆಯೋಜಿಸಲಾದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಿಬಿರವನ್ನು ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದು. ಈ ಶಿಬಿರದ ಮುಖೇನ ನೂರಾರು ಸಾರ್ವಜನಿಕರಿಗೆ ಉಚಿತ ಆರೋಗ್ಯ ಪರೀಕ್ಷೆ ಮತ್ತು ವ್ಯಾದಿಕ್ಷಮತ್ವವನ್ನು ಹೆಚ್ಚಿಸುವ ಔಷಧಿಯನ್ನು ವಿತರಿಸಲಾಯಿತು. ಈ ಸುಸಂದರ್ಭದ ಸದುಪಯೋಗವನ್ನು ಕುಂದಾಪುರ, ಕೋಟೇಶ್ವರದ ಸುತ್ತಮುತ್ತ ಅನೇಕ ಹಳ್ಳಿಗಳ ಸಾರ್ವಜನಿಕರು ಈ ಶಿಬಿರದ ಉಪಯೋಗವನ್ನು ಪಡೆದುಕೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಹತ್ತು ಹಲವಾರು ಉಚಿತ ಆರೋಗ್ಯ ಶಿಬಿರವನ್ನು ಸುತ್ತಮುತ್ತಲಿನ ಹಳ್ಳಿಗಳಲ್ಲಿ ನಿರ್ವಹಿಸಲು ಉದ್ದೇಶಿಸಲಾಗಿದೆ, ಈ ಶಿಬಿರದಲ್ಲಿ ಒಟ್ಟು 350 ಜನ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕೊಂಕಣಿ ಖಾರ್ವಿ ಭವನದಲ್ಲಿ ಗಂಗೊಳ್ಳಿಯ ನಿನಾದ ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ’ಸಾಕೇತ’ ವೈದ್ಯಕೀಯ ಪ್ರಯೋಗಾಲಯ ಹಾಗೂ ತಪಾಸಣಾ ಕೇಂದ್ರ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಮಣಿಪಾಲ ಕೆಎಂಸಿ ಆಸ್ಪತ್ರೆಯ ನೆಫ್ರೋಲಾಜಿ ವಿಭಾಗದ ಮುಖ್ಯಸ್ಥ, ಪ್ರಾಧ್ಯಾಪಕ ಡಾ. ರವೀಂದ್ರ ಪ್ರಭು, ಜನರು ಆರೋಗ್ಯ ರಕ್ಷಣೆ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ. ಗ್ರಾಮೀಣ ಭಾಗದ ಜನರು ಆರೋಗ್ಯ ತಪಾಸಣೆಗಾಗಿ ಪಟ್ಟಣ ಪ್ರದೇಶಗಳಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ಗ್ರಾಮೀಣ ಪ್ರದೇಶದ ಜನರು ಆರೋಗ್ಯ ತಪಾಸಣೆಗಾಗಿ ಪಟ್ಟಣ ಪ್ರದೇಶಗಳಿಗೆ ಅಲೆದಾಡುವುದನ್ನು ತಪ್ಪಿಸಲು ತ್ರಾಸಿಯ ಹೃದಯ ಭಾಗದಲ್ಲಿ ವಿಶಿಷ್ಟ ವೈದ್ಯಕೀಯ ಸೌಲಭ್ಯಗಳನ್ನೊಳಗೊಂಡ ’ಸಾಕೇತ’ ವೈದ್ಯಕೀಯ ಪ್ರಯೋಗಾಲಯ ಪ್ರಾರಂಭಿಸಿರುವುದು ಶ್ಲಾಘನೀಯ ಎಂದು ಹೇಳಿದರು. ಮಂಗಳೂರು ಹಾಂಗ್ಯೋ ಐಸ್‌ಕ್ರೀಮ್ ಪ್ರೈ. ಲಿ. ಆಡಳಿತ ನಿರ್ದೇಶಕ ಪ್ರದೀಪ ಜಿ. ಪೈ ಮಾತನಾಡಿ, ನಾಲ್ಕು ವರ್ಷಗಳ ಹಿಂದೆ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನವು ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಿದ ದ್ವಿತೀಯ ಅಂತರರಾಷ್ಟ್ರೀಯ ಆನ್‌ಲೈನ್ ಯೋಗಾಸನ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ನಾವುಂದ ಗ್ರಾಮದ ಅರೆಹೊಳೆಯ ನಿರೀಕ್ಷಾ ಪ್ರಥಮ ಸ್ಥಾನ ಪಡೆದಿರುವಳು. ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೆ ತರಗತಿ ವಿದ್ಯಾರ್ಥಿನಿಯಾಗಿರುವ ಅವಳು ಅಲ್ಲಿನ ಬಾಬು ಪೂಜಾರಿ – ಜಯಲಕ್ಷ್ಮೀ ದಂಪತಿಯ ಪುತ್ರಿ. ಪರಿಣತ ಯೋಗಗುರು ಸುಬ್ಬಯ್ಯ ದೇವಾಡಿಗ ಅವರಿಂದ ತರಬೇತಿ ಪಡೆದಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಅ.28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಮತ್ತು ಅ.29 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷತೆ ತೋರಿದ್ದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ : ಉಡುಪಿಯ ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಎಸ್.ಎಸ್.ಎಲ್.ಸಿ ಪಾಸಾಗಿರುವ ಅಭ್ಯರ್ಥಿಗಳಿಂದ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820 – 2950101, 9880510585 ಸಂಪರ್ಕಿಸುವಂತೆ ಕೇಂದ್ರದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮುಕ್ತ ಪ್ರಕಟಣಾ ಮಾಲೆ ಹೆಸರಿನಲ್ಲಿ ಅಪ್ರಕಟಿತ ಕೃತಿಗಳನ್ನು ಪ್ರಕಟಣೆಗಾಗಿ ಆಹ್ವಾನಿಸಲಾಗಿದೆ. ಆಸಕ್ತ ಲೇಖಕರು ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಆತ್ಮಕತೆ, ನಿಘಂಟು, ಈವರೆಗೆ ಬಾರದೇ ಇರುವ ಜ್ಞಾನ ಶಾಖೆಯ ಬಗ್ಗೆ ಪ್ರಕಟವಾಗಬಹುದಾದ ಜ್ಞಾನನಿಧಿ ಎನಿಸಬಹುದಾದ ಶಾಸ್ತ್ರ ಜ್ಞಾನ ಹೆಚ್ಚಿಸುವ ವಿಶೇಷ ಕೃತಿಗಳು ಪ್ರಕಟಣೆಗೆ ಸಿದ್ಧವಿದ್ದಲ್ಲಿ ಕೃತಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org/ ಸಂಪರ್ಕಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್ ‘ಸಿ ಮತ್ತು ಡಿ’ ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆನ್‍ಲೈನ್ ಸ್ಫರ್ದಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿhttps://ssckkr.kar.nic.in/ , https://ssc.nic.in/ ಅಥವಾ ಸಹಾಯವಾಣಿ 080 – 25502520, 9483862020 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲ ಕುಂದರ್, ಮಹಿಳೆಯರು ಮತ್ತು ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ಸ್ವ – ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳನ್ನಾಗಿಸಬೇಕು ಎಂದು ಹೇಳಿದರು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು, ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಾಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳು ಪ್ರತಿಶತ 100 ರಷ್ಟು ಅನುಷ್ಠಾನವಾಗಬೇಕು ಎಂದು ತಿಳಿಸಿದರು. ದೌಜನ್ಯಕ್ಕೆ ಒಳಗಾದ ಮಹಿಳೆ ಮತ್ತು ಮಕ್ಕಳು ತಮಗಾದ ಅನ್ಯಾಯದ ಬಗ್ಗೆ ದೂರು ಯಾವ ಪ್ರಾಧಿಕಾರಕ್ಕೆ ನೀಡಬೇಕೆಂಬ ಅರಿವನ್ನು ಮೂಡಿಸಬೇಕು, ಅವರಿಗೆ ಸಾಂತ್ವನ ಹೇಳುವುದರ ಜೊತೆಗೆ ಧೈರ್ಯ ತುಂಬಿ ಕಾನೂನಿನ ನೆರವನ್ನು ಒದಗಿಸಬೇಕೆಂದು ಸಹ ಹೆಳಿದರು. ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆಯಲು ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಅಂತರಿಕ ದೂರು ಸಮಿತಿಗಳನ್ನು ರಚಿಸಬೇಕು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ದೀಪ ಪ್ರಜ್ವಲಿಸಿ, ಶಾರದೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಸಂಸ್ಕೃತ ವಿಭಾಗದ ಪ್ರಾಧ್ಯಾಪಕಿ ಸುದಕ್ಷಿಣಾ ಎ. ಎಸ್. ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಕಾರಂತ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್ ಚಂದ್ರ ಅವರು ಭೇಟಿ ನೀಡಿದರು. ಭೇಟಿ ನೀಡಿ ಮಾತನಾಡಿದ ಪೋಲಿಸ್ ಅಧೀಕ್ಷಕ ಕುಮಾರ್ ಚಂದ, ಕಾರಂತರು ಯುವ ಜನಾಂಗಕ್ಕೆ ಮಾದರಿಯಾಗಿ ಬದುಕಿ ತೋರಿಸಿದ ಮಹಾ ಚೇತನ, ಅವರ ಬದುಕಿನ ಪುಟ ಮೇಲುಕು ಹಾಕಲು, ಅವರ ಬದುಕು – ಬರಹ ಮುಂದಿನ ಜನಾಂಗಕ್ಕೆ ಪರಿಚಯಿಸಲು ಕೋಟದ ಕಾರಂತ ಥೀಮ್ ಪಾರ್ಕ್ ಸಹಕಾರಿ ಎಂದು ಅವರು ಹೇಳಿದರು. ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಈ ಸ್ಥಳ ಒಂದು ಸುಂದರ ವೇದಿಕೆ ಎಂದರು. ಅವರು ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ , ಆರ್ಟ್ ಗ್ಯಾಲರಿ, ಸಭಾಭವನ, ಗ್ರಂಥಾಲಯ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಪಿ. ಡಿ. ಓ ಶೈಲಾ ಎಸ್ ಪೂಜಾರಿ, ಗ್ರಂಥಾಲಯ ಮೇಲ್ವಿಚಾರಕಿ ಶೈಲಜ ಕೆ. ಎನ್ ಪ್ರವಾಸಿ ಮಿತ್ರ ಸುರೇಶ್ , ಥೀಮ್ ಪಾರ್ಕ್ ಸಿಬ್ಬಂದಿ ಸುಜಾತ ಅವರು ಉಪಸ್ಥಿತರಿದ್ದರು.…
