ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಪಂಚವರ್ಣ ಯುವಕ ಮಂಡಲದ ವತಿಯಿಂದ ಪ್ರತಿವರ್ಷ ನವೆಂಬರ್ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕೊಡಮಾಡುವ ಪ್ರತಿಷ್ಠಿತ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರ ಈ ಬಾರಿ ಯಕ್ಷಗಾನ ಕ್ಷೇತ್ರದಲ್ಲಿ ಅಗಾಧ ಸಾಧನೆಗೈದ ಹಿರಿಯ ಯಕ್ಷಗುರು, ವಿಶ್ವವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳ ಯಜಮಾನ ಎಚ್. ಶ್ರೀಧರ ಹಂದೆ ಅವರನ್ನು ಆಯ್ಕೆಗೊಳಿಸಲಾಗಿದೆ. ಕೋಟದ ವರುಣ ತೀರ್ಥಕೆರೆ ಸಮೀಪ ಅಮೃತೇಶ್ವರಿ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯುವ ಕಾರ್ಯಕ್ರಮ ಈ ಬಾರಿ ಕೋವಿಡ್ ದಿಸೆಯಲ್ಲಿ ಕೋಟದ ವಾಸುದೇವ ಮಂಟಪದಲ್ಲಿ ಕೋವಿಡ್ ನಿಯಮದಂತೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಇದೇ ಬರುವ ನ.5ರ ಸಂಜೆ5.3೦ಕ್ಕೆ ಪುರಸ್ಕಾರ ಸಮಾರಂಭ ನಡೆಯಲಿದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನ ಮಾಡಲಿದ್ದಾರೆ. ಕುಂದಾಪುರ ತಾಲೂಕಿನ ಕ್ರೀಯಾಶೀಲ ಯುವಕ ಮಂಡಲ ಗೋಪಾಡಿ ಇವರಿಗೆ ಪಂಚವರ್ಣ ವಿಶೇಷ ಪುರಸ್ಕಾರ, ಉಡುಪಿಯ ಸಮಾಜಿಕ ಕಾರ್ಯಕರ್ತ ನಿತ್ಯಾನಂದ ವಳಕಾಡು ಇವರಿಗೆ ವಿಶೇಷ ಅಭಿನಂದನೆ, ಕೋಟದ ಕದ್ರಿಕಟ್ಟು ಯುವ ಕೃಷಿಕ ಶೀಲರಾಜ ಕಾಂಚನ್ ಇವರಿಗೆ ಯುವ ಕೃಷಿಕ ಗೌರವ, ಖೇಲೋ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ ಸರಕಾರದ ನೆಹರು ಯುವ ಕೇಂದ್ರ, ಯುವಕ – ಯುವತಿ ಮಂಡಳಿಗಳಿಗೆ 2019 -20ರ ಸಾಲಿನ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್10 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ, ರಜತಾದ್ರಿ ಮಣಿಪಾಲ, ಉಡುಪಿ ದೂ -0820-2574992 ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿದ ಪೌಷ್ಠಿಕ ಪುನ:ಶ್ಚೇತನ ಶಿಬಿರ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಅವೈಜ್ಞಾನಿಕ ಆಹಾರ ಪದ್ಧತಿಯಿಂದ ಹಾಗೂ ಜಂಕ್ ಫುಡ್ಗಳಿಂದ ಗರ್ಭಿಣಿಯರು ಹಾಗೂ ಮಕ್ಕಳಲ್ಲಿ ಅಪೌಷ್ಠಿಕತೆ ಕಾಡುತ್ತಿದೆ. ಕುಂದಾಪುರ ತಾಲೂಕಿನಲ್ಲಿ ಸುಮಾರು 300ಕ್ಕೂ ಮಿಕ್ಕಿ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದು, ಇಂತಹ ಮಕ್ಕಳಿಗೆ ಸರಕಾರ ಪೌಷ್ಠಿಕ ಆಹಾರ ನೀಡಿ ಅವರಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಾರ್ಯ ಮಾಡುತ್ತಿದೆ. ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೂಡ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಗವಂತ ವಿಶ್ವರೂಪಿ, ಭಕ್ತಿ ಹಾಗೂ ಪ್ರೀತಿಯಿಂದ ಮಾತ್ರ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ. ತಾಯಿ ಕಾಳಿಯೊಡನೆ ಭಕ್ತಿಯ ಭಾವನಾತ್ಮಕ ಸಂಬಂಧಗಳನ್ನು ಹೊಂದುವ ಪ್ರತಿಯೊಬ್ಬ ಭಕ್ತರಿಗೂ ಆಕೆಯ ಮಾತೆಯ ವಾತ್ಸಲ್ಯ ದೊರೆತು ಅವರಿಗೆ ಪ್ರಸನ್ನತೆ ದೊರಕುತ್ತದೆ ಎಂದು ಪ್ರಸಿದ್ಧ ಅಧ್ಯಾತ್ಮಿಕ ಚಿಂತಕ ಕಾಳಿಚರಣ್ ಮಹಾರಾಜ್ ಹೇಳಿದರು. ಇಲ್ಲಿಗೆ ಸಮೀಪದ ಆನಗಳ್ಳಿಯ ದತ್ತಾಶ್ರಮಕ್ಕೆ ಮಂಗಳವಾರ ಸಂಜೆ ಆಗಮಿಸಿದ ಅವರು ಕ್ಷೇತ್ರದ ದಕ್ಷಿಣ ಭದ್ರಕಾಳಿ ಹಾಗೂ ಮೂಕಾಂಬಿಕೆ, ಆದಿಶಕ್ತಿ ಸನ್ನಿಧಿಗೆ ಭೇಟಿ ನೀಡಿ ಭಕ್ತಿ ಸುಧೆಯನ್ನು ಅರ್ಪಿಸಿ ಮಾತನಾಡಿದರು. ಭಾರತದಲ್ಲಿನ ಜಾತಿ ವಾದಗಳೇ ಅಖಂಡ ಹಿಂದೂ ಸಮಾಜವನ್ನು ಒಡೆಯುತ್ತಿದೆ. ತಾಯಿ ಭಾರತೀಯ ಮಡಿಲಲ್ಲಿ ಇರುವ ಸಮಸ್ತ ಹಿಂದೂಗಳು ಜಾತಿ–ವಿಜಾತಿಯನ್ನು ಮರೆತು ಒಂದೇ ಧರ್ಮದ ನೆಲೆಯಲ್ಲಿ ಒಗ್ಗೂಡಿದಾಗ ಮಾತ್ರ ಭಾರತದ ಗತ ಸಾಮಾ್ರಜ್ಯ ಹಾಗೂ ಸುವರ್ಣ ದಿನಗಳ ಇತಿಹಾಸ ಮರುಕಳಿಸಲು ಸಾಧ್ಯ. ದೇವರು ಹಾಗೂ ಭಕ್ತರ ನಡುವೇ ಯಾವುದೆ ಅಡೆ–ತಡೆಗಳು ಇಲ್ಲ. ಕೇವಲ ಭಕ್ತಿಯ ಮಾರ್ಗ ಒಂದರಿಂದಲೆ ಇಬ್ಬರನ್ನು ಒಗ್ಗೂಡಿಸುತ್ತದೆ. ಭಕ್ತಿಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಕೂರಾಡಿಯ ಅಪ್ಪ ಅಮ್ಮ ಅನಾಥಾಲಯಕ್ಕೆ 26000 ರೂ ಮೌಲ್ಯದ ಟಿವಿ ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಕಾರ್ಯದರ್ಶಿ ರಾಜೇಂದ್ರ, ಮಾಜಿ ಅಧ್ಯಕ್ಷ ರಾಜೀವ ಕೋಟ್ಯಾನ್, ಕೋಶಾಧಿಕಾರಿ ಕಿರಣ್ ಕುಮಾರ್, ಮಾಜಿ ಅಧ್ಯಕ್ಷ ರಮಾನಂದ ಇಂಜಿನಿಯರ್, ಸದಸ್ಯ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ನೀಟ್ ಕೋಚಿಂಗ್ನ ಸದುಪಯೋಗವನ್ನು ಪಡೆದುಕೊಂಡು ಸೆ.20 ರಾಷ್ಟ್ರಮಟ್ಟದಲ್ಲಿ ಜರುಗಿದ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ನ ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ. ಅಂಕಗಳ ವಿವರ: ಭುವನ್ -525 ಸೋಹನ್ ಕುಮಾರ್ ಶೆಟ್ಟಿ – 443 ಅಪೇಕ್ಷಾ – 437 ವಿಜೇತಾ ಎಮ್ – 395 ಶಿಲ್ಪಾ ಎಸ್ ಪಿ – 359 ಮೊಹಮ್ಮದ್ ಅನ್ಫಾಲ್ – 316 ರೋಶನ್ – 330
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಗಂಗೊಳ್ಳಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಪರವಾಗಿ ಅಧ್ಯಕ್ಷ ಚಿಕ್ಕಯ್ಯ ಮೊಗವೀರ ಅವರನ್ನು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಪುರೋಹಿತರಾದ ವೇದಮೂರ್ತಿ ಜಿ. ರಾಘವೇಂದ್ರ ಆಚಾರ್ಯ, ಸಮಿತಿಯ ಅಧ್ಯಕ್ಷ ಸತೀಶ ಜಿ., ಗೌರವಾಧ್ಯಕ್ಷ ವೇದಮೂರ್ತಿ ಜಿ. ನಾರಾಯಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಉಪಾಧ್ಯಕ್ಷ ಗೋಪಾಲ ಚಂದನ್, ಸಮಿತಿಯ ಪದಾಧಿಕಾರಿಗಳು, ಮಹಿಳಾ ಮಂಡಳಿ ಕಾರ್ಯದರ್ಶಿ ಸ್ವಾತಿ ಮಡಿವಾಳ, ಸಮಿತಿ ಪದಾಧಿಕಾರಿಗಳು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಸದಸ್ಯರು, ಸ್ಥಳೀಯರು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ರಾಘು ಬಿಲ್ಲವ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಆಗಿ ಸೇವಾದಳದ ನ್ಯಾಶನಲ್ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಸುಭಾಶ್ ಬಾಬು ನೇಮಕ ಮಾಡಿ ಆದೇಶಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ವ್ಯವಹಾರ ನಿರ್ವಹಣಾ ವಿಭಾಗ ಹಾಗೂ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸಹಯೋಗದಲ್ಲಿ ಉದಯೋನ್ಮುಖ ಹಣಕಾಸು ಯೋಜನೆಗಾಗಿ ಹಣಕಾಸು ಮಂತ್ರ ಇದರ ಕುರಿತು ಒಂದು ದಿನದ ರಾಜ್ಯಮಟ್ಟದ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿ ಡಾ. ಶರಣ್ ಕುಮಾರ್ ಶೆಟ್ಟಿ, ಸಹಾಯಕ ಪ್ರಾಧ್ಯಾಪಕರು, ಎಮ್. ಎಸ್. ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು, ವರ್ತಮಾನದ ವ್ಯಾವಹಾರಿಕ ತುರ್ತಿನ ಈ ಸಂದರ್ಭ ಅಗತ್ಯವುಳ್ಳ ಯೋಜಿತ ಹಣಕಾಸು ವ್ಯಯಿಸುವಿಕೆ ಹಾಗೂ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಸ್ಫೂರ್ತಿ ಎಸ್. ಫೆರ್ನಾಂಡಿಸ್ ಉಪಸ್ಥಿತರಿದ್ದರು. ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ ಸ್ವಾಗತಿಸಿ, ನಿರೂಪಿಸಿದರು. ಉಪನ್ಯಾಸಕಿ ಅವಿತಾ ಕೊರೆಯಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅರಶಿನ ಕುಂಕುಮ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ನವರಾತ್ರಿಯು ದುಷ್ಟ ದಮನಕಾರಕ ಶಕ್ತಿರೂಪಿಗಳಾದ ನವದುರ್ಗೆಯರನ್ನು ಆರಾಧಿಸುವ ಮಹತ್ವದ ಪರ್ವಕಾಲ. ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರು ದುರ್ಗೆಯ ಆರಾಧನೆಯ ಮೂಲಕ ಶಕ್ತಿಸಂಚಯ ಮಾಡಿಕೊಂಡು ಅಂತಹ ದೌರ್ಜನ್ಯದ ವಿರುದ್ಧ ಸೆಟೆದು ನಿಲ್ಲಬೇಕು ಎಂದು ಹೇಳಿದರು. ಶಶಿಕಲಾ ಮತ್ತು ಸಂಗಡಿಗರು ಪ್ರಾರ್ಥನೆ ಹಾಡಿದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶಾಂತಿ ಪಿರೇರಾ ಸ್ವಾಗತಿಸಿದರು. ಅಧ್ಯಕ್ಷೆ ಗೌರಿ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಕೆ. ಹೆಬ್ಬಾರ್ ಅರಶಿನ ಕುಂಕುಮ ಆಚರಣೆಯ ಮಹತ್ವವನ್ನು ವಿವರಿಸಿದರು. ವಂಡ್ಸೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ ವಂದಿಸಿದರು. ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೊ, ಉಡುಪಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಡಾ.…
