Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.14: ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೊದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಕೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಸುಟ್ಟು ಹೋದ ಕಾರಿನ ಚೆಸ್ಸಿಯನ್ನು ಫೊರೆನ್ಸಿಕ್ ತಜ್ಞರ ಸಹಾಯದಿಂದ ಪರಿಶೀಲಿಸಿ, ಮಾಲಕನ ವಿವರಗಳನ್ನು ಪತ್ತೆಹಚ್ಚಲಾಗಿತ್ತು. ಕಾರಿನ ಮಾಲಕ ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರಿಗಾರ್ (52) ಎಂದು ಗುರುತಿಸಲಾಗಿದ್ದು ಆತನೇ ಕಾರಿಗೆ ಬೆಂಕಿ ಹಚ್ಚಿ ಕಾರ್ಕಳ ಮೂಲದ ಗಾರೆ ಮೇಸ್ತ್ರಿ ಆನಂದ ದೇವಾಡಿಗ (55) ಎಂಬಾತನನ್ನು ಕೊಲೆಗೈದಿದ್ದಾನೆ ಎಂಬುದು ದೃಢಪಟ್ಟಿದೆ. ಘಟನೆಯ ಸಂಬಂಧ ಸದಾನಂದ ಶೇರಿಗಾರ್ ಹಾಗೂ ಕೃತ್ಯಕ್ಕೆ ಸಹಕರಿಸಿದ ಹಿರ್ಗಾನ್ ಶೀವನಗರ ನಿವಾಸಿ ಶಿಲ್ಪಾ ಪೂಜಾರಿ (30) ಎಂಬಾಕೆಯನ್ನು ಗುರುವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಭಾಗದಲ್ಲಿ ಹೆಚ್ಚುತ್ತಿರುವ ಕಡಲಕೊರೆತವನ್ನು ತಕ್ಷಣಕ್ಕೆ ತಡೆಯುವ ನಿಟ್ಟಿನಲ್ಲಿ ಕೂಡಲೇ ಅನುದಾನ ಬಿಡುಗಡೆಗೊಳಿಸಲಾಗುವುದು ಅಲ್ಲದೇ ಕಡಲಕೊರೆತ ಶಾಶ್ವತ ತಡೆ ಯೋಜನೆಯನ್ನು ಕೂಡ ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು. ಅವರು ಬುಧವಾರ ಮರವಂತೆಯ ಕಡಲಕೊರೆತದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ಹಿಂದೆ ಕಡಲಕೊರೆತ ತಡೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ಸಮರ್ಪಕವಾಗಿ ಕಲ್ಲುಗಳನ್ನು ಹಾಕದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಎಲ್ಲಾ ಭಾಗದಲ್ಲಿಯೂ ಪರಿಶೀಲನೆ ನಡೆಸಿ ಕಳಪೆ ಕಾಮಗಾರಿ ಆಗಿರುವಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು, ಅಗತ್ಯವಿರುವ ಕಡೆಗಳಲ್ಲಿ ಶಾಶ್ವತ ಕಾಮಗಾರಿ ನಡೆಸಲು ಸಂಪೂರ್ಣ ಕಡಲತೀರದ ಡಿಪಿಆರ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮರವಂತೆ ಬಂದರು ಮುಂದುವರಿದ ಕಾಮಗಾರಿಗೆ 84 ಕೋಟಿ ರೂ. ಘೋಷಿಸಲಾಗಿದ್ದು, ಅದನ್ನು ಶೀಘ್ರ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನೆರೆಹಾವಳಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಲು ಸರಕಾರ ಘೋಷಿಸಿದೆ ಎಂದರು. ಮರವಂತೆ ಭಾಗದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಹೇನಬೇರುವಿನಲ್ಲಿ ಸಂಪೂರ್ಣ ಸುಟ್ಟುಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ರಾತ್ರಿವೇಳೆ ಘಟನೆ ನಡೆದಿರುವ ಶಂಕೆ ಇದೆ. ಪೋರ್ಡ್ ಐಕಾನ್ ಕಾರು ಸುಟ್ಟು ಕರಕಲಾದ ಕಾರಣ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಚಾಸ್ಸಿಸ್ ಹಾಗೂ ಇಂಜಿನ್ ನಂಬರ್ ಕೂಡ ಸುಟ್ಟು ಹೋದ ಕಾರಣ ಕಾರಿನ ಮಾಲಕರ ಪತ್ತೆಮಾಡುವುದು ಸದ್ಯಕ್ಕೆ ಸಾಧ್ಯವಾಗಿಲ್ಲ. ಬೈಂದೂರು ಪೊಲೀಸರು ಘಟನೆಯ ಬಗ್ಗೆ ತನಿಕೆ ಆರಂಭಿಸಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂಡಿಯಾ ಟುಡೇ ನಿಯತಕಾಲಿಕೆಯ 2022ನೇ ಸಾಲಿನ ಎಂಡಿಆರ್‌ಎ ಸಮೀಕ್ಷೆ ಪ್ರಕಟಗೊಂಡಿದ್ದು, ಆಳ್ವಾಸ್ ಕಾಲೇಜಿನ ವಿವಿಧ ವಿಭಾಗಗಳು ಅಖಿಲ ಭಾರತ ಮಟ್ಟದಲ್ಲಿ ಉತ್ತಮ ಶ್ರೇಣಿಗಳನ್ನು ಪಡೆದುಕೊಂಡಿವೆ. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕೆ 37ನೇ ರ‍್ಯಾಂಕ್, ಪದವಿ ವಿಜ್ಞಾನ ವಿಭಾಗಕ್ಕೆ 122ನೇ ರ‍್ಯಾಂಕ್, ಕಲಾ ವಿಭಾಗಕ್ಕೆ 123, ಬಿಸಿಎ 135, ಬಿಬಿಎ 147 ಹಾಗೂ ವಾಣಿಜ್ಯ ವಿಭಾಗವು 175ನೇ ರ‍್ಯಾಂಕ್ ಪಡೆದುಕೊಂಡಿವೆ. ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ, ಸಂಶೋಧನೆ, ಕಲಿಕೆಗೆ ಅಗತ್ಯವಿರುವ ಸೌಕರ್ಯಗಳು , ಸ್ವೀಕೃತ ಅರ್ಜಿಗಳ ಗುಣಮಟ್ಟ, ಉದ್ಯೋಗ ಭದ್ರತೆ, ವ್ಯಕ್ತಿತ್ವ ಹಾಗೂ ನಾಯಕತ್ವ ಕೌಶಲ್ಯ ಹಾಗೂ ವಿದ್ಯಾರ್ಥಿ ಸ್ನೇಹಿ ಕಲಿಕಾ ವಾತಾವರಣವನ್ನು ಗುರುತಿಸಿ ಈ ಶ್ರೇಣಿಗಳನ್ನು ನೀಡಲಾಗುತ್ತದೆ. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗವು ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ಕೆಟಗರಿಯಲ್ಲಿ ಅಖಿಲ ಭಾರತ ಮಟ್ಟದ ಟಾಪ್ ಕಾಲೇಜುಗಳಲ್ಲಿ 10ನೇ ರ‍್ಯಾಂಕ್ ಗಳಿಸಿದೆ. ಕಳೆದ ಬಾರಿಯ ಆಲ್ ಇಂಡಿಯಾ ರ‍್ಯಾಂಕಿAಗ್‌ನಲ್ಲಿ ಪತ್ರಿಕೋದ್ಯಮ ವಿಭಾಗಕ್ಕೆ 40ನೇ ರ‍್ಯಾಂಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.12: ಕಡಿಮೆ ವೆಚ್ಚ, ನಿರ್ವಹಣೆ, ಮಾನವ ಶ್ರಮ ಹಾಗೂ ವಿದ್ಯುಚ್ಚಕ್ತಿ ಇದ್ಯಾವುದರ ಅಗತ್ಯವೂ ಇಲ್ಲದೇ, ಪರಿಸರಕ್ಕೂ ಪೂರಕವಾಗಿ ಕಾರ್ಯನಿರ್ವಹಿಸಬಲ್ಲ ಯಶಸ್ವಿ ಜೈವಿಕ ತಂತ್ರಜ್ಞಾನ ಮ್ಯಾಕ್ ಬಯೋ ಡೈಜಿಸ್ಟರ್ (MAK Bio – Digester) ಸೆಫ್ಟಿಕ್ ಟ್ಯಾಂಕ್/ಎಸ್.ಟಿ.ಪಿ ಕರ್ನಾಟಕದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹಾಲ್ಕಲ್ ಸದಾನಂದ ಹಾಲ್‌ನಲ್ಲಿ ಉತ್ಪಾದನಾ ಸಂಸ್ಥೆ ಮ್ಯಾಕ್ ಇಂಡಿಯಾ (MAK India Limited) ಹಾಗೂ ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿರುವ ಮೇಡ್ ಇನ್ ಇಂಡಿಯಾ ಎಂಐಐ (Made in India MII Pvt. Ltd) ಪ್ರತಿನಿಧಿಗಳ ಸಮ್ಮುಖದಲ್ಲಿ ಸೋಮವಾರ ಲಾಂಚ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಮ್ಯಾಕ್ ಇಂಡಿಯಾ ಲಿಮಿಟೆಡ್ ಸಂಸ್ಥಾಪಕರಾದ ಮಾಣಿಕಂ ಅತ್ತಪ್ಪ ಗೌಂಡರ್, ಸಂಸ್ಥೆಯ ಹಿರಿಯ ವಿಜ್ಞಾನಿ ಶಿವಕುಮಾರ್ ರಾಮನ್, ಮೇಡ್ ಇನ್ ಇಂಡಿಯಾ ಸಂಸ್ಥೆಯ ಪ್ರಮುಖರಾದ ಕೆ. ವೆಂಕಟೇಶ ಕಿಣಿ, ರಾಜೀವ್ ಕುಮಾರ್ ಉಪಸ್ಥಿತರಿದ್ದರು. ಕರ್ನಾಟಕದಲ್ಲಿ ಮೊದಲ ಭಾರಿಗೆ ಬೈಂದೂರು ಪ್ಯಾಲೇಸ್ ಹಾಗೂ ದೇವಿ ಮೂಕಾಂಬಿ ಅಪಾರ್ಟ್‌ಮೆಂಟ್‌ಗಳಿಗೆ ಈ ಯೋಜನೆಯನ್ನ ಅಳವಡಿಸಲಾಗುತ್ತಿದೆ. ಬಯೋ ಡೈಜಿಸ್ಟರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಜೋನ್ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮುರುಡೇಶ್ವರ ಮಾವಳ್ಳಿಯ ನಿವಾಸಿಗಳಾದ ಮೊಹಮ್ಮದ್ ಇಫ್ಜಲ್ (27), ಮಹಮ್ಮದ್ ಅಸೀಮ್ ಡೊನ್ನಾ (20), ಮಹಮ್ಮದ್ ರಫಿ (21) ಹಾಗೂ ಭಟ್ಕಳದ ಮೊಹಮ್ಮದ್ ರಾಹಿಕ್ (22) ಬಂಧಿತ ಆರೋಪಿಗಳು. ಉಪ್ಪುಂದ ಅಂಬಾಗಿಲುವಿನಲ್ಲಿರುವ ಮೊಬೈಲ್ ಜೋನ್ ಎಂಬ ಅಂಗಡಿಯಲ್ಲಿ ಜುಲೈ 5ರ ರಾತ್ರಿ ಅಂಗಡಿಯ ಶೆಟರ್ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿತ್ತು. ಅಂಗಡಿಯಲ್ಲಿದ್ದ 3500 ರೂ. ನಗದು, 25 ಸಾವಿರ ರೂ. ಬೆಲೆಬಾಳುವ 17 ಕೀ ಪ್ಯಾಡ್ ಮೊಬೈಲ್ ಪೋನುಗಳು ಹಾಗೂ 5 ಸಾವಿರ ರೂ. ಮೌಲ್ಯದ ಮೊಬೈಲ್ ಗೆ ಉಪಯೋಗಿಸುವ ಪವರ್ ಬ್ಯಾಂಕ್ ಹಾಗೂ ಬ್ಲೂಟೂತ್ ಕಳವುಗೈದಿದ್ದು ಈ ವಸ್ತುಗಳ ಒಟ್ಟು ಮೌಲ್ಯ ರೂಪಾಯಿ 33,500 ರೂ. ಆಗಿದ್ದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡವರ ಡಾಕ್ಜರ್ ಎಂದೇ ತಾಲೂಕಲ್ಲಿ ಪ್ರಸಿದ್ದರಾಗಿದ್ದ ಜನಾನುರಾಗಿ ಹಂಗಳೂರಿನ ವೈದ್ಯ ಡಾ. ಎ.ಎಸ್. ಕಲ್ಕೂರು (87) ಅಂಕದಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು. ಡಾ.ಕಲ್ಕೂರ ಕಾಲೇಜ್ ವಿದ್ಯಾಭ್ಯಾಸದ ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಮಸಿಸ್ಟಾಗಿ ವೃತ್ತಿಜೀವನ ಆರಂಭಿಸಿದರು. ವೈದ್ಯರಾಗಿ ಸೇವೆ ಮುಂದುವರಿಸಿ ನಂತರ ಕೆಲಸಕ್ಕೆ ರಾಜಿನಾಮೆ ನೋಡಿ ಕುಂದಾಪುರ ಮುಖ್ಯರಸ್ತೆಯಲ್ಲಿ ಕ್ಲಿನಿಕ್ ತೆರೆದು ವೈದ್ಯ ವೃತ್ತಿ ಆರಂಭಿಸಿದರು. 53 ವರ್ಷ ಕುಂದಾಪುರಲ್ಲಿ ವೈದ್ಯವೃತ್ತಿ ನಂತರ ವಯಸ್ಸಿನ ಹಿನ್ನೆಲೆಯಲ್ಲಿ ಕ್ಲಿನಿಕ್ ಬಂದ ಮಾಡಿ ವಿಶ್ರಾಂತ ಜೀವನ ಸಾಗಿಸುತ್ತಿದ್ದರು. ಇವರು ಕನಿಷ್ಟ 5 ಹಾಗೂ ಗರಿಷ್ಟ 30 ರೂ.ಗಿಂತ ಹೆಚ್ಚಿಗೆ ಶುಲ್ಕ ತೆಗೆದುಕೊಂಡ ದಾಖಲೆಯೇ ಇಲ್ಲ. ಕುಂದಾಪುರದಲ್ಲಿ ಕಡಿಮೆ ಆಸ್ಪತ್ರೆ ವೈದ್ಯರಿದ್ದ ಕಾಲದಲ್ಲಿ ಕೇವಲ ಮಾತ್ರೆ, ಶಿರಪ್ ಮೂಲಕ ನೂರಾರು ಜನರ ಪ್ರಾಣ ಉಳಿಸಿದ್ದು, ಏನಾದರು ಅನಾರೋಗ್ಯ ಕಾಣಿಸಿಕೊಂಡರೆ ಕಲ್ಕೂರು ಡಾಕ್ಟರ್ ಹತ್ರ ಹೋದ್ರೆ ಗುಣ ಮಾಡ್ತ್ರು ಎನ್ನುವಷ್ಟು ಪ್ರಸಿದ್ದರಾಗಿದ್ದರು. ನಾಟಕ ಕಲಾವಿದರು, ಯಕ್ಷಗಾನ ಪ್ರೇಮಿಯಾಗಿದ್ದು, ಸಾಹಿತ್ಯ ಸಂಗೀತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.8: ಜಿಲ್ಲೆಯಲ್ಲಿ ಜುಲೈ 1ರಿಂದ ಈತನಕ ಇದುವರೆಗೆ 832 ಮಿಮಿ ಮಳೆಯಾಗಿದೆ. ಪ್ರತಿವರ್ಷ ವಾಡಿಕೆ ಮಳೆ 367 ಮಿಮಿ ಇರುತ್ತಿತ್ತು. ಜು.7ರಂದು 127.8 ಮಿ.ಮೀ .ಮಳೆಯಾಗಿದ್ದು, ಕುಂದಾಪುರ – 109.3 ಮಿ.ಮೀ, ಬೈಂದೂರು – 126.1 ಮಿ.ಮೀ, ಹೆಬ್ರಿ – 136.2 ಮಿ .ಮೀ , ಉಡುಪಿ – 78.3, ಬ್ರಹ್ಮಾವರ – 81.5, ಕಾಪು – 65.3, ಕಾರ್ಕಳ – 120.4 ಮಿ.ಮೀ ಮಳೆಯಾಗಿದೆ. ಅತಿವೃಷ್ಟಿಗೆ ಒಟ್ಟು ಅಂದಾಜು 24.73 ಕೋಟಿಯಷ್ಟು ನಷ್ಟವಾಗಿದೆ. ಅತಿವೃಷ್ಟಿಯಿಂದಾಗಿ 250 ಹೆಕ್ಟೇರ್ ಭತ್ತ ಬೆಳೆ ಹಾನಿಯಾಗಿದೆ. ನಗರ ಪ್ರದೇಶದಲ್ಲಿ 93 ಕಿಲೋಮೀಟರ್, ಗ್ರಾಮೀಣ ಭಾಗದ 685 ಕಿಲೋಮೀಟರಿನಷ್ಟು ರಸ್ತೆ, ಜಿಲ್ಲಾ ಹಾಗೂ ರಾಜ್ಯಮಟ್ಟದ 7.5 ಕಿಮೀ ಮುಖ್ಯ ರಸ್ತೆ ಹಾಳಾಗಿದ್ದು, 13 ಸೇತುವೆಗಳು ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ 1515 ವಿದ್ಯುಚ್ಛಕ್ತಿ ಕಂಬಗಳು ಬಿದ್ದುಹೋಗಿವೆ, 47 ಕಿಲೋಮೀಟರ್ ರಷ್ಟು ವಿದ್ಯುತ್ ತಂತಿಗಳು ಹಾಳಾಗಿದ್ದು, 64 ಮನೆಗಳಿಗೆ ಭಾಗಶಃ ಹಾನಿಯಾಗಿ ಒಟ್ಟು ಅಂದಾಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.8: ಜಿಲ್ಲೆಯಲ್ಲಿ ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ಇರಿಸುವಂತೆ ಸೂಚಿಸಿದ ಅವರು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು. ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಿದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಿದರು. ಗೋಹತ್ಯೆ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೋಲೀಸ್ ಠಾಣೆ ಅಧಿಕಾರಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.8: ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು ಹತ್ತು ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ…

Read More