ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಸೆ. ೧೧ ಹಾಗೂ ೧೨ ರಂದು ರೆಡ್ ಅಲರ್ಟ್ ಮತ್ತು ಸೆ. ೧೩ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಿದ್ದು, ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳನ್ನು ತಲುಪಬೇಕು. ತುರ್ತು ಸೇವೆಗೆ 1077, ದೂರವಾಣಿ ಸಂಖ್ಯೆ: 0824-2574802 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಕುಂದಾಪುರ – ಬೈಂದೂರು ತಾಲೂಕು ಹವ್ಯಕ ಸಭಾದಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಗೂರು ಸಂದೀಪನ್ ಸ್ಕೂಲಿನಲ್ಲಿ ವ್ಯಾಸಂಗ ಮಾಡಿ 625 ಕ್ಕೆ620 ಅಂಕ ಗಳಿಸಿ ಕರ್ನಾಟಕ ರಾಜ್ಯಕ್ಕೆ 6 ನೇ ರ‍್ಯಾಂಕ್ ಮತ್ತು ಉಡುಪಿ ಜಿಲ್ಲೆಗೆ 3 ನೇ ರ‍್ಯಾಂಕ್ ಗಳಿಸಿ ವಿಶೇಷ ಸಾಧನೆ ಮಾಡಿದ ಬೈಂದೂರಿನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸುಬ್ರಮಣ್ಯ ಭಟ್ ಮತ್ತು ಸುಮ ದಂಪತಿಗಳ ಪುತ್ರಿ ಕವನಾ ಭಟ್ ಹಾಗೂ ಶಿಕ್ಷಕ ಮಂಜುನಾಥ ಶಿರೂರು ಮತ್ತು ಶಿಕ್ಷಕಿ ಶಶಿಕಲಾ ದಂಪತಿಗಳ ಪುತ್ರಿ ಮೈತ್ರೇಯಿ ಅವರನ್ನು ಹವ್ಯಕ ಸಭಾದಿಂದ ಬೈಂದೂರಿನಲ್ಲಿ ಸನ್ಮಾನಿಸಲಾಯಿತು ಹವ್ಯಕ ಸಭಾ ಅಧ್ಯಕ್ಷ ಎನ್ ನಾಗರಾಜ್ ಭಟ್ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡುತ್ತಾ ರ‍್ಯಾಂಕ ಪಡೆದ ವಿದ್ಯಾರ್ಥಿಗಳ ಸಾಧನೆ ಎಲ್ಲರಿಗೂ ಸಂತಸ ತಂದಿದ್ದು ಗ್ರಾಮಿಣ ಭಾಗದಲ್ಲಿ ಎಲ್ಲಾ ಸೌಕರ್ಯ ಇಲ್ಲದೇಯೂ ಹಾಗೂ ಕೋವಿಡ್ ಮಾಹಾಮಾರಿ ಕಾಯಿಲೆಯ ಆತಂಕದ ನಡುವೆಯು ಅತ್ಯುತ್ತಮ ಸಾಧನೆ ಮಾಡಿದಾರೆಂದು ಹೇಳಿದರು. ನಿವೃತ್ತ ಉದ್ಯೋಗಿ ಎಸ್.ಎಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿ ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಹಸ್ತ ಕಿಟ್ ವಿತರಣೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಜಿಲ್ಲಾ ಅಧ್ಯಕ್ಷ ಅಶೋಕ ಕುಮಾರ ಕೊಡವೂರು ಚಾಲನೆ ನೀಡಿ, ರಾಜ್ಯದ ಜನತೆ ಕರೊನಾ ಸಂಕಷ್ಟದಲ್ಲಿರುವಾಗ ಸರ್ಕಾರ ಜನತೆಯ ಕಷ್ಟಗಳಿಗೆ ಸ್ಪಂದಿಸದೆ ಆಕ್ರಮ ದಂದೆ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದಲ್ಲಿದ್ದರೂ ಜನರಿಗೆ ಸಾಂತ್ವಾನ ಹೇಳಿ ಪ್ರತಿ ಮನೆಗೂ ವೈಧ್ಯಕೀಯ ಮಾರ್ಗದರ್ಶನ ನೀಡುವ ಕೆಲಸವನ್ನು ಆರೋಗ್ಯ ಹಸ್ತದ ಕಾರ್ಯಕ್ರಮದ ಮೂಲಕ ಮುಂದಿನ ದಿನಗಳಲ್ಲಿ ನಡೆಸಲಾಗುವುದು’ ಎಂದರು. ಬ್ಲಾಕ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ವಹಿಸಿದ್ದರು. ಆರೋಗ್ಯ ಹಸ್ತದ ಸಂಚಾಲಕ ಡಾ. ಸಂದೀಪ, ಮಾಜಿ ಬ್ಲಾಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಹಿರಿಯ ಕಾಂಗ್ರೆಸ್ ನಾಯಕ ಕೃಷ್ಣದೇವ ಕಾರಂತ, ರಾಜ್ಯ ಐ.ಟಿ.ಸೆಲ್ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಪುರಸಭಾ ಸದಸ್ಯೆಋಆದ ದೇವಕಿ ಸಣ್ಣಯ್ಯ, ಪ್ರಭಾವತಿ ಶೆಟ್ಟಿ, ಲಕ್ಷ್ಮಿ ಭಾಯಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.9ರ ಬುಧವಾರ 258 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 39, ಉಡುಪಿ ತಾಲೂಕಿನ 162 ಹಾಗೂ ಕಾರ್ಕಳ ತಾಲೂಕಿನ 41 ಮಂದಿಗೆ ಪಾಸಿಟಿವ್ ಬಂದಿದೆ. 16 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 144 ಸಿಂಥಮೇಟಿವ್ ಹಾಗೂ 114 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 171, ILI 49, ಸಾರಿ 7 ಪ್ರಕರಣವಿದ್ದು, 31 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು 75 ಮಂದಿ ಆಸ್ಪತ್ರೆಯಿಂದ ಹಾಗೂ 143 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 64 ವರ್ಷದ ಮಹಿಳೆ ಇಂದು ಮೃತಪಟ್ಟಿದ್ದಾರೆ. 1000 ನೆಗೆಟಿವ್: ಈ ತನಕ ಒಟ್ಟು 80804 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 67091 ನೆಗೆಟಿವ್, 13345 ಪಾಸಿಟಿವ್ ಬಂದಿದ್ದು, 368 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1000 ನೆಗೆಟಿವ್, 258 ಪಾಸಿಟಿವ್ ಬಂದಿದೆ. 1,884…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೃಢಸಂಕಲ್ಪ, ಪರಿಶುದ್ಧ ಮನಸ್ಸಿನಿಂದ ಮಾಡುವ ಕಾರ್ಯದಲ್ಲಿ ಸೋಲೆಂಬುದಿಲ್ಲ. ಕರ್ತವ್ಯದಲ್ಲಿ ಪ್ರಾಮಾಣಿಕತೆ, ಸ್ವಾಮಿನಿಷ್ಠೆ ಇದ್ದರೆ ಎಲ್ಲದರಲ್ಲಿಯೂ ಯಶಸ್ಸ ಕಾಣಲು ಸಾಧ್ಯವಿದೆ. ಕೆಲಸದಲ್ಲಿ ಚಿಕ್ಕದು ದೊಡ್ಡದು ಎಂಬುವುದಕ್ಕಿಂತ ಅದನ್ನು ಎಷ್ಟು ಶಿಸ್ತುಬದ್ಧವಾಗಿ ಮಾಡುತ್ತೇವೆ ಎನ್ನುವುದಷ್ಟೇ ಮುಖ್ಯ ಎಂದು ಯು. ಬಿ. ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಯು. ಬಿ. ಶೆಟ್ಟಿ ಹೇಳಿದರು. ಅವರು ಬುಧವಾರ ಬೈಂದೂರು ಯು. ಬಿ. ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಬಾಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಇಂಗ್ಲೀಷ್ ಪುಸ್ತಕ ವಿತರಣೆ, ಶಾಲೆಗೆ ಪಿಠೋಪಕರಣ ಹಸ್ತಾಂತರ ಹಾಗೂ ಸುಸಜ್ಜಿತ ಶೌಚಾಲಯವನ್ನು ಹಸ್ತಾಂತರಿಸಿ ಮಾತನಾಡಿದರು. ಬಾಡಾ ಶಾಲೆಯನ್ನು ದತ್ತು ಸ್ವೀಕರಿಸಿ ಅದರ ಸರ್ವತೋಮುಖ ಅಭಿವೃದ್ಧಿಗಾಗಿ ಪಣತೊಡಲಾಗಿದೆ. ಅದರಂತೆಯೇ ಯಾವುದೇ ಲೋಪವಿಲ್ಲದೇ ಶಾಲೆಯ ಏಳ್ಗೆಗಾಗಿ ಶ್ರಮಿಸಲಾಗುವುದು. ಟ್ರಸ್ಟ್ ಮೂಲಕ ಹಲವು ಜನಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಈ ಬಗ್ಗೆ ಸಂತೃಪ್ತಿ ಇದೆ ಎಂದರು. ವಿದ್ಯಾರ್ಥಿಗಳ ಶೌಚಾಲಯ ನಿರ್ಮಿಸಿದ ಗುತ್ತಿಗೆದಾರ ಸುಕುಮಾರ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಏಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ `ಮೊಂತಿ ಫೆಸ್ತ್ (ತೆನೆ ಹಬ್ಬ) ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ಚರ್ಚುಗಳಲ್ಲಿ ಮಂಗಳವಾರ ಸರಳವಾಗಿ ಆಚರಿಸಲಾಯಿತು. ರೈತರು ಬೆಳೆದ ಭತ್ತದ ತೆನೆಯನ್ನು ಆಯಾ ಚರ್ಚ್ನಲ್ಲಿ ಪ್ರಮುಖರು ಸಂಗ್ರಹಿಸಿ, ಈ ಹಬ್ಬದ ದಿನದಂದು ಅವನ್ನು ಧರ್ಮಗುರುಗಳು ಪವಿತ್ರೀಕರಿಸಿ ಭಕ್ತರಿಗೆ ಹಂಚುವುದು ಸಂಪ್ರದಾಯವಾಗಿದ್ದು, ಈ ನಿಟ್ಟಿನಲ್ಲಿ ಪವಿತ್ರೀಕರಿಸಿದ ಭತ್ತದ ತೆನೆಗಳನ್ನು ಆಯಾ ಚರ್ಚ್ಗಳಲ್ಲಿ ಭಕ್ತರಿಗೆ ದಿವ್ಯಬಲಿಪೂಜೆಯ ಬಳಿಕ ಹಂಚಲಾಯಿತು. ಬೈಂದೂರು ಹೋಲಿಕ್ರಾಸ್ ಚರ್ಚಿನಲ್ಲಿ ಧರ್ಮಗುರು ರೆ.ಫಾ ವಿನ್ಸೆಂಟ್ ಕುವೆಲ್ಲೂ, ರೆ.ಫಾ ಹೆರಾಲ್ಡ್ ಪಿರೇರಾ ಮತ್ತು ಬ್ರದರ್ ಲಿವನ್ ಮಥಾಯಸ್ ನೇತೃತ್ವದಲ್ಲಿ ಸರಳವಾಗಿ ಆಚರಿಸಲಾಯಿತು. ಚಿತ್ರಗಳು: ಎ ಒನ್ ಸ್ಟುಡಿಯೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.6ರ ಮಂಗಳವಾರ 247 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 83, ಉಡುಪಿ ತಾಲೂಕಿನ 115 ಹಾಗೂ ಕಾರ್ಕಳ ತಾಲೂಕಿನ 45 ಮಂದಿಗೆ ಪಾಸಿಟಿವ್ ಬಂದಿದೆ. 4 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 130 ಸಿಂಥಮೇಟಿವ್ ಹಾಗೂ 117 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 0, ILI 11, ಸಾರಿ 6 ಪ್ರಕರಣವಿದ್ದು,226 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 4 ಮಂದಿ ಹೊರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 77 ಮಂದಿ ಆಸ್ಪತ್ರೆಯಿಂದ ಹಾಗೂ 101 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 66, 55, 42, ,60, 66 ವರ್ಷದ ಪುರುಷ, 74 ವರ್ಷದ ಮಹಿಳೆ ಹಾಗೂ ಕುಂದಾಪುರದ 70 ವರ್ಷದ ಮಹಿಳೆ ಇಂದು ಮೃತಪಟ್ಟಿದ್ದಾರೆ. 1057 ನೆಗೆಟಿವ್: ಈ ತನಕ ಒಟ್ಟು 79489 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 66091 ನೆಗೆಟಿವ್, 13087…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಕರ್ಯವನ್ನು ಒದಗಿಸುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆದ್ಯತೆಯಾಗಿದ್ದು, ಆ ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ರಾಜ್ಯ ಸರ್ಕಾರ ಬೈಂದೂರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಈತನಕ ಅತ್ಯಧಿಕ ಅನುದಾನ ಒದಗಿಸಿದ್ದು, ಮುಂದಿನ ಎರಡು ವರ್ಷಗಳಲ್ಲಿ ಬಹುಪಾಲು ಯೋಜನೆಗಳು ಸಾಕಾರಗೊಳ್ಳಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಅವರು ಮಂಗಳವಾರ ಬೈಂದೂರಿನಲ್ಲಿ ಪಟ್ಟಣ ಪಂಚಾಯತ್, ಅಗ್ನಿಶಾಮಕ ಠಾಣೆ, ಮೆಸ್ಕಾಂ ಸಬ್‌ಸ್ಟೇಷನ್ ಉದ್ಘಾಟನೆ ಹಾಗೂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಬಳಿಕ ಇಲ್ಲಿನ ಜೆ.ಎನ್. ಕಲಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ನದಿ ಹರಿಯುತ್ತಿದ್ದರೂ ಇಲ್ಲಿನ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಪ್ರತಿ ಮನೆಗೂ ಶುದ್ಧ ಕುಡಿಯುವ ನಿರು ಪೂರೈಸುವುದು ನಮ್ಮ ಮೊದಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಕೆಲವು ಸಾಮಾಜಿಕ ಜಾಲತಾಣಗಳು ಪ್ರಸಾರ ಮಾಡಿದ ಅಪಪ್ರಚಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೆ ಸಾರ್ವಜನಿಕರು ಅಸಹಕಾರ ತೋರುತ್ತಿದ್ದು, ಇದರಿಂದ ರೋಗದ ಗಂಭೀರ ಪರಿಣಾಮ ಎದುರಿಸುವ ರೋಗಿಗಳ ಸಂಖ್ಯೆ ಅಧಿಕವಾಗಿದ್ದು, ಐಸಿಯು ಬೆಡ್ ಗಳ ಕೊರತೆಯಾಗಿದೆ, ಇಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಸಂಬಂದಪಟ್ಟ ವೈದ್ಯರನ್ನು ಸಂಪರ್ಕಿಸಿ ಅವರ ಅಭಿಪ್ರಾಯವನ್ನೂ ಸಹ ಪ್ರಸಾರ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಡಿಸಿ ವಿಷಾದ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಅನಧಿಕೃತ ನ್ಯೂಸ್ ವೆಬ್‌ಸೈಟ್‌ಗಳು ಆರಂಭಗೊಂಡಿದ್ದು, ಸಾಮಾಜಿಕ ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶೆ ಮಾಡದೇ ಹರಿ ಬಿಡಲಾಗುತ್ತಿದ್ದು, ಇದರಿಂದ ಸರಕಾರದ, ಗಣ್ಯರ, ಜನಪ್ರತಿನಿಧಿಗಳ, ಸಂಘ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ 2016,17 ಮತ್ತು 2018ರ ಸಾಲಿನಲ್ಲಿ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು , ವಿದ್ಯಾರ್ಥಿವೇತನ ಪಡೆಯಲು ನವೀಕರಣ ಮಾಡಿಕೊಳ್ಳುವುದು. ಹಾಗೆಯೇ 2019ನವೆಂಬರ್‌ನಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಹೊಸದಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ. ನೋಂದಾಣಿ ಮತ್ತು ನವೀಕರಣ ಮಾಡಿಕೊಳ್ಳಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ www.NSP.2.0 ಗೆ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಎನ್.ಎಂ.ಎಂ.ಎಸ್ ಅಧಿಕಾರಿ ಅಥವಾ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಉಪನ್ಯಾಸಕರು ಡಯಟ್ ಉಡುಪಿ ಮೊ.ನಂ: 9380241292 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
