Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿಗೆ ಸಮೀಪದ ಚಿತ್ತೂರು ಮಾರಣಕಟ್ಟೆಯಲ್ಲಿ ನೂತನವಾಗಿ ಆರಂಭಗೊಂಡು ಅಂಬಾಶ್ರೀ ಯುವ ವೇದಿಕೆ ಉದ್ಘಾಟನಾ ಸಮಾರಂಭ ಭಾನುವಾರ ಜರುಗಿತು. ಯುವ ವೇದಿಕೆಯನ್ನು ನಾರಾಯಣ ನಾಯ್ಕ ಕಪ್ಟೆಕೊಡ್ಲು ಇವರು ಉದ್ಘಾಟಿಸಿದರು. ನೆಹರೂ ಯುವ ಕೇಂದ್ರದ ಸ್ವಯಂಸೇವಕ ಸುಧಾಕರ ನಾಯ್ಕ್ ಅತಿಥಿಯಾಗಿದ್ದರು. ಯುವ ವೇದಿಕೆ ಅಧ್ಯಕ್ಷ ನಕ್ಷತ್ರ ನಾಯ್ಕ್ ಮಾತನಾಡಿ ಪರಿಶಿಷ್ಟ ಪಂಗಡ ಮರಾಠಿ ಸಮುದಾಯದ ಜನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿ ಕೊಡುವ ಹಾಗೂ ಸಮಾಜಸೇವಾ ಚಟುವಟಿಕೆಗಳನ್ನು ಆಯೋಜಿಸುವ ಉದ್ದೇಶದಿಂದ ಯುವ ವೇದಿಕೆ ಸ್ಥಾಪಿಸಲಾಗಿದ್ದು ಈ ನೆಲೆಯಲ್ಲಿ ಉತ್ತಮ ಸೇವೆ ಸಲ್ಲಿಸುವುದಾಗಿ ಅವರು ತಿಳಿದರು. ಉಪಾಧ್ಯಕ್ಷರಾದ ರಮೇಶ್ ನಾಯ್ಕ್, ಕಾರ್ಯದರ್ಶಿಯಾದ ಸಂದೀಪ್ ನಾಯ್ಕ್, ಜೊತೆ ಕಾರ್ಯದರ್ಶಿಯಾದ ಶಿವರಾಜ್ ನಾಯ್ಕ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ನಾಗರಾಜ್ ನಾಯ್ಕ್ ಇವರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ತ್ರೀ ರೋಗ, ಅರೆವಳಿಕೆ, ಮತ್ತು ಮಕ್ಕಳ ತಜ್ಞರು, ಎಲ್.ಹೆಚ್.ವಿ, ಡೆಂಟಲ್ ಹೈಜೆನಿಸ್ಟ್, ಆಡಿಯೋ ಮೆಟ್ರಿಕ್ ಆಸಿಸ್ಟೆಂಟ್, ಎಮ್.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು, ಶುಶ್ರೂಷಕಿ, ಕಿರಿಯ ಪುರುಷ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಶ್ರವಣ ದೋಷವುಳ್ಳ ಮಕ್ಕಳಿಗೆ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 31ರಂದು ಬೆಳಿಗ್ಗೆ 11 ರಿಂದ 1 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಕಛೇರಿ ಉಡುಪಿ ಇಲ್ಲಿ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.26ರ ಬುಧವಾರ 251 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 81, ಉಡುಪಿ ತಾಲೂಕಿನ 110 ಹಾಗೂ ಕಾರ್ಕಳ ತಾಲೂಕಿನ 84 ಮಂದಿಗೆ ಪಾಸಿಟಿವ್ ಬಂದಿದೆ. 6 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 64 ಸಿಂಥಮೇಟಿವ್ ಹಾಗೂ 187 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 122 ಪುರುಷರು, 129 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 114, ILI 45, ಸಾರಿ 1 ಪ್ರಕರಣವಿದ್ದು, 90 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 99 ಮಂದಿ ಆಸ್ಪತ್ರೆಯಿಂದ ಹಾಗೂ 147 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 49 ವರ್ಷದ ಪುರುಷ ಇಂದು ಮೃತಪಟ್ಟಿದ್ದಾರೆ. 1037 ನೆಗೆಟಿವ್: ಈ ತನಕ ಒಟ್ಟು 67818 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 56382 ನೆಗೆಟಿವ್, 10704 ಪಾಸಿಟಿವ್ ಬಂದಿದ್ದು, 731 ಮಂದಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಮಾರಸ್ವಾಮಿಯ ಗಂಗಾಧರೇಶ್ವರ ದೇವಸ್ಥಾನದ ಹತ್ತಿರ ಸಮುದ್ರದಲ್ಲಿ ಬುಧವಾರ ಮಧ್ಯಾಹ್ನ ಮೀನುಗಾರಿಕೆ ನಡೆಸುತ್ತಿದ್ದ ಒಂಟಿದೋಣಿ (ಡಿಂಗಿ) ಅಲೆಗಳಿಗೆ ಸಿಲುಕಿ ಮಗುಚಿಕೊಂಡಿದೆ. ದೋಣಿಯಲ್ಲಿದ್ದ ನಾಲ್ವರು ಈಜಿ ಹತ್ತಿರದ ದೋಣಿಗಳನ್ನೇರಿ ಪಾರಾದರು. ಗಂಗೊಳ್ಳಿಯ ಗುಡ್ಡೆಕೇರಿ ಶ್ರೀನಿವಾಸ ಖಾರ್ವಿ ಅವರಿಗೆ ಸೇರಿದ ಆದಿ ಆಂಜನೇಯ ಹೆಸರಿನ ಎರಡು ಎಂಜಿನ್‌ಗಳ ದೋಣಿಯಲ್ಲಿ ಗಂಗೊಳ್ಳಿಯ ಸುಬ್ಬ ಖಾರ್ವಿ ಮಗ ರಾಮ ಖಾರ್ವಿ, ಶೇಷ ಖಾರ್ವಿ ಅವರ ಮಗ ಶಂಕರ ಖಾರ್ವಿ, ನಾರಾಯಣ ಖಾರ್ವಿ ಅವರ ಮಗ ಕೃಷ್ಣ ಖಾರ್ವಿ ಮತ್ತು ಕುಂದಾಪುರ ಕೋಡಿಯ ಲಕ್ಷ್ಮಣ ಖಾರ್ವಿ ಅವರ ಮಗ ಸುಭಾಸ್ ಖಾರ್ವಿ ಬಲೆಬಿಟ್ಟು ಮೀನು ಹಿಡಿಯುತ್ತಿದ್ದಾಗ ಘಟನೆ ನಡೆದಿದೆ. ದೋಣಿ ಒಡೆದು ನಿಷ್ಪ್ರಯೋಜಕ ಆಗಿದೆ. 10 ಅಶ್ವಶಕ್ತಿಯ ಎರಡು ಯಮಾಹ ಔಟ್‌ಬೋರ್ಡ್ ಎಂಜಿನ್ ಮತ್ತು ಬಲೆ ಸಮದ್ರ ಸೇರಿವೆ. ಒಟ್ಟು ರೂ 10 ಲಕ್ಷ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ದಡಕ್ಕೆ ತೇಲಿಬಂದ ದೋಣಿಯ ಅವಶೇಷವನ್ನು ಮೇಲೆತ್ತುವ ಸಂದರ್ಭ ದೋಣಿಯ ಮಾಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.25ರ ಮಂಗಳವಾರ 217 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 40, ಉಡುಪಿ ತಾಲೂಕಿನ 122 ಹಾಗೂ ಕಾರ್ಕಳ ತಾಲೂಕಿನ 51 ಮಂದಿಗೆ ಪಾಸಿಟಿವ್ ಬಂದಿದೆ. 4 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 81 ಸಿಂಥಮೇಟಿವ್ ಹಾಗೂ 136 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 109 ಪುರುಷರು, 108 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 82, ILI 69, ಸಾರಿ 6 ಪ್ರಕರಣವಿದ್ದು, 58 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಹಾಗೂ ಓರ್ವ ವ್ಯಕ್ತಿ ಹೊರದೇಶದ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 50 ಮಂದಿ ಆಸ್ಪತ್ರೆಯಿಂದ ಹಾಗೂ 130 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 87 ವರ್ಷದ ವೃದ್ಧ ಹಾಗೂ ಕುಂದಾಪುರ 67 ವರ್ಷದ ವೃದ್ಧ ಸೇರಿದಂತೆ ಒಂದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. 1233 ನೆಗೆಟಿವ್: ಈ ತನಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಮೀನುಗಾರಿಕಾ ಇಲಾಖೆಯ ರಾಜ್ಯ ವಲಯದ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು ಉಡುಪಿ ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಮೀನುಗಾರಿಕಾ ಸಹಾಯಕ ನಿರ್ದೇಶಕರು, (ಶ್ರೇಣಿ ಉಡುಪಿ, ಕುಂದಾಪುರ, ಕಾರ್ಕಳ) ಕಚೇರಿಗೆ ಸಲ್ಲಿಸಬಹುದು ಎಂದು ಮೀನುಗಾರಿಕಾ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎ/ಬಿ.ಕಾಂ ಪೂರಕ ಮತ್ತು ಎಂ.ಬಿ.ಎ ಸೆಮಿಸ್ಟರ್ ಪರೀಕ್ಷೆಗಳನ್ನು ಫೆಬ್ರವರಿ/ಮಾರ್ಚ್ ಮಾಹೆಯಲ್ಲಿ ದಿನಾಂಕ 13.03.2020 ರವರೆಗೆ ನಡೆಸಲಾಗಿದ್ದು ಕೋವಿಡ್-19ರ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ನಿರ್ದೇಶನದಂತೆ ಉಳಿದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಮುಂದೂಡಲಾದ ಪರೀಕ್ಷೆಗಳನ್ನು ಯುಜಿಸಿಯ ಮಾರ್ಗ ಸೂಚನೆಯಂತೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಸೆಪ್ಟಂಬರ್ 1ರಿಂದ ಹಾಗೂ ಎಂ.ಬಿ.ಎ ಸೆಮಿಸ್ಟರ್ ಪರೀಕ್ಷೆಗಳನ್ನು ಸೆಪ್ಟಂಬರ್ 5 ರಿಂದ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆಸಲಾಗುತ್ತದೆ. ವೇಳಾಪಟ್ಟಿಯನ್ನು ವಿಶ್ವ ವಿದ್ಯಾನಿಲಯದ ವೆಬ್ಸೈಟ್ http://www.ksoumysuru.ac.in/ ಪ್ರಕಟಿಸಲಿದ್ದು, ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವಂತೆ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ಡಾ.ಕೆ.ಪಿ.ಮಹಾಲಿಂಗಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸಾಲಿನಲ್ಲಿ ಯುಕೆಜಿ ಕಲಿಕೆ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾಬಲ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮರವಂತೆ ಶ್ರೀರಾಮ ಮಂದಿರದ ಅಧ್ಯಕ್ಷ ಮೋಹನ ಖಾರ್ವಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಮಾಣ ಪತ್ರ ವಿತರಿಸಿದ ಮಹಾಬಲ ರೈ ಈಗ ಕಲಿಕೆ ಪೂರೈಸಿದ ಯುಕೆಜಿ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣವನ್ನು ತಾವು ಕಲಿತ ಸರ್ಕಾರಿ ಶಾಲೆಯಲ್ಲಿಯೇ ನಡೆಸಬೇಕು ಎಂದು ಸಲಹೆಯಿತ್ತರು. ಶಿಕ್ಷಕಿ ಲೀಲಾ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶ್ರೀಕಾಂತ್ ವಂದಿಸಿದರು. ಶೋಭಾ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ ನಾವುಂದ, ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಗಾಣಿಗ, ಚಂದ್ರ ಖಾರ್ವಿ, ಸತ್ಯನಾರಾಯಣ, ಉದ್ಯಮಿ ಇಕ್ಬಾಲ್, ಖಾರ್ವಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮ ಖಾರ್ವಿ, ಶಿಕ್ಷಕಿಯರಾದ ಶಶಿಕಲಾ, ನಯನಾ ನಾಯಕ್, ಲಲಿತಾ, ಶಾರದಾ ಪುತ್ರನ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.24ರ ಸೋಮವಾರ 103 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 19, ಉಡುಪಿ ತಾಲೂಕಿನ 50 ಹಾಗೂ ಕಾರ್ಕಳ ತಾಲೂಕಿನ 26 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 28 ಸಿಂಥಮೇಟಿವ್ ಹಾಗೂ 75 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 55ಪುರುಷರು, 48 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 52, ILI 23, ಸಾರಿ 2 ಪ್ರಕರಣವಿದ್ದು, 25 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 57 ಮಂದಿ ಆಸ್ಪತ್ರೆಯಿಂದ ಹಾಗೂ 99 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 85 ವರ್ಷದ ವೃದ್ಧೆ, ಉಡುಪಿ 75 ವರ್ಷದ ವೃದ್ಧ, ಕಾರ್ಕಳದ 85 ವರ್ಷದ ವೃದ್ಧೆ, ಕಾರ್ಕಳದ 49 ವರ್ಷದ ಮಹಿಳೆ ಹಾಗೂ ಉಡುಪಿಯ 55 ವರ್ಷದ ಪುರುಷ ಸೇರಿದಂತೆ ಒಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣದ ಮುಖಾಂತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ನಡುವೆ ಸಂವಹನವನ್ನು ನಡೆಸುವುದು ಅತ್ಯಮೂಲ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ತರಗತಿಗಳನ್ನು ನಡೆಸುವ ಸಲುವಾಗಿ ಪ್ರಾಧ್ಯಾಪಕರಿಗೆ ಪುನಶ್ಚೇತನ ಕಾರ‍್ಯಾಗಾರವನ್ನು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು IQAC ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶೈಲೇಶ್ ಬಿ. ಸಿ. ಪ್ರಾಧ್ಯಾಪಕರಿಗೆ google classroom ಮತ್ತು edpuzzle ತಂತ್ರಜ್ಞಾನದ ಉಪಯೋಗ ಮತ್ತು ಹೇಗೆ ಬಳಸಬೇಕು ಎಂಬುದರ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಧ್ಯಾಪಕ ವೃಂದದವರು ಕಾರ‍್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನವನ್ನು ಪಡೆದುಕೊಂಡರು.

Read More