ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತಿಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ವತಿಯಿಂದ ಪಂಡಿತ್ ದೀನ್ದಯಾಳ್ ಉಪಾಧ್ಯಾಯರ ಸಂಸ್ಮರಣೆ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಂಕರ್ ಅಂಕದಕಟ್ಟೆ ಮಾತನಾಡಿ, ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಅವರು ಉತ್ತಮ ಸಾಹಿತಿ, ಅಪ್ರತಿಮ ದೇಶಭಕ್ತ, ಆದರ್ಶ ಚಿಂತಕ, ಸಮಾಜ ಸುಧಾರಕ, ಪ್ರಬುದ್ದ ತತ್ವಜ್ಞಾನಿ, ಮೇಧಾವಿ ಅರ್ಥಶಾಸ್ತ್ರಜ್ಞ, ರಾಷ್ಟ್ರ ನಿರ್ಮಾಪಕ ಗುಣಗಳನ್ನೊಂಡ ಮಹಾನ್ ವ್ಯಕ್ತಿ. ಜನಸಂಘದಂತಹ ರಾಷ್ಟ್ರೀಯ ರಾಜಕೀಯ ಪಕ್ಷದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿಪ್ರಬುದ್ದ ಭಾರತ ನಿರ್ಮಾಣದ ಹೋರಾಟ ನಡೆಸಿದ್ದರು ಎಂದು ಹೆಳಿದರು. ಭಾರತೀಯ ಜನತಾ ಪಕ್ಷದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಗುಣರತ್ನ, ಪುರಸಭೆ ಸದಸ್ಯರಾದ ಸಂದೀಪ್ ಖಾರ್ವಿ, ಪ್ರಭಾಕರ್ ವಿ., ಅಶ್ವಿನಿ ಪ್ರದೀಪ್, ಶ್ವೇತಾ ಸಂತೋಷ್, ವೀಣಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಬಹುದೊಡ್ಡ ಸೇತುವೆಗಳಲ್ಲಿ ಒಂದಾದ ಅರಾಟೆ ಸೇತುವೆ ಬಿರುಕು ಬಿಟ್ಟಿದ್ದು, ವಾಹನದ ಸವಾರರ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಮುಳ್ಳಿಕಟ್ಟೆ ಸಮೀಪ ಚತುಷ್ಟಥ ಕಾಮಗಾರಿ ಸಂದರ್ಭ ಹಳೆ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಇಂದು ಹೊಸ ಸೇತುವೆಯ ಪಿಲ್ಲರ್ ಮೇಲಿನ ಜೋಡಣೆಯಲ್ಲಿ ಬಿರುಕು ಬಿಟ್ಟಿದ್ದು, ರಾಡ್ಗಳೂ ತುಂಡಾಗಿವೆ. ಸದ್ಯ ವಾಹನಗಳನ್ನು ಹಳೆ ಸೇತುವೆಯ ಮೂಲಕ ತೆರಳಲು ಅನುವು ಮಾಡಿಕೊಡಲಾಗಿದೆ. ಅರಾಟೆ ಸೇತುವೆಯ ಆರಂಭದಲ್ಲಿ ಈ ಹಿಂದೆಯೂ ಕುಸಿತ ಉಂಟಾಗಿತ್ತು. ಇದೀಗ ಇನ್ನೊಂದು ಕಡೆಯಲ್ಲಿ ಸೇತುವೆ ಬಿರುಕು ಉಂಟಾಗಿದ್ದು, ಹೊಸತರಲ್ಲೇ ಸೇತುವೆ ಕುಸಿದಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಕಾಮಗಾರಿ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಸಿ ಗುತ್ತಿಗೆ ಕಂಪೆನಿಯ ವಿರುದ್ದ ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಹಾಗೂ ಹೈವೇ ಪ್ಯಾಟ್ರೋಲ್ ಭೇಟಿ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬಯಿ: ಮುಂಬಯಿ ಮಹಾನಗರದ ಪ್ರತಿಷ್ಠಿತ ಸಮುದಾಯ ಸಂಘಟನೆಗಳಲ್ಲಿ ಒಂದಾದ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ನೂತನ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸಮುದಾಯ ಸಂಘಟನೆಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿರುವ ಅಶೋಕ ಎನ್. ಪೂಜಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅನುಭವವಿರುವ ಇವರು ಸಂಘದ ನೂತನ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುತ್ತಾರೆ ಎಂದು ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ತಿಳಿಸಿರುತ್ತಾರೆ. ಬೈಂದೂರು ತಾಲೂಕಿನ ಪಡುಕೋಣೆಯವರಾದ ಅಶೋಕ ಎನ್. ಪೂಜಾರಿ ಕಳೆದೆರಡು ದಶಕಗಳಿಂದ ಮುಂಬಯಿ ಮಹಾನಗರದಲ್ಲಿ ನೆಲೆಸಿದ್ದಾರೆ. ಸ್ನಾತಕೋತ್ತರ ಪದವೀಧರರಾಗಿದ್ದು ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಸಮುದಾಯ ಸಂಘಟನೆಯಲ್ಲಿ ವಿಶೇಷ ಒಲವು ಹೊಂದಿರುವ ಇವರು ಸಂಘದ ಕ್ರಿಯಶೀಲ ಸದಸ್ಯನಾಗಿರುವುದಲ್ಲದೆ ಒರ್ವ ಸಂಘಟಕನಾಗಿ ನಿಷ್ಠಾವಂತ ಸಮಾಜಸೇವಕನಾಗಿ ಸಮುದಾಯದಲ್ಲಿ ಗುರುತಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಅನ್ಲೈನ್ ನಾನ್-ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಎರಡು ವರ್ಷಗಳ ಐ.ಟಿ.ಐ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ / ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರೀ ಸ್ಕೀಂ ರಡಿಯಲ್ಲಿ 2 ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸೆಪ್ಟಂಬರ್ 28 ರಿಂದ ಅಕ್ಟೋಬರ್ 6 ರ ವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಯ ಅಧಿಸೂಚನೆಯ ವಿವರಗಳನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ dtek.karnataka.gov.in ಅಥವಾ dtetech.karnataka.gov.in/kartechnical ನಿಂದ ಮಾಹಿತಿಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ಸಮೀಪದ ಸರ್ಕಾರಿ/ ಅನುದಾನಿತ ಪಾಲಿಟೆಕ್ನಿಕ್ಗಳಿಗೆ ಭೇಟಿ ನೀಡಿ ಸರ್ಜಿ ಸಲ್ಲಿಸಲು ಹಾಗೂ ಆಪ್ಷನ್ ಎನ್ಟಿç ಯನ್ನು ಆನ್ಲೈನ್ನಲ್ಲಿ ದಾಖಲಿಸಬಹುದು. ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯತ್ ಪ್ರದೇಶವನ್ನು ಬೈಂದೂರು ಪಟ್ಟಣ ಪಂಚಾಯತ್ಯನ್ನಾಗಿ ಮೇಲ್ದರ್ಜೇಗೇರಿಸಿ ರಾಜ್ಯ ಸರಕಾರ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್ 315ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕಾರ್ಯನಿರ್ವಹಣೆಗಾಗಿ ಪಟ್ಟಣ ಪಂಚಾಯತ್ಗೆ ಸಂಬಂಧಿಸಿದ ತಹಶೀಲ್ದಾರ್ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಅಧಿಸೂಚನೆಯಲ್ಲಿ ನಿರ್ದೇಶನ ನೀಡಲಾಗಿದೆ. ಆದ್ದರಿಂದ ಪಟ್ಟಣ ಪಂಚಾಯತ್ನ ದೈನಂದಿನ ಕಾರ್ಯನಿರ್ವಹಣೆಗಾಗಿ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಬೈಂದೂರು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಬೈಂದೂರು ತಹಶೀಲ್ದಾರರನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4ರಂತೆ ಕುಂದಾಪುರ ತಾಲೂಕು ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇನಾಪುರ ಗ್ರಾಮವನ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ ಕುರಿತು ಸಾರ್ವಜನಿಕರು ಮೇಲ್ಮನವಿ ಸಲ್ಲಿಸುವುದಾದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ಇವರಿಗೆ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯು ಜನವರಿ 1, 2019 ರಿಂದ ಡಿಸೆಂಬರ್ 31, 2019 ರ ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ, ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು / ಪ್ರಕಾಶಕರು / ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ಅಕ್ಟೋಬರ್ ೨೫ ರ ಒಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಲಿಕಾರ್ಥಿ ಸಹಾಯಕೇಂದ್ರ ಪ್ರಾರಂಭವಾಗಿದೆ. ಕರಾವಳಿಯ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ ಅಧ್ಯಯನಕ್ಕೆ ಇದರಿಂದಾಗಿ ಸಹಾಯವಾಗಲಿದ್ದು, ಇದರ ಪ್ರಯೋಜನವನ್ನು ಅಗತ್ಯವುಳ್ಳವರು ಪಡೆದುಕೊಳ್ಳಬಹುದಾಗಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿರುವ ಏಕೈಕ ಅಧಿಕೃತ ದೂರಶಿಕ್ಷಣ ನೀಡುವ ವಿಶ್ವವಿದ್ಯಾನಿಲಯವಾಗಿದ್ದು ಅತೀ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಸೆಪ್ಟಂಬರ್ 1 ರಿಂದ ಸೆಪ್ಟಂಬರ್-ಅಕ್ಟೋಬರ್ ಆವೃತ್ತಿಯ ಈ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ದಂಡ ಶುಲ್ಕವಿಲ್ಲದೆ ಅಕ್ಟೋಬರ್ ೧೦ರ ತನಕ ಪ್ರವೇಶಾತಿಗೆ ಅವಕಾಶವಿರುತ್ತದೆ. ದಂಡ ಶುಲ್ಕ ರೂ. 100/-ರೊಂದಿಗೆ ಅಕ್ಟೋಬರ್ ೨೦ರ ವರೆಗೂ ಹಾಗೂ ದಂಡ ಶುಲ್ಕ ರೂ.200/- ರೊಂದಿಗೆ ಅಕ್ಟೋಬರ್ ೨೯ರ ವರೆಗೆ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ. ಬಿ.ಎ., ಬಿ.ಕಾಂ., ಎಂ.ಎ. ಹಾಗೂ ಎಂ.ಕಾಂ. ಅಧ್ಯಯನ ಮಾಡಬಯಸುವವರು ಸಂವೇದನಾ ಪ್ರಥಮದರ್ಜೆ ಕಾಲೇಜಿನಲ್ಲಿ (7899418506, 9449725906) ವಿಚಾರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ ಅವರು 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಕನ್ನಡ ನಾಡಿನ ಖ್ಯಾತ ಬರಹಗಾರ, ಪದ್ಮಶ್ರೀ ಪುರಸ್ಕೃತ , ನಾಡೋಜ ಡಾ. ಎಸ್ ಎಲ್ ಭೈರಪ್ಪನವರಿಗೆ ನೀಡಲು ನಿರ್ಧರಿಸಿದ್ದಾರೆ. ಮಾನ್ಯ ಭೈರಪ್ಪನವರು ಈ ಪ್ರಶಸ್ತಿಯನ್ನು ಸ್ವೀಕರಿಸಲು ಒಪ್ಪಿಗೆ ನೀಡಿದ್ದಾರೆ. ಈ ಪ್ರಶಸ್ತಿ ಕಾರಂತರ ಜನ್ಮ ದಿನವಾದ ಅಕ್ಟೋಬರ್ 10 ರಂದು ನೀಡಲಾಗುತ್ತದೆ. ಕಳೆದ ಹದಿನೈದು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡುತ್ತಾ ಬಂದಿದ್ದು, ಕಾರಂತ ಆಸಕ್ತಿ ಕ್ಷೇತ್ರವಾದ ಸಾಹಿತ್ಯ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಎಸ್. ಎಲ್ ಭೈರಪ್ಪನವರ ಗಣನೀಯ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಈಗಾಗಲೇ ವೀರಪ್ಪ ಮೊಯ್ಲಿ, ವೇಂಕಟಾಚಲ, ಕೆ. ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ್ ಕಾಸರವಳ್ಳಿ, ಜಯಶ್ರೀ, ಮೋಹನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಾಸನದ ನ್ಯಾಷನಲ್ ಕ್ಲಾಸಿಕಲ್ ಡಾನ್ಸ್ ಅಕಾಡೆಮಿ ಇತ್ತೀಚಿಗೆ ಆನ್ಲೈನ್ ಮೂಲಕ ನಡೆಸಿದ ಆರನೇ ಹಂತದ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಕೋಟದ ಶರ್ಮದಾ ಎಮ್. ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಬೇರೆ ಬೇರೆ ರಾಜ್ಯಗಳಿಂದ ಭಾಗವಹಿಸಿದ್ದ ಸ್ಪರ್ಧಿಗಳ ಪೈಕಿ ಶರ್ಮದಾ ಎಮ್. ಅವರೊಂದಿಗೆ ಉಡುಪಿಯ ಅನ್ವಿತಾ ಹಾಗೂ ತೆಲಂಗಾಣದ ಪೆಂಡ್ಯಾಲಾ ಲಕ್ಷ್ಮೀ ಪ್ರಿಯಾ ಮೊದಲ ಸ್ಥಾನವನ್ನು ಹಂಚಿಕೊಂಡಿರುತ್ತಾರೆ. ಭರತನಾಟ್ಯ ಹಾಗೂ ಸಂಗೀತದಲ್ಲಿ ಆಸಕ್ತಿ ಹೊಂದಿರುವ ಶರ್ಮದಾ ಕಳೆದ ೫ ವರ್ಷಗಳಿಂದ ಸಾಲಿಗ್ರಾಮದ ಚಿತ್ರಪಾಡಿಯ ’ಶ್ರೀ ನಟರಾಜ ನೃತ್ಯ ನಿಕೇತನ’ ಕೇಂದ್ರದಲ್ಲಿ ವಿದೂಷಿ ಭಾಗೀರಥಿ ಎಮ್. ರಾವ್ ಅವರ ಬಳಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ. ೨೦೧೯ ರ ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಶೇಕಡಾ ೯೩ ಅಂಕ ಪಡೆದು ಉರ್ತ್ತೀಣರಾಗಿದ್ದಾರೆ. ಜೊತೆಗೆ ಈ ವರ್ಷ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜ್ಯೂನಿಯರ್ ಪರೀಕ್ಷೆಯನ್ನು ಬರೆಯಲಿದ್ದಾರೆ. ಮೂಲತ ಉಪ್ಪುಂದ ಮಕ್ಕಿ ದೇವಸ್ಥಾನದವರಾಗಿದ್ದು, ಪ್ರಸ್ತುತ ಕೋಟದಲ್ಲಿ ನೆಲೆಸಿರುವ ಬೈಂದೂರು…
