Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಸಬ್ಲಾಡಿ ಶೀನಪ್ಪ ಶೆಟ್ಟಿ ಮೆಮೇರಿಯಲ್ ಚಾರಿಟೆಬಲ್ ಟ್ರಸ್ಟ್ ಕುಂದಾಪುರ ಇದರ ವತಿಯಿಂದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಪೂರಕವಾದ ಒಂದು ಲಕ್ಷ ಮೌಲ್ಯದ ವೈದ್ಯಕೀಯ ಸಿಬ್ಬಂದಿ ಧರಿಸುವ ಸ್ಕೃಬ್ ಸೂಟ್ ನೀಡಲಾಯಿತು. ಈ ಸಂದರ್ಭದಲ್ಲಿ ಕೊಡುಗೆ ಸ್ವೀಕರಿಸಿ ಮಾತನಾಡಿದ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು ಅವರು, ಸಾರ್ವಜನಿಕರ ಈ ಕೊಡುಗೆ ಕೊರೋನಾ ವಾರಿಯರ್ಸ್‌ರಲ್ಲಿ ತೊಡಗಿಸಿಕೊಂಡ ವೈದ್ಯರುಗಳಿಗೆ ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಇನ್ನಷ್ಟು ಉತ್ಸಾಹ ತರಲಿದೆ. ಅವರ ಹಗಲಿರುಳು ಸೇವೆ ಸಾರ್ವಜನಿಕರು ಗುರುತಿಸಿದಂತಾಗುತ್ತದೆ ಎಂದು ಹೇಳಿದ ಅವರು ಇದೇ ಸಂದರ್ಭದಲ್ಲಿ ಕೊಡುಗೆ ನೀಡಿದ ಟ್ರಸ್ಟಿನ ಪರವಾಗಿ ಎನ್.ಜಯರಾಮ ಶೆಟ್ಟಿ ಸಬ್ಲಾಡಿ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೋವಿಡ್‌ಕೇರ್ ಆಸ್ಪತ್ರೆಯ ನೋಡಲ್ ವೈದ್ಯಾಧಿಕಾರಿ ಡಾ|ನಾಗೇಶ್ ಮಾತನಾಡಿ, ಕುಂದಾಪುರ ತಾಲೂಕಿನ ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಸಬ್ಲಾಡಿ ಶೀನಪ್ಪ ಶೆಟ್ಟಿ ಟ್ರಸ್ಟಿನ ಈ ಕೊಡುಗೆ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಅನುಕೂಲವಾಗಲಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.30ರ ಭಾನುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 61, ಉಡುಪಿ ತಾಲೂಕಿನ 145 ಹಾಗೂ ಕಾರ್ಕಳ ತಾಲೂಕಿನ 40 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 105 ಸಿಂಥಮೇಟಿವ್ ಹಾಗೂ 149 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 102, ILI 92, ಸಾರಿ 4 ಪ್ರಕರಣವಿದ್ದು, 47 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 4 ಮಂದಿ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 82 ಮಂದಿ ಆಸ್ಪತ್ರೆಯಿಂದ ಹಾಗೂ 113 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 735 ನೆಗೆಟಿವ್: ಈ ತನಕ ಒಟ್ಟು 71120 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 59367 ನೆಗೆಟಿವ್, 11513 ಪಾಸಿಟಿವ್ ಬಂದಿದ್ದು, 240 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 735 ನೆಗೆಟಿವ್, 254 ಪಾಸಿಟಿವ್ ಬಂದಿದೆ. 2,620…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಉಡುಪಿ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರತಿನಿಧಿಯಾಗಿ ವೆಂಕಟ ಪೂಜಾರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿ ಇತ್ತಿಚಿಗೆ ಆಯ್ಕೆಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ಮಕ್ಕಳಲ್ಲಿ ಅಗಾಧ ಪ್ರತಿಭೆ ಇದ್ದು, ಶಿಕ್ಷಣ ಪಡೆಯಲು ಹೆಚ್ಚು ಆಸಕ್ತಿ ತೋರಿದರೆ ಉತ್ತಮ ಸಾಧನೆ ಮಾಡಬಹುದಾಗಿದೆ. ಪ್ರತಿಭೆ ಇದ್ದವರಿಗೆ ಒಂದಿಲ್ಲೊಂದು ರೂಪದಲ್ಲಿ ಸಹಕಾರದ ದೊರೆಯುತ್ತದೆ ಎಂದು ಉಡುಪಿ ಜಿಲ್ಲಾ ಶ್ರೀಮದ್ಭಗವದ್ದೀತಾ ಜಯಂತಿ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ಹೇಳಿದರು. ಇಲ್ಲಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ ವಿದ್ಯಾವಂತರಾದಾಗಲೇ ಜಗತ್ತಿನೆದುರು ತಲೆಯೆತ್ತೆ ನಡೆಯಲು ಸಾಧ್ಯ. ಕೆಲವು ವರ್ಷಗಳ ಹಿಂದೆ ಶಿಕ್ಷಣ ಪಡೆಯಲು ಹಿಂದೇಟು ಹಾಕುತ್ತಿದ್ದ ಗ್ರಾಮದಲ್ಲಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರದಿಂದ ನೀಡುವ ಉಚಿತ ಪಡಿತರ ಅಕ್ಕಿಯನ್ನು ಜನರಿಂದ ಖರೀದಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಉಡುಪಿ ಡಿಸಿಐಬಿ ಪೊಲೀಸರು ಪತ್ತೆ ಹಚ್ಚಿದ್ದು, ಗುರುವಾರ ಸಂಜೆ ಕೋಟೇಶ್ವರದ ಕಟ್ಕೆರೆ ಸಮೀಪದ ಮೇಪು ಎಂಬಲ್ಲಿ ಅಕ್ರಮ ದಾಸ್ತಾನು ಇರಿಸಲಾಗಿದ್ದ ಗೋದಾಮಿಗೆ ದಾಳಿ ನಡೆಸಿ ಒಟ್ಟು 9 ಮಂದಿ ಆರೋಪಿಗಳು, ವಾಹನ, ಪೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಎರಡು ಗೋದಾಮಿನಲ್ಲಿದ್ದ ಒಟ್ಟು 50 ಟನ್‌ಗೂ ಅಧಿಕ ಪಡಿತರ ಅಕ್ಕಿ, ಸಾಗಾಟಕ್ಕೆ ಬಳಸುವ ಎರಡು ಲಾರಿ, ಮೂರು ಕಾರುಗಳು, ಬೈಕುಗಳು ಹಾಗೂ ಎರಡು ಲಕ್ಷಕ್ಕೂ ಅಧಿಕ ನಗದು, ಮೊಬೈಲ್ ಪೋನುಗಳು, ಇಲೆಕ್ಟ್ರಿಕಲ್ ತೂಕಮಾಪಕ,  ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ.  ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಸ್, ಅಬ್ದುಲ್ ಸತ್ತಾರ್ ಮತ್ತು ಅಬ್ದುಲ್ ಅಜೀಜ್ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ. ತಾಲೂಕಿನಲ್ಲಿ ಪಡಿತರ ಅಕ್ಕಿಯನ್ನು ಬಡವರಿಂದ ಖರೀದಿಸಿ ಇತರೆಡೆಗೆ ಮಾರಾಟ ಮಾಡುವ ವ್ಯವಸ್ಥಿತ ಜಾಲ ಕಾರ್ಯಾಚರಿಸುತ್ತಿರುವ ಬಗ್ಗೆ ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ರೋಟರಿ ಜಿಲ್ಲಾ ಪ್ರಾಜೆಕ್ಟ್ ರೈತಬಂಧು ಕಾರ್ಯಕ್ರಮದ ಅಂಗವಾಗಿ ರೈತರಿಗೆ ರಾಸಾಯನಿಕ ಗೊಬ್ಬರ ವಿತರಣಾ ಕಾರ್ಯಕ್ರಮ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಅವರು ರೈತರಿಗೆ ಸಹಾಯಕವಾಗುವ ಉದ್ದೇಶದಿಂದ ಸ್ಥಳೀಯ ಕೃಷಿಕರಾದ ಗೋವಿಂದ ಪೂಜಾರಿ ಮತ್ತು ಶ್ರೀನಿವಾಸ ಶೇರುಗರ್ ಅವರಿಗೆ ರಾಸಾಯನಿಕ ಗೊಬ್ಬರ ವಿತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್‌ನ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಪೆರಾಜೆ, ಸದಸ್ಯರಾದ ವಿಜಯ ಪೂಜಾರಿ, ನಾರಾಯಣ ಇ.ನಾಯ್ಕ್, ವಿಷ್ಣು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.27ರ ಗುರುವಾರ 209 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 50, ಉಡುಪಿ ತಾಲೂಕಿನ 106 ಹಾಗೂ ಕಾರ್ಕಳ ತಾಲೂಕಿನ 45 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 79 ಸಿಂಥಮೇಟಿವ್ ಹಾಗೂ 130 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 114 ಪುರುಷರು, 95 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 78, ILI 62, ಸಾರಿ 3 ಪ್ರಕರಣವಿದ್ದು, 60 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 6 ಮಂದಿ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 35 ಮಂದಿ ಆಸ್ಪತ್ರೆಯಿಂದ ಹಾಗೂ 179 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 72 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ. 708 ನೆಗೆಟಿವ್: ಈ ತನಕ ಒಟ್ಟು 68787 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 57091 ನೆಗೆಟಿವ್, 10913 ಪಾಸಿಟಿವ್ ಬಂದಿದ್ದು, 783…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿವೃತ್ತ ಅಂಚೆ ಅಧಿಕಾರಿ, ಲೇಖಕ, ಪ್ರಕಾಶ್ ಇನ್ಸ್ಟಿಟ್ಯೂಟ್ ಸ್ಥಾಪಕ, ಕೆ. ರಾಮಚಂದ್ರ ಕೊತ್ವಾಲ್ (92) ಆ.26ರಂದು ನಿಧನರಾದರು. ವೃತ್ತಿ, ಪ್ರವೃತ್ತಿ ಎರಡರಲ್ಲೂ ಕ್ರೀಯಾಶೀಲರಾಗಿದ್ದ ಕೊತ್ವಾಲರು ಬೋರ್ಡ ಹೈಸ್ಕೂಲ್ ಹಳೆ ವಿಧ್ಯಾರ್ಥಿ ಸಂಘ, ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಸಕ್ರೀಯ ಸದಸ್ಯರಾಗಿದ್ದರು. ಲೇಖಕರಾಗಿ ಅಂಕಣಕಾರರಾಗಿ ಜನಪ್ರಿಯರಾಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿಗೆ ಸಮೀಪದ ಚಿತ್ತೂರು ಮಾರಣಕಟ್ಟೆಯಲ್ಲಿ ನೂತನವಾಗಿ ಆರಂಭಗೊಂಡು ಅಂಬಾಶ್ರೀ ಯುವ ವೇದಿಕೆ ಉದ್ಘಾಟನಾ ಸಮಾರಂಭ ಭಾನುವಾರ ಜರುಗಿತು. ಯುವ ವೇದಿಕೆಯನ್ನು ನಾರಾಯಣ ನಾಯ್ಕ ಕಪ್ಟೆಕೊಡ್ಲು ಇವರು ಉದ್ಘಾಟಿಸಿದರು. ನೆಹರೂ ಯುವ ಕೇಂದ್ರದ ಸ್ವಯಂಸೇವಕ ಸುಧಾಕರ ನಾಯ್ಕ್ ಅತಿಥಿಯಾಗಿದ್ದರು. ಯುವ ವೇದಿಕೆ ಅಧ್ಯಕ್ಷ ನಕ್ಷತ್ರ ನಾಯ್ಕ್ ಮಾತನಾಡಿ ಪರಿಶಿಷ್ಟ ಪಂಗಡ ಮರಾಠಿ ಸಮುದಾಯದ ಜನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿ ಕೊಡುವ ಹಾಗೂ ಸಮಾಜಸೇವಾ ಚಟುವಟಿಕೆಗಳನ್ನು ಆಯೋಜಿಸುವ ಉದ್ದೇಶದಿಂದ ಯುವ ವೇದಿಕೆ ಸ್ಥಾಪಿಸಲಾಗಿದ್ದು ಈ ನೆಲೆಯಲ್ಲಿ ಉತ್ತಮ ಸೇವೆ ಸಲ್ಲಿಸುವುದಾಗಿ ಅವರು ತಿಳಿದರು. ಉಪಾಧ್ಯಕ್ಷರಾದ ರಮೇಶ್ ನಾಯ್ಕ್, ಕಾರ್ಯದರ್ಶಿಯಾದ ಸಂದೀಪ್ ನಾಯ್ಕ್, ಜೊತೆ ಕಾರ್ಯದರ್ಶಿಯಾದ ಶಿವರಾಜ್ ನಾಯ್ಕ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ನಾಗರಾಜ್ ನಾಯ್ಕ್ ಇವರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ತ್ರೀ ರೋಗ, ಅರೆವಳಿಕೆ, ಮತ್ತು ಮಕ್ಕಳ ತಜ್ಞರು, ಎಲ್.ಹೆಚ್.ವಿ, ಡೆಂಟಲ್ ಹೈಜೆನಿಸ್ಟ್, ಆಡಿಯೋ ಮೆಟ್ರಿಕ್ ಆಸಿಸ್ಟೆಂಟ್, ಎಮ್.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು, ಶುಶ್ರೂಷಕಿ, ಕಿರಿಯ ಪುರುಷ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಶ್ರವಣ ದೋಷವುಳ್ಳ ಮಕ್ಕಳಿಗೆ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 31ರಂದು ಬೆಳಿಗ್ಗೆ 11 ರಿಂದ 1 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಕಛೇರಿ ಉಡುಪಿ ಇಲ್ಲಿ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Read More